Matthew · chapter 10 · verse 8
Matthew 10:8 in Kannada
ರೋಗಿಗಳನ್ನು ಸ್ವಸ್ಥಮಾಡಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ಸತ್ತವರನ್ನು ಎಬ್ಬಿಸಿರಿ, ದೆವ್ವಗಳನ್ನು ಬಿಡಿಸಿರಿ; ನೀವು ಉಚಿತವಾಗಿ ಹೊಂದಿದ್ದೀರಿ, ಉಚಿತ ವಾಗಿ ಕೊಡಿರಿ.
Rogigalannu svasthamaadiri, kushtharogigalannu shuddhamaadiri, sattavarannu ebbisiri, devvagalannu bidisiri; neevu uchitavaagi hondiddeeri, uchita vaagi kodiri.
Matthew 10:8 in English
- King James Version (KJV)
- Heal the sick, cleanse the lepers, raise the dead, cast out devils: freely ye have received, freely give.
- World English Bible (WEB)
- Heal the sick, cleanse the lepers, and cast out demons. Freely you received, so freely give.
- American Standard Version (ASV)
- Heal the sick, raise the dead, cleanse the lepers, cast out demons: freely ye received, freely give.
- Bible in Basic English (BBE)
- Make well those who are ill, give life to the dead, make lepers clean, send evil spirits out of men; freely it has been given to you, freely give.
- Darby Translation (DBY)
- Heal [the] infirm, [raise the dead], cleanse lepers, cast out demons: ye have received gratuitously, give gratuitously.
- Webster's Bible (WBS)
- Heal the sick, cleanse the lepers, raise the dead, cast out demons: freely ye have received, freely give.
- Young's Literal Translation (YLT)
- infirm ones be healing, lepers be cleansing, dead be raising, demons be casting out — freely ye did receive, freely give.
Read in context
- 6ಆದರೆ ತಪ್ಪಿಸಿಕೊಂಡ ಕುರಿಗಳಾದ ಇಸ್ರಾಯೇಲಿನ ಮನೆತನದವರ ಬಳಿಗೆ ಮಾತ್ರ ಹೋಗಿರಿ.
- 7ನೀವು ಹೋಗುವಾಗ-- ಪರಲೋಕ ರಾಜ್ಯವು ಸಮಾಪವಾಯಿತು ಎಂದು ಸಾರಿ ಹೇಳಿರಿ.
- 8ರೋಗಿಗಳನ್ನು ಸ್ವಸ್ಥಮಾಡಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ಸತ್ತವರನ್ನು ಎಬ್ಬಿಸಿರಿ, ದೆವ್ವಗಳನ್ನು ಬಿಡಿಸಿರಿ; ನೀವು ಉಚಿತವಾಗಿ ಹೊಂದಿದ್ದೀರಿ, ಉಚಿತ ವಾಗಿ ಕೊಡಿರಿ.
- 9ನಿಮ್ಮ ಹಮ್ಮಾಣಿಗಳಲ್ಲಿ ಬಂಗಾರ, ಬೆಳ್ಳಿ ಮತ್ತು ಹಿತ್ತಾಳೆ ಇಟ್ಟುಕೊಳ್ಳಬೇಡಿರಿ.
- 10ಪ್ರಯಾಣಕ್ಕೆ ಹಸಿಬೆಯನ್ನಾಗಲೀ ಎರಡು ಮೇಲಂಗಿಗಳ ನ್ನಾಗಲೀ ಕೆರಗಳನ್ನಾಗಲೀ ಕೋಲುಗಳನ್ನಾಗಲೀ ತಕ್ಕೊ ಳ್ಳಬೇಡಿರಿ; ಯಾಕಂದರೆ ಕೆಲಸ ಮಾಡುವವನು ತನ್ನ ಆಹಾರಕ್ಕೆ ಯೋಗ್ಯನಾಗಿದ್ದಾನೆ.
Cross references
- Acts 3:6 ಅಪೊಸ್ತಲರ ಕೃತ್ಯಗಳು 3:6ಆಗ ಪೇತ್ರನು--ಬೆಳ್ಳಿಬಂಗಾರವಂತೂ ನನ್ನಲ್ಲಿಲ್ಲ. ಆದರೆ ನನಗಿರುವದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆದಾಡು ಎಂದು ಹೇಳಿ
- Luke 10:9 ಲೂಕನು 10:9ಅಲ್ಲಿರುವ ರೋಗಿಗಳನ್ನು ಸ್ವಸ್ಥಮಾಡಿರಿ; ಮತ್ತು ಅವರಿಗೆ--ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂದು ಹೇಳಿರಿ.
- Acts 4:30 ಅಪೊಸ್ತಲರ ಕೃತ್ಯಗಳು 4:30ನಿನ್ನ ಕೈಗಳನ್ನು ಚಾಚುವದರಿಂದ ಸ್ವಸ್ಥತೆಯನ್ನುಂಟು ಮಾಡುವಂತೆಯೂ ಸೂಚಕ ಕಾರ್ಯ ಗಳು ಅದ್ಭುತಕಾರ್ಯಗಳು ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನಲ್ಲಿ ನಡೆಯುವಂತೆಯೂ ಅನು ಗ್ರಹಿಸು ಎಂದು ಗಟ್ಟಿಯಾದ ಸ್ವರದಿಂದ ಪ್ರಾರ್ಥಿಸಿ ದರು.
- Matthew 10:1 ಮತ್ತಾಯನು 10:1ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ತನ್ನ ಬಳಿಗೆ ಕರೆದು ಅಶುದ್ಧಾತ್ಮಗಳನ್ನು ಬಿಡಿಸುವಂತೆಯೂ ಎಲ್ಲಾ ತರವಾದ ರೋಗವನ್ನು ಮತ್ತು ಎಲ್ಲಾ ತರವಾದ ಅಸ್ವಸ್ಥತೆಯನ್ನು ಸ್ವಸ್ಥ ಮಾಡು ವಂತೆಯೂ ಅವರಿಗೆ ಅಧಿಕಾರ ಕೊಟ್ಟನು.
- Acts 20:33–35 ಅಪೊಸ್ತಲರ ಕೃತ್ಯಗಳು 20:33–35ನಾನು ಯಾರ ಬೆಳ್ಳಿಯನ್ನಾಗಲಿ ಇಲ್ಲವೆ ಭಂಗಾರವನ್ನಾಗಲಿ ಇಲ್ಲವೆ ವಸ್ತ್ರವನ್ನಾಗಲಿ ಬಯಸಲಿಲ್ಲ. ಹೌದು, ಈ ಕೈಗಳೇ ಕೆಲಸಮಾಡಿ ನನ್ನ ಕೊರತೆಗಳನ್ನೂ ನನ್ನ ಜೊತೆಯಲ್ಲಿದ್ದವರ ಕೊರತೆಗಳನ್ನೂ ನೀಗಿದ್ದನ್ನು ನೀವೇ ಬಲ್ಲಿರಿ. ನೀವು ಹಾಗೆಯೇ ಕೆಲಸಮಾಡಿ ಬಲಹೀನ ರಿಗೆ ಹೀಗೆ ಆಧಾರವಾಗಿರತಕ್ಕದ್ದೆಂದೂ ಮತ್ತು--ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯ ವೆಂದು ಕರ್ತನಾದ ಯೇಸು ಹೇಳಿದ ಮಾತುಗಳನ್ನು ನೀವು ಜ್ಞಾಪಕ ಮಾಡಿಕೊಳ್ಳಬೇಕೆಂದೂ ಇವೆಲ್ಲವು ಗಳನ್ನು ನಾನು ನಿಮಗೆ ತಿಳಿಯಪಡಿಸಿದ್ದೇನೆ.
- Mark 16:18 ಮಾರ್ಕನು 16:18ಅವರು ಸರ್ಪಗಳನ್ನು ಎತ್ತುವರು; ಮರಣಕರವಾದದ್ದೇ ನಾದರೂ ಕುಡಿದರೆ ಅದು ಅವರಿಗೆ ಯಾವ ಕೇಡನ್ನೂ ಮಾಡುವದಿಲ್ಲ; ಅವರು ರೋಗಿಗಳ ಮೇಲೆ ಕೈಗಳನ್ನಿಡು ವಾಗ ಅವರು ಸ್ವಸ್ಥರಾಗುವರು ಎಂದು ಹೇಳಿದನು.
- Acts 8:18–23 ಅಪೊಸ್ತಲರ ಕೃತ್ಯಗಳು 8:18–23ಅಪೊಸ್ತಲರು ಕೈಗಳನ್ನಿಡುವದರ ಮೂಲಕವಾಗಿ ಪವಿತ್ರಾತ್ಮ ಕೊಡೋ ಣವಾಗುವದನ್ನು ಸೀಮೋನನು ನೋಡಿ ಹಣವನ್ನು ತಂದು-- ನಾನು ಯಾರ ಮೇಲೆ ಕೈಗಳನ್ನಿಡುತ್ತೇನೋ ಅವರು ಪವಿತ್ರಾತ್ಮನನ್ನು ಹೊಂದುವಂತೆ ಈ ಅಧಿಕಾರ ವನ್ನು ನನಗೂ ಕೊಡಿರಿ ಅಂದನು. ಆದರೆ ಪೇತ್ರನು ಅವನಿಗೆ--ನಿನ್ನ ಹಣವು ನಿನ್ನ ಕೂಡ ಹಾಳಾಗಿ ಹೋಗಲಿ; ನೀನು ದೇವರ ದಾನವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಯೋಚಿಸುತ್ತೀ ಯಲ್ಲಾ. ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ; ನಿನ್ನ ಹೃದಯವು ದೇವರ ಮುಂದೆ ಸರಿಯಲ್ಲ. ಆದದರಿಂದ ಈ ನಿನ್ನ ಕೆಟ್ಟತನದ ವಿಷಯವಾಗಿ ಮಾನಸಾಂತರಪಟ್ಟು ದೇವರನ್ನು ಬೇಡಿಕೋ, ಆಗ ನಿನ್ನ ಹೃದಯದ ಆಲೋಚನೆಯು ಕ್ಷಮಿಸಲ್ಪಡಬಹುದು. ಯಾಕಂದರೆ ನೀನು ಹಾನಿಕರ ವಾದ ವಿಷದಲ್ಲಿಯೂ ದುಷ್ಟತ್ವದ ಬಂಧನದಲ್ಲಿಯೂ ಇರುತ್ತೀಯೆಂದು ನನಗೆ ಕಾಣುತ್ತದೆ ಅಂದನು.
- 2 Kings 5:15–16 2 ಅರಸುಗಳು 5:15–16ಆಗ ಅವನೂ ಅವನ ಎಲ್ಲಾ ಪರಿವಾರದವರೂ ದೇವರ ಮನುಷ್ಯನ ಬಳಿಗೆ ತಿರುಗಿ ಬಂದರು. ಅವನು ಪ್ರವಾದಿಯ ಮುಂದೆ ನಿಂತು--ಇಗೋ, ಇಸ್ರಾಯೇ ಲಿನಲ್ಲಿರುವ ದೇವರ ಹೊರತಾಗಿ ಭೂಮಿಯಲ್ಲೆ ಲ್ಲಿಯೂ ಬೇರೆ ದೇವರು ಇಲ್ಲವೆಂದು ನಾನು ಬಲ್ಲೆನು; ಆದಕಾರಣ ನೀನು ದಯಮಾಡಿ ನಿನ್ನ ಸೇವಕನಿಂದ ಕಾಣಿಕೆಯನ್ನು ತಕ್ಕೋ ಅಂದನು. ಆದರೆ ಅವನುನಾನು ಯಾವಾತನ ಮುಂದೆ ನಿಲ್ಲುತ್ತೇನೋ ಆ ಕರ್ತನ ಜೀವದಾಣೆ, ನಾನು ಏನೂ ತಕ್ಕೊಳ್ಳುವದಿಲ್ಲ ಅಂದ ನು. ಅವನು ತಕ್ಕೊಳ್ಳಬೇಕೆಂದು ನಾಮಾನನು ಬಲವಂತ ಮಾಡಿದರೂ ಬೇಡ ಅಂದನು.
- Acts 5:12–15 ಅಪೊಸ್ತಲರ ಕೃತ್ಯಗಳು 5:12–15ಅಪೊಸ್ತಲರ ಕೈಗಳಿಂದ ಅನೇಕ ಸೂಚಕ ಕಾರ್ಯಗಳೂ ಅದ್ಭುತಕಾರ್ಯಗಳೂ ಜನರ ಮಧ್ಯ ದಲ್ಲಿ ನಡೆದವು. (ಅವರೆಲ್ಲರೂ ಸೊಲೊಮೋನನ ದ್ವಾರಾಂಗಳದಲ್ಲಿ ಒಮ್ಮನಸ್ಸಿನಿಂದ ಇದ್ದರು.) ಮಿಕ್ಕಾದ ವರಲ್ಲಿ ಒಬ್ಬರಿಗೂ ಅವರ ಜೊತೆ ಸೇರುವದಕ್ಕೆ ಧೈರ್ಯ ವಿರಲಿಲ್ಲ; ಆದರೂ ಜನರು ಅವರನ್ನು ಹೊಗಳುತ್ತಿದ್ದರು. ವಿಶ್ವಾಸಿಗಳಾದ ಬಹಳ ಸ್ತ್ರೀ ಪುರುಷರ ಸಮೂಹದ ವರು ಕರ್ತನಲ್ಲಿ ಸೇರಿಕೊಂಡರು. ಹೀಗಿರುವದರಿಂದ ಪೇತ್ರನು ಹಾದು ಹೋಗುವಾಗ ಅವನ ನೆರಳಾದರೂ ಅವರಲ್ಲಿ ಕೆಲವರ ಮೇಲೆ ಬೀಳುವಂತೆ ಜನರು ರೋಗಿಗಳನ್ನು ಹಾಸಿಗೆಗಳ ಮೇಲೆಯೂ ದೋಲಿಗಳ ಮೇಲೆಯೂ ಇಟ್ಟು ಬೀದಿಗಳಿಗೆ ತೆಗೆದುಕೊಂಡು ಬಂದರು.
- Acts 4:9–10 ಅಪೊಸ್ತಲರ ಕೃತ್ಯಗಳು 4:9–10ಈ ದುರ್ಬಲನಿಗೆ ಸ್ವಸ್ಥವಾದ ಒಳ್ಳೇ ಕಾರ್ಯವು ಹೇಗಾಯಿತೆಂಬ ವಿಷಯವಾಗಿ ಈ ದಿವಸ ನಾವು ವಿಚಾರಿಸಲ್ಪಡುವದಾದರೆ ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ.
- 2 Kings 5:20–27 2 ಅರಸುಗಳು 5:20–27ಆದರೆ ದೇವರ ಮನುಷ್ಯನಾದ ಎಲೀಷನ ಸೇವಕ ನಾಗಿರುವ ಗೇಹಜಿಯು--ಇಗೋ, ನನ್ನ ಯಜಮಾ ನನು ಈ ಅರಾಮ್ಯನಾದ ನಾಮಾನನು ತಕ್ಕೊಂಡು ಬಂದದ್ದನ್ನು ಅವನ ಕೈಯಿಂದ ತಕ್ಕೊಳ್ಳದೆ ಸುಮ್ಮನೆ ಕಳುಹಿಸಿದ್ದಾನೆ. ಆದರೆ ಕರ್ತನ ಜೀವದಾಣೆ, ನಾನು ಅವನ ಹಿಂದೆ ಓಡಿಹೋಗಿ ಅವನ ಕೈಯಿಂದ ಏನಾ ದರೂ ತಕ್ಕೊಳ್ಳುವೆನು ಅಂದುಕೊಂಡನು. ಹಾಗೆಯೇ ಗೇಹಜಿಯು ನಾಮಾನನ ಹಿಂದೆ ಹೋದನು. ನಾಮಾನನು ತನ್ನ ಹಿಂದೆ ಓಡಿ ಬರುವವನನ್ನು ನೋಡಿ ದಾಗ ಅವನನ್ನು ಎದುರುಗೊಳ್ಳಲು ರಥದಿಂದ ಇಳಿದು ಅವನಿಗೆ--ಎಲ್ಲಾ ಕ್ಷೇಮವೋ ಅಂದನು. ಅವನುಕ್ಷೇಮ; ಇಗೋ, ಪ್ರವಾದಿಗಳ ಮಕ್ಕಳಲ್ಲಿ ಇಬ್ಬರು ಯೌವನಸ್ಥರು ಎಫ್ರಾಯಾಮ್ ಬೆಟ್ಟದಿಂದ ಈಗಲೇ ನನ್ನ ಬಳಿಗೆ ಬಂದಿದ್ದಾರೆ; ನೀನು ದಯಮಾಡಿ ಅವರಿಗೆ ಒಂದು ತಲಾಂತು ಬೆಳ್ಳಿಯನ್ನೂ ಎರಡು ದುಸ್ತು ಬಟ್ಟೆ ಗಳನ್ನೂ ಕೊಡಬೇಕೆಂದು ನಿನಗೆ ಹೇಳು ಎಂದು ನನ್ನ ಯಜಮಾನನು ಕಳುಹಿಸಿದ್ದಾನೆ ಅಂದನು. ಆಗ ನಾಮಾನನು--ನೀನು ದಯಮಾಡಿ ಎರಡು ತಲಾಂತು ಗಳನ್ನು ತಕ್ಕೋ ಎಂದು ಹೇಳಿ ಅವನನ್ನು ಬಲವಂತ ಮಾಡಿದನು. ಹಾಗೆಯೇ ಎರಡು ತಲಾಂತು ಬೆಳ್ಳಿಯನ್ನು ಎರಡು ಚೀಲಗಳಲ್ಲಿ ಕಟ್ಟಿಸಿ ಅದರ ಸಂಗಡ ಎರಡು ದುಸ್ತು ಬಟ್ಟೆಗಳನ್ನು ಕೊಟ್ಟು ತನ್ನ ಸೇವಕರಲ್ಲಿ ಇಬ್ಬರ ಮೇಲೆ ಹೊರಿಸಿದನು; ಅವರು ಇವನ ಮುಂದೆ ಹೊತ್ತುಕೊಂಡು ಹೋದರು. ಅವನು ದುರ್ಗಕ್ಕೆ ಬಂದು ಅವುಗಳನ್ನು ಅವರ ಕೈಯಿಂದ ತಕ್ಕೊಂಡು ಮನೆಯಲ್ಲಿಟ್ಟು ಆ ಮನುಷ್ಯರನ್ನು ಕಳುಹಿಸಿಬಿಟ್ಟದ್ದರಿಂದ ಅವರು ಹೋದರು. ಆಗ ಇವನು ಒಳಗೆ ಪ್ರವೇಶಿಸಿ ತನ್ನ ಯಜಮಾನನ ಮುಂದೆ ನಿಂತನು. ಎಲೀಷನು ಅವನಿಗೆ--ಗೇಹಜಿಯೇ, ಎಲ್ಲಿಂದ ಬಂದಿ ಅಂದನು. ಅದಕ್ಕವನು--ನಿನ್ನ ಸೇವಕನು ಎಲ್ಲಿಗೂ ಹೋಗಲಿಲ್ಲ ಅಂದನು. ಆಗ ಅವನು ಇವನಿಗೆ--ಆ ಮನುಷ್ಯನು ನಿನ್ನನ್ನು ಎದುರುಗೊಳ್ಳಲು ತನ್ನ ರಥದಿಂದ ಇಳಿದು ನಿನ್ನ ಬಳಿಗೆ ಬಂದಾಗ ನನ್ನ ಹೃದಯವು ನಿನ್ನ ಸಂಗಡ ಹೋಗಲಿಲ್ಲವೋ? ದ್ರವ್ಯವನ್ನೂ ವಸ್ತ್ರಗಳನ್ನೂ ಆಲಿದ್ ತೋಪುಗಳನ್ನೂ ದ್ರಾಕ್ಷೆಯ ತೋಟಗಳನ್ನೂ ಕುರಿ ದನಗಳನ್ನೂ ದಾಸದಾಸಿಯರನ್ನೂ ಪಡಕೊಳ್ಳುವದಕ್ಕೆ ಇದು ಸಮಯವೋ?ಆದದರಿಂದ ನಾಮಾನನ ಕುಷ್ಠರೋಗವು ನಿನಗೂ ನಿನ್ನ ಸಂತಾನಕ್ಕೂ ನಿತ್ಯವಾಗಿ ಹತ್ತುವದು ಅಂದನು. ಆಗ ಅವನು ಮಂಜಿನ ಹಾಗೆಯೇ ಕುಷ್ಠರೋಗಿಯಾಗಿ ಅವನ ಸಮ್ಮುಖದಿಂದ ಹೊರಟುಹೋದನು. ಆದದರಿಂದ ನಾಮಾನನ ಕುಷ್ಠರೋಗವು ನಿನಗೂ ನಿನ್ನ ಸಂತಾನಕ್ಕೂ ನಿತ್ಯವಾಗಿ ಹತ್ತುವದು ಅಂದನು. ಆಗ ಅವನು ಮಂಜಿನ ಹಾಗೆಯೇ ಕುಷ್ಠರೋಗಿಯಾಗಿ ಅವನ ಸಮ್ಮುಖದಿಂದ ಹೊರಟುಹೋದನು.