Matthew · chapter 12 · verse 25
Matthew 12:25 in Kannada
ಆಗ ಯೇಸು ಅವರ ಆಲೋಚನೆ ಗಳನ್ನು ತಿಳಿದು ಅವರಿಗೆ--ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ರಾಜ್ಯವು ಹಾಳಾಗುತ್ತದೆ; ಮತ್ತು ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ಪಟ್ಟಣವಾಗಲೀ ಮನೆಯಾಗಲೀ ನಿಲ್ಲುವದಿಲ್ಲ.
Aaga yesu avara aalochane galannu tilidu avarige--tannalli virodhavuntaagi vibhaagisalpatta pratiyondu raajyavu haalaaguttade; mattu tannalli virodhavuntaagi vibhaagisalpatta pratiyondu pattanavaagalee maneyaagalee nilluvadilla.
Matthew 12:25 in English
- King James Version (KJV)
- And Jesus knew their thoughts, and said unto them, Every kingdom divided against itself is brought to desolation; and every city or house divided against itself shall not stand:
- World English Bible (WEB)
- Knowing their thoughts, Jesus said to them, “Every kingdom divided against itself is brought to desolation, and every city or house divided against itself will not stand.
- American Standard Version (ASV)
- And knowing their thoughts he said unto them, Every kingdom divided against itself is brought to desolation; and every city or house divided against itself shall not stand:
- Bible in Basic English (BBE)
- And having knowledge of their thoughts he said to them, Every kingdom having division in itself is made waste, and every town or house having division in itself will come to destruction.
- Darby Translation (DBY)
- But he, knowing their thoughts, said to them, Every kingdom divided against itself is brought to desolation, and every city or house divided against itself will not subsist.
- Webster's Bible (WBS)
- And Jesus knew their thoughts, and said to them, Every kingdom divided against itself, is brought to desolation; and every city or house divided against itself, shall not stand.
- Young's Literal Translation (YLT)
- And Jesus, knowing their thoughts, said to them, 'Every kingdom having been divided against itself is desolated, and no city or house having been divided against itself, doth stand,
Read in context
- 23ಆಗ ಜನರೆಲ್ಲರು ವಿಸ್ಮಯ ಗೊಂಡವರಾಗಿ--ಈತನು ದಾವೀದನ ಕುಮಾರ ನಲ್ಲವೇ ಅಂದರು.
- 24ಆದರೆ ಫರಿಸಾಯರು ಇದನ್ನು ಕೇಳಿದಾಗ--ಇವನು ದೆವ್ವಗಳ ಅಧಿಪತಿಯಾಗಿರುವ ಬೆಲ್ಜೆಬೂಲನಿಂದಲೇ ಹೊರತು ದೆವ್ವಗಳನ್ನು ಬಿಡಿಸು ವದಿಲ್ಲ ಅಂದರು.
- 25ಆಗ ಯೇಸು ಅವರ ಆಲೋಚನೆ ಗಳನ್ನು ತಿಳಿದು ಅವರಿಗೆ--ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ರಾಜ್ಯವು ಹಾಳಾಗುತ್ತದೆ; ಮತ್ತು ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ಪಟ್ಟಣವಾಗಲೀ ಮನೆಯಾಗಲೀ ನಿಲ್ಲುವದಿಲ್ಲ.
- 26ಇದಲ್ಲದೆ ಸೈತಾನನು ಸೈತಾನನನ್ನು ಹೊರಗೆ ಹಾಕಿದರೆ ಅವನು ತನಗೆ ವಿರೋಧವಾಗಿ ತಾನೇ ವಿಭಾಗಿಸಲ್ಪಟ್ಟಿದ್ದಾನೆ; ಹಾಗಾದರೆ ಅವನ ರಾಜ್ಯವು ಹೇಗೆ ನಿಂತೀತು?
- 27ಮತ್ತು ಬೆಲ್ಜೆಬೂಲನಿಂದ ನಾನು ದೆವ್ವಗಳನ್ನು ಬಿಡಿಸಿದರೆ ನಿಮ್ಮ ಮಕ್ಕಳು ಯಾರಿಂದ ಅವುಗಳನ್ನು ಬಿಡಿಸುತ್ತಾರೆ? ಆದದರಿಂದ ಅವರೇ ನಿಮಗೆ ನ್ಯಾಯತೀರಿಸುವರು.
Cross references
- Galatians 5:15 ಗಲಾತ್ಯದವರಿಗೆ 5:15ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಿ ನುಂಗುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರವಾಗಿರ್ರಿ.
- Jeremiah 17:10 ಯೆರೆಮೀಯ 17:10ಕರ್ತನಾದ ನಾನೇ ಹೃದಯ ವನ್ನು ಪರೀಕ್ಷಿಸುತ್ತೇನೆ; ಅಂತರಿಂದ್ರಿಯಗಳನ್ನು ಶೋಧಿ ಸುತ್ತೇನೆ. ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ ಅವನ ಕ್ರಿಯೆಗಳ ಫಲದ ಪ್ರಕಾರವೂ (ಪ್ರತಿಫಲ) ಕೊಡುತ್ತೇನೆ.
- Matthew 9:4 ಮತ್ತಾಯನು 9:4ಯೇಸು ಅವರ ಆಲೋಚನೆಗಳನ್ನು ತಿಳಿದು--ನೀವು ಯಾಕೆ ನಿಮ್ಮ ಹೃದಯಗಳಲ್ಲಿ ಕೆಟ್ಟದ್ದನ್ನು ಯೋಚಿಸುತ್ತೀರಿ?
- Isaiah 9:21 ಯೆಶಾಯ 9:21ಹೀಗೆ ಮನಸ್ಸೆಯು ಎಫ್ರಾಯಾಮನ್ನು ಮತ್ತು ಎಫ್ರಾಯಾಮು ಮನಸ್ಸೆ ಯನ್ನು ತಿಂದುಬಿಡುವವು; ಅವರು ಒಟ್ಟಾಗಿ ಸೇರಿ ಯೆಹೂದಕ್ಕೆ ವಿರೋಧವಾಗಿರುವರು. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.
- 1 Corinthians 2:11 1 ಕೊರಿಂಥದವರಿಗೆ 2:11ಮನುಷ್ಯನ ಒಳಗಿನ ವಿಷಯಗಳು ಅವನಲ್ಲಿರುವ ಆತ್ಮಕ್ಕೆ ಹೊರತು ಮತ್ತಾರಿಗೆ ತಿಳಿದಾವು? ಹಾಗೆಯೇ ದೇವರ ವಿಷಯಗಳನ್ನು ದೇವರ ಆತ್ಮನೇ ಹೊರತು ಬೇರೆ ಯಾರೂ ಗ್ರಹಿಸುವದಿಲ್ಲ.
- Luke 11:17–22 ಲೂಕನು 11:17–22ಆದರೆ ಆತನು ಅವರ ಅಲೋಚನೆಗಳನ್ನು ತಿಳಿದವನಾಗಿ ಅವರಿಗೆ--ತನ್ನಲ್ಲಿ ವಿರೋಧವಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ರಾಜ್ಯವು ಹಾಳಾಗುವದು; ಒಂದು ಮನೆಯು ತನಗೆ ವಿರೋಧವಾಗಿ ವಿಭಾಗಿಸಲ್ಪಟ್ಟರೆ ಅದು ಬಿದ್ದು ಹೋಗುವದು. ಸೈತಾನನು ಸಹ ತನಗೆ ವಿರೋಧವಾಗಿ ತನ್ನಲ್ಲಿ ವಿಭಾಗಿಸಲ್ಪಟ್ಟರೆ ಅವನ ರಾಜ್ಯವು ನಿಲ್ಲುವದು ಹೇಗೆ? ಯಾಕಂದರೆ ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಹೊರಡಿಸುತ್ತೇನೆಂದು ನೀವು ಹೇಳುತ್ತೀರಲ್ಲಾ. ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಬಿಡಿಸುವದಾದರೆ ನಿಮ್ಮ ಪುತ್ರರು ಯಾರಿಂದ ಅವುಗಳನ್ನು ಬಿಡಿಸುತ್ತಾರೆ? ಆದದರಿಂದ ಅವರೇ ನಿಮಗೆ ನ್ಯಾಯ ತೀರಿಸುವವರಾಗಿರುವರು. ಆದರೆ ನಾನು ದೇವರ ಹಸ್ತದಿಂದಲೇ ದೆವ್ವಗಳನ್ನು ಹೊರಡಿಸುವದಾದರೆ ದೇವರ ರಾಜ್ಯವು ನಿಸ್ಸಂದೇಹವಾಗಿ ನಿಮ್ಮ ಬಳಿಗೆ ಬಂದಿದೆಯಲ್ಲಾ. ಆಯುಧ ಗಳನ್ನು ಧರಿಸಿಕೊಂಡು ಬಲಿಷ್ಠನಾದವನೊಬ್ಬನು ತನ್ನ ಅರಮನೆಯನ್ನು ಕಾಯುವದಾದರೆ ಅವನ ಸೊತ್ತು ಸುರಕ್ಷಿತವಾಗಿರುವದು. ಆದರೆ ಅವನಿಗಿಂತ ಬಲಿ ಷ್ಠನು ಅವನ ಮೇಲೆ ಬಂದು ಅವನನ್ನು ಜಯಿಸಿ ಅವನು ನಂಬಿಕೊಂಡಿದ್ದ ಆಯುಧಗಳನ್ನು ಅವನಿಂದ ತಕ್ಕೊಂಡು ತನ್ನ ಸುಲಿಗೆಗಳನ್ನು ಹಂಚುವನು.
- Mark 3:23–27 ಮಾರ್ಕನು 3:23–27ಆತನು ಅವರನ್ನು ತನ್ನ ಹತ್ತಿರಕ್ಕೆ ಕರೆದು ಸಾಮ್ಯಗಳಲ್ಲಿ ಅವರಿಗೆ--ಸೈತಾನನು ಸೈತಾನನನ್ನು ಹೊರಗೆ ಹಾಕು ವದು ಹೇಗೆ? ಒಂದು ರಾಜ್ಯವು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ರಾಜ್ಯವು ನಿಲ್ಲಲಾರದು. ಇದ ಲ್ಲದೆ ಒಂದು ಮನೆಯು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ಮನೆಯು ನಿಲ್ಲಲಾರದು. ಸೈತಾನನು ತನಗೆ ತಾನೇ ವಿರೋಧವಾಗಿ ಎದ್ದು ವಿಭಾಗಿಸಲ್ಪಟ್ಟರೆ ಅವನು ನಿಲ್ಲಲಾರದೆ ಅಂತ್ಯಗೊಳ್ಳುವನು. ಇದಲ್ಲದೆ ಒಬ್ಬ ಮನುಷ್ಯನು ಮೊದಲು ಬಲಿಷ್ಠನನ್ನು ಕಟ್ಟದ ಹೊರತು ಅವನ ಮನೆಯೊಳಕ್ಕೆ ಪ್ರವೇಶಿಸಿ ಅವನ ಸೊತ್ತನ್ನು ಸುಲುಕೊಳ್ಳಲಾರನು; ಕಟ್ಟಿದ ಮೇಲೆ ಅವನ ಮನೆಯನ್ನು ಸುಲುಕೊಳ್ಳುವನು ಅಂದನು.
- Psalm 139:2 ಕೀರ್ತನೆಗಳು 139:2ನಾನು ಕೂತು ಕೊಳ್ಳುವದನ್ನೂ ಏಳುವದನ್ನೂ ನೀನು ತಿಳುಕೊಂಡಿದ್ದೀ; ನನ್ನ ಆಲೋಚನೆಯನ್ನು ದೂರದಿಂದ ಗ್ರಹಿಸಿ ಕೊಂಡ್ಡಿದ್ದೀ;
- Revelation 16:19 ಪ್ರಕಟನೆ 16:19ಆ ಮಹಾಪಟ್ಟಣವು ಮೂರು ಭಾಗಗಳಾಗಿ ವಿಭಾಗವಾಯಿತು; ಜನಾಂಗಗಳ ಪಟ್ಟಣಗಳು ಬಿದ್ದವು; ಇದಲ್ಲದೆ ಮಹಾಬಾಬೆಲಿಗೆ ಉಗ್ರಕೋಪವೆಂಬ ದ್ರಾಕ್ಷಾರಸದ ಪಾತ್ರೆಯನ್ನು ಕೊಡು ವಂತೆ ದೇವರ ಮುಂದೆ ಅದು ಜ್ಞಾಪಕಕ್ಕೆ ಬಂತು.
- Hebrews 4:13 ಇಬ್ರಿಯರಿಗೆ 4:13ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.
- Mark 2:8 ಮಾರ್ಕನು 2:8ಹೀಗೆ ಅವರು ತಮ್ಮೊಳಗೆ ಅಂದುಕೊಂಡದ್ದನ್ನು ಯೇಸು ಕೂಡಲೆ ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ--ನೀವು ನಿಮ್ಮ ಹೃದಯ ಗಳಲ್ಲಿ ಯಾಕೆ ಇವುಗಳನ್ನು ಆಲೋಚಿಸುತ್ತೀರಿ ಎಂದು ಹೇಳಿ
- Isaiah 19:2–3 ಯೆಶಾಯ 19:2–3ಇದಲ್ಲದೆ ನಾನು ಐಗುಪ್ತಕ್ಕೆ ವಿರೋಧವಾಗಿ ಐಗುಪ್ತ ವನ್ನು ಎಬ್ಬಿಸುವೆನು; ಸಹೋದರನಿಗೆ ವಿರೋದವಾಗಿ ಸಹೋದರನೂ ನೆರೆಯವನಿಗೆ ವಿರೋದವಾಗಿ ನೆರೆ ಯವನೂ ಪಟ್ಟಣಕ್ಕೆ ವಿರೋಧವಾಗಿ ಪಟ್ಟಣವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಹೋರಾಡುವವು. ಐಗುಪ್ತದ ಆತ್ಮವು ಅದರ ಮಧ್ಯದಲ್ಲಿ ಕುಂದುವದು; ಅದರ ಆಲೋಚನೆಯನ್ನು ಕೆಡಿಸಿಬಿಡುವೆನು; ಅಲ್ಲಿಯ ವರು ವಿಗ್ರಹಗಳನ್ನೂ ಮಾಟಗಾರರನ್ನೂ ಯಕ್ಷಣಿಗಾರ ರನ್ನೂ ಮಂತ್ರವಾದಿಗಳನ್ನೂ ಹುಡುಕುವರು.