Matthew · chapter 11 · verse 23
Matthew 11:23 in Kannada
ಆಕಾಶದವರೆಗೂ ಹೆಚ್ಚಿಸಲ್ಪಟ್ಟ ಕಪೆರ್ನೌಮೇ, ನೀನು ಕೆಳಗೆ ಪಾತಾಳಕ್ಕೆ ದೊಬ್ಬಲ್ಪಡುವಿ; ಯಾಕಂದರೆ ನಿನ್ನೊಳಗೆ ನಡೆದಿರುವ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಈ ದಿನದವರೆಗೂ ಇರುತ್ತಿತ್ತು.
Aakaashadavaregoo hechchisalpatta kapernaume, neenu kelage paataalakke dobbalpaduvi; yaakandare ninnolage nadediruva mahatkaaryagalu sodominalli nadediddare adu ee dinadavaregoo iruttittu.
Matthew 11:23 in English
- King James Version (KJV)
- And thou, Capernaum, which art exalted unto heaven, shalt be brought down to hell: for if the mighty works, which have been done in thee, had been done in Sodom, it would have remained until this day.
- World English Bible (WEB)
- You, Capernaum, who are exalted to heaven, you will go down to Hades. For if the mighty works had been done in Sodom which were done in you, it would have remained until today.
- American Standard Version (ASV)
- And thou, Capernaum, shalt thou be exalted unto heaven? thou shalt go down unto Hades: for if the mighty works had been done in Sodom which were done in thee, it would have remained until this day.
- Bible in Basic English (BBE)
- And you, Capernaum, were you not to be lifted up to heaven? you will go down into hell: for if the works of power which were done in you had been done in Sodom, it would have been here to this day.
- Darby Translation (DBY)
- And thou, Capernaum, who hast been raised up to heaven, shalt be brought down even to hades. For if the works of power which have taken place in thee, had taken place in Sodom, it had remained until this day.
- Webster's Bible (WBS)
- And thou, Capernaum, which art exalted to heaven, shalt be brought down to hell: for if the mighty works which have been done in thee, had been done in Sodom, it would have remained until this day.
- Young's Literal Translation (YLT)
- 'And thou, Capernaum, which unto the heaven wast exalted, unto hades shalt be brought down, because if in Sodom had been done the mighty works that were done in thee, it had remained unto this day;
Read in context
- 21ಖೊರಾಜಿನೇ, ನಿನಗೆ ಅಯ್ಯೋ! ಬೆತ್ಸಾಯಿದವೇ, ನಿನಗೆ ಅಯ್ಯೋ! ಯಾಕಂದರೆ ನಿನ್ನೊಳಗೆ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ಗಳಲ್ಲಿ ನಡೆಯುತ್ತಿದ್ದರೆ ಅವುಗಳು ಆಗಲೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರಪಡುತ್ತಿದ್ದವು.
- 22ಆದರೆ ನಾನು ನಿಮಗೆ ಹೇಳುವದೇನಂದರೆ-- ನ್ಯಾಯತೀರ್ಪಿನ ದಿನದಲ್ಲಿ ನಿಮಗಿಂತಲೂ ತೂರ್ ಮತ್ತು ಸೀದೋನ್ಗಳ ಗತಿಯು ಹೆಚ್ಚು ತಾಳಬಹುದಾಗಿರುವದು.
- 23ಆಕಾಶದವರೆಗೂ ಹೆಚ್ಚಿಸಲ್ಪಟ್ಟ ಕಪೆರ್ನೌಮೇ, ನೀನು ಕೆಳಗೆ ಪಾತಾಳಕ್ಕೆ ದೊಬ್ಬಲ್ಪಡುವಿ; ಯಾಕಂದರೆ ನಿನ್ನೊಳಗೆ ನಡೆದಿರುವ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಈ ದಿನದವರೆಗೂ ಇರುತ್ತಿತ್ತು.
- 24ಆದರೆ ನಾನು ನಿನಗೆ ಹೇಳುವದೇನಂದರೆ --ನ್ಯಾಯತೀರ್ಪಿನ ದಿನದಲ್ಲಿ ನಿನಗಿಂತಲೂ ಸೊದೋಮಿನ ಗತಿಯು ಹೆಚ್ಚು ತಾಳಬಹುದಾಗಿರುವದು.
- 25ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.
Cross references
- Isaiah 14:13–15 ಯೆಶಾಯ 14:13–15ನೀನು ನಿನ್ನ ಹೃದಯದಲ್ಲಿ ನಾನು ಆಕಾಶಕ್ಕೆ ಏರಿ ದೇವರ ನಕ್ಷತ್ರಗಳ ಮೇಲೆ ನನ್ನ ಸಿಂಹಾಸನವನ್ನು ಘನತೆಗೇರಿಸುವೆನು; ಉತ್ತರ ದಿಕ್ಕಿನ ಕಡೆಗಿರುವ ಸಮೂಹ ಪರ್ವತದ ಮೇಲೆಯೂ ನಾನು ಆಸೀನನಾ ಗುವೆನು. ಉನ್ನತವಾದ ಮೇಘ ಮಂಡಲದ ಮೇಲೆ ಏರಿ ಮಹೋನ್ನತನಿಗೆ ಸಮಾನನಾಗುತ್ತೇನೆ ಅಂದು ಕೊಂಡಿದ್ದೆಯಲ್ಲಾ; ಆದಾಗ್ಯೂ ಪಾತಾಳದ ಕುಣಿಯ ಪಾರ್ಶ್ವಗಳಿಗೆ ಇಳಿಸಲ್ಪಡುವಿ.
- John 4:46–54 ಯೋಹಾನನು 4:46–54ಹೀಗೆ ಯೇಸು ತಾನು ನೀರನ್ನು ದ್ರಾಕ್ಷಾರಸ ವನ್ನಾಗಿ ಮಾಡಿದ ಗಲಿಲಾಯದ ಕಾನಾನಿಗೆ ತಿರಿಗಿ ಬಂದನು. ಆಗ ಕಪೆರ್ನೌಮಿನಲ್ಲಿದ್ದ ಒಬ್ಬ ಪ್ರಧಾನನ ಮಗನು ಅಸ್ವಸ್ಥನಾಗಿದ್ದನು. ಯೇಸು ಯೂದಾಯ ದಿಂದ ಗಲಿಲಾಯಕ್ಕೆ ಬಂದನೆಂದು ಅವನು ಕೇಳಿದಾಗ ಆತನ ಬಳಿಗೆ ಹೋಗಿ ತಾನು ಬಂದು ತನ್ನ ಮಗನನ್ನು ಸ್ವಸ್ಥಪಡಿಸಬೇಕೆಂದು ಆತನನ್ನು ಬೇಡಿಕೊಂಡನು; ಯಾಕಂದರೆ ಅವನು ಸಾಯುವ ಹಾಗಿದ್ದನು. ಯೇಸು ಅವನಿಗೆ--ನೀವು ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ನೋಡದ ಹೊರತು ನಂಬು ವದೇ ಇಲ್ಲ ಅಂದನು. ಆಗ ಆ ಪ್ರಧಾನನು ಆತನಿಗೆ--ಅಯ್ಯಾ, ನನ್ನ ಮಗನು ಸಾಯುವದಕ್ಕೆ ಮೊದಲು ಬರಬೇಕು ಅಂದನು. ಯೇಸು ಅವನಿಗೆ--ನೀನು ಹೋಗು, ನಿನ್ನ ಮಗನು ಬದುಕಿರುತ್ತಾನೆ ಅಂದನು. ಮತ್ತು ಆ ಮನುಷ್ಯನು ಯೇಸು ಹೇಳಿದ ಮಾತನ್ನು ನಂಬಿ ಹೊರಟುಹೋದನು. ಹೀಗೆ ಅವನು ಹೋಗುತ್ತಿರುವಾಗ ಅವನ ಸೇವಕರು ಅವ ನನ್ನು ಸಂಧಿಸಿ--ನಿನ್ನ ಮಗನು ಬದುಕಿದನು ಎಂದು ಅವನಿಗೆ ಹೇಳಿದರು. ಆಗ ಅವನು--ಯಾವ ಗಳಿಗೆಯಲ್ಲಿ ಅವನಿಗೆ ಗುಣವಾಗತೊಡಗಿತು ಎಂದು ಅವರನ್ನು ವಿಚಾರಿಸಿದಾಗ ಅವರು ನಿನ್ನೆ ಏಳನೇ ತಾಸಿನಲ್ಲಿ ಜ್ವರವು ಅವನನ್ನು ಬಿಟ್ಟಿತು ಎಂದು ಅವನಿಗೆ ಹೇಳಿದರು. ಹೀಗೆ--ನಿನ್ನ ಮಗನು ಬದುಕುತ್ತಾನೆ ಎಂದು ಯೇಸು ತನಗೆ ಹೇಳಿದ ಗಳಿಗೆಯಲ್ಲಿಯೇ ಅದು ಆಯಿತೆಂದು ತಂದೆಯು ತಿಳಿದುಕೊಂಡು ತಾನೂ ತನ್ನ ಮನೆಯವರೆಲ್ಲರೂ ನಂಬಿದರು.ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದಮೇಲೆ ತಿರಿಗಿ ಮಾಡಿದ ಎರಡನೆಯ ಅದ್ಭುತಕಾರ್ಯವು ಇದಾಗಿದೆ. ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದಮೇಲೆ ತಿರಿಗಿ ಮಾಡಿದ ಎರಡನೆಯ ಅದ್ಭುತಕಾರ್ಯವು ಇದಾಗಿದೆ.
- Matthew 4:13 ಮತ್ತಾಯನು 4:13ಮತ್ತು ಆತನು ನಜರೇತನ್ನು ಬಿಟ್ಟು ಜೆಬುಲೋನ್, ನೆಫ್ತಲೀಮ್ ಮೇರೆಗಳ ಸಮುದ್ರತೀರದಲ್ಲಿರುವ ಕಪೆರ್ನೌಮಿಗೆ ಬಂದು ಅಲ್ಲಿ ವಾಸಿಸಿದನು.
- Genesis 13:13 ಆದಿಕಾಂಡ 13:13ಆದರೆ ಸೊದೋಮಿನ ಮನುಷ್ಯರು ದುಷ್ಟರೂ ಕರ್ತನ ದೃಷ್ಟಿಯಲ್ಲಿ ಬಹು ಪಾಪಿಷ್ಠರೂ ಆಗಿದ್ದರು.
- Revelation 11:8 ಪ್ರಕಟನೆ 11:8ಇವರ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಆತ್ಮಿಕವಾಗಿ ಸೊದೋಮ್ ಎಂತಲೂ ಐಗುಪ್ತ ಎಂತಲೂ ಕರೆಯುವರು; ನಮ್ಮ ಕರ್ತನು ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟನು.
- Obadiah 1:4 ಓಬದ್ಯ 1:4ನೀನು ಹದ್ದಿನಂತೆ ಏರಿಕೊಂಡು ನಿನ್ನ ಗೂಡನ್ನು ನಕ್ಷತ್ರಗಳಲ್ಲಿ ಇಟ್ಟರೂ ಅಲ್ಲಿಂದ ನಿನ್ನನ್ನು ಇಳಿಸುವೆನೆಂದು ಕರ್ತನು ಅನ್ನುತ್ತಾನೆ.
- Luke 14:11 ಲೂಕನು 14:11ಯಾವನು ತನ್ನನ್ನು ತಾನೇ ಹೆಚ್ಚಿಸಿಕೊಳ್ಳು ತ್ತಾನೋ ಅವನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.
- Lamentations 2:1 ಪ್ರಲಾಪಗಳು 2:1ಕರ್ತನು ಹೇಗೆ ತನ್ನ ಕೋಪದಲ್ಲಿ ಮೇಘದಿಂದ ಚೀಯೋನಿನ ಮಗಳನ್ನು ಮುಚ್ಚಿ, ಇಸ್ರಾಯೇಲಿನ ಸೌಂದರ್ಯವನ್ನು ಆಕಾಶದಿಂದ ಭೂಮಿಗೆ ಎಸೆದು ತನ್ನ ಕೋಪದ ದಿನದಲ್ಲಿ ತನ್ನ ಪಾದಪೀಠವನ್ನು ಜ್ಞಾಪಕಮಾಡಿಕೊಳ್ಳಲಿಲ್ಲಾ!
- 2 Peter 2:4–9 2 ಪೇತ್ರನು 2:4–9ಹೇಗೆಂದರೆ ದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯ ತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರ ಬೇಕೆಂದು ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದನು. ಆತನು ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಮೇಲೆ ಜಲಪ್ರಳಯವನ್ನು ಬರಮಾಡಿ ದನು; ಆದರೆ ನೀತಿಯನ್ನು ಸಾರುತ್ತಿದ್ದ ಎಂಟನೆಯ ವನಾದ ನೋಹನನ್ನು ರಕ್ಷಿಸಿದನು. ಆತನು ಸೊದೋಮ ಗೊಮೋರ ಪಟ್ಟಣಗಳನ್ನು ಬೂದಿ ಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರ ಗತಿಗೆ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು. ಆ ದುಷ್ಟರ ನಡತೆಗೆ ವೇದನೆಗೊಂಡಿದ್ದ ನೀತಿವಂತನಾದ ಲೋಟನನ್ನು ತಪ್ಪಿಸಿದನು. ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯ ಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿಮಿತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ವೇದನೆಗೊಂಡನು. ಕರ್ತನು ನೀತಿವಂತರನ್ನು ಸಂಕಟದೊಳಗಿಂದ ತಪ್ಪಿಸುವ ದಕ್ಕೂ ಅನೀತಿವಂತರನ್ನು ಶಿಕ್ಷಿಸುವದಕ್ಕಾಗಿ ನ್ಯಾಯ ತೀರ್ಪಿನ ದಿನದ ತನಕ ಇಡುವದಕ್ಕೂ ಬಲ್ಲವನಾಗಿ ದ್ದಾನೆ.
- Ezekiel 16:48–50 ಯೆಹೆಜ್ಕೇಲನು 16:48–50ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನ ಜೀವದಾಣೆ, ನಿನ್ನ ತಂಗಿಯಾದ ಸೊದೋಮು, ತಾನಾದರೂ ತನ್ನ ಕುಮಾರ್ತೆಯ ರಾದರೂ ನೀನು ನಿನ್ನ ಕುಮಾರ್ತೆಯರು ಮಾಡಿದ ಹಾಗೆ ಮಾಡಲಿಲ್ಲ. ಇಗೋ, ಸೊದೋಮ್ ಎಂಬ ನಿನ್ನ ತಂಗಿಯ ಅಕ್ರಮವನ್ನೂ ಗರ್ವವನ್ನೂ ನೋಡು; ರೊಟ್ಟಿಯ ತೃಪ್ತಿಯು ಅವಳಿಗೂ ಅವಳ ಕುಮಾರ್ತೆ ಯರಿಗೂ ನಿರ್ಭಯವಾದ ಸೌಖ್ಯವಾಗಿದೆ; ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ. ಇದಲ್ಲದೆ ಅವರು ಅಹಂಕಾರಿಗಳಾಗಿದ್ದು ನನ್ನ ಮುಂದೆ ಅಸಹ್ಯ ವಾದವುಗಳನ್ನು ನಡಿಸಿದರು. ಆದದರಿಂದ ನಾನು ಅದನ್ನು ನೋಡಿ ಅವರನ್ನು ನಿರ್ಮೂಲ ಮಾಡಿದೆನು.
- Matthew 16:18 ಮತ್ತಾಯನು 16:18ನಾನು ಸಹ ನಿನಗೆ ಹೇಳುವದೇ ನಂದರೆ--ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು; ನರಕದ ದ್ವಾರಗಳು ಅದನ್ನು ಜಯಿಸಲಾರವು.
- Matthew 8:5 ಮತ್ತಾಯನು 8:5ಇದಾದ ಮೇಲೆ ಯೇಸು ಕಪೆರ್ನೌಮಿನಲ್ಲಿ ಪ್ರವೇಶಿಸಿದಾಗ ಒಬ್ಬ ಶತಾಧಿಪತಿಯು ಆತನ ಬಳಿಗೆ ಬಂದು--