Matthew · chapter 10 · verse 6
Matthew 10:6 in Kannada
ಆದರೆ ತಪ್ಪಿಸಿಕೊಂಡ ಕುರಿಗಳಾದ ಇಸ್ರಾಯೇಲಿನ ಮನೆತನದವರ ಬಳಿಗೆ ಮಾತ್ರ ಹೋಗಿರಿ.
Aadare tappisikonda kurigalaada israayelina manetanadavara balige maatra hogiri.
Matthew 10:6 in English
- King James Version (KJV)
- But go rather to the lost sheep of the house of Israel.
- World English Bible (WEB)
- Rather, go to the lost sheep of the house of Israel.
- American Standard Version (ASV)
- but go rather to the lost sheep of the house of Israel.
- Bible in Basic English (BBE)
- But go to the wandering sheep of the house of Israel,
- Darby Translation (DBY)
- but go rather to the lost sheep of the house of Israel.
- Webster's Bible (WBS)
- But go rather to the lost sheep of the house of Israel.
- Young's Literal Translation (YLT)
- and be going rather unto the lost sheep of the house of Israel.
Read in context
- 4ಕಾನಾನ್ಯನಾದ ಸೀಮೋನ ಮತ್ತು ಆತನನ್ನು ಹಿಡಿದುಕೊಟ್ಟ ಯೂದ ಇಸ್ಕರಿಯೋತ ಎಂಬಿವುಗಳೇ.
- 5ಯೇಸು ಈ ಹನ್ನೆರಡು ಮಂದಿಯನ್ನು ಕಳುಹಿ ಸುವಾಗ ಅವರಿಗೆ ಅಪ್ಪಣೆಕೊಟ್ಟು ಹೇಳಿದ್ದೇನಂ ದರೆ--ಅನ್ಯಜನರ ದಾರಿಯಲ್ಲಿ ಹೋಗಬೇಡಿರಿ ಮತ್ತು ಸಮಾರ್ಯರ ಯಾವ ಪಟ್ಟಣದಲ್ಲಿಯೂ ನೀವು ಪ್ರವೇಶಿಸಬೇಡಿರಿ.
- 6ಆದರೆ ತಪ್ಪಿಸಿಕೊಂಡ ಕುರಿಗಳಾದ ಇಸ್ರಾಯೇಲಿನ ಮನೆತನದವರ ಬಳಿಗೆ ಮಾತ್ರ ಹೋಗಿರಿ.
- 7ನೀವು ಹೋಗುವಾಗ-- ಪರಲೋಕ ರಾಜ್ಯವು ಸಮಾಪವಾಯಿತು ಎಂದು ಸಾರಿ ಹೇಳಿರಿ.
- 8ರೋಗಿಗಳನ್ನು ಸ್ವಸ್ಥಮಾಡಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ಸತ್ತವರನ್ನು ಎಬ್ಬಿಸಿರಿ, ದೆವ್ವಗಳನ್ನು ಬಿಡಿಸಿರಿ; ನೀವು ಉಚಿತವಾಗಿ ಹೊಂದಿದ್ದೀರಿ, ಉಚಿತ ವಾಗಿ ಕೊಡಿರಿ.
Cross references
- Jeremiah 50:6 ಯೆರೆಮೀಯ 50:6ನನ್ನ ಜನರು ಕಳೆದುಹೋದ ಕುರಿಗಳಾಗಿದ್ದರು; ಅವರ ಕುರುಬರು ಅವರನ್ನು ತಪ್ಪಿ ಹೋಗುವಂತೆ ಮಾಡಿದರು; ಅವರನ್ನು ಬೆಟ್ಟಗಳ ಮೇಲೆ ತಿರುಗಿಸಿ ಅಡ್ಡಾಡಿಸಿದರು; ಅವರು ಬೆಟ್ಟದಿಂದ ಗುಡ್ಡಕ್ಕೆ ಹೋದರು; ಮಲಗುವ ಸ್ಥಳವನ್ನು ಮರೆತುಬಿಟ್ಟರು.
- Ezekiel 34:6 ಯೆಹೆಜ್ಕೇಲನು 34:6ನನ್ನ ಕುರಿಗಳು ಎಲ್ಲಾ ಪರ್ವತಗಳ ಮೇಲೆಯೂ ಪ್ರತಿಯೊಂದು ಎತ್ತರವಾದ ಬೆಟ್ಟಗಳ ಮೇಲೆಯೂ ಅಲೆದಾಡುತ್ತಿವೆ; ಹೌದು, ನನ್ನ ಮಂದೆಯು ಭೂಮಂಡಲದಲ್ಲೆಲ್ಲಾ ಚದರಿ ಹೋಗಿದೆ; ಯಾವನೂ ಅವುಗಳಿಗಾಗಿ ವಿಚಾರಿಸಲಿಲ್ಲ ಅಥವಾ ಹುಡುಕಲಿಲ್ಲ.
- Isaiah 53:6 ಯೆಶಾಯ 53:6ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು.
- 1 Peter 2:25 1 ಪೇತ್ರನು 2:25ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
- Acts 13:46 ಅಪೊಸ್ತಲರ ಕೃತ್ಯಗಳು 13:46ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.
- Psalm 119:176 ಕೀರ್ತನೆಗಳು 119:176ತಪ್ಪಿಹೋದ ಕುರಿಯ ಹಾಗೆ ತೊಳಲ್ಲಿದ್ದೇನೆ; ನಿನ್ನ ಸೇವಕನನ್ನು ಹುಡುಕು; ನಿನ್ನ ಆಜ್ಞೆಗಳನ್ನು ಮರೆತುಬಿಡೆನು.
- Matthew 15:24–26 ಮತ್ತಾಯನು 15:24–26ಆದರೆ ಆತನು ಪ್ರತ್ಯು ತ್ತರವಾಗಿ-- ತಪ್ಪಿಸಿಕೊಂಡ ಕುರಿಗಳಾಗಿರುವ ಇಸ್ರಾ ಯೇಲಿನ ಮನೆತನದವರ ಬಳಿಗೆ ಮಾತ್ರ ನಾನು ಕಳುಹಿಸಲ್ಪಟ್ಟಿದ್ದೇನೆ ಅಂದನು. ಆಗ ಆಕೆಯು ಬಂದು ಆತನನ್ನು ಆರಾಧಿಸಿ--ಕರ್ತನೇ, ನನಗೆ ಸಹಾಯ ಮಾಡು ಎಂದು ಕೇಳಿಕೊಂಡಳು. ಆದರೆ ಆತನು ಪ್ರತ್ಯುತ್ತರವಾಗಿ--ಮಕ್ಕಳ ರೊಟ್ಟಿಯನ್ನು ತಕ್ಕೊಂಡು ನಾಯಿಗಳಿಗೆ ಹಾಕುವದು ಸರಿಯಲ್ಲ ಎಂದು ಹೇಳಿ ದನು.
- Acts 3:26 ಅಪೊಸ್ತಲರ ಕೃತ್ಯಗಳು 3:26ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.
- Ezekiel 34:8 ಯೆಹೆಜ್ಕೇಲನು 34:8ದೇವ ರಾದ ಕರ್ತನು ಹೀಗೆ ಹೇಳುತ್ತಾನೆ; ನನ್ನ ಜೀವದಾಣೆ, ನಿಶ್ಚಯವಾಗಿ ನನ್ನ ಮಂದೆಯು ಕೊಳ್ಳೆಯಾದದ ರಿಂದಲೂ ನನ್ನ ಮಂದೆಯು ಕುರುಬ ನಿಲ್ಲದೆ ಬಯಲಿನ ಮೃಗಗಳಿಗೆಲ್ಲಾ ಆಹಾರವಾದದ್ದರಿಂದಲೂ ನನ್ನ ಕುರು ಬರು ನನ್ನ ಮಂದೆಯನ್ನು ಹುಡುಕದೆ ಇದ್ದದರಿಂದಲೂ ಕುರುಬರು ತಮ್ಮನ್ನು ಮೇಯಿಸಿಕೊಂಡರೇ ಹೊರತು ತಮ್ಮ ಕುರಿಗಳನ್ನು ಮೇಯಿಸದಿದ್ದದರಿಂದಲೂ
- Luke 15:3–10 ಲೂಕನು 15:3–10ಆತನು ಅವರಿಗೆ ಈ ಸಾಮ್ಯವನ್ನು ಹೇಳಿ ದನು-- ನಿಮ್ಮಲ್ಲಿ ಯಾವ ಮನುಷ್ಯನು ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದನ್ನು ಕಳೆದು ಕೊಂಡರೆ ಅವನು ತೊಂಭತ್ತೊಂಭತ್ತನ್ನು ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ವರೆಗೆ ಅದನ್ನು ಹುಡುಕಿಕೊಂಡು ಹೋಗದಿರುವನೇ? ಅವನು ಆ ಕುರಿಯನ್ನು ಕಂಡುಕೊಂಡ ಮೇಲೆ ಸಂತೋಷ ಪಡುತ್ತಾ ಅದನ್ನು ತನ್ನ ಹೆಗಲುಗಳ ಮೇಲೆ ಹೊತ್ತು ಕೊಳ್ಳುವನು. ಆಮೇಲೆ ಅವನು ಮನೆಗೆ ಬಂದು ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಾಗಿ ಕರೆದು ಅವರಿಗೆ--ನನ್ನ ಸಂಗಡ ಸಂತೋಷಪಡಿರಿ;ಯಾಕಂದರೆ ಕಳೆದುಹೋದ ನನ್ನ ಕುರಿಯನ್ನು ನಾನು ಕಂಡು ಕೊಂಡೆನು ಅನ್ನುವನು. ಆದರಂತೆಯೇ ಮಾನಸಾಂತ ರಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ನೀತಿವಂತರಿಗಿಂತ ಮಾನಸಾಂತರಪಡುವ ಒಬ್ಬಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು. ಯಾವ ಸ್ತ್ರೀಯು ತನ್ನಲ್ಲಿ ಹತ್ತು ಬೆಳ್ಳಿಯ ನಾಣ್ಯಗಳಿರಲಾಗಿ ಒಂದು ನಾಣ್ಯವನ್ನು ಕಳೆದುಕೊಂಡರೆ ದೀಪಹಚ್ಚಿ ಮನೆಯನ್ನು ಗುಡಿಸಿ ಅವಳು ಅದನ್ನು ಕಂಡುಕೊಳ್ಳುವ ವರೆಗೆ ಜಾಗ್ರತೆಯಿಂದ ಹುಡುಕುವ ದಿಲ್ಲವೇ? ಅವಳು ಅದನ್ನು ಕಂಡುಕೊಂಡ ಮೇಲೆ ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಾಗಿ ಕರೆದು ಅವರಿಗೆ--ನನ್ನ ಸಂಗಡ ಸಂತೋಷಪಡಿರಿ; ಯಾಕಂ ದರೆ ನಾನು ಕಳಕೊಂಡಿದ್ದ ನಾಣ್ಯವನ್ನು ಕಂಡುಕೊಂಡೆನು ಅನ್ನುವಳು. ಅದೇ ಪ್ರಕಾರ ಮಾನಸಾಂತರಪಡುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Romans 11:11–15 ರೋಮಾಪುರದವರಿಗೆ 11:11–15ಹಾಗಾದರೆ--ಅವರು ಬಿದ್ದುಹೋಗುವಂತೆ ಎಡವಿದರೆಂದು ನಾನು ಹೇಳಬೇಕೋ? ಹಾಗೆ ಎಂದಿಗೂ ಆಗಬಾರದು; ಆದರೆ ಅವರಲ್ಲಿ ಹುರುಡು ಹುಟ್ಟಿಸುವದಕ್ಕಾಗಿ ಅವರ ಬೀಳುವಿಕೆಯ ಮೂಲಕವೇ ಅನ್ಯಜನರಿಗೆ ರಕ್ಷಣೆಯುಂಟಾಯಿತು. ಅವರ ಬೀಳುವಿಕೆಯು ಲೋಕದ ಐಶ್ವರ್ಯಕ್ಕೂ ಅವರ ಕುಂದುವಿಕೆಯು ಅನ್ಯಜನಗಳ ಸಂಪತ್ತಿಗೂ ಆಗಿರು ವದಾದರೆ ಅವರ ಸಮೃದ್ಧಿಯು ಇನ್ನೂ ಎಷ್ಟೋ ಹೆಚ್ಚಾಗಿರುವದಲ್ಲವೇ? ಅನ್ಯಜನರಾದ ನಿಮ್ಮೊಂದಿಗೆ ನಾನು ಮಾತನಾಡು ತ್ತೇನೆ. ನಾನು ಅನ್ಯಜನಗಳಿಗೆ ಅಪೊಸ್ತಲನಾಗಿ ರುವದರಿಂದ ನನ್ನ ಉದ್ಯೋಗವನ್ನು ಗಣನೆಗೆ ತರುತ್ತೇನೆ. ಹೀಗೆ ಯಾವ ವಿಧದಲ್ಲಿಯಾದರೂ ನನ್ನ ಸ್ವಜನರಲ್ಲಿ ಹುರುಡನ್ನು ಹುಟ್ಟಿಸಿ ಅವರಲ್ಲಿ ಕೆಲವರು ರಕ್ಷಣೆ ಹೊಂದುವಂತೆ ಮಾಡೇನು. ಅವರನ್ನು ತಳ್ಳುವದರಿಂದ ಲೋಕವು ಸಮಾಧಾನವಾಗು ವದಾದರೆ ಅವರನ್ನು ಸೇರಿಸಿಕೊಳ್ಳುವದರಿಂದ ಏನಾಗುವದು? ಸತ್ತವರು ಜೀವಿತರಾಗಿ ಎದ್ದು ಬಂದಂತಾಗುವದಿಲ್ಲವೇ.
- Acts 28:25–28 ಅಪೊಸ್ತಲರ ಕೃತ್ಯಗಳು 28:25–28ಹೀಗೆ ಅವರಲ್ಲಿ ವಿಭಾಗವಾದಾಗ ಪೌಲನು ಅವರಿಗೆ--ಯೆಶಾಯನು ಪವಿತ್ರಾತ್ಮನಿಂದ ನಮ್ಮ ಪಿತೃಗಳಿಗೆ ವಿಹಿತ ವಾಗಿ ಹೇಳಿದ್ದೇನಂದರೆ-- ನೀವು ಕೇಳಿದರೂ ಕೇಳಿ ಗ್ರಹಿಸುವದಿಲ್ಲ; ನೋಡಿದರೂ ನೋಡಿ ಕಾಣುವದಿಲ್ಲ; ಯಾಕಂದರೆ ಅವರು ತಮ್ಮ ಕಣ್ಣುಗಳಿಂದ ನೋಡಿ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದಂತೆಯೂ ನಾನು ಅವರನ್ನು ಸ್ವಸ್ಥ ಮಾಡ ದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಕೇಳುವದಕ್ಕೆ ಅವರ ಕಿವಿಗಳು ಮಂದವಾದವು; ಅವರು ತಮ್ಮ ಕಣ್ಣುಗಳನ್ನು ಮುಚ್ಚಿಕೊಂಡಿದ್ದಾರೆ ಆದಕಾರಣ ದೇವರ ರಕ್ಷಣೆಯು ಅನ್ಯಜನಾಂಗದವರಿಗೆ ಕಳುಹಿಸಲ್ಪಟ್ಟಿದೆ; ಅದನ್ನು ಅವರು ಕೇಳುವರು ಎಂಬದಾಗಿ ನಿಮಗೆ ತಿಳಿದಿರಲಿ ಅಂದನು.