Matthew · chapter 11 · verse 7
Matthew 11:7 in Kannada
ಅವರು ಹೊರಟುಹೋಗುತ್ತಿದ್ದಾಗ ಯೇಸು ಯೋಹಾನನ ಕುರಿತಾಗಿ ಜನಸಮೂಹಗಳೊಂ ದಿಗೆ -- ಏನು ನೋಡುವದಕ್ಕಾಗಿ ನೀವು ಅಡವಿಗೆ ಹೋದಿರಿ? ಗಾಳಿಯಿಂದ ಅಲ್ಲಾಡುವದಂಟನ್ನೋ?
Avaru horatuhoguttiddaaga yesu yohaanana kuritaagi janasamoohagalom dige -- enu noduvadakkaagi neevu adavige hodiri? Gaaliyinda allaaduvadantanno?
Matthew 11:7 in English
- King James Version (KJV)
- And as they departed, Jesus began to say unto the multitudes concerning John, What went ye out into the wilderness to see? A reed shaken with the wind?
- World English Bible (WEB)
- As these went their way, Jesus began to say to the multitudes concerning John, “What did you go out into the wilderness to see? A reed shaken by the wind?
- American Standard Version (ASV)
- And as these went their way, Jesus began to say unto the multitudes concerning John, What went ye out into the wilderness to behold? a reed shaken with the wind?
- Bible in Basic English (BBE)
- And when they were going away, Jesus, talking of John, said to all the people, What went you out into the waste land to see? a tall stem moving in the wind?
- Darby Translation (DBY)
- But as they went [away], Jesus began to say to the crowds concerning John, What went ye out into the wilderness to see? a reed moved about by the wind?
- Webster's Bible (WBS)
- And as they departed, Jesus began to say to the multitudes concerning John, What went ye out into the wilderness to see? a reed shaken with the wind?
- Young's Literal Translation (YLT)
- And as they are going, Jesus began to say to the multitudes concerning John, 'What went ye out to the wilderness to view? — a reed shaken by the wind?
Read in context
- 5ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.
- 6ನನ್ನ ವಿಷಯವಾಗಿ ಸಂಶಯಪಡದವನೇ ಧನ್ಯನು ಅಂದನು.
- 7ಅವರು ಹೊರಟುಹೋಗುತ್ತಿದ್ದಾಗ ಯೇಸು ಯೋಹಾನನ ಕುರಿತಾಗಿ ಜನಸಮೂಹಗಳೊಂ ದಿಗೆ -- ಏನು ನೋಡುವದಕ್ಕಾಗಿ ನೀವು ಅಡವಿಗೆ ಹೋದಿರಿ? ಗಾಳಿಯಿಂದ ಅಲ್ಲಾಡುವದಂಟನ್ನೋ?
- 8ಆದರೆ ನೀವು ಏನು ನೊಡುವದಕ್ಕಾಗಿ ಹೋದಿರಿ? ನಯವಾದ ವಸ್ತ್ರಗಳನ್ನು ಧರಿಸಿಕೊಂಡ ಮನುಷ್ಯ ನನ್ನೋ? ಇಗೋ, ನಯವಾದ ಬಟ್ಟೆಗಳನ್ನು ಧರಿಸಿಕೊ ಳ್ಳುವವರು ಅರಮನೆಗಳಲ್ಲಿ ಇರುತ್ತಾರೆ.
- 9ಆದರೆ ನೀವು ಏನು ನೋಡುವದಕ್ಕಾಗಿ ಹೋದಿರಿ? ಪ್ರವಾದಿ ಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನು ಎಂದು ನಾನು ನಿಮಗೆ ಹೇಳುತ್ತೇನೆ.
Cross references
- James 1:6 ಯಾಕೋಬನು 1:6ಆದರೆ ಅವನು ಸ್ವಲ್ಪವೂ ಸಂದೇಹ ಪಡದೆ ನಂಬಿಕೆ ಯಲ್ಲಿ ಕೇಳಿಕೊಳ್ಳಲಿ. ಯಾಕಂದರೆ ಸಂದೇಹಪಡುವ ವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ತೆರೆ ಯಂತೆ ಅಲೆದಾಡುತ್ತಿರುವನು.
- John 5:35 ಯೋಹಾನನು 5:35ಅವನು ಉರಿದು ಪ್ರಕಾಶಿಸುವ ದೀಪವಾಗಿದ್ದನು; ನೀವು ಸ್ವಲ್ಪಕಾಲ ಅವನ ಬೆಳಕಿನಲ್ಲಿ ಸಂತೋಷಿಸುವದಕ್ಕೆ ಮನಸ್ಸುಳ್ಳವರಾಗಿದ್ದೀರಿ;
- Luke 8:18 ಲೂಕನು 8:18ಆದದರಿಂದ ನೀವು ಕೇಳುವವುಗಳ ವಿಷಯದಲ್ಲಿ ಎಚ್ಚರಿಕೆ ತಂದುಕೊಳ್ಳಿರಿ. ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಇಲ್ಲದವನಿಗೆ ತನಗೆ ಉಂಟೆಂದು ನೆನಸುವದನ್ನೂ ಅವನಿಂದ ತೆಗೆಯಲ್ಪ ಡುವದು ಎಂದು ಹೇಳಿದನು.
- Mark 1:3–5 ಮಾರ್ಕನು 1:3–5ಕರ್ತನ ಮಾರ್ಗವನ್ನು ನೀವು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆಮಾಡಿರಿ ಎಂದು ಅಡವಿಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂಬದು. ಯೋಹಾನನು ಅಡವಿಯಲ್ಲಿ ಬಾಪ್ತಿಸ್ಮ ಮಾಡಿಸುತ್ತಾ ಪಾಪಗಳ ಪರಿ ಹಾರಕ್ಕಾಗಿ ಮಾನಸಾಂತರದ ಬಾಪ್ತಿಸ್ಮವನ್ನು ಸಾರಿದನು. ಆಗ ಯೂದಾಯ ದೇಶವೆಲ್ಲವೂ ಯೆರೂಸಲೇಮಿ ನವರೂ ಅವನ ಬಳಿಗೆ ಹೊರಟು ಹೋಗಿ ತಮ್ಮ ಪಾಪಗಳನ್ನು ಅರಿಕೆ ಮಾಡುತ್ತಾ ಯೊರ್ದನ್ ನದಿಯಲ್ಲಿ ಎಲ್ಲರೂ ಅವನಿಂದ ಬಾಪ್ತಿಸ್ಮ ಮಾಡಿಸಿ ಕೊಂಡರು.
- Luke 7:24–30 ಲೂಕನು 7:24–30ಯೋಹಾನನ ದೂತರು ಹೊರಟು ಹೋದ ಮೇಲೆ ಆತನು ಯೋಹಾನನ ವಿಷಯವಾಗಿ ಮಾತನಾಡಲಾರಂಭಿಸಿ ಜನರಿಗೆ--ನೀವು ಯಾವದನ್ನು ನೋಡುವದಕ್ಕಾಗಿ ಅಡವಿಗೆ ಹೋದಿರಿ? ಗಾಳಿಯಿಂದ ಅಲ್ಲಾಡುವದಂಟನ್ನೋ? ಆದರೆ ನೀವು ಏನು ನೋಡುವದಕ್ಕಾಗಿ ಹೋದಿರಿ? ಇಗೋ, ನಯವಾದ ಉಡುಪನ್ನು ಧರಿಸಿದ್ದ ಮನುಷ್ಯನನ್ನೋ? ಶೋಭಾಯ ಮಾನವಾದ ಉಡುಪುಗಳನ್ನು ಧರಿಸಿಕೊಂಡು ಸುಖ ವಾಗಿ ಜೀವಿಸುವವರು ರಾಜರ ಓಲಗಗಳಲ್ಲಿ ಇರುತ್ತಾರೆ. ಆದರೆ ಏನು ನೋಡುವದಕ್ಕಾಗಿ ಹೋದಿರಿ? ಪ್ರವಾದಿಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ಎಂದು ನಾನು ನಿಮಗೆ ಹೇಳುತ್ತೇನೆ. ಇಗೋ, ನಿನ್ನ ದಾರಿಯನ್ನು ನಿನ್ನ ಮುಂದೆ ಸಿದ್ಧ ಮಾಡುವಂತೆ ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ ಎಂದು ಯಾವನ ವಿಷಯದಲ್ಲಿ ಬರೆದಿತ್ತೋ ಅವನೇ ಇವನು. ಯಾಕಂದರೆ-- ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಬಾಪ್ತಿಸ್ಮ ಮಾಡಿಸುವ ಯೋಹಾನನಿಗಿಂತ ದೊಡ್ಡ ಪ್ರವಾದಿಯು ಯಾವನೂ ಇಲ್ಲ; ಆದರೆ ದೇವರ ರಾಜ್ಯದಲ್ಲಿ ಅತ್ಯಲ್ಪನಾದವನು ಅವನಿಗಿಂತಲೂ ದೊಡ್ಡವನಾಗಿದ್ದಾನೆ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು. ಅವನಿಂದ ಉಪ ದೇಶ ಕೇಳಿದ ಎಲ್ಲಾ ಜನರೂ ಸುಂಕದವರೂ ಯೋಹಾನನ ಬಾಪ್ತಿಸ್ಮ ಮಾಡಿಸಿಕೊಂಡವರಾಗಿ ದೇವರು ನೀತಿವಂತನೆಂದು ಒಪ್ಪಿಕೊಂಡರು. ಆದರೆ ಫರಿಸಾಯರೂ ನ್ಯಾಯಶಾಸ್ತ್ರಿಗಳೂ ಅವನಿಂದ ಬಾಪ್ತಿಸ್ಮಮಾಡಿಸಿಕೊಳ್ಳದೆ ಹೋದದರಿಂದ ತಮ್ಮ ವಿಷಯದಲ್ಲಿರುವ ದೇವರ ಸಂಕಲ್ಪವನ್ನು ತಿರಸ್ಕಾರ ಮಾಡಿದರು.
- Ephesians 4:14 ಎಫೆಸದವರಿಗೆ 4:14ನಾವು ಇನ್ನು ಮೇಲೆ ಹೊಂಚು ಹಾಕುವವರ ವಂಚನೆಗೂ ಮನುಷ್ಯರ ಕಪಟದಿಂದಲೂ ಮೋಸದ ಉಪಾಯ ಮಾಡುವ ತಂತ್ರದಿಂದಲೂ ಬೋಧನೆಯ ಪ್ರತಿಯೊಂದು ಗಾಳಿ ಯಿಂದಲೂ ಬಡಿಯಲ್ಪಟ್ಟು ಅತ್ತಿತ್ತ ನೂಕಾಡಲ್ಪಡುವ ಬಾಲಕರಂತೆ ಇರಬಾರದು.
- Genesis 49:4 ಆದಿಕಾಂಡ 49:4ನೀರಿ ನಂತೆ ಚಂಚಲನಾಗಿದ್ದು ನೀನು ಶ್ರೇಷ್ಠನಾಗುವದಿಲ್ಲ. ಯಾಕಂದರೆ ನಿನ್ನ ತಂದೆಯ ಮಂಚವನ್ನೇರಿ ಹೊಲೆ ಮಾಡಿದಿ; ನನ್ನ ಹಾಸಿಗೆಯನ್ನು ಏರಿದಿ;
- 2 Corinthians 1:17–18 2 ಕೊರಿಂಥದವರಿಗೆ 1:17–18ಆದದರಿಂದ ನಾನು ಹೀಗೆ ಮನಸ್ಸು ಮಾಡಿದಾಗ ಹಗುರು ಭಾವನೆಯನ್ನು ತೋರಿಸಿದೆನೋ? ಇಲ್ಲವೆ ನಾನು ಉದ್ದೇಶಿಸದವು ಗಳು ಹೌದು, ಹೌದು ಅಂದ ಮೇಲೆ ಅಲ್ಲ, ಅಲ್ಲ ಅನ್ನುವಂತೆ ಮಾನುಷ್ಯ ರೀತಿಯಲ್ಲಿ ಉದ್ದೇಶಿಸು ತ್ತೇನೋ? ಆದರೆ ದೇವರು ಸತ್ಯವಂತನಾಗಿರುವ ಹಾಗೆಯೇ ನಮ್ಮ ಮಾತು ಹೌದೆಂದೂ ಅಲ್ಲವೆಂದೂ ಇರಲಿಲ್ಲ.
- Matthew 3:1–3 ಮತ್ತಾಯನು 3:1–3ಆ ದಿನಗಳಲ್ಲಿ ಬಾಪ್ತಿಸ್ಮ ಮಾಡಿಸುವ ಯೋಹಾನನು ಬಂದು ಯೂದಾಯದ ಅಡವಿಯಲ್ಲಿ ಸಾರುತ್ತಾ-- ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು. ಯಾಕಂದರೆ--ಕರ್ತನ ಮಾರ್ಗವನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂಬದಾಗಿ ಪ್ರವಾದಿಯಾದ ಯೆಶಾಯ ನಿಂದ ಹೇಳಲ್ಪಟ್ಟವನು ಇವನೇ.
- Matthew 21:25 ಮತ್ತಾಯನು 21:25ಪರ ಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ ಎಂದು ಕೇಳಿದಾಗ ಅವರು ತಮ್ಮತಮ್ಮೊಳಗೆ ತರ್ಕಿ ಸುತ್ತಾ--ಪರಲೋಕದಿಂದ ಎಂದು ಹೇಳಿದರೆ ಆತನು ನಮಗೆ--ನೀವು ಅವನನ್ನು ಯಾಕೆ ನಂಬಲಿಲ್ಲ ಎಂದು ಹೇಳಾನು.
- Matthew 3:5 ಮತ್ತಾಯನು 3:5ಆಗ ಯೆರೂಸಲೇಮಿನವರೂ ಎಲ್ಲಾ ಯೂದಾಯ ದವರೂ ಯೊರ್ದನ್ ಹೊಳೆಯ ಸುತ್ತಲಿರುವ ಎಲ್ಲಾ ಪ್ರದೇಶದವರೂ ಅವನ ಬಳಿಗೆ ಹೊರಟುಹೋದರು.
- Luke 3:3–7 ಲೂಕನು 3:3–7ಅವನು ಯೊರ್ದನಿನ ಸುತ್ತಲಿರುವ ಎಲ್ಲಾ ಸೀಮೆಗಳಿಗೆ ಬಂದು ಪಾಪಗಳ ಪರಿಹಾರಕ್ಕಾಗಿ ಮಾನ ಸಾಂತರದ ಬಾಪ್ತಿಸ್ಮವನ್ನು ಸಾರಿ ಹೇಳುವವನಾದನು. ಪ್ರವಾದಿಯಾದ ಯೆಶಾಯನ ವಾಕ್ಯಗಳ ಪುಸ್ತಕ ದಲ್ಲಿ--ಕರ್ತನ ಮಾರ್ಗವನ್ನು ಸಿದ್ಧ ಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ ಎಂದೂ ಪ್ರತಿಯೊಂದು ತಗ್ಗು ಮುಚ್ಚಿಸಲ್ಪಡುವದು, ಪ್ರತಿಯೊಂದು ಬೆಟ್ಟವು ತಗ್ಗಿಸಲ್ಪಡುವದು, ಡೊಂಕಾದವುಗಳು ನೆಟ್ಟಗಾಗುವವು ಮತ್ತು ಕೊರಕಲಾದ ದಾರಿಗಳು ಸಮವಾಗುವವು; ಮಾನವರೆಲ್ಲರು ದೇವರ ರಕ್ಷಣೆಯನ್ನು ಕಾಣುವರು ಎಂದೂ ಬರೆದಿರುವಂತೆ ಹೀಗಾಯಿತು. ಆಗ ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕಾಗಿ ಹೊರಟು ಬಂದ ಜನಸಮೂಹಕ್ಕೆ--ಓ ಸರ್ಪಗಳ ಸಂತತಿಯವರೇ, ಬರುವದಕ್ಕಿರುವ ಕೋಪದಿಂದ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಎಚ್ಚರಿಸಿದವರಾರು?