Matthew · chapter 10 · verse 42
Matthew 10:42 in Kannada
ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
Yaavanaadaroo shishyana hesarinalli ee chikkavaraada obbanige kevala ondu tambige tanneerannaadaroo kudiyuvadakke kottare avanu tanna pratiphalavannu kalakolluvade illavendu naanu nimage nijavaagi heluttene andanu.
Matthew 10:42 in English
- King James Version (KJV)
- And whosoever shall give to drink unto one of these little ones a cup of cold [water] only in the name of a disciple, verily I say unto you, he shall in no wise lose his reward.
- World English Bible (WEB)
- Whoever gives one of these little ones just a cup of cold water to drink in the name of a disciple, most certainly I tell you, he will in no way lose his reward.”
- American Standard Version (ASV)
- And whosoever shall give to drink unto one of these little ones a cup of cold water only, in the name of a disciple, verily I say unto you he shall in no wise lose his reward.
- Bible in Basic English (BBE)
- And whoever gives to one of these little ones a cup of cold water only, in the name of a disciple, truly I say to you, he will not go without his reward.
- Darby Translation (DBY)
- And whosoever shall give to drink to one of these little ones a cup of cold [water] only, in the name of a disciple, verily I say unto you, he shall in no wise lose his reward.
- Webster's Bible (WBS)
- And whoever shall give to drink to one of these little ones, a cup of cold [water] only, in the name of a disciple, verily, I say to you, he shall in no wise lose his reward.
- Young's Literal Translation (YLT)
- and whoever may give to drink to one of these little ones a cup of cold water only in the name of a disciple, verily I say to you, he may not lose his reward.'
Read in context
- 40ನಿಮ್ಮನ್ನು ಅಂಗೀಕರಿಸಿಕೊಳ್ಳುವವನು ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಮತ್ತು ನನ್ನನ್ನು ಅಂಗೀಕರಿಸಿ ಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನು ಅಂಗೀಕರಿಸಿ ಕೊಳ್ಳುತ್ತಾನೆ.
- 41ಪ್ರವಾದಿಯ ಹೆಸರಿನಲ್ಲಿ ಪ್ರವಾದಿ ಯನ್ನು ಅಂಗೀಕರಿಸುವವನು ಪ್ರವಾದಿಯ ಪ್ರತಿಫಲ ವನ್ನು ಪಡಕೊಳ್ಳುವನು; ನೀತಿವಂತನ ಹೆಸರಿನಲ್ಲಿ ನೀತಿವಂತನನ್ನು ಅಂಗೀಕರಿಸುವವನು ನೀತಿವಂತನ ಪ್ರತಿಫಲವನ್ನು ಪಡಕೊಳ್ಳುವನು.ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- 42ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
Cross references
- Hebrews 6:10 ಇಬ್ರಿಯರಿಗೆ 6:10ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ.
- Matthew 25:40 ಮತ್ತಾಯನು 25:40ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.
- Mark 9:41–42 ಮಾರ್ಕನು 9:41–42ಇದಲ್ಲದೆ ನೀವು ಕ್ರಿಸ್ತನಿಗೆ ಸೇರಿದವ ರಾದದರಿಂದ ಯಾವನಾದರೂ ನನ್ನ ಹೆಸರಿನಲ್ಲಿ ನಿಮಗೆ ಒಂದು ತಂಬಿಗೆ ನೀರನ್ನು ಕೊಟ್ಟರೆ ಅವನು ತನ್ನ ಪ್ರತಿ ಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. ನನ್ನನ್ನು ನಂಬುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯಾದರೆ ಅವನ ಕೊರಳಿಗೆ ಬೀಸುವ ಕಲ್ಲನ್ನು ತೂಗಹಾಕಿ ಅವ ನನ್ನು ಸಮುದ್ರದಲ್ಲಿ ಬಿಸಾಡಿಬಿಡುವದು ಅವನಿಗೆ ಒಳ್ಳೇದು.
- 2 Corinthians 9:6–15 2 ಕೊರಿಂಥದವರಿಗೆ 9:6–15ಆದರೆ--ಸ್ವಲ್ಪವಾಗಿ ಬಿತ್ತುವವನು (ಪೈರನ್ನು) ಸ್ವಲ್ಪವಾಗಿ ಕೊಯ್ಯುವನು; ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿಯೇ ಕೊಯ್ಯುವನು ಎಂದು ನಾನು ಹೇಳು ತ್ತೇನೆ. ಪ್ರತಿಯೊಬ್ಬನು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲಾತ್ಕಾರದಿಂದಾಗಲಿ ಯಾರೂ ಕೊಡಬಾರದು; ಯಾಕಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿ ಮಾಡುತ್ತಾನೆ. ದೇವರು ಸಕಲ ವಿಧವಾದ ಕೃಪೆಯನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವದಕ್ಕೆ ಶಕ್ತನಾದ್ದರಿಂದ ನೀವು ಯಾವಾ ಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆ ಯುಳ್ಳವರಾಗಿ ಸಕಲಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರುವಿರಿ. (ಬರೆದಿರುವ ಪ್ರಕಾರ--ಆತನು ಬಡವರಿಗೆ ಧಾರಾಳವಾಗಿ ಹಂಚಿಕೊಟ್ಟನು; ಆತನ ನೀತಿಯು ಸದಾಕಾಲವೂ ಇರುವದು ಎಂಬದೇ. ಬಿತ್ತುವವನಿಗೆ ಬೀಜವನ್ನೂ ತಿನ್ನುವವನಿಗೆ ಆಹಾರ ವನ್ನೂ ಕೊಡುವಾತನು ನಿಮಗೂ ಬಿತ್ತುವದಕ್ಕೆ ಬೀಜವನ್ನು ಕೊಟ್ಟು ಹೆಚ್ಚಿಸಿ ನಿಮ್ಮ ನೀತಿಯಿಂದಾದ ಕಾರ್ಯಗಳ ಫಲಗಳನ್ನು ವೃದ್ಧಿಪಡಿಸುವನು.) ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಅದು ನಮ್ಮ ಮೂಲಕ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟು ಮಾಡುವದು. ಹೇಗಂದರೆ ಈ ನಿಮ್ಮ ಸೇವೆಯ ಪರಿಚರ್ಯವು ಪರಿಶುದ್ಧರ ಕೊರತೆಗಳನ್ನು ನೀಗು ವದು ಮಾತ್ರವಲ್ಲದೆ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿಯನ್ನು ಹುಟ್ಟಿಸುವದು. ಈ ಸಹಾಯ ದಿಂದ ತೋರಿಬಂದ ನಿಮ್ಮ ಯೋಗ್ಯ ಭಾವವನ್ನು ಅವರು ನೋಡುವಾಗ ನೀವು ಕ್ರಿಸ್ತನ ಸುವಾರ್ತೆಗೆ ವಿಧೇಯರಾದದ್ದರಿಂದಲೂ ತಮಗೂ ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡಿದ್ದರಿಂದಲೂ ದೇವರನ್ನು ಕೊಂಡಾಡುವರು. ಇದಲ್ಲದೆ ನಿಮ್ಮಲ್ಲಿ ರುವ ದೇವರ ಅಪಾರವಾದ ಕೃಪೆಯ ನಿಮಿತ್ತ ಅವರು ಪ್ರಾರ್ಥನೆ ಮಾಡುವವರಾಗಿ ನಿಮಗೋಸ್ಕರ ಹಂಬಲಿ ಸುತ್ತಾರೆ.ವರ್ಣಿಸಲಶಕ್ಯವಾದ ದೇವರದಾನಕ್ಕಾಗಿ ಆತನಿಗೆ ಸ್ತೋತ್ರವಾಗಲಿ. ವರ್ಣಿಸಲಶಕ್ಯವಾದ ದೇವರದಾನಕ್ಕಾಗಿ ಆತನಿಗೆ ಸ್ತೋತ್ರವಾಗಲಿ.
- Matthew 18:10 ಮತ್ತಾಯನು 18:10ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ತಾತ್ಸಾರ ಮಾಡದಂತೆ ನೋಡಿಕೊಳ್ಳಿರಿ; ಯಾಕಂದರೆ ನಾನು ನಿಮಗೆ ಹೇಳುವದೇನಂದರೆ--ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಾರೆ.
- Philippians 4:15–19 ಫಿಲಿಪ್ಪಿಯವರಿಗೆ 4:15–19ಇದಲ್ಲದೆ ಫಿಲಿಪ್ಪಿ ಯವರೇ, ಸುವಾರ್ತೆಯ ಪ್ರಾರಂಭದಲ್ಲಿ ನಾನು ಮಕೆದೋನ್ಯದಿಂದ ಹೊರಟಾಗ ಕೊಡುವದರ ಮತ್ತು ತೆಗೆದುಕೊಳ್ಳುವದರ ವಿಷಯದಲ್ಲಿ ನಿಮ್ಮ ಹೊರತು ಬೇರೆ ಸಭೆಯು ನನ್ನೊಂದಿಗೆ ಭಾಗವಹಿಸಲಿಲ್ಲವೆಂದು ನೀವು ಸಹ ಬಲ್ಲಿರಿ. ನಾನು ಥೆಸಲೋನಿಕದಲ್ಲಿ ದ್ದಾಗಲೂ ನೀವು ಕೆಲವು ಸಾರಿ ನನ್ನ ಕೊರತೆಯನ್ನು ನೀಗಿಸುವದಕ್ಕೆ ಕೊಟ್ಟು ಕಳುಹಿಸಿದಿರಲ್ಲಾ. ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವೆನೆಂತಲ್ಲ ಆದರೆ ನಿಮ್ಮ ಲೆಕ್ಕಕ್ಕೆ ಸಮೃದ್ಧಿಯಾದ ಫಲವನ್ನೇ ಅಪೇಕ್ಷಿಸು ತ್ತೇನೆ. ಆದರೆ ಬೇಕಾದದ್ದೆಲ್ಲ ನನಗುಂಟು, ಸಮೃದ್ಧಿ ಯಾಯಿತು. ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆ ಯಾದದ್ದು; ಸುಗಂಧವಾಸನೆಯೇ, ಇಷ್ಟಯಜ್ಞವೇ ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿ ಯೊಂದು ಕೊರತೆಯನ್ನು ನೀಗಿಸುವನು.
- Luke 6:35 ಲೂಕನು 6:35ಆದರೆ ನೀವು ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಮತ್ತು ಒಳ್ಳೇದನ್ನು ಮಾಡಿರಿ. ಏನನ್ನೂ ತಿರಿಗಿ ನಿರೀಕ್ಷಿಸದೆ ಸಾಲ ಕೊಡಿರಿ; ಆಗ ನಿಮ್ಮ ಬಹುಮಾನವು ದೊಡ್ಡದಾಗಿರುವದು; ನೀವು ಮಹೋ ನ್ನತನ ಮಕ್ಕಳಾಗಿರುವಿರಿ; ಯಾಕಂದರೆ ಆತನು ಕೃತಜ್ಞತೆ ಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವನಾಗಿ ದ್ದಾನೆ,
- 2 Corinthians 8:12 2 ಕೊರಿಂಥದವರಿಗೆ 8:12ಒಬ್ಬನು ಕೊಡುವದಕ್ಕೆ ಮನಸ್ಸಿದ್ದರೆ ಅವನು ತನಗೆ ಇಲ್ಲದ್ದಕ್ಕನುಸಾರವಾಗಿ ಅಲ್ಲ, ಆದರೆ ಇರುವದಕ್ಕನುಸಾರವಾಗಿಯೇ ಕೊಟ್ಟರೆ ಅದು ಸಮರ್ಪ ಕವಾಗಿರುವದು.
- Mark 12:42–43 ಮಾರ್ಕನು 12:42–43ಆಗ ಅಲ್ಲಿ ಒಬ್ಬ ಬಡ ವಿಧವೆಯು ಬಂದು ಒಂದು ಫಾರ್ದಿಂಗದಷ್ಟು ಎರಡು ನಾಣ್ಯಗಳನ್ನು ಹಾಕಿದಳು. ಆಗ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ-- ಈ ಬೊಕ್ಕಸದಲ್ಲಿ ಹಾಕಿದವರೆಲ್ಲರಿಗಿಂತ ಈ ಬಡ ವಿಧವೆಯು ಹೆಚ್ಚಾಗಿ ಹಾಕಿದ್ದಾಳೆ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.ಯಾಕಂದರೆ ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು; ಆದರೆ ಈಕೆಯು ತನ್ನ ಕೊರತೆಯಲ್ಲಿ ತನಗಿದ್ದದ್ದನ್ನೆಲ್ಲಾ ಅಂದರೆ ತನ್ನ ಜೀವನವನ್ನೆಲ್ಲಾ ಹಾಕಿದ್ದಾಳೆ ಅಂದನು.
- Proverbs 24:14 ಜ್ಞಾನೋಕ್ತಿಗಳು 24:14ಹೀಗೆ ನಿನ್ನ ಪ್ರಾಣಕ್ಕೆ ಜ್ಞಾನದ ತಿಳುವಳಿಕೆಯು ಇರುವದು; ಅದು ಸಿಕ್ಕಿದಾಗ ಬಹುಮಾನವಿರುವದು; ನಿನ್ನ ನಿರೀಕ್ಷೆಯು ನಿರರ್ಥಕವಾಗುವದಿಲ್ಲ.
- Mark 14:7–8 ಮಾರ್ಕನು 14:7–8ಯಾಕಂದರೆ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ; ನಿಮಗೆ ಮನಸ್ಸಿದ್ದರೆ ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು; ಆದರೆ ನಾನು ಯಾವಾ ಗಲೂ ನಿಮ್ಮ ಬಳಿಯಲ್ಲಿ ಇರುವದಿಲ್ಲ. ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ; ನನ್ನ ಶರೀರವನ್ನು ಹೂಣಿಡುವದಕ್ಕೆ ಅದನ್ನು ಅಭಿಷೇಕಿಸುವದಕ್ಕಾಗಿ ಈಕೆಯು ಮುಂದಾಗಿ ಮಾಡಿದ್ದಾಳೆ.
- Matthew 18:3–6 ಮತ್ತಾಯನು 18:3–6ನೀವು ತಿರುಗಿ ಕೊಂಡು ಚಿಕ್ಕ ಮಕ್ಕಳಂತೆ ಆಗದೆಹೋದರೆ ಪರಲೋಕ ರಾಜ್ಯದೊಳಗೆ ಪ್ರವೇಶಿಸುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. ಆದದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನು ತಗ್ಗಿಸಿಕೊಳ್ಳುವನೋ ಅವನೇ ಪರಲೋಕರಾಜ್ಯದಲ್ಲಿ ಅತಿ ದೊಡ್ಡವನಾಗಿರುವನು. ಮತ್ತು ಯಾವನಾದರೂ ಇಂಥ ಚಿಕ್ಕ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿ ಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ. ಆದರೆ ನನ್ನಲ್ಲಿ ವಿಶ್ವಾಸವಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವ ನಾದರೂ ಅಭ್ಯಂತರವಾದರೆ ಅವನ ಕೊರಳಿಗೆ ಬೀಸುವ ಕಲ್ಲನ್ನು ನೇತು ಹಾಕಿ ಅವನನ್ನು ಸಮುದ್ರದ ಆಳದಲ್ಲಿ ಮುಳುಗಿಸಿಬಿಡುವದು ಅವನಿಗೆ ಒಳ್ಳೇದು.