Matthew · chapter 12 · verse 6
Matthew 12:6 in Kannada
ಆದರೆ ನಾನು ನಿಮಗೆ ಹೇಳುವದೇನಂದರೆ-- ದೇವಾಲಯಕ್ಕಿಂತಲೂ ದೊಡ್ಡವನು ಈ ಸ್ಥಳದಲ್ಲಿ ಇದ್ದಾನೆ.
Aadare naanu nimage heluvadenandare-- devaalayakkintaloo doddavanu ee sthaladalli iddaane.
Matthew 12:6 in English
- King James Version (KJV)
- But I say unto you, That in this place is [one] greater than the temple.
- World English Bible (WEB)
- But I tell you that one greater than the temple is here.
- American Standard Version (ASV)
- But I say unto you, that one greater than the temple is here.
- Bible in Basic English (BBE)
- But I say to you that a greater thing than the Temple is here.
- Darby Translation (DBY)
- But I say unto you, that there is here what is greater than the temple.
- Webster's Bible (WBS)
- But I say to you, that in this place is [one] greater than the temple.
- Young's Literal Translation (YLT)
- and I say to you, that a greater than the temple is here;
Read in context
- 4ಅವನು ದೇವರ ಮನೆ ಯೊಳಗೆ ಪ್ರವೇಶಿಸಿ ಯಾಜಕರೇ ಹೊರತು ತಾನಾಗಲೀ ತನ್ನ ಕೂಡ ಇದ್ದವರಾಗಲೀ ತಿನ್ನಬಾರದಾಗಿದ್ದ ಸಮ್ಮುಖ ರೊಟ್ಟಿಯನ್ನು ಹೇಗೆ ತಿಂದನು?
- 5ಇದಲ್ಲದೆ ಸಬ್ಬತ್ ದಿನಗಳಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ತನ್ನು ಅಪವಿತ್ರಪಡಿಸಿದರೂ ನಿರಪರಾಧಿಗಳಾಗಿದ್ದಾ ರೆಂದು ನೀವು ನ್ಯಾಯಪ್ರಮಾಣದಲ್ಲಿ ಓದಲಿಲ್ಲವೇ?
- 6ಆದರೆ ನಾನು ನಿಮಗೆ ಹೇಳುವದೇನಂದರೆ-- ದೇವಾಲಯಕ್ಕಿಂತಲೂ ದೊಡ್ಡವನು ಈ ಸ್ಥಳದಲ್ಲಿ ಇದ್ದಾನೆ.
- 7ಆದರೆ--ನನಗೆ ಯಜ್ಞವಲ್ಲ, ಕರುಣೆಯೇ ಬೇಕು ಎಂಬದರ ಅರ್ಥವನ್ನು ನೀವು ತಿಳಿದಿದ್ದರೆ ನಿರಪರಾಧಿಗಳನ್ನು ಅಪರಾಧಿಗಳೆಂದು ತೀರ್ಪುಮಾಡು ತ್ತಿದ್ದಿಲ್ಲ.
- 8ಯಾಕಂದರೆ ಮನುಷ್ಯ ಕುಮಾರನು ಸಬ್ಬತ್ ದಿನಕ್ಕೂ ಒಡೆಯನಾಗಿದ್ದಾನೆ ಎಂದು ಹೇಳಿದನು.
Cross references
- Matthew 12:41–42 ಮತ್ತಾಯನು 12:41–42ನ್ಯಾಯವಿಚಾರಣೆಯಲ್ಲಿ ನಿನೆವೆಯ ಜನರು ಈ ಸಂತತಿಯೊಂದಿಗೆ ಎದ್ದು ಅವರನ್ನು ಖಂಡಿಸು ವರು; ಯಾಕಂದರೆ ಯೋನನು ಸಾರಿದಾಗ ಅವರು ಮಾನಸಾಂತರಪಟ್ಟರು; ಮತ್ತು ಇಗೋ, ಇಲ್ಲಿ ಯೋನ ನಿಗಿಂತಲೂ ದೊಡ್ಡವನಿದ್ದಾನೆ. ನ್ಯಾಯವಿಚಾರಣೆ ಯಲ್ಲಿ ದಕ್ಷಿಣದ ರಾಣಿಯು ಈ ಸಂತತಿಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು; ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿ ಯ ಕಟ್ಟಕಡೆಯಿಂದ ಬಂದಳು; ಇಗೋ, ಇಲ್ಲಿ ಸೊಲೊ ಮೋನನಿಗಿಂತಲೂ ದೊಡ್ಡವನಿದ್ದಾನೆ.
- 1 Peter 2:4–5 1 ಪೇತ್ರನು 2:4–5ನೀವು ಜೀವವುಳ್ಳ ಕಲ್ಲಾಗಿರು ವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲು ಮನುಷ್ಯರಿಂದ ನಿಜವಾಗಿಯೂ ನಿರಾಕರಿಸಲ್ಪಟ್ಟಿದ್ದರೂ ಅದು ದೇವ ರಿಂದ ಆಯಲ್ಪಟ್ಟದ್ದೂ ಅಮೂಲ್ಯವಾದದ್ದೂ ಆಯಿತು. ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
- 2 Chronicles 6:18 2 ಪೂರ್ವಕಾಲವೃತ್ತಾಂತ 6:18ಆದರೆ ದೇವರು ನಿಶ್ಚಯವಾಗಿ ಭೂಮಿಯ ಮೇಲೆ ಮನುಷ್ಯರ ಸಂಗಡ ವಾಸವಾಗಿರುವನೋ? ಇಗೋ, ಆಕಾಶಗಳೂ ಆಕಾಶಾಕಾಶಗಳೂ ನಿನ್ನನ್ನು ಹಿಡಿಸಲಾರವು; ಹಾಗಾದರೆ ನಾನು ಕಟ್ಟಿಸಿದ ಈ ಆಲಯವು ನಿನ್ನನ್ನು ಹಿಡಿಸುವದು ಹೇಗೆ?
- Ephesians 2:20–22 ಎಫೆಸದವರಿಗೆ 2:20–22ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು; ಆತನಲ್ಲಿ ಕಟ್ಟಡವು ಹೊಂದಿಕೆ ಯಾಗಿ ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ದ ದೇವಾ ಲಯವಾಗುತ್ತದೆ.ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ. ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ.
- Haggai 2:7–9 ಹಗ್ಗಾಯ 2:7–9ಎಲ್ಲಾ ಜನಾಂಗಗಳನ್ನು ಅದುರಿಸುತ್ತೇನೆ; ಎಲ್ಲಾ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು ಈ ಆಲಯವನ್ನು ಮಹಿಮೆಯಿಂದ ತುಂಬಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಬೆಳ್ಳಿಯು ನನ್ನದು, ಚಿನ್ನವು ನನ್ನದು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ. ಈ ಆಲಯದ ಮುಂದಿನ ಮಹಿಮೆಯು ಹಿಂದಿನ ಮಹಿಮೆಗಿಂತ ವಿಶೇಷವಾಗಿರುವದು ಎಂದು ಸೈನ್ಯಗಳ ಕರ್ತನು ಹೇಳು ತ್ತಾನೆ; ಈ ಸ್ಥಳದಲ್ಲಿ ಸಮಾಧಾನ ಕೊಡುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Malachi 3:1 ಮಲಾಕಿಯ 3:1ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ.
- John 2:19–21 ಯೋಹಾನನು 2:19–21ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ದೇವಾಲ ಯವನ್ನು ಕೆಡವಿದರೆ ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು ಅಂದನು. ಅದಕ್ಕೆ ಯೆಹೂದ್ಯರು-- ಈ ದೇವಾಲಯವನ್ನು ಕಟ್ಟುವದಕ್ಕೆ ನಾಲ್ವತ್ತಾರು ವರುಷಗಳು ಹಿಡಿದವು; ನೀನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವಿಯೋ ಅಂದರು. ಆದರೆ ಆತನು ತನ್ನ ದೇಹವೆಂಬ ಆಲಯವನ್ನು ಕುರಿತು ಹೇಳಿದನು.
- Matthew 23:17–21 ಮತ್ತಾಯನು 23:17–21ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಚಿನ್ನವೋ ಇಲ್ಲವೆ ಚಿನ್ನವನ್ನು ಪಾವನ ಮಾಡುವ ದೇವಾಲಯವೋ? ಯಾರಾದರೂ ಯಜ್ಞವೇದಿಯ ಮೇಲೆ ಆಣೆಯಿಡುವದಾದರೆ ಅದು ಏನೂ ಅಲ್ಲವೆಂದೂ ಯಾರಾದರೂ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟರೆ ಅವನು ಅಪರಾಧಿ ಯೆಂದೂ ಅನ್ನುತ್ತೀರಿ. ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಕಾಣಿಕೆಯೋ ಇಲ್ಲವೆ ಕಾಣಿಕೆಯನ್ನು ಪಾವನಮಾಡುವ ಯಜ್ಞವೇದಿಯೋ? ಆದದರಿಂದ ಯಜ್ಞವೇದಿಯ ಮೇಲೆ ಆಣೆಯಿಡು ವವನು ಅದರ ಮೇಲೆಯೂ ಅದರಲ್ಲಿರುವಂಥವುಗಳ ಮೇಲೆಯೂ ಆಣೆಯಿಡುವವನಾಗಿದ್ದಾನೆ. ದೇವಾ ಲಯದ ಮೇಲೆ ಆಣೆಯಿಡುವವನು ಅದರ ಮೇಲೆ ಯೂ ಆದರಲ್ಲಿ ವಾಸಿಸುವಾತನ ಮೇಲೆಯೂ ಆಣೆ ಯಿಡುವವನಾಗಿದ್ದಾನೆ.
- Colossians 2:9 ಕೊಲೊಸ್ಸೆಯವರಿಗೆ 2:9ಕ್ರಿಸ್ತನಲ್ಲಿಯೇ ದೈವತ್ವ ಸರ್ವಸಂಪೂರ್ಣತೆಯು ಶಾರೀ ರಕವಾಗಿ ವಾಸಮಾಡುತ್ತದೆ.