Matthew · chapter 13 · verse 22
Matthew 13:22 in Kannada
ಮುಳ್ಳುಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಸಹ ಇವನೇ; ಇವನು ವಾಕ್ಯವನ್ನು ಕೇಳುತ್ತಾನೆ; ಆದರೆ ಈ ಪ್ರಪಂಚದ ಚಿಂತೆಯೂ ಐಶ್ವರ್ಯದ ಮೋಸವೂ ವಾಕ್ಯವನ್ನು ಅಡಗಿಸುವ ದರಿಂದ ಅವನು ಫಲ ಕೊಡಲಾರನು.
Mullugalalli beejavannu angeekarisidavanu saha ivane; ivanu vaakyavannu keluttaane; aadare ee prapanchada chinteyoo aishvaryada mosavoo vaakyavannu adagisuva darinda avanu phala kodalaaranu.
Matthew 13:22 in English
- King James Version (KJV)
- He also that received seed among the thorns is he that heareth the word; and the care of this world, and the deceitfulness of riches, choke the word, and he becometh unfruitful.
- World English Bible (WEB)
- What was sown among the thorns, this is he who hears the word, but the cares of this age and the deceitfulness of riches choke the word, and he becomes unfruitful.
- American Standard Version (ASV)
- And he that was sown among the thorns, this is he that heareth the word; and the care of the world, and the deceitfulness of riches, choke the word, and he becometh unfruitful.
- Bible in Basic English (BBE)
- And that which was dropped among the thorns, this is he who has the word; and the cares of this life, and the deceits of wealth, put a stop to the growth of the word and it gives no fruit.
- Darby Translation (DBY)
- And he that is sown among the thorns — this is he who hears the word, and the anxious care of this life, and the deceit of riches choke the word, and he becomes unfruitful.
- Webster's Bible (WBS)
- He also that received seed among the thorns is he that heareth the word; and the care of this world, and the deceitfulness of riches choke the word, and he becometh unfruitful.
- Young's Literal Translation (YLT)
- 'And that sown toward the thorns, this is he who is hearing the word, and the anxiety of this age, and the deceitfulness of the riches, do choke the word, and it becometh unfruitful.
Read in context
- 20ಮತ್ತು ಬಂಡೆಯ ಸ್ಥಳಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಅಂಗೀಕರಿಸುತ್ತಾನೆ;
- 21ಆದರೂ ಅವನಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇರುವನು; ಯಾಕಂದರೆ ವಾಕ್ಯಕ್ಕಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ ತಕ್ಷಣವೇ ಅವನು ಅಭ್ಯಂತರ ಪಡುವನು.
- 22ಮುಳ್ಳುಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಸಹ ಇವನೇ; ಇವನು ವಾಕ್ಯವನ್ನು ಕೇಳುತ್ತಾನೆ; ಆದರೆ ಈ ಪ್ರಪಂಚದ ಚಿಂತೆಯೂ ಐಶ್ವರ್ಯದ ಮೋಸವೂ ವಾಕ್ಯವನ್ನು ಅಡಗಿಸುವ ದರಿಂದ ಅವನು ಫಲ ಕೊಡಲಾರನು.
- 23ಆದರೆ ಒಳ್ಳೇ ಭೂಮಿಯಲ್ಲಿ ಬೀಜ ವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯ ವನ್ನು ಕೇಳಿ ಅದನು ಗ್ರಹಿಸುತ್ತಾನೆ; ಇವನೇ ಫಲಫಲಿ ಸುವವನಾಗಿ ನೂರರಷ್ಟು ಅರವತ್ತರಷ್ಟು ಮತ್ತು ಮೂವತ್ತರಷ್ಟು ಫಲವನ್ನು ಕೊಡುತ್ತಾನೆ.
- 24ಆತನು ಮತ್ತೊಂದು ಸಾಮ್ಯವನ್ನು ಹೇಳಿದ್ದೇ ನಂದರೆ--ಪರಲೋಕ ರಾಜ್ಯವು ಒಳ್ಳೇ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ್ದ ಒಬ್ಬ ಮನುಷ್ಯನಿಗೆ ಹೋಲಿಕೆ ಯಾಗಿದೆ.
Cross references
- 1 Timothy 6:17 1 ತಿಮೊಥೆಯನಿಗೆ 6:17ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ
- Luke 8:14 ಲೂಕನು 8:14ಮುಳ್ಳುಗಳ ಮಧ್ಯದಲ್ಲಿ ಬಿದ್ದ ಬೀಜದವರು ಯಾರಂದರೆ ಅವರು ಕೇಳಿದ ಮೇಲೆ ಮುಂದರಿದು ಈ ಜೀವನದ ಚಿಂತೆಗಳಿಂದಲೂ ಐಶ್ವರ್ಯಗಳಿಂದಲೂ ಭೋಗಗಳಿಂದಲೂ ಅಡಗಿಸ ಲ್ಪಟ್ಟು ಪರಿಪೂರ್ಣವಾಗಿ ಫಲಿಸದವರು.
- 1 Timothy 6:9–10 1 ತಿಮೊಥೆಯನಿಗೆ 6:9–10ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ. ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ನಂಬಿಕೆಯಿಂದ ತಪ್ಪಿಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಾವೇ ತಿವಿಸಿ ಕೊಳ್ಳುತ್ತಾರೆ.
- Mark 4:18–19 ಮಾರ್ಕನು 4:18–19ಮುಳ್ಳು ಗಿಡಗಳಲ್ಲಿ ಬಿತ್ತಲ್ಪಟ್ಟವರು ಇವರೇ; ಇಂಥವರು ವಾಕ್ಯವನ್ನು ಕೇಳಿದಾಗ ಈ ಲೋಕದ ಚಿಂತೆಗಳೂ ಐಶ್ವರ್ಯದ ಮೋಸವೂ ಇತರ ವಿಷಯಗಳ ಆಶೆಗಳೂ ಒಳಗೆ ಸೇರಿ ವಾಕ್ಯವನ್ನು ಅಡಗಿಸುವದರಿಂದ ಅದು ನಿಷ್ಫಲವಾಗುವದು.
- Luke 12:15 ಲೂಕನು 12:15ಇದಲ್ಲದೆ ಆತನು ಅವರಿಗೆ--ಜಾಗ್ರತೆ ಯಾಗಿದ್ದು ಲೋಭಕ್ಕೆ ಎಚ್ಚರಿಕೆಯಾಗಿರ್ರಿ; ಯಾಕಂದರೆ ಒಬ್ಬ ಮನುಷ್ಯನಿಗೆ ಸಮೃದ್ಧಿಯಾದ ಆಸ್ತಿಯು ಅವನಿಗೆ ಜೀವಾಧಾರವಲ್ಲ ಅಂದನು.
- 2 Timothy 4:10 2 ತಿಮೊಥೆಯನಿಗೆ 4:10ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು;
- Ecclesiastes 5:10–11 ಪ್ರಸಂಗಿ 5:10–11ಬೆಳ್ಳಿಯನ್ನು ಪ್ರೀತಿಸುವವನು ಬೆಳ್ಳಿಯಿಂದ ತೃಪ್ತ ನಾಗನು; ಸಮೃದ್ಧಿಯನ್ನು ಪ್ರೀತಿಸುವವನು ಅಭಿವೃದ್ಧಿ ಯಿಂದ ತೃಪ್ತನಾಗಲಾರನು; ಇದೂ ಕೂಡ ವ್ಯರ್ಥವೇ. ಸೊತ್ತುಗಳು ಹೆಚ್ಚಿದರೆ ಅದನ್ನು ತಿನ್ನುವವರು ಹೆಚ್ಚಾ ಗುವರು; ಅವುಗಳನ್ನು ತಮ್ಮ ಕಣ್ಣುಗಳಿಂದ ನೋಡು ವದೇ ಹೊರತು ಅವುಗಳ ಸ್ವಂತದವರಿಗೆ ಯಾವ ಪ್ರಯೋಜನವಿದೆ?
- Psalm 52:7 ಕೀರ್ತನೆಗಳು 52:7ಇಗೋ, ದೇವರನ್ನು ತನ್ನ ಬಲವಾಗಿ ಆಶ್ರಯಿಸದೆ ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ಕೆಟ್ಟತನದಲ್ಲಿ ಬಲಗೊಂಡ ಮನುಷ್ಯನು ಇವನೇ.
- 1 John 2:15–16 1 ಯೋಹಾನನು 2:15–16ಲೋಕವನ್ನಾಗಲಿ ಲೋಕದಲ್ಲಿರುವವುಗಳ ನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕ ವನ್ನು ಪ್ರೀತಿಸಿದರೆ ತಂದೆಯ ಪ್ರೀತಿಯು ಅವನಲ್ಲಿಲ್ಲ. ಲೋಕದಲ್ಲಿರುವವುಗಳೆಲ್ಲವು ಅಂದರೆ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಗೆ ಸಂಬಂಧ ಪಟ್ಟವುಗಳಲ್ಲ, ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.
- Matthew 6:24–25 ಮತ್ತಾಯನು 6:24–25ಯಾವ ಮನುಷ್ಯನೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಇನ್ನೊಬ್ಬನನ್ನು ಪ್ರೀತಿಮಾಡುವನು; ಇಲ್ಲವಾದರೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬ ನನ್ನು ಅಸಡ್ಡೆ ಮಾಡುವನು. ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ. ಆದಕಾರಣ ನಾನು ನಿಮಗೆ ಹೇಳುವದೇ ನಂದರೆ--ನಿಮ್ಮ ಪ್ರಾಣಕ್ಕೋಸ್ಕರ ನೀವು ಏನು ತಿನ್ನಬೇಕು ಮತ್ತು ಏನು ಕುಡಿಯಬೇಕು ಎಂಬದರ ವಿಷಯಕ್ಕಾಗಲೀ ಇಲ್ಲವೆ ನಿಮ್ಮ ಶರೀರಕ್ಕೆ ನೀವು ಏನು ಹೊದ್ದುಕೊಳ್ಳಬೇಕೆಂತಾಗಲೀ ಚಿಂತೆ ಮಾಡ ಬೇಡಿರಿ; ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ಶರೀರವೂ ಹೆ
- Luke 12:29–30 ಲೂಕನು 12:29–30ನೀವು ಏನು ತಿನ್ನಬೇಕು ಇಲ್ಲವೆ ನೀವು ಏನು ಕುಡಿಯಬೇಕು ಎಂದು ತವಕಪಡಬೇಡಿರಿ; ನೀವು ಅನುಮಾನದ ಮನಸ್ಸಿನವ ರಾಗಿರಬೇಡಿರಿ. ಯಾಕಂದರೆ ಇವೆಲ್ಲವುಗಳಿಗಾಗಿ ಲೋಕದ ಜನಾಂಗಗಳು ಬಹಳವಾಗಿ ತವಕಪಡುತ್ತಾರೆ; ಆದರೆ ಇವುಗಳು ನಿಮಗೆ ಅಗತ್ಯವೆಂದು ನಿಮ್ಮ ತಂದೆಯು ಬಲ್ಲನು.
- Luke 12:21 ಲೂಕನು 12:21ತನಗೋಸ್ಕರ ಸಂಪತ್ತನ್ನು ಕೂಡಿಸಿಟ್ಟು ಕೊಂಡು ದೇವರ ಕಡೆಗೆ ಐಶ್ವರ್ಯವಂತನಾಗ ದಿರುವವನು ಇವನಂತೆಯೇ ಇರುವನು ಅಂದನು.