Matthew · chapter 13 · verse 21
Matthew 13:21 in Kannada
ಆದರೂ ಅವನಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇರುವನು; ಯಾಕಂದರೆ ವಾಕ್ಯಕ್ಕಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ ತಕ್ಷಣವೇ ಅವನು ಅಭ್ಯಂತರ ಪಡುವನು.
Aadaroo avanalli berillada kaarana svalpakaala maatra iruvanu; yaakandare vaakyakkaagi sankata illave hinse bandaaga takshanave avanu abhyantara paduvanu.
Matthew 13:21 in English
- King James Version (KJV)
- Yet hath he not root in himself, but dureth for a while: for when tribulation or persecution ariseth because of the word, by and by he is offended.
- World English Bible (WEB)
- yet he has no root in himself, but endures for a while. When oppression or persecution arises because of the word, immediately he stumbles.
- American Standard Version (ASV)
- yet hath he not root in himself, but endureth for a while; and when tribulation or persecution ariseth because of the word, straightway he stumbleth.
- Bible in Basic English (BBE)
- But having no root in himself, he goes on for a time; and when trouble comes or pain, because of the word, he quickly becomes full of doubts.
- Darby Translation (DBY)
- but has no root in himself, but is for a time only; and when tribulation or persecution happens on account of the word, he is immediately offended.
- Webster's Bible (WBS)
- Yet he hath not root in himself, but endureth for a while: for when tribulation or persecution ariseth because of the word, forthwith he is offended.
- Young's Literal Translation (YLT)
- and he hath not root in himself, but is temporary, and persecution or tribulation having happened because of the word, immediately he is stumbled.
Read in context
- 19ಯಾವನಾದರೂ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ ಕೆಡುಕನು ಬಂದು ಅವನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಬಿಡು ವನು; ದಾರಿಯ ಮಗ್ಗುಲಲ್ಲಿ ಬೀಜವನ್ನು ಅಂಗೀಕರಿ ಸಿದವನು ಇವನೇ.
- 20ಮತ್ತು ಬಂಡೆಯ ಸ್ಥಳಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಅಂಗೀಕರಿಸುತ್ತಾನೆ;
- 21ಆದರೂ ಅವನಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇರುವನು; ಯಾಕಂದರೆ ವಾಕ್ಯಕ್ಕಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ ತಕ್ಷಣವೇ ಅವನು ಅಭ್ಯಂತರ ಪಡುವನು.
- 22ಮುಳ್ಳುಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಸಹ ಇವನೇ; ಇವನು ವಾಕ್ಯವನ್ನು ಕೇಳುತ್ತಾನೆ; ಆದರೆ ಈ ಪ್ರಪಂಚದ ಚಿಂತೆಯೂ ಐಶ್ವರ್ಯದ ಮೋಸವೂ ವಾಕ್ಯವನ್ನು ಅಡಗಿಸುವ ದರಿಂದ ಅವನು ಫಲ ಕೊಡಲಾರನು.
- 23ಆದರೆ ಒಳ್ಳೇ ಭೂಮಿಯಲ್ಲಿ ಬೀಜ ವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯ ವನ್ನು ಕೇಳಿ ಅದನು ಗ್ರಹಿಸುತ್ತಾನೆ; ಇವನೇ ಫಲಫಲಿ ಸುವವನಾಗಿ ನೂರರಷ್ಟು ಅರವತ್ತರಷ್ಟು ಮತ್ತು ಮೂವತ್ತರಷ್ಟು ಫಲವನ್ನು ಕೊಡುತ್ತಾನೆ.
Cross references
- Matthew 11:6 ಮತ್ತಾಯನು 11:6ನನ್ನ ವಿಷಯವಾಗಿ ಸಂಶಯಪಡದವನೇ ಧನ್ಯನು ಅಂದನು.
- 2 Peter 1:8–9 2 ಪೇತ್ರನು 1:8–9ಇವು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪರಿಜ್ಞಾನದಲ್ಲಿ ನಿಮ್ಮನ್ನು ಬಂಜೆಯರೂ ನಿಷ್ಪಲರೂ ಆಗದಂತೆ ಮಾಡುತ್ತವೆ. ಇವುಗಳಿಲ್ಲದವನು ಕುರುಡನಾಗಿದ್ದಾನೆ; ಅವನು ದೂರದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಣ ಪಾಪಗಳಿಂದ ಶುದ್ಧನಾದದ್ದನ್ನು ಮರೆತುಬಿಟ್ಟಿದ್ದಾನೆ.
- Ephesians 3:17 ಎಫೆಸದವರಿಗೆ 3:17ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ನಂಬಿಕೆಯ ಮೂಲಕ ವಾಸಿಸುವಂತೆಯೂ ನೀವು ಪ್ರೀತಿಯಲಿ ಬೇರೂರಿ ನೆಲೆಗೊಂಡು ನಿಂತು
- Hosea 6:4 ಹೋಶೇಯ 6:4ಓ ಎಫ್ರಾಯಾಮೇ, ನಿನಗೆ ನಾನು ಏನು ಮಾಡಲಿ? ಓ ಯೆಹೂದವೇ, ನಿನಗೆ ನಾನು ಏನು ಮಾಡಲಿ? ನಿಮ್ಮ ಒಳ್ಳೇತನವು ಹೊತ್ತಾ ರೆಯ ಮೇಘದ ಹಾಗೆಯೂ ಮುಂಜಾನೆಯ ಮಂಜಿ ನಂತೆಯೂ ಹೋಗಿಬಿಡುತ್ತದೆ.
- Proverbs 12:3 ಜ್ಞಾನೋಕ್ತಿಗಳು 12:3ಯಾವನೂ ದುಷ್ಟತನದಿಂದ ಸ್ಥಿರವಾಗುವದಿಲ್ಲ; ನೀತಿವಂತರ ಬೇರು ಕದಲುವದಿಲ್ಲ.
- Job 19:28 ಯೋಬನು 19:28ನೀವು ಹೇಳುವಿರು--ಅವನನ್ನು ಯಾಕೆ ಹಿಂಸಿಸು ತ್ತೇವೆ? ಮಾತಿನ ಬೇರು ನನ್ನಲ್ಲಿ ಸಿಕ್ಕುವದು.ಕತ್ತಿಯ ಮುಂದೆ ಅಂಜಿಕೊಳ್ಳಿರಿ; ನ್ಯಾಯತೀರ್ವಿಕೆ ಉಂಟೆಂದು ನೀವು ತಿಳುಕೊಳ್ಳುವ ಹಾಗೆ ಕೋಪವು ಕತ್ತಿಯ ದಂಡನೆಗಳನ್ನು ಬರಮಾಡುತ್ತದೆ.
- John 15:5–7 ಯೋಹಾನನು 15:5–7ನಾನೇ ದ್ರಾಕ್ಷೇಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿ ಮತ್ತು ನಾನು ಅವನಲ್ಲಿ ನೆಲೆಗೊಂಡಿದ್ದರೆ ಅವನೇ ಬಹಳ ಫಲವನ್ನು ಕೊಡುವನು; ಯಾಕಂದರೆ ನಾನಿಲ್ಲದೆ ನೀವು ಏನೂ ಮಾಡಲಾರಿರಿ. ಒಬ್ಬನು ನನ್ನಲ್ಲಿ ನೆಲೆಗೊಂಡಿರದಿದ್ದರೆ ಅವನು ಕೊಂಬೆಯಂತೆ ಬಿಸಾಡಲ್ಪಟ್ಟು ಒಣಗಿ ಹೋಗುವದರಿಂದ ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು; ಅವು ಸುಡಲ್ಪಡುವವು. ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನಿಮಗೆ ಬೇಕಾದದ್ದನ್ನು ಬೇಡಿಕೊಳ್ಳಿರಿ, ನಿಮಗೆ ಅದು ದೊರೆ ಯುವದು.
- Mark 13:12–13 ಮಾರ್ಕನು 13:12–13ಆಗ ಸಹೋದರನು ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮಕ್ಕಳು ತಮ್ಮ ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವ ರನ್ನು ಕೊಲ್ಲಿಸುವದಕ್ಕೆ ಕಾರಣರಾಗುವರು. ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ಹಗೆ ಮಾಡು ವರು. ಆದರೆ ಕಡೇವರೆಗೂ ತಾಳುವವನೇ ರಕ್ಷಣೆ ಹೊಂದುವನು.
- John 12:25–26 ಯೋಹಾನನು 12:25–26ತನ್ನ ಪ್ರಾಣ ವನ್ನು ಪ್ರೀತಿಸುವವನು ಅದನ್ನು ಕಳಕೊಳ್ಳುವನು; ಈ ಲೋಕದಲ್ಲಿ ತನ್ನ ಪ್ರಾಣವನ್ನು ಹಗೆಮಾಡುವವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು. ಯಾವನಾದರೂ ನನ್ನನ್ನು ಸೇವಿಸುವವನಾದರೆ ಅವನು ನನ್ನನ್ನು ಹಿಂಬಾಲಿಸಲಿ; ನಾನು ಇರುವಲ್ಲಿಯೇ ನನ್ನ ಸೇವಕನೂ ಇರುವನು; ಯಾವನಾದರೂ ನನ್ನನ್ನು ಸೇವಿಸುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.
- Psalm 36:3 ಕೀರ್ತನೆಗಳು 36:3ಅವನ ಬಾಯಿಯ ಮಾತುಗಳು ಅಕ್ರಮವೂ ಮೋಸವೂ ಆಗಿವೆ; ಬುದ್ಧಿ ಯಿಂದ ನಡೆಯುವದನ್ನೂ ಒಳ್ಳೇದು ಮಾಡುವದನ್ನೂ ಬಿಟ್ಟಿದ್ದಾನೆ.
- Job 27:8–10 ಯೋಬನು 27:8–10ದೇವರು ಕಪಟಿಯ ಪ್ರಾಣವನ್ನು ತಕ್ಕೊಂಡರೆ ಅವನು ಲಾಭ ಮಾಡುವದರಲ್ಲಿ ನಿರೀಕ್ಷೆ ಏನು? ಅವನ ಮೇಲೆ ಇಕ್ಕಟ್ಟು ಬಂದರೆ ಅವನ ಮೊರೆಯನ್ನು ದೇವರು ಕೇಳುವನೋ? ಇಲ್ಲವೆ ಸರ್ವಶಕ್ತನಲ್ಲಿ ಆನಂದವಾಗಿರುವನೋ? ಸರ್ವಕಾಲದಲ್ಲಿ ದೇವರನ್ನು ಕರೆಯುವನೋ?
- John 6:61–65 ಯೋಹಾನನು 6:61–65ತನ್ನ ಶಿಷ್ಯರೂ ಇದಕ್ಕೆ ಗುಣು ಗುಟ್ಟುತ್ತಾರೆಂದು ಯೇಸು ತನ್ನಲ್ಲಿ ತಿಳಿದುಕೊಂಡು ಅವರಿಗೆ--ಇದು ನಿಮಗೆ ಅಭ್ಯಂತರವಾಯಿತೋ? ಹಾಗಾದರೆ ಮನುಷ್ಯಕುಮಾರನು ತಾನು ಮೊದಲು ಇದ್ದಲ್ಲಿಗೆ ಏರಿಹೋಗುವದನ್ನು ನೀವು ನೋಡಿದರೆ ಏನನ್ನುವಿರಿ? ಬದುಕಿಸುವಂಥದ್ದು ಆತ್ಮವೇ; ಮಾಂಸವು ಯಾವದಕ್ಕೂ ಪ್ರಯೋಜನವಾಗುವದಿಲ್ಲ; ನಾನು ನಿಮಗೆ ಹೇಳುವ ಮಾತುಗಳೇ ಆತ್ಮವಾಗಿಯೂ ಜೀವವಾಗಿಯೂ ಇವೆ. ಆದರೆ ನಂಬದವರು ಕೆಲವರು ನಿಮ್ಮಲ್ಲಿ ಇದ್ದಾರೆ ಅಂದನು. ಯಾಕಂದರೆ ನಂಬದವರು ಯಾರೆಂದೂ ತನ್ನನ್ನು ಹಿಡುಕೊಡು ವವನು ಯಾರೆಂದೂ ಮೊದಲಿನಿಂದಲೇ ಯೇಸು ತಿಳಿದಿದ್ದನು. ಆತನು--ನನ್ನ ತಂದೆಯಿಂದ ಒಬ್ಬನಿಗೆ ಕೊಡಲ್ಪಟ್ಟ ಹೊರತು ಯಾವನೂ ನನ್ನ ಬಳಿಗೆ ಬರ ಲಾರನು; ಇದಕ್ಕೋಸ್ಕರವೇ ನಾನು ನಿಮಗೆ ಹೇಳಿದೆನು ಅಂದನು.