Matthew · chapter 13 · verse 1
Matthew 13:1 in Kannada
ಅದೇ ದಿನದಲ್ಲಿ ಯೇಸು ಆ ಮನೆಯಿಂ ಹೊರಟುಹೋಗಿ ಸಮುದ್ರದ ಬಳಿಯಲಿ ಕೂತುಕೊಂಡನು.
Ade dinadalli yesu aa maneyim horatuhogi samudrada baliyali kootukondanu.
Matthew 13:1 in English
- King James Version (KJV)
- The same day went Jesus out of the house, and sat by the sea side.
- World English Bible (WEB)
- On that day Jesus went out of the house and sat by the seaside.
- American Standard Version (ASV)
- On that day went Jesus out of the house, and sat by the sea side.
- Bible in Basic English (BBE)
- On that day Jesus went out of the house and was seated by the seaside.
- Darby Translation (DBY)
- And that [same] day Jesus went out from the house and sat down by the sea.
- Webster's Bible (WBS)
- The same day Jesus went out of the house, and sat by the sea side.
- Young's Literal Translation (YLT)
- And in that day Jesus, having gone forth from the house, was sitting by the sea,
Read in context
- 1ಅದೇ ದಿನದಲ್ಲಿ ಯೇಸು ಆ ಮನೆಯಿಂ ಹೊರಟುಹೋಗಿ ಸಮುದ್ರದ ಬಳಿಯಲಿ ಕೂತುಕೊಂಡನು.
- 2ಆಗ ಜನರ ದೊಡ್ಡ ಸಮೂಹಗಳು ಆತನ ಬಳಿಗೆ ಕೂಡಿ ಬಂದದ್ದರಿಂದ ಆತನು ದೋಣಿ ಯನ್ನು ಹತ್ತಿ ಕೂತುಕೊಂಡನು. ಮತ್ತು ಆ ಸಮೂಹ ದವರೆಲ್ಲಾ ದಡದ ಮೇಲೆ ನಿಂತಿದ್ದರು.
- 3ಆಗ ಆತನು ಅನೇಕ ವಿಷಯಗಳನ್ನು ಅವರಿಗೆ ಸಾಮ್ಯಗಳಲ್ಲಿ ಹೇಳಿದ್ದೇನಂದರೆ--ಇಗೋ, ಬಿತ್ತುವವನು ಬಿತ್ತುವದಕ್ಕೆ ಹೊರಟನು.
Cross references
- Luke 8:4–10 ಲೂಕನು 8:4–10ಆಗ ಪ್ರತಿಯೊಂದು ಪಟ್ಟಣದಿಂದ ಬಹು ಜನರು ಆತನ ಬಳಿಗೆ ಒಟ್ಟಾಗಿ ಸೇರಿ ಬರಲು ಆತನು ಒಂದು ಸಾಮ್ಯದಿಂದ-- ಬಿತ್ತುವವನು ಬೀಜವನ್ನು ಬಿತ್ತುವದಕ್ಕಾಗಿ ಹೊರಟು ಹೋದನು. ಅವನು ಬಿತ್ತಿದಾಗ ಕೆಲವು ದಾರಿಯ ಮಗ್ಗುಲಲ್ಲಿ ಬಿದ್ದು ತುಳಿಯಲ್ಪಟ್ಟವು; ಆಕಾಶದ ಪಕ್ಷಿಗಳು ಅವುಗಳನ್ನು ನುಂಗಿಬಿಟ್ಟವು. ಇದಲ್ಲದೆ ಕೆಲವು ಬಂಡೆಯ ಮೇಲೆ ಬಿದ್ದವು; ಮೊಳೆತ ಕೂಡಲೆ ತ್ಯಾವ ಇಲ್ಲದಿರುವ ಕಾರಣ ಒಣಗಿಹೋದವು. ಕೆಲವು ಮುಳ್ಳುಗಳ ಮಧ್ಯದಲ್ಲಿ ಬಿದ್ದವು; ಆಗ ಮುಳ್ಳುಗಳು ಅವುಗಳೊಂದಿಗೆ ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು. ಕೆಲವು ಒಳ್ಳೇ ನೆಲದ ಮೇಲೆ ಬಿದ್ದವು; ಆಗ ಅವು ಬೆಳೆದು ನೂರರಷ್ಟು ಫಲಕೊಟ್ಟವು. ಇವುಗಳನ್ನು ಆತನು ಹೇಳಿ--ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಎಂದು ಕೂಗಿ ಹೇಳಿದನು. ಆತನ ಶಿಷ್ಯರು ಆತ ನನ್ನು--ಈ ಸಾಮ್ಯವು ಏನಾಗಿರಬಹುದು ಎಂದು ಕೇಳಿದರು. ಅದಕ್ಕೆ ಆತನು--ದೇವರರಾಜ್ಯದ ಮರ್ಮಗಳನ್ನು ತಿಳುಕೊಳ್ಳುವದಕ್ಕೆ ನಿಮಗೆ ಕೊಡ ಲ್ಪಟ್ಟಿದೆ. ಆದರೆ ಉಳಿದವರಿಗೆ ಅವರು ನೋಡಿದರೂ ಕಾಣದಂತೆ ಮತ್ತು ಕೇಳಿದರೂ ಗ್ರಹಿಸದಂತೆ ಸಾಮ್ಯ ಗಳಲ್ಲಿ ಕೊಡಲ್ಪಟ್ಟಿದೆ.
- Matthew 13:1–15 ಮತ್ತಾಯನು 13:1–15ಅದೇ ದಿನದಲ್ಲಿ ಯೇಸು ಆ ಮನೆಯಿಂ ಹೊರಟುಹೋಗಿ ಸಮುದ್ರದ ಬಳಿಯಲಿ ಕೂತುಕೊಂಡನು. ಆಗ ಜನರ ದೊಡ್ಡ ಸಮೂಹಗಳು ಆತನ ಬಳಿಗೆ ಕೂಡಿ ಬಂದದ್ದರಿಂದ ಆತನು ದೋಣಿ ಯನ್ನು ಹತ್ತಿ ಕೂತುಕೊಂಡನು. ಮತ್ತು ಆ ಸಮೂಹ ದವರೆಲ್ಲಾ ದಡದ ಮೇಲೆ ನಿಂತಿದ್ದರು. ಆಗ ಆತನು ಅನೇಕ ವಿಷಯಗಳನ್ನು ಅವರಿಗೆ ಸಾಮ್ಯಗಳಲ್ಲಿ ಹೇಳಿದ್ದೇನಂದರೆ--ಇಗೋ, ಬಿತ್ತುವವನು ಬಿತ್ತುವದಕ್ಕೆ ಹೊರಟನು. ಅವನು ಬಿತ್ತಿದಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು; ಆಗ ಪಕ್ಷಿಗಳು ಬಂದು ಅವು ಗಳನ್ನು ನುಂಗಿಬಿಟ್ಟವು. ಕೆಲವು ಬಹಳ ಮಣ್ಣಿಲ್ಲದ ಬಂಡೆಯ ಸ್ಥಳಗಳಲ್ಲಿ ಬಿದ್ದವು; ಅಲ್ಲಿ ಆಳವಾದ ಮಣ್ಣು ಇಲ್ಲದ್ದರಿಂದ ತಕ್ಷಣವೇ ಅವು ಮೊಳೆತವು; ಆದರೆ ಸೂರ್ಯನು ಮೇಲಕ್ಕೆ ಬಂದಾಗ ಅವು ಬಾಡಿಹೋಗಿ ಅವುಗಳಿಗೆ ಬೇರು ಇಲ್ಲದ್ದರಿಂದ ಒಣಗಿಹೋದವು. ಮತ್ತು ಕೆಲವು ಮುಳ್ಳುಗಳಲ್ಲಿ ಬಿದ್ದವು; ಆಗ ಆ ಮುಳ್ಳುಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು. ಆದರೆ ಬೇರೆಯವುಗಳು ಒಳ್ಳೆಯ ಭೂಮಿಯಲ್ಲಿ ಬಿದ್ದು ಕೆಲವು ನೂರರಷ್ಟು ಕೆಲವು ಅರವತ್ತರಷ್ಟು ಕೆಲವು ಮೂವತ್ತರಷ್ಟು ಫಲಕೊಟ್ಟವು. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು. ತರುವಾಯ ಶಿಷ್ಯರು ಬಂದು ಆತನಿಗೆ--ನೀನು ಸಾಮ್ಯಗಳಲ್ಲಿ ಅವರೊಂದಿಗೆ ಯಾಕೆ ಮಾತನಾಡುತ್ತೀ ಎಂದು ಕೇಳಲು ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ. ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಮತ್ತು ಅವನಿಗೆ ಹೆಚ್ಚು ಸಮೃದ್ಧಿಯಾಗುವದು; ಆದರೆ ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು. ಆದದರಿಂದ ನಾನು ಅವರಿಗೆ ಸಾಮ್ಯಗಳಲ್ಲಿ ಮಾತ ನಾಡುತ್ತೇನೆ; ಯಾಕಂದರೆ ಅವರು ನೋಡಿದರೂ ಕಾಣುವದಿಲ್ಲ ಮತ್ತು ಕೇಳಿದರೂ ತಿಳುಕೊಳ್ಳುವದಿಲ್ಲ; ಇಲ್ಲವೆ ಅವರು ಗ್ರಹಿಸುವದು ಇಲ್ಲ ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನಂದರೆ -- ನೀವು ಕೇಳುತ್ತೀರಿ, ಕೇಳಿದರೂ ತಿಳು ಕೊಳ್ಳುವದೇ ಇಲ್ಲ; ಮತ್ತು ನೋಡುತ್ತೀರಿ, ನೋಡಿ ದರೂ ಗ್ರಹಿಸುವದೇ ಇಲ್ಲ. ಯಾಕಂದರೆ ಇವರು ತಮ್ಮ ಕಣ್ಣುಗಳಿಂದ ನೋಡಿ ತಮ್ಮ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದ ಹಾಗೆಯೂ ನಾನು ಇವರನ್ನು ಸ್ವಸ್ಥಮಾಡದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಮತ್ತು ಇವರ ಕಿವಿಗಳು ಕೇಳದ ಹಾಗೆ ಮಂದವಾದವು; ಇದಲ್ಲದೆ ಇವರು ತಮ್ಮ ಕಣ್ಣುಗ
- Mark 4:1–12 ಮಾರ್ಕನು 4:1–12ಆತನು ತಿರಿಗಿ ಸಮುದ್ರದ ಬಳಿಯಲ್ಲಿ ಬೋಧಿಸಲಾರಂಭಿಸಿದನು; ಮತ್ತು ಜನರ ದೊಡ್ಡ ಸಮೂಹವು ಆತನ ಬಳಿಗೆ ಕೂಡಿಬಂದದ್ದ ರಿಂದ ಆತನು ಸಮುದ್ರದಲ್ಲಿದ್ದ ಒಂದು ದೋಣಿ ಯನ್ನು ಹತ್ತಿ ಕೂತುಕೊಂಡನು; ಆಗ ಜನ ಸಮೂಹವೆಲ್ಲಾ ಸಮುದ್ರದ ಬಳಿಯಲ್ಲಿ ನೆಲದ ಮೇಲೆ ಇದ್ದರು. ಆತನು ಸಾಮ್ಯಗಳಲ್ಲಿ ಅವರಿಗೆ ಅನೇಕ ವಿಷಯಗಳನ್ನು ಕಲಿಸಿ ತನ್ನ ಬೋಧನೆ ಯಲ್ಲಿ ಅವರಿಗೆ ಹೇಳಿದ್ದೇನಂದರೆ-- ಕೇಳಿರಿ, ಇಗೋ, ಬಿತ್ತುವವನು ಬಿತ್ತುವದಕ್ಕೆ ಹೊರಟುಹೋದನು. ಅವನು ಬಿತ್ತಿದಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು. ಆಗ ಆಕಾಶದ ಪಕ್ಷಿಗಳು ಬಂದು ಅವುಗಳನ್ನು ನುಂಗಿಬಿಟ್ಟವು. ಇನ್ನು ಕೆಲವು ಹೆಚ್ಚು ಮಣ್ಣಿಲ್ಲದ ಬಂಡೆಯ ನೆಲದ ಮೇಲೆ ಬಿದ್ದವು; ಅದಕ್ಕೆ ಆಳವಾದ ಮಣ್ಣು ಇಲ್ಲದ್ದರಿಂದ ಅವು ಕೂಡಲೆ ಮೊಳೆತವು; ಆದರೆ ಸೂರ್ಯನು ಮೇಲಕ್ಕೆ ಬಂದಾಗ ಅವು ಬಾಡಿಹೋಗಿ ಬೇರಿಲ್ಲದ ಕಾರಣ ಒಣಗಿಹೋದವು; ಮತ್ತೆ ಕೆಲವು ಮುಳ್ಳು ಗಳಲ್ಲಿ ಬಿದ್ದವು; ಆ ಮುಳ್ಳುಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟದ್ದರಿಂದ ಅವು ಫಲಕೊಡಲಿಲ್ಲ. ಕೆಲವು ಒಳ್ಳೇ ನೆಲದ ಮೇಲೆ ಬಿದ್ದು ಮೊಳೆತು ಬೆಳೆಯುತಾ ಕೆಲವು ಮೂವತ್ತರಷ್ಟು, ಅರವತ್ತರಷ್ಟು, ಕೆಲವು ನೂರರಷ್ಟು ಫಲವನ್ನು ಕೊಟ್ಟವು. ಆತನು ಅವರಿಗೆ ಹೇಳಿದ್ದೇನಂದರೆ--ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು. ಆತನು ಒಬ್ಬನೇ ಇದ್ದಾಗ ಆತನ ಸುತ್ತಲೂ ಇದ್ದವರು ಹನ್ನೆರಡು ಮಂದಿಯೊಂದಿಗೆ ಆ ಸಾಮ್ಯದ ವಿಷಯವಾಗಿ ಆತನನ್ನು ಕೇಳಿದರು. ಅದಕ್ಕೆ ಆತನು ಅವರಿಗೆ--ದೇವರ ರಾಜ್ಯದ ಮರ್ಮವನ್ನು ತಿಳಿದುಕೊಳ್ಳಲು ನಿಮಗೆ ಕೊಡಲ್ಪಟ್ಟಿದೆ. ಆದರೆ ಹೊರಗಿನವರಿಗೆ ಇವೆಲ್ಲವುಗಳು ಸಾಮ್ಯಗಳಿಂದ ಹೇಳಲ್ಪಡುತ್ತವೆ. ಯಾಕಂದರೆ ಅವರು ದೃಷ್ಟಿಯಿ ದ್ದರೂ ನೋಡಿ ತಿಳುಕೊಳ್ಳದಂತೆ ಕೇಳಿದರೂ ಕೇಳಿ ಗ್ರಹಿಸದಂತೆ ಮತ್ತು ಅವರು ತಿರುಗಿಕೊಂಡು ತಮ್ಮ ಪಾಪಗಳಿಂದ ಕ್ಷಮಿಸಲ್ಪಡದಂತೆ ಆಗುವದು.
- Matthew 13:36 ಮತ್ತಾಯನು 13:36ತರುವಾಯ ಯೇಸು ಜನಸಮೂಹವನ್ನು ಕಳು ಹಿಸಿಬಿಟ್ಟು ಮನೆಯೊಳಕ್ಕೆ ಹೋದನು; ಆಗ ಶಿಷ್ಯರು ಆತನ ಬಳಿಗೆ ಬಂದು ಆತನಿಗೆ--ಹೊಲದ ಹಣಜಿಯ ಸಾಮ್ಯವನ್ನು ನಮಗೆ ವಿವರಿಸು ಅಂದರು.