Matthew · chapter 13 · verse 20
Matthew 13:20 in Kannada
ಮತ್ತು ಬಂಡೆಯ ಸ್ಥಳಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಅಂಗೀಕರಿಸುತ್ತಾನೆ;
Mattu bandeya sthalagalalli beejavannu angeekarisidavanu ivane; ivanu vaakyavannu kelida koodale santoshadinda adannu angeekarisuttaane;
Matthew 13:20 in English
- King James Version (KJV)
- But he that received the seed into stony places, the same is he that heareth the word, and anon with joy receiveth it;
- World English Bible (WEB)
- What was sown on the rocky places, this is he who hears the word and immediately with joy receives it;
- American Standard Version (ASV)
- And he that was sown upon the rocky places, this is he that heareth the word, and straightway with joy receiveth it;
- Bible in Basic English (BBE)
- And that which went on the stones, this is he who, hearing the word, straight away takes it with joy;
- Darby Translation (DBY)
- But he that is sown on the rocky places — this is he who hears the word and immediately receives it with joy,
- Webster's Bible (WBS)
- But he that received the seed into stony places, the same is he that heareth the word, and immediately with joy receiveth it;
- Young's Literal Translation (YLT)
- 'And that sown on the rocky places, this is he who is hearing the word, and immediately with joy is receiving it,
Read in context
- 18ಆದದರಿಂದ ಬಿತ್ತುವವನ ಸಾಮ್ಯದ ವಿಷಯವಾಗಿ ನೀವು ಕೇಳಿರಿ:
- 19ಯಾವನಾದರೂ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ ಕೆಡುಕನು ಬಂದು ಅವನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಬಿಡು ವನು; ದಾರಿಯ ಮಗ್ಗುಲಲ್ಲಿ ಬೀಜವನ್ನು ಅಂಗೀಕರಿ ಸಿದವನು ಇವನೇ.
- 20ಮತ್ತು ಬಂಡೆಯ ಸ್ಥಳಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಅಂಗೀಕರಿಸುತ್ತಾನೆ;
- 21ಆದರೂ ಅವನಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇರುವನು; ಯಾಕಂದರೆ ವಾಕ್ಯಕ್ಕಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ ತಕ್ಷಣವೇ ಅವನು ಅಭ್ಯಂತರ ಪಡುವನು.
- 22ಮುಳ್ಳುಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಸಹ ಇವನೇ; ಇವನು ವಾಕ್ಯವನ್ನು ಕೇಳುತ್ತಾನೆ; ಆದರೆ ಈ ಪ್ರಪಂಚದ ಚಿಂತೆಯೂ ಐಶ್ವರ್ಯದ ಮೋಸವೂ ವಾಕ್ಯವನ್ನು ಅಡಗಿಸುವ ದರಿಂದ ಅವನು ಫಲ ಕೊಡಲಾರನು.
Cross references
- Ezekiel 33:31–32 ಯೆಹೆಜ್ಕೇಲನು 33:31–32ಬೇರೆ ಜನರು ಬರುವ ಹಾಗೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು; ಅವರು ನಿನ್ನ ವಾಕ್ಯಗಳನ್ನು ಕೇಳುವರು, ಆದರೆ ಅವರು ಅವುಗಳನ್ನು ಮಾಡುವದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು; ಆದರೆ ಅವರ ಹೃದಯವು ಲೋಭತ್ವದ ಕಡೆಗೆ ಹೋಗುವದು. ಇಗೋ, ನೀನು ಅವರಿಗೆ ಇಂಪಾದ ಶಬ್ದವುಳ್ಳಂತ, ತಂತಿವಾದ್ಯಗಳನ್ನು ಚೆನ್ನಾಗಿ ಬಾರಿಸುವಂತ ಒಬ್ಬನ ಮನೋಹರವಾದ ರಾಗದ ಹಾಗಿರುವಿ; ಅವರು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಅವುಗಳನ್ನು ಮಾಡುವದಿಲ್ಲ.ಯಾವಾಗ ಇದು ಬರುತ್ತದೋ ಆಗ ಅವರಿಗೆ ಪ್ರವಾದಿಯು ತಮ್ಮ ಸಂಗಡ ಇದ್ದಾನೆಂದು ತಿಳಿಯುವದು.
- Psalm 106:12–13 ಕೀರ್ತನೆಗಳು 106:12–13ಆಗ ಅವರು ಆತನ ಮಾತುಗಳನ್ನು ನಂಬಿ ಆತನ ಸ್ತೋತ್ರ ವನ್ನು ಹಾಡಿದರು. ಆತನ ಕೆಲಸಗಳನ್ನು ಬೇಗ ಮರೆತುಬಿಟ್ಟು ಆತನ ಆಲೋಚನೆಗೆ ಅವರು ಕಾದುಕೊಳ್ಳದೆ ಇದ್ದರು.
- John 5:35 ಯೋಹಾನನು 5:35ಅವನು ಉರಿದು ಪ್ರಕಾಶಿಸುವ ದೀಪವಾಗಿದ್ದನು; ನೀವು ಸ್ವಲ್ಪಕಾಲ ಅವನ ಬೆಳಕಿನಲ್ಲಿ ಸಂತೋಷಿಸುವದಕ್ಕೆ ಮನಸ್ಸುಳ್ಳವರಾಗಿದ್ದೀರಿ;
- Isaiah 58:2 ಯೆಶಾಯ 58:2ಆದಾಗ್ಯೂ ಅವರು ನನ್ನನ್ನು ಪ್ರತಿನಿತ್ಯವೂ ಹುಡುಕು ತ್ತಾರೆ. ನನ್ನ ಮಾರ್ಗಗಳನ್ನು ತಿಳಿದುಕೊಳ್ಳುವದರಲ್ಲಿ ಸಂತೋಷಪಡುತ್ತಾರೆ. ತನ್ನ ದೇವರ ನ್ಯಾಯವನ್ನು ಬಿಡದೆ ನೀತಿಯನ್ನಾಚರಿಸುವ ಜನಾಂಗದ ಹಾಗೆಯೇ ನೀತಿಯುಳ್ಳ ನ್ಯಾಯಗಳನ್ನು ನನ್ನಿಂದ ಕೇಳುತ್ತಾರೆ. ದೇವರನ್ನು ಸವಿಾಪಿಸುವದರಲ್ಲಿ ಸಂತೋಷಿಸುತ್ತಾರೆ.
- Psalm 78:34–37 ಕೀರ್ತನೆಗಳು 78:34–37ಅವರನ್ನು ಕೊಲ್ಲುವಾಗ ಅವರು ಆತನನ್ನು ಹುಡುಕಿ ತಿರುಗಿಕೊಂಡು ದೇವರನ್ನು ಹೊತ್ತಾರೆ ವಿಚಾರಿಸಿ ದೇವರು ತಮ್ಮ ಬಂಡೆ ಎಂದೂ ಮಹೋನ್ನತ ನಾದ ದೇವರು ತಮ್ಮ ವಿಮೋಚಕನೆಂದೂ ಜ್ಞಾಪಕ ಮಾಡಿಕೊಂಡರು. ಆದಾಗ್ಯೂ ತಮ್ಮ ಬಾಯಿಗಳಿಂದ ಆತನಿಗೆ ಮುಖಸ್ತುತಿ ಮಾಡಿ ತಮ್ಮ ನಾಲಿಗೆಯಿಂದ ಆತನಿಗೆ ಸುಳ್ಳು ಹೇಳಿದರು. ಅವರ ಹೃದಯವು ಆತನ ಸಂಗಡ ಇರಲಿಲ್ಲ ಅವರು ಆತನ ಒಡಂಬಡಿ ಕೆಯಲ್ಲೂ ಸ್ಥಿರವಾಗಿರಲಿಲ್ಲ
- 2 Chronicles 24:2 2 ಪೂರ್ವಕಾಲವೃತ್ತಾಂತ 24:2ಯೆಹೋವಾಷನು ಯಾಜಕನಾದ ಯೆಹೋಯಾ ದನ ಸಮಸ್ತ ದಿವಸಗಳಲ್ಲಿ ಕರ್ತನ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು.
- 2 Chronicles 24:6 2 ಪೂರ್ವಕಾಲವೃತ್ತಾಂತ 24:6ಆಗ ಅರಸನು ಮುಖ್ಯಸ್ಥನಾದ ಯೆಹೋ ಯಾದನನ್ನು ಕರೇಕಳುಹಿಸಿ ಅವನಿಗೆ--ಕರ್ತನ ಸೇವಕ ನಾದ ಮೋಶೆಯೂ ಇಸ್ರಾಯೇಲಿನ ಸಭೆಯೂ ಸಾಕ್ಷಿಯ ಗುಡಾರದ ನಿಮಿತ್ತ ಆಜ್ಞಾಪಿಸಿದ ಕಾಣಿಕೆ ಯನ್ನು ಯೆಹೂದದಿಂದಲೂ ಯೆರೂಸಲೇಮಿ ನಿಂದಲೂ ಬರುವಂತೆ ಮಾಡಲು ನೀನು ಲೇವಿಯ ರನ್ನು ಯಾಕೆ ವಿಚಾರಿಸಲಿಲ್ಲ?
- Galatians 4:14–15 ಗಲಾತ್ಯದವರಿಗೆ 4:14–15ನನ್ನ ಶರೀರದಲ್ಲಿದ್ದ ಶೋಧನೆಯನ್ನು ನೀವು ಹೀನೈಸಲಿಲ್ಲ. ನಿರಾಕರಿಸಲಿಲ್ಲ; ಆದರೆ ನನ್ನನ್ನು ದೇವದೂತನಂತೆಯೂ ಕ್ರಿಸ್ತ ಯೇಸು ವಿನಂತೆಯೂ ಸೇರಿಸಿಕೊಂಡಿರಿ. ಆಗ ನಿಮಗೆ ಆಶೀರ್ವಾದವಾಯಿತೆಂದು ನೀವು ಅಂದುಕೊಂಡಿ ರಲ್ಲಾ; ಅದು ಎಲ್ಲಿ ಹೋಯಿತು? ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನಾದರೂ ಕಿತ್ತು ನನಗೆ ಕೊಡುತ್ತಿದ್ದಿ ರೆಂದು ನಿಮ್ಮನ್ನು ಕುರಿತು ನಾನು ಸಾಕ್ಷಿ ಹೇಳುತ್ತೇನೆ.
- Matthew 13:5–6 ಮತ್ತಾಯನು 13:5–6ಕೆಲವು ಬಹಳ ಮಣ್ಣಿಲ್ಲದ ಬಂಡೆಯ ಸ್ಥಳಗಳಲ್ಲಿ ಬಿದ್ದವು; ಅಲ್ಲಿ ಆಳವಾದ ಮಣ್ಣು ಇಲ್ಲದ್ದರಿಂದ ತಕ್ಷಣವೇ ಅವು ಮೊಳೆತವು; ಆದರೆ ಸೂರ್ಯನು ಮೇಲಕ್ಕೆ ಬಂದಾಗ ಅವು ಬಾಡಿಹೋಗಿ ಅವುಗಳಿಗೆ ಬೇರು ಇಲ್ಲದ್ದರಿಂದ ಒಣಗಿಹೋದವು.
- Mark 6:20 ಮಾರ್ಕನು 6:20ಯಾಕಂದರೆ ಯೋಹಾನನು ನೀತಿವಂತನೂ ಪರಿಶುದ್ಧನೂ ಆದ ಮನುಷ್ಯನೆಂದು ಹೆರೋದನು ತಿಳಿದವನಾಗಿ ಅವನಿಗೆ ಭಯಪಟ್ಟು ಅವನನ್ನು ಕಾಪಾಡುತ್ತಿದ್ದನು; ಮತ್ತು ಅವನು ಹೇಳಿದ್ದನ್ನು ಕೇಳಿ ಆನೇಕ ಕಾರ್ಯಗಳನ್ನು ಮಾಡಿದ್ದಲ್ಲದೆ ಅವನು ಹೇಳುವದನ್ನು ಸಂತೋಷದಿಂದ ಕೇಳಿದನು.
- 1 Samuel 11:13–15 1 ಸಮುವೇಲನು 11:13–15ಆಗ ಸೌಲನು--ಕರ್ತನು ಈ ದಿವಸ ಇಸ್ರಾಯೇಲಿನಲ್ಲಿ ರಕ್ಷಣೆಯನ್ನುಂಟುಮಾಡಿ ದ್ದರಿಂದ ಈ ಹೊತ್ತು ಯಾವನೂ ಕೊಲ್ಲಲ್ಪಡಬಾರದು ಅಂದನು. ಆಗ ಸಮುವೇಲನು ಜನರಿಗೆ--ನಾವು ಗಿಲ್ಗಾಲಿಗೆ ಹೋಗಿ ಅಲ್ಲಿ ರಾಜ್ಯವನ್ನು ನೂತನಪಡಿ ಸೋಣ ಬನ್ನಿರಿ ಅಂದನು.ಹಾಗೆಯೇ ಜನರೆಲ್ಲರು ಗಿಲ್ಗಾಲಿಗೆ ಹೋಗಿ ಆ ಸ್ಥಳದಲ್ಲಿ ಕರ್ತನ ಮುಂದೆ ಸೌಲನನ್ನು ಅರಸನನ್ನಾಗಿ ಮಾಡಿ ಕರ್ತನಿಗೆ ಸಮಾ ಧಾನದ ಬಲಿಗಳನ್ನು ಅರ್ಪಿಸಿದರು. ಅಲ್ಲಿ ಸೌಲನೂ ಸಮಸ್ತ ಇಸ್ರಾಯೇಲ್ಯರೂ ಬಹಳವಾಗಿ ಸಂತೋಷ ಪಟ್ಟರು. ಹಾಗೆಯೇ ಜನರೆಲ್ಲರು ಗಿಲ್ಗಾಲಿಗೆ ಹೋಗಿ ಆ ಸ್ಥಳದಲ್ಲಿ ಕರ್ತನ ಮುಂದೆ ಸೌಲನನ್ನು ಅರಸನನ್ನಾಗಿ ಮಾಡಿ ಕರ್ತನಿಗೆ ಸಮಾ ಧಾನದ ಬಲಿಗಳನ್ನು ಅರ್ಪಿಸಿದರು. ಅಲ್ಲಿ ಸೌಲನೂ ಸಮಸ್ತ ಇಸ್ರಾಯೇಲ್ಯರೂ ಬಹಳವಾಗಿ ಸಂತೋಷ ಪಟ್ಟರು.
- 2 Chronicles 24:14 2 ಪೂರ್ವಕಾಲವೃತ್ತಾಂತ 24:14ಅವರು ಅದನ್ನು ಮುಗಿಸಿದ ಮೇಲೆ ಮಿಕ್ಕ ಹಣವನ್ನು ಅರ ಸನ ಮುಂದೆಯೂ ಯೆಹೋಯಾದನ ಮುಂದೆಯೂ ತಂದರು. ಅದರಿಂದ ಕರ್ತನ ಆಲಯಕ್ಕೋಸ್ಕರ ಬಂಗಾ ರದ ಬೆಳ್ಳಿಪಾತ್ರೆಗಳಾದ ಸೇವೆಯ ಪಾತ್ರೆಗಳೂ ಅರ್ಪಣೆಯ ಪಾತ್ರೆಗಳೂ ಸೌಟುಗಳೂ ಮಾಡಲ್ಪ ಟ್ಟವು. ಯೆಹೋಯಾದನ ಸಮಸ್ತ ದಿವಸಗಳಲ್ಲಿ ಯಾವಾಗಲೂ ಕರ್ತನ ಆಲಯದಲ್ಲಿ ದಹನಬಲಿ ಗಳನ್ನು ಅರ್ಪಿಸಿದರು.