Matthew · chapter 13 · verse 3
Matthew 13:3 in Kannada
ಆಗ ಆತನು ಅನೇಕ ವಿಷಯಗಳನ್ನು ಅವರಿಗೆ ಸಾಮ್ಯಗಳಲ್ಲಿ ಹೇಳಿದ್ದೇನಂದರೆ--ಇಗೋ, ಬಿತ್ತುವವನು ಬಿತ್ತುವದಕ್ಕೆ ಹೊರಟನು.
Aaga aatanu aneka vishayagalannu avarige saamyagalalli heliddenandare--igo, bittuvavanu bittuvadakke horatanu.
Matthew 13:3 in English
- King James Version (KJV)
- And he spake many things unto them in parables, saying, Behold, a sower went forth to sow;
- World English Bible (WEB)
- He spoke to them many things in parables, saying, “Behold, a farmer went out to sow.
- American Standard Version (ASV)
- And he spake to them many things in parables, saying, Behold, the sower went forth to sow;
- Bible in Basic English (BBE)
- And he gave them teaching in the form of a story, saying, A man went out to put seed in the earth;
- Darby Translation (DBY)
- And he spoke to them many things in parables, saying, Behold, the sower went out to sow:
- Webster's Bible (WBS)
- And he spoke many things to them in parables, saying, Behold, a sower went forth to sow;
- Young's Literal Translation (YLT)
- and he spake to them many things in similes, saying: 'Lo, the sower went forth to sow,
Read in context
- 1ಅದೇ ದಿನದಲ್ಲಿ ಯೇಸು ಆ ಮನೆಯಿಂ ಹೊರಟುಹೋಗಿ ಸಮುದ್ರದ ಬಳಿಯಲಿ ಕೂತುಕೊಂಡನು.
- 2ಆಗ ಜನರ ದೊಡ್ಡ ಸಮೂಹಗಳು ಆತನ ಬಳಿಗೆ ಕೂಡಿ ಬಂದದ್ದರಿಂದ ಆತನು ದೋಣಿ ಯನ್ನು ಹತ್ತಿ ಕೂತುಕೊಂಡನು. ಮತ್ತು ಆ ಸಮೂಹ ದವರೆಲ್ಲಾ ದಡದ ಮೇಲೆ ನಿಂತಿದ್ದರು.
- 3ಆಗ ಆತನು ಅನೇಕ ವಿಷಯಗಳನ್ನು ಅವರಿಗೆ ಸಾಮ್ಯಗಳಲ್ಲಿ ಹೇಳಿದ್ದೇನಂದರೆ--ಇಗೋ, ಬಿತ್ತುವವನು ಬಿತ್ತುವದಕ್ಕೆ ಹೊರಟನು.
- 4ಅವನು ಬಿತ್ತಿದಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು; ಆಗ ಪಕ್ಷಿಗಳು ಬಂದು ಅವು ಗಳನ್ನು ನುಂಗಿಬಿಟ್ಟವು.
- 5ಕೆಲವು ಬಹಳ ಮಣ್ಣಿಲ್ಲದ ಬಂಡೆಯ ಸ್ಥಳಗಳಲ್ಲಿ ಬಿದ್ದವು; ಅಲ್ಲಿ ಆಳವಾದ ಮಣ್ಣು ಇಲ್ಲದ್ದರಿಂದ ತಕ್ಷಣವೇ ಅವು ಮೊಳೆತವು;
Cross references
- Mark 4:2–9 ಮಾರ್ಕನು 4:2–9ಆತನು ಸಾಮ್ಯಗಳಲ್ಲಿ ಅವರಿಗೆ ಅನೇಕ ವಿಷಯಗಳನ್ನು ಕಲಿಸಿ ತನ್ನ ಬೋಧನೆ ಯಲ್ಲಿ ಅವರಿಗೆ ಹೇಳಿದ್ದೇನಂದರೆ-- ಕೇಳಿರಿ, ಇಗೋ, ಬಿತ್ತುವವನು ಬಿತ್ತುವದಕ್ಕೆ ಹೊರಟುಹೋದನು. ಅವನು ಬಿತ್ತಿದಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು. ಆಗ ಆಕಾಶದ ಪಕ್ಷಿಗಳು ಬಂದು ಅವುಗಳನ್ನು ನುಂಗಿಬಿಟ್ಟವು. ಇನ್ನು ಕೆಲವು ಹೆಚ್ಚು ಮಣ್ಣಿಲ್ಲದ ಬಂಡೆಯ ನೆಲದ ಮೇಲೆ ಬಿದ್ದವು; ಅದಕ್ಕೆ ಆಳವಾದ ಮಣ್ಣು ಇಲ್ಲದ್ದರಿಂದ ಅವು ಕೂಡಲೆ ಮೊಳೆತವು; ಆದರೆ ಸೂರ್ಯನು ಮೇಲಕ್ಕೆ ಬಂದಾಗ ಅವು ಬಾಡಿಹೋಗಿ ಬೇರಿಲ್ಲದ ಕಾರಣ ಒಣಗಿಹೋದವು; ಮತ್ತೆ ಕೆಲವು ಮುಳ್ಳು ಗಳಲ್ಲಿ ಬಿದ್ದವು; ಆ ಮುಳ್ಳುಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟದ್ದರಿಂದ ಅವು ಫಲಕೊಡಲಿಲ್ಲ. ಕೆಲವು ಒಳ್ಳೇ ನೆಲದ ಮೇಲೆ ಬಿದ್ದು ಮೊಳೆತು ಬೆಳೆಯುತಾ ಕೆಲವು ಮೂವತ್ತರಷ್ಟು, ಅರವತ್ತರಷ್ಟು, ಕೆಲವು ನೂರರಷ್ಟು ಫಲವನ್ನು ಕೊಟ್ಟವು. ಆತನು ಅವರಿಗೆ ಹೇಳಿದ್ದೇನಂದರೆ--ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.
- Mark 4:13 ಮಾರ್ಕನು 4:13ಮತ್ತು ಆತನು ಅವರಿಗೆ--ಈ ಸಾಮ್ಯವು ನಿಮಗೆ ತಿಳಿಯ ಲಿಲ್ಲವೋ? ಹಾಗಾದರೆ ಎಲ್ಲಾ ಸಾಮ್ಯಗಳನ್ನು ನೀವು ಹೇಗೆ ತಿಳಿದುಕೊಳ್ಳುವಿರಿ?
- Psalm 78:2 ಕೀರ್ತನೆಗಳು 78:2ಸಾಮ್ಯವನ್ನು ಹೇಳಲು ನನ್ನ ಬಾಯಿ ತೆರೆಯುವೆನು; ಪೂರ್ವಕಾಲದಿಂದಿರುವ ಗುಪ್ತವಾದವುಗಳನ್ನು ನುಡಿಯುವೆನು.
- Matthew 13:53 ಮತ್ತಾಯನು 13:53ಈ ಸಾಮ್ಯಗಳನ್ನು ಮುಗಿಸಿದ ತರುವಾಯ ಯೇಸು ಅಲ್ಲಿಂದ ಹೊರಟುಹೋದನು.
- 2 Samuel 12:1–7 2 ಸಮುವೇಲನು 12:1–7ಕರ್ತನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ಅವನು ಅವನ ಬಳಿಗೆ ಬಂದು ಹೇಳಿದ್ದೇನಂದರೆ--ಒಂದು ಪಟ್ಟಣದಲ್ಲಿ ಇಬ್ಬರು ಮನುಷ್ಯರಿದ್ದರು; ಒಬ್ಬನು ಐಶ್ವರ್ಯವಂತನು, ಮತ್ತೊಬ್ಬನು ಬಡವನು. ಐಶ್ವರ್ಯವಂತನಿಗೆ ಕುರಿ ಪಶುಗಳು ಬಹಳವಾಗಿದ್ದವು. ಆದರೆ ಬಡವನಿಗೆ ತಾನು ಕೊಂಡುಕೊಂಡ ಒಂದು ಚಿಕ್ಕ ಹೆಣ್ಣುಕುರಿ ಮರಿಯ ಹೊರತು ಬೇರೇನೂ ಇರಲಿಲ್ಲ. ಅದು ಅವನ ಸಂಗಡವೂ ಅವನ ಮಕ್ಕಳ ಸಂಗಡವೂ ಬೆಳೆದು ಅವನೊಡನೆ ಆಹಾರ ತಿಂದು ಅವನ ಪಾತ್ರೆಯಲ್ಲಿ ಕುಡಿದು ಅವನ ಮಗ್ಗುಲಲ್ಲಿ ಮಲಗಿಕೊಂಡು ಅವನಿಗೆ ಕುಮಾರ್ತೆಯ ಹಾಗಿತ್ತು. ಐಶ್ವರ್ಯವುಳ್ಳ ಆ ಮನು ಷ್ಯನ ಬಳಿಗೆ ಒಬ್ಬ ಪ್ರಯಾಣಿಕನು ಬಂದಾಗ ಪ್ರಯಾಣ ಮಾಡುವವನಿಗೆ ಅಡಿಗೆಯನ್ನು ಮಾಡಿಸುವದಕ್ಕೆ ತನ್ನ ಕುರಿ ಪಶುಗಳಲ್ಲಿ ಒಂದನ್ನೂ ತಕ್ಕೊಳ್ಳ ಮನಸ್ಸಿಲ್ಲದೆ ಆ ಬಡವನ ಕುರಿಯನ್ನು ತಕ್ಕೊಂಡು ಅದನ್ನು ತನ್ನ ಬಳಿಗೆ ಬಂದ ಆ ಮನುಷ್ಯನಿಗೆ ಅಡಿಗೆಯನ್ನು ಮಾಡಿಸಿ ದನು ಅಂದನು. ಆಗ ದಾವೀದನು ಆ ಮನುಷ್ಯನ ಮೇಲೆ ಬಹಳ ಕೋಪಿಸಿಕೊಂಡು ನಾತಾನನಿಗೆ--ಕರ್ತನ ಜೀವದಾಣೆ, ಇದನ್ನು ಮಾಡಿದ ಆ ಮನುಷ್ಯನು ನಿಜವಾಗಿಯೂ ಸಾಯಬೇಕು. ಅವನು ಕರುಣೆ ಯಿಲ್ಲದೆ ಈ ಕಾರ್ಯವನ್ನು ಮಾಡಿದ್ದರಿಂದ ಆ ಕುರಿ ಗೋಸ್ಕರ ನಾಲ್ಕರಷ್ಟು ತಿರಿಗಿ ಕೊಡಬೇಕು ಅಂದನು. ಆಗ ನಾತಾನನು ದಾವೀದನಿಗೆ--ನೀನೇ ಆ ಮನು ಷ್ಯನು. ಇಸ್ರಾಯೇಲಿನ ದೇವರಾದ ಕರ್ತನು--ನಾನು ನಿನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಮಾಡಿ ನಿನ್ನನ್ನು ಸೌಲನ ಕೈಗೆ ತಪ್ಪಿಸಿಬಿಟ್ಟು
- Matthew 13:34–35 ಮತ್ತಾಯನು 13:34–35ಯೇಸು ಇವೆಲ್ಲವುಗಳನ್ನು ಜನಸಮೂಹ ದೊಂದಿಗೆ ಸಾಮ್ಯಗಳಲ್ಲಿ ಮಾತನಾಡಿದನು; ಸಾಮ್ಯ ವಿಲ್ಲದೆ ಆತನು ಅವರೊಂದಿಗೆ ಮಾತನಾಡಲಿಲ್ಲ. ಹೀಗೆ--ಸಾಮ್ಯಗಳನ್ನು ಹೇಳುವಂತೆ ನನ್ನ ಬಾಯಿ ತೆರೆಯುವೆನು; ಲೋಕದ ಅಸ್ತಿವಾರದಿಂದ ಮರೆಯಾಗಿ ಇಡಲ್ಪಟ್ಟವುಗಳನ್ನು ನಾನು ಹೊರಪಡಿಸುವೆನು ಎಂದು ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರಿತು.
- Mark 4:33 ಮಾರ್ಕನು 4:33ಅವರು ಕೇಳಿಸಿಕೊಳ್ಳಲು ಸಾಧ್ಯವಾಗುವಷ್ಟು ಇಂಥ ಅನೇಕ ಸಾಮ್ಯಗಳಿಂದ ಆತನು ಅವರಿಗೆ ವಾಕ್ಯವನ್ನು ಹೇಳಿದನು.
- Ezekiel 24:3–14 ಯೆಹೆಜ್ಕೇಲನು 24:3–14ತಿರುಗಿ ಬೀಳುವ ಮನೆತನ ದವರಿಗೆ ಸಾಮ್ಯವನ್ನು ತಿಳಿಸಿ ಅವರಿಗೆ ಹೇಳಬೇಕಾದದ್ದೇ ನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಹಂಡೆಯನ್ನು ಒಲೆಯ ಮೇಲಿಡು, ಅದರಲ್ಲಿ ನೀರನ್ನು ಸುರಿ. ತೊಡೆಯನ್ನೂ ಹೆಗಲನ್ನೂ ಎಲ್ಲಾ ಒಳ್ಳೇ ತುಂಡುಗಳನ್ನೂ ಒಟ್ಟಿಗೆ ಸೇರಿಸಿ ಒಳ್ಳೆ ಎಲುಬುಗಳ ಜೊತೆ ಅದನ್ನು ತುಂಬಿಸಿ; ಹಿಂಡಿನಲ್ಲಿ ಶ್ರೇಷ್ಠವಾದ ದ್ದನ್ನು ತೆಗೆದುಕೊಂಡು ಎಲುಬಿನ ರಾಶಿಯನ್ನೂ ಅದರ ಕೆಳಗೆ ಇಟ್ಟು ಅದನ್ನು ಚೆನ್ನಾಗಿ ಕುದಿಸು; ಆ ಎಲುಬುಗಳೂ ಅದರಲ್ಲಿ ಚೆನ್ನಾಗಿ ಬೇಯಲಿ. ಆದಕಾರಣ ದೇವರಾದ ಕರ್ತನು ಹೀಗೆ ಹೇಳು ತ್ತಾನೆ; ರಕ್ತಮಯವಾದ ಆ ಪಟ್ಟಣಕ್ಕೆ ಅಯ್ಯೋ! ಯಾವದರ ಕಲ್ಮಶವು ಹೊರಗೆ ಬಾರದೆ ಅದರಲ್ಲಿ ಉಳಿದಿರುವದೋ ಆ ಹಂಡೆಗೆ ಅಯ್ಯೋ, ಅದರಿಂದ ತುಂಡು ತುಂಡಾಗಿ ಹೊರಗೆ ತೆಗೆ; ಆಯ್ಕೆಯ ಚೀಟಿಯು ಅದರ ಮೇಲೆ ಬೀಳದಿರಲಿ. ಅದರ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದೆ; ದೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ; ಮುಯ್ಯಿಗೆಮುಯ್ಯಿ ತೀರಿಸುವದಕ್ಕೆ ರೋಷ ವನ್ನೆಬ್ಬಿಸುವ ಹಾಗೆ ನಾನು ಅದರ ರಕ್ತಾಪರಾಧವನ್ನು ಮುಚ್ಚಿಬಿಡದಂತೆ ಬಂಡೆಯ ತುದಿಯ ಮೇಲೆ ಇಟ್ಟಿ ದ್ದೇನೆ; ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಆ ರಕ್ತಾಪರಾಧವುಳ್ಳ ಪಟ್ಟಣವು ಹಾಳಾ ಗಲಿ, ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು. ಬಹಳ ಸೌದೆ ಹಾಕಿ, ಬೆಂಕಿಯನ್ನು ಹೆಚ್ಚಿಸಿ, ಮಾಂಸ ವನ್ನು ಬೇಯಿಸು; ಮಸಾಲೆ ಚೆನ್ನಾಗಿ ಇರಲಿ, ಮತ್ತು ಎಲುಬುಗಳು ಸುಡಲಿ. ಆಮೇಲೆ ಅದರ ಹಿತ್ತಾಳೆ ಬಿಸಿಯಾಗಿ ಮೈಲಿಗೆ ಕರಗಿ ಕಲ್ಮಶವು ಹೋಗುವ ಹಾಗೆ ಅದನ್ನು ಬರಿದು ಮಾಡಿ ಕೆಂಡಗಳ ಮೇಲೆ ಇಡು. ಅದರ ಕಲ್ಮಶವು ಆಯಾಸವನ್ನುಂಟು ಮಾಡಿತೇ ಹೊರತು ಅದಕ್ಕೆ ಹತ್ತಿದ್ದ ಆ ಬಹಳವಾದ ಕಿಲುಬು ಹೋಗಲಿಲ್ಲ, ಅದು ಬೆಂಕಿಯಲ್ಲಿರಲಿ; ನಿನ್ನ ಅಶುದ್ಧ ತ್ವವು ದುಷ್ಕರ್ಮವುಳ್ಳದ್ದು; ನಾನು ನಿನ್ನನ್ನು ಪರಿಶುದ್ಧ ಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದ ವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರತ್ವದಿಂದ ಇನ್ನು ಶುದ್ಧವಾಗುವದಿಲ್ಲ. ಕರ್ತನಾದ ನಾನೇ ಅದನ್ನು ಹೇಳಿದ್ದೇನೆ, ಅದು ನಡೆಯುವದು; ನಾನು ಅದನ್ನು ಮಾಡದೆ ಬಿಡುವದಿಲ್ಲ; ಕಟಾಕ್ಷ ತೋರಿಸು ವದಿಲ್ಲ; ಪಶ್ಚಾತ್ತಾಪಪಡುವದಿಲ್ಲ. ನಿನ್ನ ಮಾರ್ಗಗಳ ಪ್ರಕಾರವೂ ನಿನ್ನ ಕ್ರಿಯೆಗಳ ಪ್ರಕಾರವೂ ನಿನಗೆ ನ್ಯಾಯ ತೀರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- Matthew 13:10–13 ಮತ್ತಾಯನು 13:10–13ತರುವಾಯ ಶಿಷ್ಯರು ಬಂದು ಆತನಿಗೆ--ನೀನು ಸಾಮ್ಯಗಳಲ್ಲಿ ಅವರೊಂದಿಗೆ ಯಾಕೆ ಮಾತನಾಡುತ್ತೀ ಎಂದು ಕೇಳಲು ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ. ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಮತ್ತು ಅವನಿಗೆ ಹೆಚ್ಚು ಸಮೃದ್ಧಿಯಾಗುವದು; ಆದರೆ ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು. ಆದದರಿಂದ ನಾನು ಅವರಿಗೆ ಸಾಮ್ಯಗಳಲ್ಲಿ ಮಾತ ನಾಡುತ್ತೇನೆ; ಯಾಕಂದರೆ ಅವರು ನೋಡಿದರೂ ಕಾಣುವದಿಲ್ಲ ಮತ್ತು ಕೇಳಿದರೂ ತಿಳುಕೊಳ್ಳುವದಿಲ್ಲ; ಇಲ್ಲವೆ ಅವರು ಗ್ರಹಿಸುವದು ಇಲ್ಲ
- Luke 8:5–8 ಲೂಕನು 8:5–8ಬಿತ್ತುವವನು ಬೀಜವನ್ನು ಬಿತ್ತುವದಕ್ಕಾಗಿ ಹೊರಟು ಹೋದನು. ಅವನು ಬಿತ್ತಿದಾಗ ಕೆಲವು ದಾರಿಯ ಮಗ್ಗುಲಲ್ಲಿ ಬಿದ್ದು ತುಳಿಯಲ್ಪಟ್ಟವು; ಆಕಾಶದ ಪಕ್ಷಿಗಳು ಅವುಗಳನ್ನು ನುಂಗಿಬಿಟ್ಟವು. ಇದಲ್ಲದೆ ಕೆಲವು ಬಂಡೆಯ ಮೇಲೆ ಬಿದ್ದವು; ಮೊಳೆತ ಕೂಡಲೆ ತ್ಯಾವ ಇಲ್ಲದಿರುವ ಕಾರಣ ಒಣಗಿಹೋದವು. ಕೆಲವು ಮುಳ್ಳುಗಳ ಮಧ್ಯದಲ್ಲಿ ಬಿದ್ದವು; ಆಗ ಮುಳ್ಳುಗಳು ಅವುಗಳೊಂದಿಗೆ ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು. ಕೆಲವು ಒಳ್ಳೇ ನೆಲದ ಮೇಲೆ ಬಿದ್ದವು; ಆಗ ಅವು ಬೆಳೆದು ನೂರರಷ್ಟು ಫಲಕೊಟ್ಟವು. ಇವುಗಳನ್ನು ಆತನು ಹೇಳಿ--ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಎಂದು ಕೂಗಿ ಹೇಳಿದನು.
- Psalm 49:4 ಕೀರ್ತನೆಗಳು 49:4ನಾನು ಸಾಮ್ಯವನ್ನು ಕಿವಿಗೊಟ್ಟು ಕೇಳಿ ಕಿನ್ನರಿಯನ್ನು ಬಾರಿಸುತ್ತಾ ಅದರ ಗೂಢಾರ್ಥವನ್ನು ಪ್ರಕಟಿಸುವೆನು.
- Mark 12:12 ಮಾರ್ಕನು 12:12ಆಗ ಆತನು ತಮಗೆ ವಿರೋಧವಾಗಿ ಈ ಸಾಮ್ಯವನ್ನು ಹೇಳಿದನೆಂದು ಅವರು ತಿಳಿದು ಆತನನ್ನು ಹಿಡಿಯುವದಕ್ಕೆ ಸಂದರ್ಭ ನೋಡಿದರು. ಆದರೆ ಅವರು ಜನರಿಗೆ ಹೆದರಿದರು. ಅವರು ಆತನನ್ನು ಬಿಟ್ಟು ಹೊರಟು ಹೋದರು.