Skip to content
ThuthiThuthiThuthi
Matthew · chapter 12 of 28 · 50 verses

Matthew 12 in Kannada

ಮತ್ತಾಯನು 12

  1. ಆ ಸಮಯದಲ್ಲಿ ಯೇಸು ಸಬ್ಬತ್‌ ದಿನದಲ್ಲಿ ಪೈರಿನ ಹೊಲವನು ಹಾದುಹೋಗುತ್ತಿದ್ದಾಗ ಆತನ ಶಿಷ್ಯರು ಹಸಿದಿ ದ್ದರಿಂದ ತೆನೆಗಳನ್ನು ಕಿತ್ತು ತಿನ್ನಲಾರಂಭಿಸಿದರು.

    At that time Jesus went on the sabbath day through the corn; and his disciples were an hungred, and began to pluck the ears of corn, and to eat.

  2. ಆದರೆ ಫರಿಸಾಯರು ಅದನ್ನು ನೋಡಿ ಆತನಿಗೆ--ಇಗೋ, ನಿನ್ನ ಶಿಷ್ಯರು ಸಬ್ಬತ್‌ದಿನದಲ್ಲಿ ಮಾಡ ಬಾರದ್ದನ್ನು ಮಾಡುತ್ತಾರೆ ಅಂದರು.

    But when the Pharisees saw [it], they said unto him, Behold, thy disciples do that which is not lawful to do upon the sabbath day.

  3. ಅದಕ್ಕೆ ಆತನು ಅವರಿಗೆ--ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿದಾಗ ಏನು ಮಾಡಿದನೆಂದು ನೀವು ಓದಲಿಲ್ಲವೋ?

    But he said unto them, Have ye not read what David did, when he was an hungred, and they that were with him;

  4. ಅವನು ದೇವರ ಮನೆ ಯೊಳಗೆ ಪ್ರವೇಶಿಸಿ ಯಾಜಕರೇ ಹೊರತು ತಾನಾಗಲೀ ತನ್ನ ಕೂಡ ಇದ್ದವರಾಗಲೀ ತಿನ್ನಬಾರದಾಗಿದ್ದ ಸಮ್ಮುಖ ರೊಟ್ಟಿಯನ್ನು ಹೇಗೆ ತಿಂದನು?

    How he entered into the house of God, and did eat the shewbread, which was not lawful for him to eat, neither for them which were with him, but only for the priests?

  5. ಇದಲ್ಲದೆ ಸಬ್ಬತ್‌ ದಿನಗಳಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ತನ್ನು ಅಪವಿತ್ರಪಡಿಸಿದರೂ ನಿರಪರಾಧಿಗಳಾಗಿದ್ದಾ ರೆಂದು ನೀವು ನ್ಯಾಯಪ್ರಮಾಣದಲ್ಲಿ ಓದಲಿಲ್ಲವೇ?

    Or have ye not read in the law, how that on the sabbath days the priests in the temple profane the sabbath, and are blameless?

  6. ಆದರೆ ನಾನು ನಿಮಗೆ ಹೇಳುವದೇನಂದರೆ-- ದೇವಾಲಯಕ್ಕಿಂತಲೂ ದೊಡ್ಡವನು ಈ ಸ್ಥಳದಲ್ಲಿ ಇದ್ದಾನೆ.

    But I say unto you, That in this place is [one] greater than the temple.

  7. ಆದರೆ--ನನಗೆ ಯಜ್ಞವಲ್ಲ, ಕರುಣೆಯೇ ಬೇಕು ಎಂಬದರ ಅರ್ಥವನ್ನು ನೀವು ತಿಳಿದಿದ್ದರೆ ನಿರಪರಾಧಿಗಳನ್ನು ಅಪರಾಧಿಗಳೆಂದು ತೀರ್ಪುಮಾಡು ತ್ತಿದ್ದಿಲ್ಲ.

    But if ye had known what [this] meaneth, I will have mercy, and not sacrifice, ye would not have condemned the guiltless.

  8. ಯಾಕಂದರೆ ಮನುಷ್ಯ ಕುಮಾರನು ಸಬ್ಬತ್‌ ದಿನಕ್ಕೂ ಒಡೆಯನಾಗಿದ್ದಾನೆ ಎಂದು ಹೇಳಿದನು.

    For the Son of man is Lord even of the sabbath day.

  9. ತರುವಾಯ ಆತನು ಅಲ್ಲಿಂದ ಹೊರಟು ಅವರ ಸಭಾಮಂದಿರದೊಳಕ್ಕೆ ಹೋದನು.

    And when he was departed thence, he went into their synagogue:

  10. ಇಗೋ, ಅಲ್ಲಿ ಕೈ ಬತ್ತಿದ್ದ ಒಬ್ಬ ಮನುಷ್ಯನಿದ್ದನು. ಆಗ ಅವರು ಆತನ ಮೇಲೆ ತಪ್ಪು ಹೊರಿಸಬೇಕೆಂದು ಆತನಿಗೆ-- ಸಬ್ಬತ್‌ ದಿನಗಳಲ್ಲಿ ಸ್ವಸ್ಥ ಮಾಡುವದು ನ್ಯಾಯವೋ ಎಂದು ಕೇಳಿದರು.

    And, behold, there was a man which had [his] hand withered. And they asked him, saying, Is it lawful to heal on the sabbath days? that they might accuse him.

  11. ಅದಕ್ಕಾತನು ಅವರಿಗೆ-- ನಿಮ್ಮಲ್ಲಿ ಯಾವನಿಗಾದರೂ ಒಂದು ಕುರಿಯಿರಲಾಗಿ ಅದು ಸಬ್ಬತ್‌ ದಿನದಲ್ಲಿ ಕುಣಿಯೊಳಗೆ ಬಿದ್ದರೆ ಅವನು ಅದನ್ನು ಹಿಡಿದು ಮೇಲಕ್ಕೆ ಎತ್ತದೆ ಇರುವನೇ?

    And he said unto them, What man shall there be among you, that shall have one sheep, and if it fall into a pit on the sabbath day, will he not lay hold on it, and lift [it] out?

  12. ಹಾಗಾದರೆ ಕುರಿಗಿಂತಲೂ ಒಬ್ಬ ಮನುಷ್ಯನು ಎಷ್ಟೋ ಶ್ರೇಷ್ಠನಾಗಿದ್ದಾನಲ್ಲವೇ? ಆದದರಿಂದ ಸಬ್ಬತ್‌ ದಿನಗಳಲ್ಲಿ ಒಳ್ಳೆಯದನ್ನು ಮಾಡುವದು ನ್ಯಾಯವಾಗಿದೆ ಎಂದು ಹೇಳಿದನು.

    How much then is a man better than a sheep? Wherefore it is lawful to do well on the sabbath days.

  13. ಆಗ ಆತನು ಆ ಮನುಷ್ಯನಿಗೆ--ನಿನ್ನ ಕೈಯನ್ನು ಮುಂದೆ ಚಾಚು ಅಂದನು. ಅವನು ಚಾಚಿದಾಗ ಅದು ಗುಣವಾಗಿ ಮತ್ತೊಂದರ ಹಾಗಾಯಿತು.

    Then saith he to the man, Stretch forth thine hand. And he stretched [it] forth; and it was restored whole, like as the other.

  14. ತರುವಾಯ ಫರಿಸಾ ಯರು ಆತನನ್ನು ಹೇಗೆ ಕೊಲ್ಲಬೇಕೆಂದು ಆತನಿಗೆ ವಿರೋಧವಾಗಿ ಆಲೋಚಿಸಲು ಹೊರಗೆ ಹೋದರು.

    Then the Pharisees went out, and held a council against him, how they might destroy him.

  15. ಆದರೆ ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದನು; ಮತ್ತು ದೊಡ್ಡ ಸಮೂಹಗಳು ಆತನನ್ನು ಹಿಂಬಾಲಿಸಿದರು. ಆಗ ಆತನು ಅವರೆಲ್ಲರನ್ನು ವಾಸಿ ಮಾಡಿದನು.

    But when Jesus knew [it], he withdrew himself from thence: and great multitudes followed him, and he healed them all;

  16. ಯೇಸು ತನ್ನನ್ನು ಯಾರಿಗೂ ಪ್ರಕಟಿಸ ಬಾರದೆಂದು ಅವರಿಗೆ ಆಜ್ಞಾಪಿಸಿದನು;

    And charged them that they should not make him known:

  17. ಹೀಗೆ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟಿದ್ದು ನೆರವೇರಿತು; ಅದೇನಂದರೆ--

    That it might be fulfilled which was spoken by Esaias the prophet, saying,

  18. ಇಗೋ, ನಾನು ಆರಿಸಿಕೊಂಡ ನನ್ನ ಸೇವಕನು; ನನ್ನ ಪ್ರಾಣವು ಬಹಳವಾಗಿ ಮೆಚ್ಚಿಕೊಂಡಿರುವ ನನ್ನ ಪ್ರಿಯನು; ನಾನು ಆತನ ಮೇಲೆ ನನ್ನ ಆತ್ಮನನ್ನು ಇರಿಸುವೆನು ಮತ್ತು ಆತನು ಅನ್ಯಜನಗಳಿಗೆ ನ್ಯಾಯವನ್ನು ತೋರಿ ಸುವನು.

    Behold my servant, whom I have chosen; my beloved, in whom my soul is well pleased: I will put my spirit upon him, and he shall shew judgment to the Gentiles.

  19. ಆತನು ಜಗಳವಾಡುವದಿಲ್ಲ, ಕೂಗಾಡು ವದೂ ಇಲ್ಲ; ಇಲ್ಲವೆ ಯಾವ ಮನುಷ್ಯನು ಬೀದಿಗಳಲ್ಲಿ ಆತನ ಸ್ವರವನ್ನು ಕೇಳಿಸಿಕೊಳ್ಳುವದೂ ಇಲ್ಲ.

    He shall not strive, nor cry; neither shall any man hear his voice in the streets.

  20. ಆತನು ನ್ಯಾಯವನ್ನು ವಿಜಯಕ್ಕಾಗಿ ಕಳುಹಿಸುವವರೆಗೆ ಜಜ್ಜಿದ ದಂಟನ್ನು ಮುರಿಯುವದಿಲ್ಲ ಮತ್ತು ಹೊಗೆಯಾಡುವ ಬತ್ತಿಯನ್ನು ನಂದಿಸುವದಿಲ್ಲ.

    A bruised reed shall he not break, and smoking flax shall he not quench, till he send forth judgment unto victory.

  21. ಮತ್ತು ಆತನ ಹೆಸರಿನಲ್ಲಿ ಅನ್ಯಜನರು ನಂಬಿಕೆಯಿಡುವರು ಎಂಬದೇ.

    And in his name shall the Gentiles trust.

  22. ಆಗ ಜನರು ದೆವ್ವ ಹಿಡಿದಿದ್ದವನೂ ಕುರುಡನೂ ಮೂಕನೂ ಆಗಿದ್ದವನನ್ನು ಆತನ ಬಳಿಗೆ ತಂದರು; ಮತ್ತು ಆತನು ಅವನನ್ನು ಸ್ವಸ್ಥಮಾಡಿದ್ದರಿಂದ ಕುರುಡನೂ ಮೂಕನೂ ಆಗಿದ್ದವನು ಮಾತನಾಡಿದನು ಮತ್ತು ನೋಡಿದನು.

    Then was brought unto him one possessed with a devil, blind, and dumb: and he healed him, insomuch that the blind and dumb both spake and saw.

  23. ಆಗ ಜನರೆಲ್ಲರು ವಿಸ್ಮಯ ಗೊಂಡವರಾಗಿ--ಈತನು ದಾವೀದನ ಕುಮಾರ ನಲ್ಲವೇ ಅಂದರು.

    And all the people were amazed, and said, Is not this the son of David?

  24. ಆದರೆ ಫರಿಸಾಯರು ಇದನ್ನು ಕೇಳಿದಾಗ--ಇವನು ದೆವ್ವಗಳ ಅಧಿಪತಿಯಾಗಿರುವ ಬೆಲ್ಜೆಬೂಲನಿಂದಲೇ ಹೊರತು ದೆವ್ವಗಳನ್ನು ಬಿಡಿಸು ವದಿಲ್ಲ ಅಂದರು.

    But when the Pharisees heard [it], they said, This [fellow] doth not cast out devils, but by Beelzebub the prince of the devils.

  25. ಆಗ ಯೇಸು ಅವರ ಆಲೋಚನೆ ಗಳನ್ನು ತಿಳಿದು ಅವರಿಗೆ--ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ರಾಜ್ಯವು ಹಾಳಾಗುತ್ತದೆ; ಮತ್ತು ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ಪಟ್ಟಣವಾಗಲೀ ಮನೆಯಾಗಲೀ ನಿಲ್ಲುವದಿಲ್ಲ.

    And Jesus knew their thoughts, and said unto them, Every kingdom divided against itself is brought to desolation; and every city or house divided against itself shall not stand:

  26. ಇದಲ್ಲದೆ ಸೈತಾನನು ಸೈತಾನನನ್ನು ಹೊರಗೆ ಹಾಕಿದರೆ ಅವನು ತನಗೆ ವಿರೋಧವಾಗಿ ತಾನೇ ವಿಭಾಗಿಸಲ್ಪಟ್ಟಿದ್ದಾನೆ; ಹಾಗಾದರೆ ಅವನ ರಾಜ್ಯವು ಹೇಗೆ ನಿಂತೀತು?

    And if Satan cast out Satan, he is divided against himself; how shall then his kingdom stand?

  27. ಮತ್ತು ಬೆಲ್ಜೆಬೂಲನಿಂದ ನಾನು ದೆವ್ವಗಳನ್ನು ಬಿಡಿಸಿದರೆ ನಿಮ್ಮ ಮಕ್ಕಳು ಯಾರಿಂದ ಅವುಗಳನ್ನು ಬಿಡಿಸುತ್ತಾರೆ? ಆದದರಿಂದ ಅವರೇ ನಿಮಗೆ ನ್ಯಾಯತೀರಿಸುವರು.

    And if I by Beelzebub cast out devils, by whom do your children cast [them] out? therefore they shall be your judges.

  28. ಆದರೆ ನಾನು ದೇವರ ಆತ್ಮನಿಂದ ದೆವ್ವಗಳನ್ನು ಬಿಡಿಸಿದರೆ ದೇವರ ರಾಜ್ಯವು ನಿಮ್ಮ ಬಳಿಗೆ ಬಂದಿದೆಯಲ್ಲಾ.

    But if I cast out devils by the Spirit of God, then the kingdom of God is come unto you.

  29. ಇಲ್ಲವೆ ಯಾವನಾದರೂ ಮೊದಲು ಬಲವುಳ್ಳ ಮನುಷ್ಯನನ್ನು ಕಟ್ಟಿಹಾಕದ ಹೊರತು ಅವನ ಮನೆ ಯನ್ನು ಪ್ರವೇಶಿಸಿ ಅವನ ಸೊತ್ತನ್ನು ಸುಲುಕೊಳ್ಳು ವದಕ್ಕಾದೀತೇ? ಕಟ್ಟಿದ ಮೇಲೆ ಅವನ ಮನೆಯನ್ನು ಸುಲುಕೊಳ್ಳುವದಕ್ಕಾಗುವದು.

    Or else how can one enter into a strong man’s house, and spoil his goods, except he first bind the strong man? and then he will spoil his house.

  30. ನನ್ನ ಸಂಗಡ ಇರದ ವನು ನನಗೆ ವಿರೋಧವಾಗಿದ್ದಾನೆ; ಮತ್ತು ನನ್ನ ಸಂಗಡ ಕೂಡಿಸದವನು ಚದರಿಸುವವನಾಗಿದ್ದಾನೆ ಎಂದು ಹೇಳಿದನು.

    He that is not with me is against me; and he that gathereth not with me scattereth abroad.

  31. ಆದಕಾರಣ ನಾನು ನಿಮಗೆ ಹೇಳುವದೇ ನಂದರೆ-- ಎಲ್ಲಾ ತರದ ಪಾಪವೂ ದೂಷಣೆಯೂ ಮನುಷ್ಯರಿಗೆ ಕ್ಷಮಿಸಲ್ಪಡುವದು; ಆದರೆ ಪರಿಶು ದ್ಧಾತ್ಮನಿಗೆ ವಿರೋಧವಾದ ದೂಷಣೆಯು ಮನುಷ್ಯರಿಗೆ ಕ್ಷಮಿಸಲ್ಪಡುವದಿಲ್ಲ.

    Wherefore I say unto you, All manner of sin and blasphemy shall be forgiven unto men: but the blasphemy [against] the [Holy] Ghost shall not be forgiven unto men.

  32. ಮನುಷ್ಯ ಕುಮಾರನಿಗೆ ವಿರೋಧವಾಗಿ ಯಾವನಾದರೂ ಮಾತನಾಡಿದರೆ ಅದು ಅವನಿಗೆ ಕ್ಷಮಿಸಲ್ಪಡುವದು; ಆದರೆ ಪರಿಶುದ್ಧಾ ತ್ಮನಿಗೆ ವಿರೋಧವಾಗಿ ಯಾವನಾದರೂ ಮಾತನಾ ಡಿದರೆ ಈ ಲೋಕದಲ್ಲಿಯಾಗಲೀ ಇಲ್ಲವೆ ಬರುವ ಲೋಕದಲ್ಲಿಯಾಗಲೀ ಅದು ಅವನಿಗೆ ಕ್ಷಮಿಸಲ್ಪಡು ವದಿಲ್ಲ.

    And whosoever speaketh a word against the Son of man, it shall be forgiven him: but whosoever speaketh against the Holy Ghost, it shall not be forgiven him, neither in this world, neither in the [world] to come.

  33. ಮರವು ಒಳ್ಳೆಯದಾಗಿದ್ದರೆ ಅದರ ಫಲವೂ ಒಳ್ಳೆಯದೆಂದು ಎಣಿಸಿರಿ; ಇಲ್ಲವೇ ಮರವು ಕೆಟ್ಟದ್ದಾಗಿದ್ದರೆ ಅದರ ಫಲವೂ ಕೆಟ್ಟದ್ದೆಂದೆಣಿಸಿರಿ; ಯಾಕಂದರೆ ಮರವು ತನ್ನ ಫಲದಿಂದಲೇ ತಿಳಿಯಲ್ಪ ಡುವದು.

    Either make the tree good, and his fruit good; or else make the tree corrupt, and his fruit corrupt: for the tree is known by [his] fruit.

  34. ಓ ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ.

    O generation of vipers, how can ye, being evil, speak good things? for out of the abundance of the heart the mouth speaketh.

  35. ಒಳ್ಳೇಮನುಷ್ಯನು ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯವುಗಳನ್ನು ಹೊರಗೆ ತರುತ್ತಾನೆ; ಮತ್ತು ಕೆಟ್ಟಮನುಷ್ಯನು ಕೆಟ್ಟಬೊಕ್ಕಸದಿಂದ ಕೆಟ್ಟವುಗಳನ್ನು ಹೊರಗೆ ತರುತ್ತಾನೆ.

    A good man out of the good treasure of the heart bringeth forth good things: and an evil man out of the evil treasure bringeth forth evil things.

  36. ಆದರೆ ನಾನು ನಿಮಗೆ ಹೇಳುವದೇನಂದರೆ-- ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥವಾದ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು.

    But I say unto you, That every idle word that men shall speak, they shall give account thereof in the day of judgment.

  37. ನೀನು ನಿನ್ನ ಮಾತುಗಳಿಂದಲೇ ನೀತಿವಂತನಾಗುವಿ ಮತ್ತು ನಿನ್ನ ಮಾತುಗಳಿಂದಲೇ ನೀನು ಅಪರಾಧಿಯಾಗುವಿ ಎಂದು ಹೇಳಿದನು.

    For by thy words thou shalt be justified, and by thy words thou shalt be condemned.

  38. ಆಗ ಶಾಸ್ತ್ರಿಗಳಲ್ಲಿ ಮತ್ತು ಫರಿಸಾಯರಲ್ಲಿ ಕೆಲ ವರು--ಗುರುವೇ, ನಿನ್ನಿಂದ ಒಂದು ಸೂಚಕಕಾರ್ಯ ವನ್ನು ನೋಡಬೇಕೆಂದಿದ್ದೇವೆ ಎಂದು ಕೇಳಿದ್ದಕ್ಕೆ

    Then certain of the scribes and of the Pharisees answered, saying, Master, we would see a sign from thee.

  39. ಆತನು ಪ್ರತ್ಯುತ್ತರವಾಗಿ ಅವರಿಗೆ--ವ್ಯಭಿಚಾರಿಣಿ ಯಾದ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡು ಕುತ್ತದೆ; ಪ್ರವಾದಿಯಾದ ಯೋನನಲ್ಲಿ ಆದ ಸೂಚಕ ಕಾರ್ಯವೇ ಹೊರತು ಅದಕ್ಕೆ ಇನ್ಯಾವ ಸೂಚಕಕಾರ್ಯ ವೂ ಕೊಡಲ್ಪಡುವದಿಲ್ಲ.

    But he answered and said unto them, An evil and adulterous generation seeketh after a sign; and there shall no sign be given to it, but the sign of the prophet Jonas:

  40. ಯಾಕಂದರೆ ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ಮಾನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಕುಮಾರನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭ ದಲ್ಲಿರುವನು.

    For as Jonas was three days and three nights in the whale’s belly; so shall the Son of man be three days and three nights in the heart of the earth.

  41. ನ್ಯಾಯವಿಚಾರಣೆಯಲ್ಲಿ ನಿನೆವೆಯ ಜನರು ಈ ಸಂತತಿಯೊಂದಿಗೆ ಎದ್ದು ಅವರನ್ನು ಖಂಡಿಸು ವರು; ಯಾಕಂದರೆ ಯೋನನು ಸಾರಿದಾಗ ಅವರು ಮಾನಸಾಂತರಪಟ್ಟರು; ಮತ್ತು ಇಗೋ, ಇಲ್ಲಿ ಯೋನ ನಿಗಿಂತಲೂ ದೊಡ್ಡವನಿದ್ದಾನೆ.

    The men of Nineveh shall rise in judgment with this generation, and shall condemn it: because they repented at the preaching of Jonas; and, behold, a greater than Jonas [is] here.

  42. ನ್ಯಾಯವಿಚಾರಣೆ ಯಲ್ಲಿ ದಕ್ಷಿಣದ ರಾಣಿಯು ಈ ಸಂತತಿಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು; ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿ ಯ ಕಟ್ಟಕಡೆಯಿಂದ ಬಂದಳು; ಇಗೋ, ಇಲ್ಲಿ ಸೊಲೊ ಮೋನನಿಗಿಂತಲೂ ದೊಡ್ಡವನಿದ್ದಾನೆ.

    The queen of the south shall rise up in the judgment with this generation, and shall condemn it: for she came from the uttermost parts of the earth to hear the wisdom of Solomon; and, behold, a greater than Solomon [is] here.

  43. ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದ ಮೇಲೆ ನೀರಿಲ್ಲದ ಸ್ಥಳಗಳಲ್ಲಿ ವಿಶ್ರಾಂತಿಗಾಗಿ ತಿರುಗಾಡಿದರೂ ಅದನ್ನು ಕಂಡುಕೊಳ್ಳಲಿಲ್ಲ.

    When the unclean spirit is gone out of a man, he walketh through dry places, seeking rest, and findeth none.

  44. ಆಗ ಅದು--ನಾನು ಹೊರಟುಬಂದ ನನ್ನ ಮನೆಗೆ ಹಿಂತಿರುಗುವೆನು ಎಂದು ಅಂದುಕೊಂಡು ಬಂದು ಅದು ಬರಿದಾಗಿಯೂ ಗುಡಿಸಿ ಅಲಂಕರಿಸಲ್ಪಟ್ಟದ್ದಾ ಗಿಯೂ ಇರುವದನ್ನು ಕಂಡಿತು.

    Then he saith, I will return into my house from whence I came out; and when he is come, he findeth [it] empty, swept, and garnished.

  45. ತರುವಾಯ ಅದು ಹೋಗಿ ತನಗಿಂತ ಕೆಟ್ಟವುಗಳಾಗಿರುವ ಬೇರೆ ಏಳು ಆತ್ಮಗಳನ್ನು ಕರಕೊಂಡು ಅವು ಅದರೊಳಗೆ ಪ್ರವೇಶಿಸಿ ವಾಸಮಾಡುತ್ತವೆ; ಹೀಗೆ ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತಲೂ ಕೆಟ್ಟದ್ದಾಗಿರುವದು. ಅದರಂತೆಯೇ ಈ ಕೆಟ್ಟ ಸಂತತಿಗೂ ಆಗುವದು ಎಂದು ಹೇಳಿದನು.

    Then goeth he, and taketh with himself seven other spirits more wicked than himself, and they enter in and dwell there: and the last [state] of that man is worse than the first. Even so shall it be also unto this wicked generation.

  46. ಆತನು ಇನ್ನೂ ಜನರ ಸಂಗಡ ಮಾತನಾಡು ತ್ತಿದ್ದಾಗ ಇಗೋ, ಆತನ ತಾಯಿಯೂ ಆತನ ಸಹೋದರರೂ ಆತನೊಂದಿಗೆ ಮಾತನಾಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದರು.

    While he yet talked to the people, behold, [his] mother and his brethren stood without, desiring to speak with him.

  47. ಆಗ ಒಬ್ಬನು ಆತನಿಗೆ--ಇಗೋ, ನಿನ್ನ ತಾಯಿಯೂ ನಿನ್ನ ಸಹೋ ದರರೂ ನಿನ್ನೊಂದಿಗೆ ಮಾತನಾಡಲು ಅಪೇಕ್ಷಿಸಿ ಹೊರಗೆ ನಿಂತಿದ್ದಾರೆ ಅಂದನು.

    Then one said unto him, Behold, thy mother and thy brethren stand without, desiring to speak with thee.

  48. ಅದಕ್ಕೆ ಆತನು ತನಗೆ ಹೇಳಿದವನಿಗೆ ಪ್ರತ್ಯುತ್ತರವಾಗಿ--ನನ್ನ ತಾಯಿ ಯಾರು? ಮತ್ತು ನನ್ನ ಸಹೋದರರು ಯಾರು? ಎಂದು ಹೇಳಿ ಶಿಷ್ಯರ ಕಡೆಗೆ ತನ್ನ ಕೈಚಾಚಿ--

    But he answered and said unto him that told him, Who is my mother? and who are my brethren?

  49. ಇಗೋ, ನನ್ನ ತಾಯಿಯು ಮತ್ತು ನನ್ನ ಸಹೋದರರು!ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ನನ್ನ ಸಹೋದರನೂ ಸಹೋದರಿ ಯೂ ತಾಯಿಯೂ ಆಗಿದ್ದಾರೆ ಅಂದನು.

    And he stretched forth his hand toward his disciples, and said, Behold my mother and my brethren!

  50. ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ನನ್ನ ಸಹೋದರನೂ ಸಹೋದರಿ ಯೂ ತಾಯಿಯೂ ಆಗಿದ್ದಾರೆ ಅಂದನು.

    For whosoever shall do the will of my Father which is in heaven, the same is my brother, and sister, and mother.

All chapters of Matthew · Kannada Bible · Matthew 12 in Tamil

Kannada Bible: Kannada Old Version, public domain.

King James Version: public domain.