Matthew · chapter 11 · verse 28
Matthew 11:28 in Kannada
ಕಷ್ಟಪಡುವವರೇ ಮತ್ತು ಭಾರಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.
Kashtapaduvavare mattu bhaarahottavare, neevellaroo nanna balige banniri, naanu nimage vishraantiyannu koduvenu.
Matthew 11:28 in English
- King James Version (KJV)
- Come unto me, all [ye] that labour and are heavy laden, and I will give you rest.
- World English Bible (WEB)
- “Come to me, all you who labor and are heavily burdened, and I will give you rest.
- American Standard Version (ASV)
- Come unto me, all ye that labor and are heavy laden, and I will give you rest.
- Bible in Basic English (BBE)
- Come to me, all you who are troubled and weighted down with care, and I will give you rest.
- Darby Translation (DBY)
- Come to me, all ye who labour and are burdened, and I will give you rest.
- Webster's Bible (WBS)
- Come to me, all [ye] that labor, and are heavy laden, and I will give you rest.
- Young's Literal Translation (YLT)
- 'Come unto me, all ye labouring and burdened ones, and I will give you rest,
Read in context
- 26ಹೌದು, ತಂದೆಯೇ, ಇದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದಾಗಿ ತೋಚಿತು.
- 27ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಇಲ್ಲವೆ ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದ
- 28ಕಷ್ಟಪಡುವವರೇ ಮತ್ತು ಭಾರಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.
- 29ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.
- 30ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.
Cross references
- Matthew 11:29 ಮತ್ತಾಯನು 11:29ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.
- John 7:37 ಯೋಹಾನನು 7:37ಹಬ್ಬದ ಆ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು--ಯಾವನಿಗಾದರೂ ನೀರಡಿಕೆ ಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.
- John 6:37 ಯೋಹಾನನು 6:37ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರು ವರು; ನನ್ನ ಬಳಿಗೆ ಬರುವವನನ್ನು ನಾನು ಹೊರಗೆ ತಳ್ಳಿಬಿಡುವದೇ ಇಲ್ಲ.
- Galatians 5:1 ಗಲಾತ್ಯದವರಿಗೆ 5:1ಕ್ರಿಸ್ತನು ನಮ್ಮನ್ನು ಸ್ವತಂತ್ರರನ್ನಾಗಿ ಮಾಡಿದ್ದಾನೆ. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ; ದಾಸತ್ವದ ನೊಗದಲ್ಲಿ ತಿರಿಗಿ ಸಿಕ್ಕಿಕೊಳ್ಳಬೇಡಿರಿ.
- Isaiah 55:1–3 ಯೆಶಾಯ 55:1–3ಹಾ, ಬಾಯಾರಿದ ಸಕಲಜನರೇ, ನೀವು ನೀರಿನ ಬಳಿಗೆ ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ; ಹೌದು, ಬನ್ನಿರಿ; ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡು ಕೊಳ್ಳಿರಿ. ಆಹಾರವಲ್ಲದ್ದಕ್ಕೆ ಹಣವನ್ನೂ ತೃಪ್ತಿಪಡಿಸ ದಕ್ಕೆ ನಿಮ್ಮ ದುಡಿತವನ್ನೂ ವ್ಯಯಮಾಡುವದು ಯಾಕೆ? ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯ ದನ್ನು ನೀವು ಉಣ್ಣಿರಿ, ನಿಮ್ಮ ಪ್ರಾಣವು ಕೊಬ್ಬಿನಲ್ಲಿ ಆನಂದಿಸಲಿ! ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
- Revelation 22:17 ಪ್ರಕಟನೆ 22:17ಆತ್ಮನೂ ಮದಲಗಿತ್ತಿಯೂ--ಬಾ, ಅನ್ನುತ್ತಾರೆ. ಕೇಳುವವನು--ಬಾ, ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.
- Jeremiah 6:16 ಯೆರೆಮೀಯ 6:16ಕರ್ತನು ಹೀಗೆ ಹೇಳುತ್ತಾನೆ--ಮಾರ್ಗಗಳಲ್ಲಿ ನಿಂತುಕೊಂಡು ನೋಡಿರಿ; ಮೊದಲಿನ ಹಾದಿಗಳನ್ನು ಕೇಳಿಕೊಳ್ಳಿರಿ; ಒಳ್ಳೇ ಮಾರ್ಗ ಎಲ್ಲಿದೆಯೋ ಅದರಲ್ಲಿ ನಡೆಯಿರಿ; ಆಗ ನಿಮ್ಮ ಪ್ರಾಣಗಳಿಗೆ ವಿಶ್ರಾಂತಿ ಸಿಕ್ಕು ವದು ಅಂದನು. ಆದರೆ ಅವರು--ನಾವು ನಡೆ ಯುವದಿಲ್ಲ ಅಂದರು.
- Isaiah 48:17–18 ಯೆಶಾಯ 48:17–18ನಿನ್ನ ವಿಮೋಚ ಕನೂ ಇಸ್ರಾಯೇಲಿನ ಪರಿಶುದ್ಧನೂ ಆಗಿರುವ ಕರ್ತನು ಹೀಗೆನ್ನುತ್ತಾನೆ--ನಿನ್ನ ಉಪಯೋಗಕ್ಕಾಗಿ ನಿನಗೆ ಬೋಧಿಸುವವನೂ ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡಿಸುವವನೂ ಆದ ನಾನೇ ನಿನ್ನ ಕರ್ತನೂ ನಿನ್ನ ದೇವರೂ ಆಗಿದ್ದೇನೆ. ಓ, ನೀನು ನನ್ನ ಆಜ್ಞೆಗಳಿಗೆ ಕಿವಿಗೊಟ್ಟಿದ್ದರೆ ಚೆನ್ನಾಗಿತ್ತು! ಆಗ ನಿನ್ನ ಸಮಾಧಾನವು ನದಿಯಂತೆಯೂ ನಿನ್ನ ನೀತಿಯು ಸಮುದ್ರದ ಅಲೆಗಳಂತೆಯೂ ಇರುತ್ತಿದ್ದವು;
- Psalm 116:7 ಕೀರ್ತನೆಗಳು 116:7ನನ್ನ ಮನವೇ, ನಿನ್ನ ವಿಶ್ರಾಂತಿಗೆ ತಿರುಗಿಕೋ; ಕರ್ತನು ನಿನಗೆ ಉಪಕಾರ ಮಾಡಿದ್ದಾನೆ.
- Isaiah 28:12 ಯೆಶಾಯ 28:12ಆತನು ಮೊದಲು--ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ. ಬಳಲಿದವರನ್ನು ವಿಶ್ರಮಗೊಳಿಸಿರಿ, ನಿಮಗೆ ಅನುಕೂಲವಾದ ಉಪ ಶಮನ ಇದೇ ಎಂದು ಹೇಳಿದಾಗ್ಯೂ ಅವರು ಕೇಳ ಲಿಲ್ಲ.
- Isaiah 45:22–25 ಯೆಶಾಯ 45:22–25ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿ ರಕ್ಷಣೆಯನ್ನು ಹೊಂದಿರಿ; ಯಾಕಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ. ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ನೀತಿಯುಳ್ಳ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು: ಎಲ್ಲರೂ ನನಗೆ ಅಡ್ಡಬೀಳುವರು, ಪ್ರತಿ ನಾಲಿಗೆಯು ಪ್ರತಿಜ್ಞೆ ಮಾಡು ವದು. ಕರ್ತನಲ್ಲಿ ಮಾತ್ರ ನನಗೆ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಆತನ ಬಳಿಗೆ ಬರುವರು; ಆತನ ಮೇಲೆ ಉರಿಗೊಂಡವ ರೆಲ್ಲರೂ ನಾಚಿಕೆಗೆ ಈಡಾಗುವರು ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು. ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.
- Matthew 23:4 ಮತ್ತಾಯನು 23:4ಹೊರುವದಕ್ಕೆ ಅವರು ಭಾರವಾದ ಮತ್ತು ಕ್ರೂರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲುಗಳ ಮೇಲೆ ಹೊರಿಸುತ್ತಾರೆ. ತಾವಾ ದರೋ ತಮ್ಮ ಬೆರಳುಗಳಲ್ಲಿ ಒಂದರಿಂದ ಲಾದರೂ ಅವುಗಳನ್ನು ಸರಿಸುವದಿಲ್ಲ.