Matthew · chapter 12 · verse 26
Matthew 12:26 in Kannada
ಇದಲ್ಲದೆ ಸೈತಾನನು ಸೈತಾನನನ್ನು ಹೊರಗೆ ಹಾಕಿದರೆ ಅವನು ತನಗೆ ವಿರೋಧವಾಗಿ ತಾನೇ ವಿಭಾಗಿಸಲ್ಪಟ್ಟಿದ್ದಾನೆ; ಹಾಗಾದರೆ ಅವನ ರಾಜ್ಯವು ಹೇಗೆ ನಿಂತೀತು?
Idallade saitaananu saitaananannu horage haakidare avanu tanage virodhavaagi taane vibhaagisalpattiddaane; haagaadare avana raajyavu hege ninteetu?
Matthew 12:26 in English
- King James Version (KJV)
- And if Satan cast out Satan, he is divided against himself; how shall then his kingdom stand?
- World English Bible (WEB)
- If Satan casts out Satan, he is divided against himself. How then will his kingdom stand?
- American Standard Version (ASV)
- and if Satan casteth out Satan, he is divided against himself; how then shall his kingdom stand?
- Bible in Basic English (BBE)
- And if Satan sends out Satan, he makes war against himself; how then will he keep his kingdom?
- Darby Translation (DBY)
- And if Satan casts out Satan, he is divided against himself; how then shall his kingdom subsist?
- Webster's Bible (WBS)
- And if Satan casteth out Satan, he is divided against himself; how then shall his kingdom stand?
- Young's Literal Translation (YLT)
- and if the Adversary doth cast out the Adversary, against himself he was divided, how then doth his kingdom stand?
Read in context
- 24ಆದರೆ ಫರಿಸಾಯರು ಇದನ್ನು ಕೇಳಿದಾಗ--ಇವನು ದೆವ್ವಗಳ ಅಧಿಪತಿಯಾಗಿರುವ ಬೆಲ್ಜೆಬೂಲನಿಂದಲೇ ಹೊರತು ದೆವ್ವಗಳನ್ನು ಬಿಡಿಸು ವದಿಲ್ಲ ಅಂದರು.
- 25ಆಗ ಯೇಸು ಅವರ ಆಲೋಚನೆ ಗಳನ್ನು ತಿಳಿದು ಅವರಿಗೆ--ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ರಾಜ್ಯವು ಹಾಳಾಗುತ್ತದೆ; ಮತ್ತು ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ಪಟ್ಟಣವಾಗಲೀ ಮನೆಯಾಗಲೀ ನಿಲ್ಲುವದಿಲ್ಲ.
- 26ಇದಲ್ಲದೆ ಸೈತಾನನು ಸೈತಾನನನ್ನು ಹೊರಗೆ ಹಾಕಿದರೆ ಅವನು ತನಗೆ ವಿರೋಧವಾಗಿ ತಾನೇ ವಿಭಾಗಿಸಲ್ಪಟ್ಟಿದ್ದಾನೆ; ಹಾಗಾದರೆ ಅವನ ರಾಜ್ಯವು ಹೇಗೆ ನಿಂತೀತು?
- 27ಮತ್ತು ಬೆಲ್ಜೆಬೂಲನಿಂದ ನಾನು ದೆವ್ವಗಳನ್ನು ಬಿಡಿಸಿದರೆ ನಿಮ್ಮ ಮಕ್ಕಳು ಯಾರಿಂದ ಅವುಗಳನ್ನು ಬಿಡಿಸುತ್ತಾರೆ? ಆದದರಿಂದ ಅವರೇ ನಿಮಗೆ ನ್ಯಾಯತೀರಿಸುವರು.
- 28ಆದರೆ ನಾನು ದೇವರ ಆತ್ಮನಿಂದ ದೆವ್ವಗಳನ್ನು ಬಿಡಿಸಿದರೆ ದೇವರ ರಾಜ್ಯವು ನಿಮ್ಮ ಬಳಿಗೆ ಬಂದಿದೆಯಲ್ಲಾ.
Cross references
- Colossians 1:13 ಕೊಲೊಸ್ಸೆಯವರಿಗೆ 1:13ಆತನು (ದೇವರು) ನಮ್ಮನ್ನು ಅಂಧಕಾರದ ಶಕ್ತಿಯಿಂದ ಬಿಡಿಸಿ ತನ್ನ ಪ್ರಿಯಕುಮಾರನ ರಾಜ್ಯ ದೊಳಗೆ ಸೇರಿಸಿದನು.
- Revelation 20:2–3 ಪ್ರಕಟನೆ 20:2–3ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪ ನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರುಷ ಬಂಧಿಸಿದನು. ಆ ಸಾವಿರ ವರುಷ ತೀರುವ ತನಕ ಅವನು ಇನ್ನು ಎಂದಿಗೂ ಜನಾಂಗಗಳನ್ನು ಮರುಳು ಗೊಳಿಸದ ಹಾಗೆ ದೂತನು ಅವನನ್ನು ತಳವಿಲ್ಲದ ತಗ್ಗಿನಲ್ಲಿ ದೊಬ್ಬಿ ಅವನನ್ನು ಮುಚ್ಚಿ ಅದರ ಮೇಲೆ ಮುದ್ರೆ ಹಾಕಿದನು. ಆ ಸಾವಿರ ವರುಷಗಳಾದ ಮೇಲೆ ಅವನಿಗೆ ಸ್ವಲ್ಪ ಕಾಲ ಬಿಡುಗಡೆಯಾಗತಕ್ಕದ್ದು.
- John 12:31 ಯೋಹಾನನು 12:31ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ; ಇಹಲೋಕದ ಅಧಿಪತಿಯು ಈಗ ಹೊರಗೆ ಹಾಕಲ್ಪಡುವನು.
- 1 John 5:19 1 ಯೋಹಾನನು 5:19ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂದೂ ಲೋಕವೆಲ್ಲವು ಕೆಟ್ಟತನದಲ್ಲಿ ಬಿದ್ದಿದೆ ಎಂದೂ ನಮಗೆ ಗೊತ್ತದೆ.
- John 14:30 ಯೋಹಾನನು 14:30ಇನ್ನು ಮೇಲೆ ನಾನು ನಿಮ್ಮೊಂದಿಗೆ ಬಹಳವಾಗಿ ಮಾತನಾಡುವದಿಲ್ಲ; ಯಾಕಂದರೆ ಇಹ ಲೋಕದ ಅಧಿಪತಿಯು ಬರುತ್ತಾನೆ. ಅವನಿಗೆ ಸಂಬಂಧಪಟ್ಟದ್ದು ನನ್ನಲ್ಲಿ ಏನೂ ಇಲ್ಲ.ನಾನು ತಂದೆಯನ್ನು ಪ್ರೀತಿಮಾಡುತ್ತೇನೆಂದು ಲೋಕವು ತಿಳಿಯುವ ಹಾಗೆ ತಂದೆಯು ನನಗೆ ಆಜ್ಞೆ ಕೊಟ್ಟಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ ಅಂದನು.
- Matthew 4:10 ಮತ್ತಾಯನು 4:10ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು.
- John 16:11 ಯೋಹಾನನು 16:11ಇಹಲೋಕಾಧಿಪತಿಯು ನ್ಯಾಯತೀರ್ಪನ್ನು ಹೊಂದಿರುವದರಿಂದ ನ್ಯಾಯ ತೀರ್ವಿಕೆಯ ವಿಷಯವಾಗಿಯೂ ಲೋಕವನ್ನು ಗದರಿಸುವನು.
- Revelation 9:11 ಪ್ರಕಟನೆ 9:11ತಳವಿಲ್ಲದ ತಗ್ಗಿನ ದೂತನು ಅವುಗಳನ್ನಾಳುವ ಅರಸನು; ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ದೋನನೆಂತಲೂ ಗ್ರೀಕ್ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರು.
- Revelation 12:9 ಪ್ರಕಟನೆ 12:9ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.
- Revelation 16:10 ಪ್ರಕಟನೆ 16:10ಐದನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಮೃಗದ ಆಸನದ ಮೇಲೆ ಹೊಯ್ಯಲು ಅದರ ರಾಜ್ಯವು ತುಂಬಾ ಕತ್ತಲಾಯಿತು; ಜನರು ತಮಗಾದ ನೋವಿನ ದೆಸೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು
- 2 Corinthians 4:4 2 ಕೊರಿಂಥದವರಿಗೆ 4:4ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.