Matthew · chapter 13 · verse 28
Matthew 13:28 in Kannada
ಅವನು ಅವರಿಗೆ--ಒಬ್ಬ ವೈರಿ ಯು ಇದನ್ನು ಮಾಡಿದ್ದಾನೆ ಅಂದನು. ಆದರೆ ಸೇವಕರು ಅವನಿಗೆ--ಹಾಗಾದರೆ ನಾವು ಹೋಗಿ ಅವುಗಳನ್ನು ಕೂಡಿಸುವಂತೆ ನೀನು ಇಷ್ಟಪಡುತ್ತೀಯೋ ಎಂದು ಕೇಳಿದರು.
Avanu avarige--obba vairi yu idannu maadiddaane andanu. Aadare sevakaru avanige--haagaadare naavu hogi avugalannu koodisuvante neenu ishtapadutteeyo endu kelidaru.
Matthew 13:28 in English
- King James Version (KJV)
- He said unto them, An enemy hath done this. The servants said unto him, Wilt thou then that we go and gather them up?
- World English Bible (WEB)
- “He said to them, ‘An enemy has done this.’ “The servants asked him, ‘Do you want us to go and gather them up?’
- American Standard Version (ASV)
- And he said unto them, An enemy hath done this. And the servants say unto him, Wilt thou then that we go and gather them up?
- Bible in Basic English (BBE)
- And he said, Someone has done this in hate. And the servants say to him, Is it your pleasure that we go and take them up?
- Darby Translation (DBY)
- And he said to them, A man [that is] an enemy has done this. And the bondmen said to him, Wilt thou then that we should go and gather it [up]?
- Webster's Bible (WBS)
- He said to them, An enemy hath done this. The servants said to him, Wilt thou then that we go and gather them?
- Young's Literal Translation (YLT)
- And he saith to them, A man, an enemy, did this; and the servants said to him, Wilt thou, then, [that] having gone away we may gather it up?
Read in context
- 26ಅದು ಮೊಳೆತು ಫಲಕೊಟ್ಟಾಗ ಹಣಜಿ ಸಹ ಕಾಣಿಸಿ ಕೊಂಡಿತು.
- 27ಆದದರಿಂದ ಮನೇಯಜಮಾನನ ಸೇವಕರು ಅವನ ಬಳಿಗೆ ಬಂದು ಅವನಿಗೆ--ಅಯ್ಯಾ, ನೀನು ನಿನ್ನ ಹೊಲದಲ್ಲಿ ಒಳ್ಳೇ ಬೀಜವನ್ನು ಬಿತ್ತಿದಿ ಯಲ್ಲಾ? ಹಾಗಾದರೆ ಈ ಹಣಜಿಯು ಎಲ್ಲಿಂದ ಬಂತು ಎಂದು ಕೇಳಿದರು.
- 28ಅವನು ಅವರಿಗೆ--ಒಬ್ಬ ವೈರಿ ಯು ಇದನ್ನು ಮಾಡಿದ್ದಾನೆ ಅಂದನು. ಆದರೆ ಸೇವಕರು ಅವನಿಗೆ--ಹಾಗಾದರೆ ನಾವು ಹೋಗಿ ಅವುಗಳನ್ನು ಕೂಡಿಸುವಂತೆ ನೀನು ಇಷ್ಟಪಡುತ್ತೀಯೋ ಎಂದು ಕೇಳಿದರು.
- 29ಆದರೆ ಅವನು--ಬೇಡ, ನೀವು ಹಣಜಿಯನ್ನು ಕೂಡಿಸುವಾಗ ಅವುಗಳೊಂದಿಗೆ ಗೋದಿಯನ್ನೂ ಕಿತ್ತೀರಿ.
- 30ಸುಗ್ಗೀಕಾಲದ ವರೆಗೆ ಎರಡೂ ಜೊತೆಯಲ್ಲಿ ಬೆಳೆಯಲಿ; ಸುಗ್ಗೀಕಾಲದಲ್ಲಿ ನಾನು ಕೊಯ್ಯುವವರಿಗೆ--ಮೊದಲು ಹಣಜಿಯನ್ನು ಕೂಡಿಸಿ ಅದನ್ನು ಸುಡುವದಕ್ಕೆ ಹೊರೆ ಕಟ್ಟಿರಿ; ಆದರೆ ಗೋದಿಯನ್ನು ನನ್ನ ಕಣಜದಲ್ಲಿ ಕೂಡಿಸಿರಿ ಎಂದು ಹೇಳುವೆನು ಅಂದನು.
Cross references
- 1 Corinthians 5:3–7 1 ಕೊರಿಂಥದವರಿಗೆ 5:3–7ನಾನಂತೂ ದೇಹದಿಂ ದೂರವಾಗಿದ್ದರೂ ಆತ್ಮದಿಂದ ಹತ್ತಿರದಲ್ಲಿದ್ದು ಇಂಥ ಕಾರ್ಯಮಾಡಿದವನನ್ನು ಕುರಿತು ನಿಜವಾಗಿ ಆಗಲೇ ಹತ್ತಿರವಿದ್ದವನಂತೆ ತೀರ್ಪುಮಾಡಿದ್ದೇನೆ. ನೀವೂ ನನ್ನಾತ್ಮವೂ ಕರ್ತನಾದ ಯೇಸುವಿನ ಸಾಮರ್ಥ್ಯ ಸಹಿತ ಒಟ್ಟುಗೂಡಿ ಬಂದಿರಲಾಗಿ ಕರ್ತನಾದ ಯೇಸುಕ್ರಿಸ್ತನ ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವದಕ್ಕಾಗಿ ಅವನ ಶರೀರವು ನಾಶವಾಗ ಬೇಕೆಂದು ನಮ್ಮ ಕರ್ತನಾದ ಯೇಸುವಿನ ಹೆಸರಿನಲ್ಲಿ ಅವನನ್ನು ಸೈತಾನನಿಗೆ ಒಪ್ಪಿಸಿಕೊಡಬೇಕೆಂಬದೇ. ನೀವು ಹಿಗ್ಗುವದು ಒಳ್ಳೇದಲ್ಲ. ಸ್ವಲ್ಪ ಹುಳಿಯು ಕಣಿಕವನ್ನೆಲ್ಲಾ ಹುಳಿ ಮಾಡುತ್ತದೆಂಬದು ನಿಮಗೆ ತಿಳಿಯದೋ? ಆದದರಿಂದ ನೀವು ಹುಳಿ ಇಲ್ಲದ ವರಾದ ಕಾರಣ ಹೊಸ ಕಣಿಕವಾಗಿರುವಂತೆ ಆ ಹಳೇ ಹುಳಿಯನ್ನು ತೆಗೆದುಹಾಕಿರಿ. ಯಾಕಂದರೆ ನಮ್ಮ ಪಸ್ಕವಾಗಿರುವ ಕ್ರಿಸ್ತನೇ ನಮಗೋಸ್ಕರ ಯಜ್ಞಾರ್ಪಿತ ನಾಗಿದ್ದಾನೆ.
- 1 Thessalonians 5:14 1 ಥೆಸಲೊನೀಕದವರಿಗೆ 5:14ಸಹೋದರರೇ, ಅಕ್ರಮವಾಗಿ ನಡೆಯುವವ ರನ್ನು ಎಚ್ಚರಿಸಿರಿ, ಮನಗುಂದಿದವರನ್ನಾದರಿಸಿರಿ. ಬಲ ಹೀನರಿಗೆ ಆಧಾರವಾಗಿರ್ರಿ. ಎಲ್ಲರಲ್ಲಿಯೂ ತಾಳ್ಮೆಯುಳ್ಳ ವರಾಗಿರ್ರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.
- Luke 9:49–54 ಲೂಕನು 9:49–54ಆಗ ಯೋಹಾನನು--ಬೋಧಕನೇ, ಒಬ್ಬನು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವದನ್ನು ನಾವು ನೋಡಿ ಅವನಿಗೆ ಅಡ್ಡಿಮಾಡಿದೆವು; ಯಾಕಂದರೆ ಅವನು ನಮ್ಮೊಂದಿಗೆ (ನಿನ್ನನ್ನು) ಹಿಂಬಾಲಿ ಸುವದಿಲ್ಲ ಅಂದನು. ಅದಕ್ಕೆ ಯೇಸು--ಅವನಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ನಮಗೆ ವಿರೋಧ ವಾಗಿರದವನು ನಮ್ಮ ಪಕ್ಷದವನೇ ಎಂದು ಹೇಳಿದನು. ಇದಾದಮೇಲೆ ಯೇಸು ತಾನು ಮೇಲಕ್ಕೆ ಅಂಗೀ ಕರಿಸಲ್ಪಡುವ ಸಮಯವು ಬಂದಾಗ ಯೆರೂಸಲೇಮಿಗೆ ಹೋಗುವದಕ್ಕಾಗಿ ಆತನು ತನ್ನ ಮುಖವನ್ನು ದೃಢಮಾಡಿಕೊಂಡು ತನಗೆ ಮುಂದಾಗಿ ದೂತರನ್ನು ಕಳುಹಿಸಿದನು. ಅವರು ಹೋಗಿ ಆತನಿಗಾಗಿ ಸಿದ್ಧ ಪಡಿಸುವಂತೆ ಸಮಾರ್ಯದ ಒಂದು ಹಳ್ಳಿಯೊಳಕ್ಕೆ ಪ್ರವೇಶಿಸಿದರು. ಆದರೆ ಅವರು ಆತನನ್ನು ಅಂಗೀಕರಿಸಲಿಲ್ಲ. ಯಾಕಂದರೆ ಆತನು ಯೆರೂಸಲೇ ಮಿಗೆ ಹೋಗುವಾತನೋ ಎಂಬಂತೆ ಆತನ ಮುಖ ವಿತ್ತು. ಆತನ ಶಿಷ್ಯರಾದ ಯಾಕೋಬ ಯೋಹಾನರು ಇದನ್ನು ನೋಡಿ--ಕರ್ತನೇ, ಎಲೀಯನು ಮಾಡಿದ ಪ್ರಕಾರ ಅವರನ್ನು ದಹಿಸಿಬಿಡುವಂತೆ ಆಕಾಶದಿಂದ ಬೆಂಕಿ ಬೀಳುವ ಹಾಗೆ ನಾವು ಅಪ್ಪಣೆಕೊಡಲು ನಿನಗೆ ಮನಸ್ಸುಂಟೋ ಎಂದು ಅವರು ಕೇಳಿದರು.
- 2 Corinthians 2:6–11 2 ಕೊರಿಂಥದವರಿಗೆ 2:6–11ಇಂಥವನಿಗೆ ನಿಮ್ಮಲ್ಲಿ ಹೆಚ್ಚಾದವರಿಂದ ಉಂಟಾದ ಆ ಶಿಕ್ಷೆಯೇ ಸಾಕು. ಇನ್ನು ಮೇಲೆ ಅವನನ್ನು ಶಿಕ್ಷಿಸದೆ ಮನ್ನಿಸಿರಿ, ಸಂತೈಸಿರಿ; ಇಲ್ಲವಾದರೆ ಅವನು ಅಧಿಕವಾದ ದುಃಖದಲ್ಲಿ ಮುಳುಗಿಹೋದಾನು. ಆದದರಿಂದ ಅವನಿಗೆ ನಿಮ್ಮ ಪ್ರೀತಿಯನ್ನು ನಿಶ್ಚಯಪಡಿಸ ಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಸರ್ವವಿಷಯದಲ್ಲೂ ನೀವು ವಿಧೇಯರಾಗಿದ್ದೀರೋ ಏನೋ ನಿಮ್ಮನ್ನು ಪರೀಕ್ಷಿಸಿ ತಿಳುಕೊಳ್ಳಬೇಕೆಂಬ ಉದ್ದೇಶದಿಂದಲೇ ಬರೆದೆನು. ನೀವು ಯಾರಿಗೆ ಯಾವದನ್ನು ಮನ್ನಿಸುತ್ತೀರೋ ನಾನು ಸಹ ಮನ್ನಿಸುತ್ತೇನೆ; ನಾನು ಯಾವದನ್ನಾದರೂ ಮನ್ನಿಸಿದ್ದರೆ ಕ್ರಿಸ್ತನ ಸನ್ನಿಧಾನದಲ್ಲಿ ನಿಮ್ಮ ನಿಮಿತ್ತವೇ ಮನ್ನಿಸಿದೆನು. ಸೈತಾನನಿಗೆ ನಮ್ಮ ವಿಷಯದಲ್ಲಿ ಎಡೆ ಸಿಕ್ಕಬಾರದು; ಅವನ ಕುತಂತ್ರಗಳನ್ನು ನಾವು ಅರಿಯದವರಲ್ಲವಲ್ಲಾ.
- Jude 1:22–23 ಯೂದನು 1:22–23ತಾರತಮ್ಯ ನೋಡಿ ಕೆಲವರಿಗೆ ಕನಿಕರವನ್ನು ತೋರಿ ಸಿರಿ. ಬೇರೆಯವರನ್ನು ಬೆಂಕಿಯಿಂದ ಎಳಕೊಂಡು ಭಯದಿಂದ ರಕ್ಷಿಸಿರಿ. ಶರೀರದಿಂದ ಮೈಲಿಗೆಯಾದ ಅಂಗಿಯನ್ನು ಹಗೆಮಾಡಿರಿ.