Matthew · chapter 11 · verse 14
Matthew 11:14 in Kannada
ನೀವು ಇದನ್ನು ಅಂಗೀಕರಿಸುವದಕ್ಕೆ ಮನಸ್ಸಿದ್ದರೆ ಬರಬೇಕಾಗಿದ್ದ ಎಲೀಯನು ಇವನೇ.
Neevu idannu angeekarisuvadakke manassiddare barabekaagidda eleeyanu ivane.
Matthew 11:14 in English
- King James Version (KJV)
- And if ye will receive [it], this is Elias, which was for to come.
- World English Bible (WEB)
- If you are willing to receive it, this is Elijah, who is to come.
- American Standard Version (ASV)
- And if ye are willing to receive [it], this is Elijah, that is to come.
- Bible in Basic English (BBE)
- And if you are able to see it, this is Elijah who was to come.
- Darby Translation (DBY)
- And if ye will receive it, this is Elias, who is to come.
- Webster's Bible (WBS)
- And if ye will receive [it] , this is Elijah who was to come.
- Young's Literal Translation (YLT)
- and if ye are willing to receive [it], he is Elijah who was about to come;
Read in context
- 12ಇದಲ್ಲದೆ ಬಾಪ್ತಿಸ್ಮ ಮಾಡಿಸುವ ಯೋಹಾನನ ದಿನಗಳಿಂದ ಇದುವರೆಗೆ ಪರಲೋಕ ರಾಜ್ಯವು ಬಲಾತ್ಕಾರಕ್ಕೆ ಗುರಿಯಾಗಿದೆ; ಮತ್ತು ಬಲಾತ್ಕಾರಿಗಳು ಅದನ್ನು ಒತ್ತಾಯದಿಂದ ತೆಗೆದು ಕೊಳ್ಳುತ್ತಾರೆ.
- 13ಯಾಕಂದರೆ ಎಲ್ಲಾ ಪ್ರವಾದಿಗಳೂ ನ್ಯಾಯಪ್ರಮಾಣವೂ ಯೋಹಾನನ ವರೆಗೆ ಪ್ರವಾದಿ ಸಿದ್ದುಂಟು.
- 14ನೀವು ಇದನ್ನು ಅಂಗೀಕರಿಸುವದಕ್ಕೆ ಮನಸ್ಸಿದ್ದರೆ ಬರಬೇಕಾಗಿದ್ದ ಎಲೀಯನು ಇವನೇ.
- 15ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ.
- 16ಆದರೆ ಈ ಸಂತತಿಯನ್ನು ನಾನು ಯಾವದಕ್ಕೆ ಹೋಲಿಸಲಿ? ಮಕ್ಕಳು ಪೇಟೆಗಳಲ್ಲಿ ಕೂತುಕೊಂಡು ತಮ್ಮ ಸಂಗಡಿ ಗರನ್ನು ಕರೆಯುತ್ತಾ--
Cross references
- Malachi 4:5 ಮಲಾಕಿಯ 4:5ಇಗೋ, ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ ನಿಮಗೆ ಪ್ರವಾದಿಯಾದ ಎಲೀಯನನ್ನು ಕಳುಹಿಸುತ್ತೇನೆ.ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಗಳ ಕಡೆಗೂ ತಿರುಗಿಸುವನು.
- Mark 9:11–13 ಮಾರ್ಕನು 9:11–13ಇದಲ್ಲದೆ ಅವರು ಆತನಿಗೆ--ಎಲೀಯನು ಮೊದಲು ಬರುವದು ಅಗತ್ಯವೆಂದು ಶಾಸ್ತ್ರಿಗಳು ಯಾಕೆ ಹೇಳುತ್ತಾರೆ ಎಂದು ಕೇಳಿದರು. ಆತನು ಅವರಿಗೆ ಪ್ರತ್ಯುತ್ತರವಾಗಿ-- ನಿಜವಾಗಿಯೂ ಎಲೀಯನು ಮೊದಲು ಬಂದು ಎಲ್ಲವುಗಳನ್ನು ಯಥಾಸ್ಥಾನಪಡಿಸುತ್ತಾನೆ; ಆದರೆ ಮನುಷ್ಯಕುಮಾರನು ಬಹಳ ಶ್ರಮೆಗಳನ್ನನುಭವಿ ಸುವದು ಮತ್ತು ತಿರಸ್ಕರಿಸಲ್ಪಡುವದು ಅಗತ್ಯವೆಂದು ಆತನ ವಿಷಯವಾಗಿ ಬರೆದಿರುವದು ಹೇಗೆ? ಆದರೆ ನಾನು ನಿಮಗೆ ಹೇಳುವದೇನಂದರೆ-- ಎಲೀಯನು ನಿಜವಾಗಿಯೂ ಬಂದನು. ಅವನ ವಿಷಯವಾಗಿ ಬರೆದಿರುವಂತೆ ಅವರು ತಮ್ಮ ಮನಸ್ಸಿಗೆ ಬಂದ ಹಾಗೆ ಅವನಿಗೆ ಮಾಡಿದರು ಅಂದನು.
- Matthew 17:10–13 ಮತ್ತಾಯನು 17:10–13ಆಗ ಆತನ ಶಿಷ್ಯರು ಆತನಿಗೆ--ಎಲೀಯನು ಮೊದಲು ಬರುವದು ಅಗತ್ಯವೆಂದು ಶಾಸ್ತ್ರಿಗಳು ಯಾಕೆ ಹೇಳುತ್ತಾರೆ ಎಂದು ಕೇಳಿದರು. ಯೇಸು ಪ್ರತ್ಯುತ್ತರವಾಗಿ ಅವ ರಿಗೆ -- ಎಲೀಯನು ಮೊದಲು ಬಂದು ಎಲ್ಲವುಗಳನ್ನು ತಿರಿಗಿ ಯಥಾಸ್ಥಾನ ಪಡಿಸುವದು ನಿಜವೇ; ಆದರೆ ಎಲೀಯನು ಆಗಲೇ ಬಂದನು. ಮತ್ತು ಅವರು ಅವನನ್ನು ಅರಿಯದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದ್ದಾಯಿತು. ಅದರಂತೆಯೇ ಮನುಷ್ಯಕುಮಾರ ನು ಸಹ ಅವರಿಂದ ಶ್ರಮೆಯನ್ನು ಅನುಭವಿಸುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು. ಬಾಪ್ತಿಸ್ಮ ಮಾಡಿಸುವ ಯೋಹಾನನ ವಿಷಯದಲ್ಲಿ ಆತನು ತಮ್ಮೊಂದಿಗೆ ಮಾತನಾಡಿದನೆಂದು ಶಿಷ್ಯರು ಆಗ ಗ್ರಹಿಸಿಕೊಂಡರು.
- Luke 1:17 ಲೂಕನು 1:17ಅವನು ತಂದೆಗಳ ಹೃದಯಗಳನ್ನು ಮಕ್ಕಳಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನಕ್ಕೂ ತಿರುಗಿಸಿ ಕರ್ತನಿಗೋಸ್ಕರ ಜನರನ್ನು ಸಿದ್ಧಮಾಡುವದಕ್ಕೆ ಎಲೀಯನ ಆತ್ಮದಲ್ಲಿ ಯೂ ಬಲದಲ್ಲಿಯೂ ಆತನ ಮುಂದೆ ಹೋಗುವನು ಎಂದು ಹೇಳಿದನು.
- John 1:21–23 ಯೋಹಾನನು 1:21–23ಅದಕ್ಕವರು--ಹಾಗಾದರೇನು? ನೀನು ಎಲೀಯನೋ ಎಂದು ಕೇಳಿದರು. ಅದಕ್ಕೆ ಅವನು--ನಾನಲ್ಲ ಅಂದನು. ಅವರು ನೀನು ಆ ಪ್ರವಾದಿಯೋ ಎಂದು ಕೇಳಿದ್ದಕ್ಕೆ ಅವನು--ಅಲ್ಲ ಎಂದು ಉತ್ತರಕೊಟ್ಟನು. ಆಗ ಅವರು ಅವ ನಿಗೆ--ನೀನು ಯಾರು? ನಮ್ಮನ್ನು ಕಳುಹಿಸಿದವರಿಗೆ ನಾವು ಉತ್ತರ ಹೇಳುವಂತೆ ನೀನು ನಿನ್ನ ವಿಷಯದಲ್ಲಿ ಏನು ಹೇಳುತ್ತೀ ಎಂದು ಕೇಳಿದರು. ಅವನು--ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿ ಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂದು ಪ್ರವಾದಿ ಯಾದ ಯೆಶಾಯನು ಹೇಳಿದ ಶಬ್ದವೇ ನಾನು ಎಂದು ಉತ್ತರಕೊಟ್ಟನು.
- 1 Corinthians 3:2 1 ಕೊರಿಂಥದವರಿಗೆ 3:2ನಿಮಗೆ ಹಾಲು ಕುಡಿಸಿದೆನು, ಅನ್ನ ಕೊಡಲಿಲ್ಲ; ಅನ್ನ ತಿನು ್ನವದಕ್ಕೆ ನಿಮಗೆ ಶಕ್ತಿ ಇರಲಿಲ್ಲ, ಇಲ್ಲವೆ ಈಗಲಾದರೂ ಶಕ್ತಿಯಿಲ್ಲ;
- Ezekiel 2:5 ಯೆಹೆಜ್ಕೇಲನು 2:5ಅವರು ಕೇಳಲಿ ಅಥವಾ ಕೇಳದಿರಲಿ (ಅವರು ತಿರುಗಿಬೀಳುವ ಮನೆಯವರು); ಆದರೆ ತಮ್ಮೊಳಗೆ ಒಬ್ಬ ಪ್ರವಾದಿ ಇರುವನೆಂದು ತಿಳಿದು ಕೊಂಡರೆ ಸಾಕು.
- John 16:12 ಯೋಹಾನನು 16:12ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಇವೆ; ಆದರೆ ನೀವು ಈಗ ಅವುಗಳನ್ನು ಹೊರಲಾರಿರಿ;
- Ezekiel 3:10–11 ಯೆಹೆಜ್ಕೇಲನು 3:10–11ಇದಲ್ಲದೆ ಆತನು ನನಗೆ--ನರಪುತ್ರನೇ, ನಾನು ನಿನ್ನ ಸಂಗಡ ಆಡುವ ಈ ನನ್ನ ಮಾತುಗಳನ್ನೆಲಾ ನಿನ್ನ ಕಿವಿಗಳಿಂದ ಕೇಳಿ ಹೃದಯದಲ್ಲಿ ಅಂಗೀಕರಿಸಿಕೋ. ಹೋಗು, ಸೆರೆಯಾಗಿರುವ ನಿನ್ನ ಜನರ ಮಕ್ಕಳ ಬಳಿಗೆ ಹೋಗಿ, ಅವರ ಸಂಗಡ ಮಾತನಾಡು, ಅವರು ಕೇಳಿದರೂ ಕೇಳದಿದ್ದರೂ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು.
- Revelation 20:4 ಪ್ರಕಟನೆ 20:4ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕೂತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ