Matthew · chapter 11 · verse 5
Matthew 11:5 in Kannada
ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.
Kurudaru drushti honduttaare, kuntaru nadeyuttaare,kushtarogigalu shuddharaaguttaare, kivudaru keluttaare, sattavaru ebbisalpaduttaare mattu badavarige suvaarte saaralpaduttade.
Matthew 11:5 in English
- King James Version (KJV)
- The blind receive their sight, and the lame walk, the lepers are cleansed, and the deaf hear, the dead are raised up, and the poor have the gospel preached to them.
- World English Bible (WEB)
- the blind receive their sight, the lame walk, the lepers are cleansed, the deaf hear, the dead are raised up, and the poor have good news preached to them.
- American Standard Version (ASV)
- the blind receive their sight, and the lame walk, the lepers are cleansed, and the deaf hear, and the dead are raised up, and the poor have good tidings preached to them.
- Bible in Basic English (BBE)
- The blind see; those who were not able to, are walking; lepers are made clean; those who were without hearing, now have their ears open; the dead come to life again, and the poor have the good news given to them.
- Darby Translation (DBY)
- Blind [men] see and lame walk; lepers are cleansed, and deaf hear; and dead are raised, and poor have glad tidings preached to them:
- Webster's Bible (WBS)
- The blind receive their sight, and the lame walk, the lepers are cleansed, and the deaf hear, the dead are raised, and the poor have the gospel preached to them.
- Young's Literal Translation (YLT)
- blind receive sight, and lame walk, lepers are cleansed, and deaf hear, dead are raised, and poor have good news proclaimed,
Read in context
- 3ಬರಬೇಕಾದಾತನು ನೀನೋ ಇಲ್ಲವೆ ನಾವು ಬೇರೊಬ್ಬನಿಗಾಗಿ ನೋಡಬೇಕೋ ಅಂದನು.
- 4ಯೇಸು ಪ್ರತ್ಯುತ್ತರವಾಗಿ ಅವರಿಗೆ-- ನೀವು ಹೋಗಿ ಕೇಳುವವುಗಳನ್ನೂ ನೋಡುವವು ಗಳನ್ನೂ ಯೋಹಾನನಿಗೆ ತಿಳಿಸಿರಿ;
- 5ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.
- 6ನನ್ನ ವಿಷಯವಾಗಿ ಸಂಶಯಪಡದವನೇ ಧನ್ಯನು ಅಂದನು.
- 7ಅವರು ಹೊರಟುಹೋಗುತ್ತಿದ್ದಾಗ ಯೇಸು ಯೋಹಾನನ ಕುರಿತಾಗಿ ಜನಸಮೂಹಗಳೊಂ ದಿಗೆ -- ಏನು ನೋಡುವದಕ್ಕಾಗಿ ನೀವು ಅಡವಿಗೆ ಹೋದಿರಿ? ಗಾಳಿಯಿಂದ ಅಲ್ಲಾಡುವದಂಟನ್ನೋ?
Cross references
- Isaiah 35:4–6 ಯೆಶಾಯ 35:4–6ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ. ಆಗ ಕುರುಡರ ಕಣ್ಣುಗಳು ತೆರೆಯಲ್ಪಡು ವವು, ಕಿವುಡರ ಕಿವಿಗಳು ಕೇಳುವವು. ಕುಂಟನು ಜಿಂಕೆಯಂತೆ ಹಾರುವನು ಮೂಕನ ನಾಲಿಗೆ ಹಾಡು ವದು; ಅರಣ್ಯದಲ್ಲಿ ನೀರೂ ಮರುಭೂಮಿಯಲ್ಲಿ ಒರ ತೆಗಳೂ ಒಡೆಯುವವು.
- Isaiah 61:1–3 ಯೆಶಾಯ 61:1–3ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ ಕರ್ತನ ಅಂಗೀಕಾರದ ವರುಷವನ್ನು ಸಾರಿ ಹೇಳುವದಕ್ಕೂ ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧಿ ಮಾಡುವದಕ್ಕೂ ದುಃಖವುಳ್ಳವರೆಲ್ಲರನ್ನು ಆದರಿಸುವದಕ್ಕೂ ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
- Isaiah 42:6–7 ಯೆಶಾಯ 42:6–7ನೀನು ಕುರುಡರಿಗೆ ಕಣ್ಣುಗಳನ್ನು ತೆರೆದು, ಬಂದಿ ಗಳನ್ನು ಸೆರೆಯಿಂದಲೂ ಕತ್ತಲೆಯಲ್ಲಿ ವಾಸಿಸುವವ ರನ್ನು ಕಾರಾಗೃಹದಿಂದಲೂ ಹೊರಗೆ ತರಬೇಕು ಎಂದು -- ಕರ್ತನಾಗಿರುವ ನಾನೇ ನಿನ್ನನ್ನು ನೀತಿಯಿಂದ ಕರೆದು, ನಿನ್ನ ಕೈಯನ್ನು ಹಿಡಿದು ಕಾಪಾಡಿ ನಿನ್ನನ್ನು ಜನಗಳಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ.
- Luke 4:18 ಲೂಕನು 4:18ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ
- Isaiah 29:18 ಯೆಶಾಯ 29:18ಆ ದಿನದಲ್ಲಿ ಕಿವುಡರು ಪುಸ್ತಕದ ಮಾತುಗಳನ್ನು ಕೇಳುವರು ಕುರುಡರ ಕಣ್ಣುಗಳು ಕತ್ತಲೆಯೊಳಗಿಂದಲೂ ಅಂಧಕಾರದೊಳಗಿಂದಲೂ ನೋಡುವವು.
- John 14:11–12 ಯೋಹಾನನು 14:11–12ನಾನು ತಂದೆ ಯಲ್ಲಿದ್ದೇನೆಂತಲೂ ತಂದೆಯು ನನ್ನಲ್ಲಿದ್ದಾನೆಂತಲೂ ನನ್ನನ್ನು ನಂಬಿರಿ. ಇಲ್ಲದಿದ್ದರೆ ಆ ಕ್ರಿಯೆಗಳ ನಿಮಿತ್ತವಾದರೂ ನನ್ನನ್ನು ನಂಬಿರಿ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನನ್ನನ್ನು ನಂಬುವವನು ನಾನು ಮಾಡುವ ಕ್ರಿಯೆ ಗಳನ್ನು ಸಹ ಮಾಡುವನು; ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಅವನು ಮಾಡುವನು; ಯಾಕಂದರೆ ನಾನು ನನ್ನ ತಂದೆಯ ಬಳಿಗೆ ಹೋಗುತ್ತೇನೆ.
- Luke 7:21–22 ಲೂಕನು 7:21–22ಅದೇಗಳಿಗೆಯಲ್ಲಿ ರೋಗ ಗಳಿಂದಲೂ ವ್ಯಾಧಿಗಳಿಂದಲೂ ದುರಾತ್ಮಗಳಿಂದಲೂ ಪೀಡಿತರಾದ ಅನೇಕರನ್ನು ಆತನು ಗುಣಪಡಿಸಿದನು; ಕುರುಡರಾದ ಅನೇಕರಿಗೆ ದೃಷ್ಟಿಕೊಟ್ಟನು. ತರು ವಾಯ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಕುರು ಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠ ರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ, ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತದೆ ಎಂದು ನೀವು ಕಂಡು ಕೇಳಿದ ಇವು ಗಳನ್ನು
- James 2:5 ಯಾಕೋಬನು 2:5ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
- Matthew 15:30–31 ಮತ್ತಾಯನು 15:30–31ಆಗ ಜನರ ದೊಡ್ಡ ಸಮೂಹಗಳು ಕುಂಟರನ್ನು ಕುರುಡರನ್ನು ಮೂಕರನ್ನು ಊನವಾದವರನ್ನು ಮತ್ತು ಬೇರೆ ಅನೇಕರನ್ನು ತಮ್ಮೊಂದಿಗೆ ಕರಕೊಂಡು ಯೇಸು ವಿನ ಪಾದಗಳ ಬಳಿಗೆ ತಂದರು. ಮತ್ತು ಆತನು ಅವರನ್ನು ಸ್ವಸ್ಥಪಡಿಸಿದನು. ಮೂಕರು ಮಾತನಾಡು ವದನ್ನೂ ಊನವಾದವರು ಸ್ವಸ್ಥರಾಗಿರುವದನ್ನೂ ಕುಂಟರು ನಡೆದಾಡುವದನ್ನೂ ಕುರುಡರು ನೋಡುವ ದನ್ನೂ ಜನಸಮೂಹದವರು ಕಂಡು ಆಶ್ಚರ್ಯದಿಂದ ಇಸ್ರಾಯೇಲಿನ ದೇವರನ್ನು ಮಹಿಮೆಪಡಿಸಿದರು.
- Matthew 21:14 ಮತ್ತಾಯನು 21:14ಆಗ ಕುರುಡರು ಮತ್ತು ಕುಂಟರು ದೇವಾಲಯ ದಲ್ಲಿ ಆತನ ಬಳಿಗೆ ಬಂದರು; ಆತನು ಅವರನ್ನು ಸ್ವಸ್ಥ ಮಾಡಿದನು.
- John 11:43–44 ಯೋಹಾನನು 11:43–44ಆತನು ಹೀಗೆ ಮಾತನಾಡಿದ ಮೇಲೆ--ಲಾಜರನೇ, ಹೊರಗೆ ಬಾ ಎಂದು ಗಟ್ಟಿಯಾದ ಸ್ವರದಿಂದ ಕೂಗಿದನು. ಆಗ ಪ್ರೇತ ವಸ್ತ್ರಗಳಿಂದ ಕೈಕಾಲುಗಳನ್ನು ಕಟ್ಟಿದ್ದ ಆ ಸತ್ತವನು ಹೊರಗೆ ಬಂದನು. ಅವನ ಮುಖವು ವಸ್ತ್ರ ದಿಂದ ಸುತ್ತಲ್ಪಟ್ಟಿತ್ತು; ಯೇಸು ಅವರಿಗೆ--ಅವನನ್ನು ಬಿಚ್ಚಿರಿ, ಅವನು ಹೋಗಲಿ ಎಂದು ಹೇಳಿದನು.
- Psalm 146:8 ಕೀರ್ತನೆಗಳು 146:8ಕರ್ತನು ಸೆರೆಯವರನ್ನು ಬಿಡಿಸುತ್ತಾನೆ. ಕರ್ತನು ಕುರುಡರ ಕಣ್ಣುಗಳನ್ನು ತೆರೆಯುತ್ತಾನೆ; ಕರ್ತನು ದೀನರನ್ನು ಎತ್ತು ತ್ತಾನೆ; ಕರ್ತನು ನೀತಿವಂತರನ್ನು ಪ್ರೀತಿಮಾಡುತ್ತಾನೆ;