Matthew · chapter 11 · verse 6
Matthew 11:6 in Kannada
ನನ್ನ ವಿಷಯವಾಗಿ ಸಂಶಯಪಡದವನೇ ಧನ್ಯನು ಅಂದನು.
Nanna vishayavaagi sanshayapadadavane dhanyanu andanu.
Matthew 11:6 in English
- King James Version (KJV)
- And blessed is [he], whosoever shall not be offended in me.
- World English Bible (WEB)
- Blessed is he who finds no occasion for stumbling in me.”
- American Standard Version (ASV)
- And blessed is he, whosoever shall find no occasion of stumbling in me.
- Bible in Basic English (BBE)
- And a blessing will be on him who has no doubts about me.
- Darby Translation (DBY)
- and blessed is whosoever shall not be offended in me.
- Webster's Bible (WBS)
- And blessed is [he] to whom I shall not be the cause of his falling into sin.
- Young's Literal Translation (YLT)
- and happy is he who may not be stumbled in me.'
Read in context
- 4ಯೇಸು ಪ್ರತ್ಯುತ್ತರವಾಗಿ ಅವರಿಗೆ-- ನೀವು ಹೋಗಿ ಕೇಳುವವುಗಳನ್ನೂ ನೋಡುವವು ಗಳನ್ನೂ ಯೋಹಾನನಿಗೆ ತಿಳಿಸಿರಿ;
- 5ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.
- 6ನನ್ನ ವಿಷಯವಾಗಿ ಸಂಶಯಪಡದವನೇ ಧನ್ಯನು ಅಂದನು.
- 7ಅವರು ಹೊರಟುಹೋಗುತ್ತಿದ್ದಾಗ ಯೇಸು ಯೋಹಾನನ ಕುರಿತಾಗಿ ಜನಸಮೂಹಗಳೊಂ ದಿಗೆ -- ಏನು ನೋಡುವದಕ್ಕಾಗಿ ನೀವು ಅಡವಿಗೆ ಹೋದಿರಿ? ಗಾಳಿಯಿಂದ ಅಲ್ಲಾಡುವದಂಟನ್ನೋ?
- 8ಆದರೆ ನೀವು ಏನು ನೊಡುವದಕ್ಕಾಗಿ ಹೋದಿರಿ? ನಯವಾದ ವಸ್ತ್ರಗಳನ್ನು ಧರಿಸಿಕೊಂಡ ಮನುಷ್ಯ ನನ್ನೋ? ಇಗೋ, ನಯವಾದ ಬಟ್ಟೆಗಳನ್ನು ಧರಿಸಿಕೊ ಳ್ಳುವವರು ಅರಮನೆಗಳಲ್ಲಿ ಇರುತ್ತಾರೆ.
Cross references
- 1 Corinthians 2:14 1 ಕೊರಿಂಥದವರಿಗೆ 2:14ಪ್ರಾಕೃತ ಮನುಷ್ಯನು ದೇವರಾತ್ಮನ ವಿಷಯಗಳನ್ನು ಅಂಗೀಕರಿಸುವದಿಲ್ಲ; ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ; ಇಲ್ಲವೆ ಅವು ಆತ್ಮವಿಚಾರದಿಂದ ತಿಳಿಯತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸ ಲಾರನು.
- Isaiah 8:14–15 ಯೆಶಾಯ 8:14–15ಆತನೇ ಪರಿಶುದ್ಧ ಸ್ಥಾನವಾಗಿರುವನು; ಆದರೆ ಇಸ್ರಾಯೇಲಿನ ಎರಡು ಮನೆಗಳಿಗೆ ಎಡವುವ ಕಲ್ಲು, ಮುಗ್ಗರಿಸುವ ಬಂಡೆಯು ಮತ್ತು ಯೆರೂ ಸಲೇಮಿನ ನಿವಾಸಿಗಳಿಗೆ ಬಲೆಯೂ ಬೋನೂ ಆಗಿರುವನು. ಅವರಲ್ಲಿ ಅನೇಕರು ಎಡವಿಬಿದ್ದು, ಹೊಡೆಯಲ್ಪಟ್ಟು ಬಲೆಗೆ ಸಿಕ್ಕಿ ಬೀಳುವರು.
- Matthew 26:31 ಮತ್ತಾಯನು 26:31ಆಮೇಲೆ ಯೇಸು ಅವರಿಗೆ--ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಅಭ್ಯಂತರಪಡುವಿರಿ; ಯಾಕಂದರೆ-- ನಾನು ಕುರುಬನನ್ನು ಹೊಡೆಯುವೆನು; ಮಂದೆ ಯ ಕುರಿಗಳು ಚದರಿಹೋಗುವವು ಎಂದು ಬರೆದದೆ;
- John 6:66 ಯೋಹಾನನು 6:66ಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಹಿಂದಕ್ಕೆ ಹೊರಟುಹೋಗಿ ಮತ್ತೆ ಅವರು ಆತನ ಸಂಗಡ ಎಂದಿಗೂ ಸಂಚರಿಸಲೇ ಇಲ್ಲ.
- Luke 4:23–29 ಲೂಕನು 4:23–29ಆತನು ಅವರಿಗೆ--ವೈದ್ಯನೇ, ನಿನ್ನನ್ನು ನೀನೇ ವಾಸಿ ಮಾಡಿಕೋ ಎಂಬ ಈ ನಾನ್ನುಡಿಯನ್ನು ನೀವು ನನಗೆ ನಿಶ್ಚಯವಾಗಿ ಹೇಳಿ ಕಪೆರ್ನೌಮಿನಲ್ಲಿ ಯಾವದು ನಡೆಯಿತೆಂದು ನಾವು ಕೇಳಿದೆವೋ ಅದನ್ನು ಇಲ್ಲಿ ನಿನ್ನ ದೇಶದಲ್ಲಿಯೂ ಮಾಡು ಎಂದು ಹೇಳುವಿರಿ ಅಂದನು. ಆತನು--ನಿಮಗೆ ನಿಜವಾಗಿ ಹೇಳುವದೇನಂದರೆ--ಯಾವ ಪ್ರವಾದಿಯೂ ತನ್ನ ಸ್ವದೇಶದಲ್ಲಿ ಅಂಗೀಕರಿಸಲ್ಪಡುವದಿಲ್ಲ. ಆದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಎಲೀಯನ ದಿವಸಗಳಲ್ಲಿ ಮೂರು ವರುಷ ಆರು ತಿಂಗಳು ಆಕಾಶವು ಮುಚ್ಚಲ್ಪಟ್ಟು ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ ಇಸ್ರಾಯೇಲಿನಲ್ಲಿ ಅನೇಕ ವಿಧವೆಯರು ಇದ್ದರೂ ಅವರಲ್ಲಿ ಯಾರ ಬಳಿಗೂ (ದೇವರು) ಎಲೀಯನನ್ನು ಕಳುಹಿಸದೆ ಸೀದೋನ್ ಪಟ್ಟಣದ ಸರೆಪ್ತದಲ್ಲಿದ್ದ ಒಬ್ಬ ವಿಧವೆಯ ಬಳಿಗೇ ಕಳುಹಿಸಿದನು. ಪ್ರವಾದಿಯಾದ ಎಲೀಷನ ಕಾಲ ದಲ್ಲಿ ಅನೇಕ ಕುಷ್ಠರೋಗಿಗಳು ಇಸ್ರಾಯೇಲಿನಲ್ಲಿ ದ್ದಾಗ್ಯೂ ಸಿರಿಯದವನಾದ ನಾಮಾನನ ಹೊರತು ಅವರಲ್ಲಿ ಒಬ್ಬನಾದರೂ ಶುದ್ಧನಾಗಲಿಲ್ಲ ಅಂದನು. ಆಗ ಸಭಾಮಂದಿರದಲ್ಲಿದ್ದವರೆಲ್ಲರೂ ಇವುಗಳನ್ನು ಕೇಳಿ ಕೋಪದಿಂದ ತುಂಬಿದವರಾದರು. ಅವರು ಮೇಲಕ್ಕೆದ್ದು ಆತನನ್ನು ಪಟ್ಟಣದ ಹೊರಗೆ ದೂಡಿ ಕೊಂಡು ಹೋಗಿ ತಲೆ ಕೆಳಗೆ ಮಾಡಿ ದೊಬ್ಬಬೇಕೆಂದು ತಮ್ಮ ಪಟ್ಟಣವು ಕಟ್ಟಲ್ಪಟ್ಟಿದ್ದ ಬೆಟ್ಟದ ಕಡಿದಾದ ಸ್ಥಳಕ್ಕೆ ಆತನನ್ನು ನಡಿಸಿಕೊಂಡು ಹೋದರು.
- Romans 9:32–33 ರೋಮಾಪುರದವರಿಗೆ 9:32–33ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಆಧಾರಮಾಡಿಕೊಳ್ಳದೆ ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರಮಾಡಿಕೊಂಡದ್ದೇ ಕಾರಣ.ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ. ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.
- Luke 11:27–28 ಲೂಕನು 11:27–28ಇದಾದ ಮೇಲೆ ಆತನು ಇವುಗಳನ್ನು ಹೇಳು ತ್ತಿದ್ದಾಗ ಆ ಗುಂಪಿನಲ್ಲಿದ್ದ ಒಬ್ಬ ಸ್ತ್ರೀಯು ತನ್ನ ಸ್ವರವನ್ನು ಎತ್ತಿ ಆತನಿಗೆ--ನಿನ್ನನ್ನು ಹೊತ್ತ ಗರ್ಭವೂ ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು ಎಂದು ಹೇಳಿದಳು. ಆದರೆ ಆತನು--ಹೌದು, ಇದಕ್ಕಿಂ ತಲೂ ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯು ವವರೇ ಧನ್ಯರು ಎಂದು ಹೇಳಿದನು.
- John 6:60–61 ಯೋಹಾನನು 6:60–61ಆದದರಿಂದ ಆತನ ಶಿಷ್ಯರಲ್ಲಿ ಅನೇಕರು ಇದನ್ನು ಕೇಳಿ--ಇದು ಕಠಿಣವಾದ ಮಾತು; ಇದನ್ನು ಯಾರು ಕೇಳಾರು ಅಂದರು. ತನ್ನ ಶಿಷ್ಯರೂ ಇದಕ್ಕೆ ಗುಣು ಗುಟ್ಟುತ್ತಾರೆಂದು ಯೇಸು ತನ್ನಲ್ಲಿ ತಿಳಿದುಕೊಂಡು ಅವರಿಗೆ--ಇದು ನಿಮಗೆ ಅಭ್ಯಂತರವಾಯಿತೋ?
- Matthew 24:10 ಮತ್ತಾಯನು 24:10ಆಗ ಅನೇಕರು ಅಭ್ಯಂತರಪಟ್ಟು ಒಬ್ಬರನ್ನೊಬ್ಬರು ಹಿಡುಕೊಡುವರು ಮತ್ತು ಒಬ್ಬರನ್ನೊಬ್ಬರು ಹಗೆಮಾಡು ವರು.
- 1 Peter 2:8 1 ಪೇತ್ರನು 2:8ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.
- Matthew 13:55–57 ಮತ್ತಾಯನು 13:55–57ಈತನು ಬಡಗಿ ಯ ಮಗನಲ್ಲವೇ? ಮರಿಯಳೆಂದು ಕರೆಯಲ್ಪಡು ವವಳು ಈತನ ತಾಯಿಯಲ್ಲವೇ? ಮತ್ತು ಯಾಕೋಬ, ಯೋಸೇಫ, ಸೀಮೋನ, ಯೂದ ಈತನ ಸಹೋದರ ರಲ್ಲವೇ? ಈತನ ಸಹೋದರಿಯರೆಲ್ಲರೂ ನಮ್ಮೊಂ ದಿಗೆ ಇದ್ದಾರಲ್ಲವೇ? ಹಾಗಾದರೆ ಇವೆಲ್ಲವುಗಳು ಈ ಮನುಷ್ಯನಿಗೆ ಎಲ್ಲಿಂದ ಬಂದಿದ್ದಾವೆಂದು ಅಂದು ಕೊಂಡರು. ಅವರು ಆತನ ವಿಷಯದಲ್ಲಿ ಅಭ್ಯಂತರ ಪಟ್ಟರು. ಆದರೆ ಯೇಸು ಅವರಿಗೆ--ಪ್ರವಾದಿಗೆ ಮತ್ತೆಲ್ಲಿಯಾದರೂ ಸನ್ಮಾನವಿದೆ, ಆದರೆ ತನ್ನ ಸ್ವಂತ ದೇಶದಲ್ಲಿ ತನ್ನ ಸ್ವಂತ ಮನೆಯಲ್ಲಿ ಮಾತ್ರ ಇಲ್ಲ ಅಂದನು.ಆತನು ಅವರ ಅಪನಂಬಿಕೆಯ ದೆಸೆ ಯಿಂದ ಅಲ್ಲಿ ಬಹಳ ಮಹತ್ಕಾರ್ಯಗಳನ್ನು ನಡಿಸಲಿಲ್ಲ.
- 1 Corinthians 1:22–23 1 ಕೊರಿಂಥದವರಿಗೆ 1:22–23ಯೆಹೂದ್ಯರು ಸೂಚಕಕಾರ್ಯವನ್ನು ಕೇಳುತ್ತಾರೆ; ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ; ನಾವಾದರೋ ಶಿಲುಬೆಗೆ ಹಾಕಲ್ಪಟ್ಟವನಾದ ಕ್ರಿಸ್ತನನ್ನು ಪ್ರಚುರ ಪಡಿಸುತ್ತೇವೆ. ಆತನು ಯೆಹೂದ್ಯರಿಗೆ ಅಭ್ಯಂತರವೂ ಗ್ರೀಕರಿಗೆ ಹುಚ್ಚುತನವೂ ಆಗಿದ್ದಾನೆ.