Matthew · chapter 12 · verse 45
Matthew 12:45 in Kannada
ತರುವಾಯ ಅದು ಹೋಗಿ ತನಗಿಂತ ಕೆಟ್ಟವುಗಳಾಗಿರುವ ಬೇರೆ ಏಳು ಆತ್ಮಗಳನ್ನು ಕರಕೊಂಡು ಅವು ಅದರೊಳಗೆ ಪ್ರವೇಶಿಸಿ ವಾಸಮಾಡುತ್ತವೆ; ಹೀಗೆ ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತಲೂ ಕೆಟ್ಟದ್ದಾಗಿರುವದು. ಅದರಂತೆಯೇ ಈ ಕೆಟ್ಟ ಸಂತತಿಗೂ ಆಗುವದು ಎಂದು ಹೇಳಿದನು.
Taruvaaya adu hogi tanaginta kettavugalaagiruva bere elu aatmagalannu karakondu avu adarolage praveshisi vaasamaaduttave; heege aa manushyana kade sthitiyu modaligintaloo kettaddaagiruvadu. Adaranteye ee ketta santatigoo aaguvadu endu helidanu.
Matthew 12:45 in English
- King James Version (KJV)
- Then goeth he, and taketh with himself seven other spirits more wicked than himself, and they enter in and dwell there: and the last [state] of that man is worse than the first. Even so shall it be also unto this wicked generation.
- World English Bible (WEB)
- Then he goes and takes with himself seven other spirits more evil than he is, and they enter in and dwell there. The last state of that man becomes worse than the first. Even so will it be also to this evil generation.”
- American Standard Version (ASV)
- Then goeth he, and taketh with himself seven other spirits more evil than himself, and they enter in and dwell there: and the last state of that man becometh worse than the first. Even so shall it be also unto this evil generation.
- Bible in Basic English (BBE)
- Then he goes and takes with him seven other spirits worse than himself, and they go in and make it their living-place: and the last condition of that man is worse than the first. Even so will it be with this evil generation.
- Darby Translation (DBY)
- Then he goes and takes with himself seven other spirits worse than himself, and entering in, they dwell there; and the last condition of that man becomes worse than the first. Thus shall it be to this wicked generation also.
- Webster's Bible (WBS)
- Then goeth he, and taketh with himself seven other spirits more wicked than himself, and they enter in and dwell there: and the last [state] of that man is worse than the first. Even so shall it be also to this wicked generation.
- Young's Literal Translation (YLT)
- then doth it go, and take with itself seven other spirits more evil than itself, and having gone in they dwell there, and the last of that man doth become worse than the first; so shall it be also to this evil generation.'
Read in context
- 43ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದ ಮೇಲೆ ನೀರಿಲ್ಲದ ಸ್ಥಳಗಳಲ್ಲಿ ವಿಶ್ರಾಂತಿಗಾಗಿ ತಿರುಗಾಡಿದರೂ ಅದನ್ನು ಕಂಡುಕೊಳ್ಳಲಿಲ್ಲ.
- 44ಆಗ ಅದು--ನಾನು ಹೊರಟುಬಂದ ನನ್ನ ಮನೆಗೆ ಹಿಂತಿರುಗುವೆನು ಎಂದು ಅಂದುಕೊಂಡು ಬಂದು ಅದು ಬರಿದಾಗಿಯೂ ಗುಡಿಸಿ ಅಲಂಕರಿಸಲ್ಪಟ್ಟದ್ದಾ ಗಿಯೂ ಇರುವದನ್ನು ಕಂಡಿತು.
- 45ತರುವಾಯ ಅದು ಹೋಗಿ ತನಗಿಂತ ಕೆಟ್ಟವುಗಳಾಗಿರುವ ಬೇರೆ ಏಳು ಆತ್ಮಗಳನ್ನು ಕರಕೊಂಡು ಅವು ಅದರೊಳಗೆ ಪ್ರವೇಶಿಸಿ ವಾಸಮಾಡುತ್ತವೆ; ಹೀಗೆ ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತಲೂ ಕೆಟ್ಟದ್ದಾಗಿರುವದು. ಅದರಂತೆಯೇ ಈ ಕೆಟ್ಟ ಸಂತತಿಗೂ ಆಗುವದು ಎಂದು ಹೇಳಿದನು.
- 46ಆತನು ಇನ್ನೂ ಜನರ ಸಂಗಡ ಮಾತನಾಡು ತ್ತಿದ್ದಾಗ ಇಗೋ, ಆತನ ತಾಯಿಯೂ ಆತನ ಸಹೋದರರೂ ಆತನೊಂದಿಗೆ ಮಾತನಾಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದರು.
- 47ಆಗ ಒಬ್ಬನು ಆತನಿಗೆ--ಇಗೋ, ನಿನ್ನ ತಾಯಿಯೂ ನಿನ್ನ ಸಹೋ ದರರೂ ನಿನ್ನೊಂದಿಗೆ ಮಾತನಾಡಲು ಅಪೇಕ್ಷಿಸಿ ಹೊರಗೆ ನಿಂತಿದ್ದಾರೆ ಅಂದನು.
Cross references
- Luke 11:26 ಲೂಕನು 11:26ಆಗ ಅದು ಹೋಗಿ ತನಗಿಂತಲೂ ಕೆಟ್ಟವು ಗಳಾದ ಬೇರೆ ಏಳು ದುರಾತ್ಮಗಳನ್ನು ತನ್ನೊಂದಿಗೆ ಕರಕೊಂಡು ಒಳಗೆ ಸೇರಿ ಅಲ್ಲಿ ವಾಸಮಾಡುವವು; ಮತ್ತು ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವದು ಅಂದನು.
- Hebrews 10:26–31 ಇಬ್ರಿಯರಿಗೆ 10:26–31ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ. ಆದರೆ ಭಯದಿಂದ ಖಂಡಿತವಾಗಿ ಎದುರು ನೋಡತಕ್ಕ ತೀರ್ಪು ವಿರೋಧಿ ಗಳನ್ನು ದಹಿಸುವ ಕೋಪಾಗ್ನಿಯೂ ಇರುವವು. ಮೋಶೆಯ ನ್ಯಾಯಪ್ರಮಾಣವನ್ನು ಅಸಡ್ಡೆ ಮಾಡಿ ದವನನ್ನು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕನಿಕರವಿಲ್ಲದೆ ಕೊಲ್ಲುತ್ತಿದ್ದರು. ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ. ಮುಯ್ಯಿ ತೀರಿಸುವದು ನನಗೆ ಸಂಬಂಧಪಟ್ಟದ್ದು, ನಾನೇ ಪ್ರತಿಫಲವನ್ನು ಕೊಡುವೆ ನೆಂದು ಹೇಳಿದ ಕರ್ತನನ್ನು ನಾವು ಬಲ್ಲೆವು; ಇದ ಲ್ಲದೆ--ಕರ್ತನು ತನ್ನ ಜನರಿಗೆ ನ್ಯಾಯತೀರಿಸುವ ನೆಂತಲೂ ಹೇಳಿಯದೆ. ಜೀವವುಳ್ಳ ದೇವರ ಕೈಯಲ್ಲಿ ಸಿಕ್ಕಿ ಬೀಳುವದು ಭಯಂಕರವಾದದ್ದು.
- Hebrews 6:4–8 ಇಬ್ರಿಯರಿಗೆ 6:4–8ಒಂದು ಸಾರಿ ಬೆಳಕನ್ನು ಹೊಂದಿ ಪರಲೋಕ ದಿಂದಾದ ದಾನದ ರುಚಿಯನ್ನು ನೋಡಿ ಪವಿತ್ರಾತ್ಮನಲ್ಲಿ ಪಾಲುಗಾರರಾಗಿ ಶ್ರೇಷ್ಠವಾದ ದೇವರ ವಾಕ್ಯವನ್ನೂ ಬರುವ ಲೋಕದ ಮಹತ್ವವನ್ನೂ ರುಚಿನೋಡಿ ದವರು ಬಿದ್ದು ಹೋಗುವದಾದರೆ ಅವರಲ್ಲಿ ತಿರಿಗಿ ಮಾನಸಾಂತರವನ್ನು ಹುಟ್ಟಿಸುವದು ಅಸಾಧ್ಯ; ಯಾಕಂದರೆ ಅವರು ತಮ್ಮ ಪಾಲಿಗೆ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗ ವಾಗಿ ಅವಮಾನಪಡಿಸುವವರೂ ಆಗಿದ್ದಾರೆ. ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ ಅವರಿಗೆ ಅನುಕೂಲ ವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಹೊಂದುತ್ತದೆ; ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ ತಿರಸ್ಕರಿಸಲ್ಪಟ್ಟು ಶಾಪಕ್ಕೆ ಗುರಿಯಾಗುತ್ತದೆ. ಅದರ ಅಂತ್ಯವು ಸುಡಲ್ಪಡುವದೇ.
- Mark 5:9 ಮಾರ್ಕನು 5:9ಆತನು ಅವನಿಗೆ--ನಿನ್ನ ಹೇಸರೇನು ಎಂದು ಕೇಳಲು ಅವನು ಪ್ರತ್ಯುತ್ತರವಾಗಿ--ನನ್ನ ಹೆಸರು ಲೀಜೆನ್ (ದಂಡು); ಯಾಕಂದರೆ ನಾವು ಅನೇಕರಿದ್ದೇವೆ ಅಂದನು.
- 2 Peter 2:14–22 2 ಪೇತ್ರನು 2:14–22ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ. ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು. ಆದರೆ ಅವನ ದುಷ್ಟತ್ವಕ್ಕೆ ಖಂಡನೆಯಾಯಿತು; ಮೂಕ ಕತ್ತೆಯು ಮನುಷ್ಯ ಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನಕ್ಕೆ ಅಡ್ಡಿ ಮಾಡಿತು. ಇವರು ನೀರಿಲ್ಲದ ಭಾವಿಗಳೂ ಬಿರುಗಾಳಿಯಿಂದ ಬಡಿಸಿಕೊಂಡು ಹಾರಿ ಹೋಗುವ ಮೇಘಗಳೂ ಆಗಿದ್ದಾರೆ. ಇಂಥವರ ಪಾಲಿಗೆ ನಿರಂತರವಾದ ಕಾರ್ಗತ್ತಲು ಇಟ್ಟಿರುವದು. ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ. ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವ ದೊಳಗಿದ್ದಾರೆ. ಯಾಕಂದರೆ ಒಬ್ಬನು ಯಾವದಕ್ಕೆ ಸೋತು ಹೋಗಿರುವನೊ? ಅವನು ಅದರ ದಾಸತ್ವ ದೊಳಗಿರುವನಷ್ಟೆ. ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ. ಅವರು ನೀತಿ ಮಾರ್ಗ ವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯಿಂದ ತೊಲಗಿ ಹೋಗುವದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಇದ್ದಿದ್ದರೆ ಮೇಲಾಗಿತ್ತು.ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು. ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು.
- John 15:22–24 ಯೋಹಾನನು 15:22–24ನಾನು ಬಂದು ಅವರಿಗೆ ಹೇಳದಿದ್ದರೆ ಅವರಲ್ಲಿ ಪಾಪವು ಇರುತ್ತಿದ್ದಿಲ್ಲ; ಆದರೆ ಈಗ ಅವರ ಪಾಪಕ್ಕೆ ನೆವವಿಲ್ಲ. ನನ್ನನ್ನು ದ್ವೇಷಮಾಡುವವನು ನನ್ನ ತಂದೆಯನ್ನು ಸಹ ದ್ವೇಷಮಾಡುತ್ತಾನೆ. ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರೊಳಗೆ ಮಾಡದಿದ್ದರೆ ಅವರಿಗೆ ಪಾಪವು ಇರು ತ್ತಿರಲಿಲ್ಲ; ಆದರೆ ಈಗ ಅವರು ನನ್ನನ್ನು ಮತ್ತು ನನ್ನ ತಂದೆಯನ್ನು ನೋಡಿ ದ್ವೇಷಮಾಡಿದ್ದಾರೆ.
- Jude 1:10–13 ಯೂದನು 1:10–13ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡುತ್ತಾರೆ ಮತ್ತು ತಾವು ವಿವೇಕಶೂನ್ಯ ಮೃಗಗಳಂತೆ ಸ್ವಾಭಾವಿಕವಾಗಿ ಯಾವವುಗಳನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ. ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ! ಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತವರೂ ಹಣ್ಣು ಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚು ತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರ ಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು.
- Mark 16:9 ಮಾರ್ಕನು 16:9ಹೀಗಿರಲಾಗಿ ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಎದ್ದಮೇಲೆ ಆತನು ಮೊದಲು ತಾನು ಏಳು ದೆವ್ವಗಳನ್ನು ಬಿಡಿಸಿದ್ದ ಮಗ್ದಲದ ಮರಿಯಳಿಗೆ ಕಾಣಿಸಿಕೊಂಡನು.
- 1 John 5:16–17 1 ಯೋಹಾನನು 5:16–17ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವ ದನ್ನು ಕಂಡರೆ ಅವನು ಬೇಡಿಕೊಳ್ಳಲಿ; ಆಗ ಆತನು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು; ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳ ಬೇಕೆಂದು ನಾನು ಹೇ ಅನೀತಿಯೆಲ್ಲವೂ ಪಾಪವಾಗಿದೆ; ಆದರೂ ಮರಣಕರವಲ್ಲದ ಪಾಪವುಂಟು.
- Romans 11:8–10 ರೋಮಾಪುರದವರಿಗೆ 11:8–10(ಬರೆದಿರುವಂತೆ ದೇವರು ಅವರಿಗೆ ತೂಕಡಿಕೆಯ ಆತ್ಮವನ್ನೂ ಕಾಣದ ಕಣ್ಣುಗಳನ್ನೂ ಕೇಳದ ಕಿವಿಗಳನ್ನೂ ಕೊಟ್ಟಿದ್ದಾನೆ). ಉಳಿದವರು ಈ ದಿನದ ವರೆಗೂ ಕುರುಡರಾಗಿದ್ದಾರೆ. ಇದಲ್ಲದೆ ದಾವೀದನು--ಅವರ ಊಟವು ಅವರಿಗೆ ಉರ್ಲೂ ಬೋನೂ ಅಭ್ಯಂತರವೂ ಪ್ರತಿಫಲವೂ ಆಗಲಿ. ನೋಡದಂತೆ ಅವರ ಕಣ್ಣು ಗಳು ಮೊಬ್ಬಾಗಲಿ; ಅವರ ಬೆನ್ನು ಯಾವಾಗಲೂ ಬೊಗ್ಗಿಕೊಂಡಿರಲಿ ಎಂದು ಅನ್ನುತ್ತಾನೆ.
- Hebrews 10:39 ಇಬ್ರಿಯರಿಗೆ 10:39ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.
- Matthew 21:38–44 ಮತ್ತಾಯನು 21:38–44ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು. ಅವರು ಅವನನ್ನು ಹಿಡಿದು ದ್ರಾಕ್ಷೇ ತೋಟದಿಂದ ಹೊರಗೆ ಹಾಕಿ ಅವನನ್ನು ಕೊಂದು ಹಾಕಿದರು. ಹೀಗಿರುವ ದರಿಂದ ದ್ರಾಕ್ಷೇ ತೋಟದ ಯಜಮಾನನು ಬಂದಾಗ ಆ ಒಕ್ಕಲಿಗರಿಗೆ ಏನು ಮಾಡಾನು ಅಂದನು. ಅವರು ಆತನಿಗೆ--ಅವನು ಆ ದುಷ್ಟ ಮನುಷ್ಯರನು ಕ್ರೂರವಾಗಿ ಸಂಹರಿಸುವನು; ಮತ್ತು ತಕ್ಕಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಒಕ್ಕಲಿಗರಿಗೆ ತನ್ನ ದ್ರಾಕ್ಷೇತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು. ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ? ಆದದರಿಂದ ನಾನು ನಿಮಗೆ ಹೇಳುವದೇನಂದರೆ--ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲ್ಪಡುವದು. ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು; ಆದರೆ ಅದು ಯಾವನ ಮೇಲೆ ಬೀಳುವದೋ ಅವನನ್ನು ಅರೆದು ಪುಡಿಪುಡಿ ಮಾಡುವದು ಅಂದನು.