Matthew · chapter 13 · verse 32
Matthew 13:32 in Kannada
ಅದು ಎಲ್ಲಾ ಬೀಜಗಳಿಗಿಂತಲೂ ಚಿಕ್ಕದಾದದ್ದೇ ನಿಜ; ಆದರೆ ಅದು ಬೆಳೆದಾಗ ಎಲ್ಲಾ ಸಸಿಗಳಿಗಿಂತಲೂ ದೊಡ್ಡದಾಗಿ ಮರವಾಯಿತು. ಹೀಗೆ ಆಕಾಶದ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ವಾಸಮಾಡುತ್ತವೆ.
Adu ellaa beejagaligintaloo chikkadaadadde nija; aadare adu beledaaga ellaa sasigaligintaloo doddadaagi maravaayitu. Heege aakaashada pakshigalu bandu adara kombegalalli vaasamaaduttave.
Matthew 13:32 in English
- King James Version (KJV)
- Which indeed is the least of all seeds: but when it is grown, it is the greatest among herbs, and becometh a tree, so that the birds of the air come and lodge in the branches thereof.
- World English Bible (WEB)
- which indeed is smaller than all seeds. But when it is grown, it is greater than the herbs and becomes a tree, so that the birds of the air come and lodge in its branches.”
- American Standard Version (ASV)
- which indeed is less than all seeds; but when it is grown, it is greater than the herbs, and becometh a tree, so that the birds of the heaven come and lodge in the branches thereof.
- Bible in Basic English (BBE)
- Which is smaller than all seeds; but when it has come up it is greater than the plants, and becomes a tree, so that the birds of heaven come and make their resting-places in its branches.
- Darby Translation (DBY)
- which is less indeed than all seeds, but when it is grown is greater than herbs, and becomes a tree, so that the birds of heaven come and roost in its branches.
- Webster's Bible (WBS)
- Which indeed is the least of all seeds: but when it is grown, it is the greatest among herbs, and becometh a tree, so that the birds of the air come and lodge on its branches.
- Young's Literal Translation (YLT)
- which less, indeed, is than all the seeds, but when it may be grown, is greatest of the herbs, and becometh a tree, so that the birds of the heaven do come and rest in its branches.'
Read in context
- 30ಸುಗ್ಗೀಕಾಲದ ವರೆಗೆ ಎರಡೂ ಜೊತೆಯಲ್ಲಿ ಬೆಳೆಯಲಿ; ಸುಗ್ಗೀಕಾಲದಲ್ಲಿ ನಾನು ಕೊಯ್ಯುವವರಿಗೆ--ಮೊದಲು ಹಣಜಿಯನ್ನು ಕೂಡಿಸಿ ಅದನ್ನು ಸುಡುವದಕ್ಕೆ ಹೊರೆ ಕಟ್ಟಿರಿ; ಆದರೆ ಗೋದಿಯನ್ನು ನನ್ನ ಕಣಜದಲ್ಲಿ ಕೂಡಿಸಿರಿ ಎಂದು ಹೇಳುವೆನು ಅಂದನು.
- 31ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಮನುಷ್ಯನು ತಕ್ಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದ್ದ ಸಾಸಿವೆ ಕಾಳಿಗೆ ಪರಲೋಕರಾಜ್ಯವು ಹೋಲಿಕೆಯಾಗಿದೆ.
- 32ಅದು ಎಲ್ಲಾ ಬೀಜಗಳಿಗಿಂತಲೂ ಚಿಕ್ಕದಾದದ್ದೇ ನಿಜ; ಆದರೆ ಅದು ಬೆಳೆದಾಗ ಎಲ್ಲಾ ಸಸಿಗಳಿಗಿಂತಲೂ ದೊಡ್ಡದಾಗಿ ಮರವಾಯಿತು. ಹೀಗೆ ಆಕಾಶದ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ವಾಸಮಾಡುತ್ತವೆ.
- 33ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಸ್ತ್ರೀಯು ಹುಳಿಯನ್ನು ತಕ್ಕೊಂಡು ಮೂರು ಸೇರು ಹಿಟ್ಟೆಲ್ಲಾ ಹುಳಿಯಾಗುವ ತನಕ ಅದರಲ್ಲಿ ಅಡಗಿಸಿಟ್ಟ ಹುಳಿಗೆ ಪರಲೋಕ ರಾಜ್ಯವು ಹೋಲಿಕೆಯಾಗಿದೆ.
- 34ಯೇಸು ಇವೆಲ್ಲವುಗಳನ್ನು ಜನಸಮೂಹ ದೊಂದಿಗೆ ಸಾಮ್ಯಗಳಲ್ಲಿ ಮಾತನಾಡಿದನು; ಸಾಮ್ಯ ವಿಲ್ಲದೆ ಆತನು ಅವರೊಂದಿಗೆ ಮಾತನಾಡಲಿಲ್ಲ.
Cross references
- Ezekiel 31:6 ಯೆಹೆಜ್ಕೇಲನು 31:6ಅದರ ಕೊಂಬೆಗಳಲ್ಲಿ ಆಕಾಶದ ಎಲ್ಲಾ ಪಕ್ಷಿಗಳು ತಮ್ಮ ಗೂಡುಗಳನ್ನು ಮಾಡಿದವು; ಅದರ ರೆಂಬೆ ಗಳ ಕೆಳಗೆ ಬಯಲಿನ ಎಲ್ಲಾ ಮೃಗಗಳು ಮರಿಗಳಿಗೆ ಜನ್ಮಕೊಟ್ಟವು; ಅದರ ಕೆಳಗೆ ನೆರಳಿನಲ್ಲಿ ಎಲ್ಲಾ ಮಹಾಜನಾಂಗಗಳು ವಾಸಮಾಡಿದವು.
- Daniel 4:12 ದಾನಿಯೇಲನು 4:12ಅದರ ಎಲೆಗಳು ಅಂದವಾಗಿದ್ದವು, ಅದರ ಫಲವು ಬಹಳವಾಗಿತ್ತು; ಅದರಲ್ಲಿ ಎಲ್ಲರಿಗೂ ಆಹಾರವಿತ್ತು; ಬಯಲು ಮೃಗಗಳಿಗೆ ಅದರ ಕೆಳಗೆ ನೆರಳಿತ್ತು; ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಿಸುತ್ತಿದ್ದವು, ಎಲ್ಲಾ ಜೀವಿಗಳಿಗೂ ಅದರಿಂದಲೇ ಆಹಾರ ಇರುತ್ತಿತ್ತು.
- Ezekiel 17:23–24 ಯೆಹೆಜ್ಕೇಲನು 17:23–24ಇಸ್ರಾಯೇಲಿನ ಉನ್ನತ ಪರ್ವತದಲ್ಲಿ ನಾನು ಅದನ್ನು ನೆಡುವೆನು; ಅದರ ಕೊಂಬೆಗಳು ಒಡೆದು ಫಲಫಲಿಸುವದು; ಘನವುಳ್ಳ ದೇವದಾರು ಆಗುವದು; ಪ್ರತಿಯೊಂದು ಪುಕ್ಕಗಳುಳ್ಳ ಪಕ್ಷಿಗಳು ಅದರ ಕೊಂಬೆಗಳ ನೆರಳಿನ ಕೆಳಗೆ ವಾಸ ಮಾಡುವವು; ಅದರಡಿಯಲ್ಲಿ ವಾಸಿಸುವವು.ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ. ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ.
- Acts 21:20 ಅಪೊಸ್ತಲರ ಕೃತ್ಯಗಳು 21:20ಅವರು ಅದನ್ನು ಕೇಳಿ ಕರ್ತನನ್ನು ಮಹಿಮೆಪಡಿಸಿ ಅವನಿಗೆ--ಸಹೋದರನೇ, ವಿಶ್ವಾಸಿ ಗಳಾದ ಯೆಹೂದ್ಯರು ಎಷ್ಟೋ ಸಾವಿರ ಮಂದಿ ಇದ್ದಾರೆಂಬದನ್ನು ನೀನು ನೋಡುತ್ತೀಯಲ್ಲಾ. ಅವರೆಲ್ಲರೂ ನ್ಯಾಯಪ್ರಮಾಣದ ವಿಷಯದಲ್ಲಿ ಅಭಿಮಾನವುಳ್ಳವರಾಗಿದ್ದಾರೆ.
- Zechariah 8:20–23 ಜೆಕರ್ಯ 8:20–23ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಜನಗಳೂ ಅನೇಕ ಪಟ್ಟಣಗಳ ನಿವಾಸಿಗಳೂ ಇನ್ನು ಬರುವರು; ಒಂದರ ನಿವಾಸಿಗಳು ಮತ್ತೊಂದಕ್ಕೆ ಹೋಗಿ--ನಾವು ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಸೈನ್ಯಗಳ ಕರ್ತನನ್ನು ಹುಡುಕುವದಕ್ಕೂ ಬೇಗ ಹೋಗೋಣ; ನಾನು ಕೂಡ ಹೋಗುತ್ತೇನೆ ಎಂದು ಹೇಳುವರು. ಹೌದು, ಅನೇಕ ಜನಗಳೂ ಬಲವಾದ ಜನಾಂಗಗಳೂ ಸೈನ್ಯಗಳ ಕರ್ತನನ್ನು ಯೆರೂಸಲೇಮಿನಲ್ಲಿ ಹುಡುಕುವದಕ್ಕೂ ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಬರುವವು.ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು.
- Daniel 2:44–45 ದಾನಿಯೇಲನು 2:44–45ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು. ಆ, ಕಲ್ಲು ಕೈಗಳ ಸಹಾಯವಿಲ್ಲದೆ ಬೆಟ್ಟದೊಳಗಿಂದ ಒಡೆಯಲ್ಪಟ್ಟು ಕಬ್ಬಿಣವನ್ನೂ ಹಿತ್ತಾಳೆಯನ್ನೂ ಮಣ್ಣನ್ನೂ ಬೆಳ್ಳಿಯನ್ನೂ ಬಂಗಾರವನ್ನೂ ಧ್ವಂಸ ಮಾಡಿತೆಂದು ನೀನು ನೋಡಿದ್ದು ಇದೇ. ಮಹಾದೇವರು ಇನ್ನು ಮೇಲೆ ಸಂಭವಿಸುವಂಥದ್ದನ್ನು ಅರಸನಿಗೆ ತಿಳಿಯಪಡಿಸಿ ದ್ದಾನೆ; ಕನಸು ನಿಶ್ಚಯವಾಗಿದೆ; ಅದರ ಅರ್ಥಗಳೂ ಸತ್ಯವಾಗಿವೆ ಅಂದನು.
- Romans 15:18–19 ರೋಮಾಪುರದವರಿಗೆ 15:18–19ಮಾತಿ ನಿಂದಲೂ ಕ್ರಿಯೆಯಿಂದಲೂ ಬಲವಾದ ಸೂಚಕ ಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ದೇವರಾತ್ಮನ ಬಲದಿಂದಲೂ ಅನ್ಯಜನಗಳವರು ವಿಧೇಯರಾಗುವಂತೆ ಕ್ರಿಸ್ತನು ನನ್ನ ಮೂಲಕ ಮಾಡ ದಿರುವವುಗಳನ್ನು ಮಾತನಾಡಲು ನಾನು ಧೈರ್ಯ ಪಡುವದಿಲ್ಲ. ಹೀಗೆ ಯೆರೂಸಲೇಮ್ ಮೊದಲು ಗೊಂಡು ಇಲ್ಲುರಿಕದ ಸುತ್ತಲೂ ನಾನು ಕ್ರಿಸ್ತನ ಸುವಾರ್ತೆಯನ್ನು ಪೂರ್ಣವಾಗಿ ಸಾರಿದ್ದೇನೆ.
- Daniel 2:34–35 ದಾನಿಯೇಲನು 2:34–35ನೀನು ನೋಡುತ್ತಿರಲಾಗಿ, ಒಂದು ಕಲ್ಲು ಕೈಗಳ ಸಹಾಯವಿಲ್ಲದೆ ಒಡೆಯಲ್ಪಟ್ಟು ಅರ್ಧ ಕಬ್ಬಿ ಣವೂ ಅರ್ಧ ಮಣ್ಣೂ ಆಗಿದ್ದ ಆ ವಿಗ್ರಹದ ಪಾದ ಗಳನ್ನು ಬಡಿದು ಅವುಗಳನ್ನು ಚೂರುಚೂರು ಮಾಡಿತು. ಆಮೇಲೆ ಕಬ್ಬಿಣವೂ ಮಣ್ಣೂ ಹಿತ್ತಾಳೆಯೂ ಬೆಳ್ಳಿಯೂ ಮತ್ತು ಬಂಗಾರವೂ ಕೂಡ ಒಡೆದು ಚೂರು ಚೂರಾಗಿ ಬೇಸಿಗೆ ಕಾಲದ ಧಾನ್ಯದ ಹೊಟ್ಟಿನ ಹಾಗಾ ದವು; ಅವುಗಳಿಗೆ ಎಡೆ ಸಿಗದ ಹಾಗೆ ಗಾಳಿಯು ಅವುಗಳನ್ನು ಹೊಡೆದುಕೊಂಡು ಹೋಯಿತು; ಪ್ರತಿಮೆಯನ್ನು ಬಡಿದ ಕಲ್ಲು ದೊಡ್ಡ ಬೆಟ್ಟವಾಗಿ ಸಮಸ್ತ ಭೂಮಿಯನ್ನು ತುಂಬಿಸಿತು.
- Psalm 104:12 ಕೀರ್ತನೆಗಳು 104:12ಆಕಾಶದ ಪಕ್ಷಿಗಳು ಅವುಗಳ ಹತ್ತಿರ ವಾಸವಾಗಿದ್ದು ಕೊಂಬೆಗಳ ಮಧ್ಯ ದಲ್ಲಿಂದ ಹಾಡುತ್ತವೆ.
- Zechariah 4:10 ಜೆಕರ್ಯ 4:10ಸಣ್ಣ ಕಾರ್ಯಗಳ ದಿನವನ್ನು ತಿರಸ್ಕರಿಸಿದವನ್ಯಾರು? ಆ ಏಳು ಅಂದರೆ ಭೂಮಿಯಲ್ಲೆಲ್ಲಾ ಅತ್ತಿತ್ತ ಓಡಾಡುವ ಕರ್ತನ ಕಣ್ಣುಗಳು ನೂಲು ಗುಂಡನ್ನು ಜೆರುಬ್ಬಾಬೆಲನ ಕೈಯಲ್ಲಿ ನೋಡುವಾಗ ಸಂತೋಷಪಡುತ್ತವೆ.
- Isaiah 2:2–4 ಯೆಶಾಯ 2:2–4ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು. ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು. ಆತನು ಅನೇಕ ಜನಾಂಗ ಗಳ ಮಧ್ಯದಲ್ಲಿ ನ್ಯಾಯ ತೀರಿಸಿ, ಅನೇಕ ಪ್ರಜೆಗಳನ್ನು ಗದರಿಸುವನು; ಅವರು ತಮ್ಮ ಕತ್ತಿಗಳನ್ನು ನೇಗಿಲಿನ ಗುಳಗಳನ್ನಾಗಿಯೂ ತಮ್ಮ ಈಟಿಗಳನ್ನು ಕುಡುಗೋ ಲುಗಳನ್ನಾಗಿಯೂ ಬಡಿಯುವರು; ಜನಾಂಗಕ್ಕೆ ವಿರೋ ಧವಾಗಿ ಜನಾಂಗವು ಕತ್ತಿಯನ್ನು ಎತ್ತದು; ಇಲ್ಲವೆ ಇನ್ನು ಮೇಲೆ ಯುದ್ಧಾಭ್ಯಾಸವು ಇರುವದೇ ಇಲ್ಲ.
- Zechariah 14:7–10 ಜೆಕರ್ಯ 14:7–10ಆದರೆ ಕರ್ತನಿಗೆ ತಿಳಿದಿರುವ ಒಂದು ದಿನ ಇರುವದು, ಅದು ಹಗಲೂ ಅಲ್ಲ, ರಾತ್ರಿಯೂ ಅಲ್ಲ; ಆದರೆ ಸಾಯಂಕಾಲದ ಸಮಯದಲ್ಲಿ ಬೆಳಕು ಇರುವದು. ಆ ದಿನದಲ್ಲಿ ಆಗುವದೇನಂದರೆ, ಯೆರೂಸಲೇಮಿ ನೊಳಗಿದ್ದ ಜೀವಜಲಗಳು ಹೊರಡುವವು; ಅವುಗ ಳಲ್ಲಿ ಅರ್ಧ ಪೂರ್ವ ಸಮುದ್ರಕ್ಕೆ ಅರ್ಧ ಪಶ್ಚಿಮ ಸಮುದ್ರಕ್ಕೆ ಹೋಗುವವು; ಅದು ಬೇಸಿಗೆ ಕಾಲ ದಲ್ಲಿಯೂ ಚಳಿಗಾಲದಲ್ಲಿಯೂ ಇರುವದು. ಕರ್ತನು ಭೂಮಿಗೆಲ್ಲಾ ಅರಸನಾಗಿರುವನು; ಆ ದಿನದಲ್ಲಿ ಕರ್ತನು ಒಬ್ಬನೇ ಇರುವನು; ಆತನ ಹೆಸರು ಒಂದೇ. ದೇಶವೆಲ್ಲಾ ಗೆಬ ಮೊದಲುಗೊಂಡು ಯೆರೂಸ ಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನ ವರೆಗೂ ಬೈಲಿನ ಹಾಗೆ ಮಾರ್ಪಡುವದು; ಅದು ಎತ್ತಲ್ಪಟ್ಟು ತನ್ನ ಸ್ಥಳ ದಲ್ಲಿ ಬೆನ್ಯಾವಿಾನನ ಬಾಗಲು ಮೊದಲುಗೊಂಡು ಮೊದಲನೇ ಬಾಗಲಿನ ಸ್ಥಳದ ವರೆಗೂ ಮೂಲೆ ಬಾಗಲಿನ ವರೆಗೂ ಹನನೇಲನ ಗೋಪುರ ಮೊದಲು ಗೊಂಡು ಅರಸನ ದ್ರಾಕ್ಷೇ ಅಲೆಗಳ ವರೆಗೂ ನಿವಾಸ ವಾಗುವದು.