Matthew · chapter 13 · verse 12
Matthew 13:12 in Kannada
ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಮತ್ತು ಅವನಿಗೆ ಹೆಚ್ಚು ಸಮೃದ್ಧಿಯಾಗುವದು; ಆದರೆ ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು.
Yaakandare iddavanige kodalpaduvadu; mattu avanige hechchu samruddhiyaaguvadu; aadare illadavana kadeyinda iddaddoo tegeyalpaduvadu.
Matthew 13:12 in English
- King James Version (KJV)
- For whosoever hath, to him shall be given, and he shall have more abundance: but whosoever hath not, from him shall be taken away even that he hath.
- World English Bible (WEB)
- For whoever has, to him will be given, and he will have abundance; but whoever doesn’t have, from him will be taken away even that which he has.
- American Standard Version (ASV)
- For whosoever hath, to him shall be given, and he shall have abundance: but whosoever hath not, from him shall be taken away even that which he hath.
- Bible in Basic English (BBE)
- Because whoever has, to him will be given, and he will have more; but from him who has not, even what he has will be taken away.
- Darby Translation (DBY)
- for whoever has, to him shall be given, and he shall be caused to be in abundance; but he who has not, even what he has shall be taken away from him.
- Webster's Bible (WBS)
- For whoever hath, to him shall be given, and he shall have more abundance: but whoever hath not, from him shall be taken away even that which he hath.
- Young's Literal Translation (YLT)
- for whoever hath, it shall be given to him, and he shall have overabundance, and whoever hath not, even that which he hath shall be taken from him.
Read in context
- 10ತರುವಾಯ ಶಿಷ್ಯರು ಬಂದು ಆತನಿಗೆ--ನೀನು ಸಾಮ್ಯಗಳಲ್ಲಿ ಅವರೊಂದಿಗೆ ಯಾಕೆ ಮಾತನಾಡುತ್ತೀ ಎಂದು ಕೇಳಲು
- 11ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ.
- 12ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಮತ್ತು ಅವನಿಗೆ ಹೆಚ್ಚು ಸಮೃದ್ಧಿಯಾಗುವದು; ಆದರೆ ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು.
- 13ಆದದರಿಂದ ನಾನು ಅವರಿಗೆ ಸಾಮ್ಯಗಳಲ್ಲಿ ಮಾತ ನಾಡುತ್ತೇನೆ; ಯಾಕಂದರೆ ಅವರು ನೋಡಿದರೂ ಕಾಣುವದಿಲ್ಲ ಮತ್ತು ಕೇಳಿದರೂ ತಿಳುಕೊಳ್ಳುವದಿಲ್ಲ; ಇಲ್ಲವೆ ಅವರು ಗ್ರಹಿಸುವದು ಇಲ್ಲ
- 14ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನಂದರೆ -- ನೀವು ಕೇಳುತ್ತೀರಿ, ಕೇಳಿದರೂ ತಿಳು ಕೊಳ್ಳುವದೇ ಇಲ್ಲ; ಮತ್ತು ನೋಡುತ್ತೀರಿ, ನೋಡಿ ದರೂ ಗ್ರಹಿಸುವದೇ ಇಲ್ಲ.
Cross references
- Matthew 25:29 ಮತ್ತಾಯನು 25:29ಇದ್ದ ಪ್ರತಿ ಯೊಬ್ಬನಿಗೆ ಕೊಡಲ್ಪಡುವದು ಮತ್ತು ಅವನಿಗೆ ಸಮೃದ್ಧಿ ಯಾಗುವದು; ಇಲ್ಲದವನ ಕಡೆಯಿಂದ ಅವನಿಗೆ ಇದ್ದದ್ದೂ ತೆಗೆಯಲ್ಪಡುವದು.
- Mark 4:24–25 ಮಾರ್ಕನು 4:24–25ಆತನು ಅವರಿಗೆ--ನೀವು ಕೇಳುವದರಲ್ಲಿ ಎಚ್ಚರವಾಗಿರ್ರಿ; ನೀವು ಯಾವ ಅಳತೆಯಿಂದ ಅಳೆಯುತ್ತೀರೋ ಅದು ನಿಮಗೂ ಅಳೆಯಲ್ಪಡುವದು; ಮತ್ತು ಕೇಳುವವ ರಾದ ನಿಮಗೆ ಹೆಚ್ಚಾಗಿ ಕೊಡಲ್ಪಡುವದು. ಯಾಕಂ ದರೆ ಯಾವನಿಗೆ ಇದೆಯೋ ಅವನಿಗೆ ಕೊಡಲ್ಪಡುವದು; ಯಾವನಿಗೆ ಇಲ್ಲವೋ ಅವನಿಗೆ ಇದ್ದದ್ದೂ ಅವನಿಂದ ತೆಗೆಯಲ್ಪಡುವದು ಎಂದು ಹೇಳಿದನು.
- Luke 8:18 ಲೂಕನು 8:18ಆದದರಿಂದ ನೀವು ಕೇಳುವವುಗಳ ವಿಷಯದಲ್ಲಿ ಎಚ್ಚರಿಕೆ ತಂದುಕೊಳ್ಳಿರಿ. ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಇಲ್ಲದವನಿಗೆ ತನಗೆ ಉಂಟೆಂದು ನೆನಸುವದನ್ನೂ ಅವನಿಂದ ತೆಗೆಯಲ್ಪ ಡುವದು ಎಂದು ಹೇಳಿದನು.
- Luke 19:24–26 ಲೂಕನು 19:24–26ಅವನು ಹತ್ತಿರ ನಿಂತಿದ್ದವರಿಗೆ--ಇವನ ಕಡೆಯಿಂದ ಆ ಮೊಹರಿಯನ್ನು ತಕ್ಕೊಂಡು ಹತ್ತು ಮೊಹರಿಗಳಿ ದ್ದವನಿಗೆ ಕೊಡಿರಿ ಅಂದನು. (ಆಗ ಅವರು ಅವ ನಿಗೆ--ಒಡೆಯನೇ, ಅವನಿಗೆ ಹತ್ತು ಮೊಹರಿಗಳಿವೆ ಯಲ್ಲಾ ಅಂದರು.) ಆದರೆ ನಾನು ನಿಮಗೆ ಹೇಳು ವದೇನಂದರೆ--ಇದ್ದ ಪ್ರತಿಯೊಬ್ಬನಿಗೆ ಕೊಡಲ್ಪಡು ವದು ಮತ್ತು ಇಲ್ಲದವನ ಕಡೆಯಿಂದ ಅವನಿಗೆ ಇದ್ದದ್ದೂ ಅವನಿಂದ ತೆಗೆಯಲ್ಪಡುವದು.
- John 15:2–5 ಯೋಹಾನನು 15:2–5ನನ್ನಲ್ಲಿ ಫಲಫಲಿಸದ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚಾಗಿ ಫಲಕೊಡುವ ಹಾಗೆ ಅದನ್ನು ಶುದ್ಧಿ ಮಾಡುತ್ತಾನೆ. ನಾನು ನಿಮಗೆ ಹೇಳಿದ ಮಾತಿನ ದೆಸೆಯಿಂದ ನೀವು ಈಗ ಶುದ್ಧರಾಗಿದ್ದೀರಿ. ನನ್ನಲ್ಲಿ ನೆಲೆಗೊಂಡಿರ್ರಿ, ನಾನು ನಿಮ್ಮಲ್ಲಿ ನೆಲೆ ಗೊಂಡಿರುವೆನು. ಕೊಂಬೆಯು ದ್ರಾಕ್ಷೇಯಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲ ಕೊಡಲಾರದೋ ಹಾಗೆಯೇ ನೀವೂ ನನ್ನಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ. ನಾನೇ ದ್ರಾಕ್ಷೇಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿ ಮತ್ತು ನಾನು ಅವನಲ್ಲಿ ನೆಲೆಗೊಂಡಿದ್ದರೆ ಅವನೇ ಬಹಳ ಫಲವನ್ನು ಕೊಡುವನು; ಯಾಕಂದರೆ ನಾನಿಲ್ಲದೆ ನೀವು ಏನೂ ಮಾಡಲಾರಿರಿ.
- Revelation 2:5 ಪ್ರಕಟನೆ 2:5ಆದದ ರಿಂದ ನೀನು ಎಲ್ಲಿಂದ ಬಿದ್ದಿದ್ದೀಯೋ ಅದನ್ನು ನಿನ್ನ ನೆನಪಿಗೆ ತಂದುಕೊಂಡು ಮಾನಸಾಂತರಪಡು. ನೀನು ಮೊದಲು ಮಾಡುತ್ತಿದ್ದ ಕ್ರಿಯೆಗಳನ್ನು ಮಾಡು. ನೀನು ಮಾನಸಾಂತರಪಡದೆ ಹೋದರೆ ನಾನು ನಿನ್ನ ಬಳಿಗೆ ಬೇಗನೆ ಬಂದು ನಿನ್ನ ದೀಪ ಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುವೆನು
- Matthew 21:43 ಮತ್ತಾಯನು 21:43ಆದದರಿಂದ ನಾನು ನಿಮಗೆ ಹೇಳುವದೇನಂದರೆ--ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲ್ಪಡುವದು.
- Isaiah 5:4–7 ಯೆಶಾಯ 5:4–7ನನ್ನ ದ್ರಾಕ್ಷೇ ತೋಟದಲ್ಲಿ ನಾನು ಮಾಡಿದ್ದಕ್ಕಿಂತ ಇನ್ನೂ ಹೆಚ್ಚಾಗಿ ಅದಕ್ಕೆ ಏನು ಮಾಡಬೇಕಾಗಿತ್ತು? ಹೀಗಿರಲು ಅದು ಒಳ್ಳೇ ದ್ರಾಕ್ಷೇ ಫಲವನ್ನು ಫಲಿಸುವದೆಂದು ನಾನು ನಿರೀಕ್ಷಿಸುತ್ತಿರಲು ಅದು ಕಾಡುಹಣ್ಣನ್ನು ಕೊಟ್ಟಿದ್ದು ಯಾಕೆ? ನನ್ನ ದ್ರಾಕ್ಷೇ ತೋಟಕ್ಕೆ ನಾನು ಮಾಡುವದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿ ಯನ್ನು ತೆಗೆದುಹಾಕುವೆನು. ಆಗ ಅದು ಮೇಯಲ್ಪಡು ವದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವದು. ಅದನ್ನು ನಾನು ಹಾಳಾಗಲು ಬಿಡುವೆನು: ಅದನ್ನು ಯಾರೂ ಕುಡಿ ಕತ್ತರಿಸುವದಿಲ್ಲ; ಅಗೆಯುವದೂ ಇಲ್ಲ. ಆದರೆ ಅಲ್ಲಿ ಮುಳ್ಳುಪೊದೆಗಳು ಬೆಳೆಯುವವು; ಅಲ್ಲದೆ ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾ ಪಿಸುವೆನು. ಸೈನ್ಯಗಳ ಕರ್ತನ ದ್ರಾಕ್ಷೇ ತೋಟವು ಇಸ್ರಾಯೇಲಿನ ಮನೆಯೇ, ಯೆಹೂದದ ಜನವೋ, ಆತನ ಇಷ್ಟದ ಗಿಡವೇ. ಆತನು ನ್ಯಾಯವನ್ನು ನಿರೀ ಕ್ಷಿಸಲು, ಇಗೋ, ಹಿಂಸೆಯೇ; ನೀತಿಯನ್ನು ನಿರೀಕ್ಷಿಸಲು ಗೋಳಾಟವೇ ಸಿಕ್ಕೀತು.
- Luke 16:25 ಲೂಕನು 16:25ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ.
- Luke 10:42 ಲೂಕನು 10:42ಆದರೆ ಅವಶ್ಯವಾದದ್ದು ಒಂದೇ; ಮರಿಯಳು ಆ ಒಳ್ಳೇಭಾಗವನ್ನೇ ಆರಿಸಿ ಕೊಂಡಿದ್ದಾಳೆ. ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಅಂದನು.
- Luke 9:26 ಲೂಕನು 9:26ಯಾವನಾದರೂ ನನ್ನ ಮತ್ತು ನನ್ನ ವಾಕ್ಯಗಳ ವಿಷಯದಲ್ಲಿ ನಾಚಿಕೊಳ್ಳುವದಾದರೆ ಮನುಷ್ಯಕುಮಾರನು ತನ್ನ ಮತ್ತು ತನ್ನ ತಂದೆಯ ಪ್ರಭಾವದೊಡನೆಯೂ ಪರಿಶುದ್ಧದೂತರೊಂದಿಗೂ ಬರುವಾಗ ಅವನ ವಿಷಯದಲ್ಲಿ ಆತನು ನಾಚಿಕೊಳ್ಳು ವನು.
- Revelation 3:15–16 ಪ್ರಕಟನೆ 3:15–16ನೀನು ತಣ್ಣಗೂ ಬೆಚ್ಚಗೂ ಅಲ್ಲದಿರುವ ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು; ನೀನು ತಣ್ಣಗಾಗಲಿ ಬೆಚ್ಚಗಾಗಲಿ ಇರಬೇಕೆಂಬದು ನನ್ನ ಇಷ್ಟವಾಗಿತ್ತು. ಆದರೆ ನೀನು ತಣ್ಣಗಾಗಲಿ ಇಲ್ಲವೆ ಬೆಚ್ಚಗಾಗಲಿ ಇಲ್ಲದೆ ಉಗುರು ಬೆಚ್ಚಗಿರುವದರಿಂದ ನಿನ್ನನ್ನು ನಾನು ನನ್ನ ಬಾಯೊಳಗಿಂದ ಕಾರುವೆನು.