Matthew · chapter 13 · verse 39
Matthew 13:39 in Kannada
ಅದನ್ನು ಬಿತ್ತಿದ ವೈರಿಯು ಸೈತಾನನೇ; ಸುಗ್ಗೀ ಕಾಲವು ಲೋಕದ ಅಂತ್ಯವಾಗಿದೆ; ಮತ್ತು ಕೊಯ್ಯುವವರು ದೂತರೇ.
Adannu bittida vairiyu saitaanane; suggee kaalavu lokada antyavaagide; mattu koyyuvavaru dootare.
Matthew 13:39 in English
- King James Version (KJV)
- The enemy that sowed them is the devil; the harvest is the end of the world; and the reapers are the angels.
- World English Bible (WEB)
- The enemy who sowed them is the devil. The harvest is the end of the age, and the reapers are angels.
- American Standard Version (ASV)
- and the enemy that sowed them is the devil: and the harvest is the end of the world; and the reapers are angels.
- Bible in Basic English (BBE)
- And he who put them in the earth is Satan; and the getting in of the grain is the end of the world; and those who get it in are the angels.
- Darby Translation (DBY)
- and the enemy who has sowed it is the devil; and the harvest is [the] completion of [the] age, and the harvestmen are angels.
- Webster's Bible (WBS)
- The enemy that sowed them is the devil; the harvest is the end of the world; and the reapers are the angels.
- Young's Literal Translation (YLT)
- and the enemy who sowed them is the devil, and the harvest is a full end of the age, and the reapers are messengers.
Read in context
- 37ಆತನು ಪ್ರತ್ಯುತ್ತರವಾಗಿ ಅವರಿಗೆ-- ಒಳ್ಳೇ ಬೀಜ ಬಿತ್ತುವ ವನು ಮನುಷ್ಯಕುಮಾರನು;
- 38ಹೊಲವು ಈ ಲೋಕ; ಒಳ್ಳೇ ಬೀಜವು ರಾಜ್ಯದ ಮಕ್ಕಳಾಗಿದ್ದಾರೆ; ಆದರೆ ಹಣಜಿಯು ಕೆಡುಕನ ಮಕ್ಕಳಾಗಿದ್ದಾರೆ.
- 39ಅದನ್ನು ಬಿತ್ತಿದ ವೈರಿಯು ಸೈತಾನನೇ; ಸುಗ್ಗೀ ಕಾಲವು ಲೋಕದ ಅಂತ್ಯವಾಗಿದೆ; ಮತ್ತು ಕೊಯ್ಯುವವರು ದೂತರೇ.
- 40ಹೇಗೆ ಹಣಜಿಯನ್ನು ಕೂಡಿಸಿ ಬೆಂಕಿಯಲ್ಲಿ ಸುಡು ವರೋ ಹಾಗೆಯೇ ಈ ಲೋಕಾಂತ್ಯದಲ್ಲಿ ಆಗುವದು.
- 41ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿ ಸುವನು; ಅವರು ಆತಂಕ ಮಾಡುವ ಎಲ್ಲವುಗಳನ್ನೂ ದುಷ್ಟತನ ಮಾಡುವವರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು;
Cross references
- Revelation 14:15–19 ಪ್ರಕಟನೆ 14:15–19ಆಗ ಮತ್ತೊಬ್ಬ ದೂತನು ಆಲಯದೊಳಗಿಂದ ಬಂದು ಮೇಘದ ಮೇಲೆ ಕೂತಿದ್ದಾತನಿಗೆ--ನಿನಗೆ ಕೊಯ್ಯುವ ಕಾಲ ಬಂದಿರುವದರಿಂದ ನಿನ್ನ ಕುಡುಗೋಲನ್ನು ಹಾಕಿ ಕೊಯ್ಯಿ; ಯಾಕಂದರೆ ಭೂಮಿಯ ಪೈರು ಮಾಗಿದೆ ಎಂದು ಮಹಾಶಬ್ದದಿಂದ ಕೂಗಿದನು. ಮೇಘದ ಮೇಲೆ ಕೂತಿದ್ದಾತನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಹಾಕಿದನು; ಆಗ ಭೂಮಿಯ ಪೈರು ಕೊಯ್ಯಲ್ಪಟ್ಟಿತು. ಮತ್ತೊಬ್ಬ ದೂತನು ಪರಲೋಕದಲ್ಲಿರುವ ದೇವಾಲಯದೊಳಗಿಂದ ಬಂದನು; ಅವನಲ್ಲಿಯೂ ಹದವಾದ ಕುಡುಗೋಲು ಇತ್ತು. ಬೆಂಕಿಯ ಮೇಲೆ ಅಧಿಕಾರವಿದ್ದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು ಆ ಹದವಾದ ಕುಡುಗೋಲು ಇದ್ದವನಿಗೆ--ನಿನ್ನ ಹದವಾದ ಕುಡುಗೋಲನ್ನು ಹಾಕಿ ಭೂಮಿಯ ದ್ರಾಕ್ಷೇ ಗೊಂಚಲುಗಳನ್ನು ಕೂಡಿಸು; ಯಾಕಂದರೆ ಅದರ ಹಣ್ಣುಗಳು ಪೂರಾ ಮಾಗಿವೆ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು. ಆಗ ಆ ದೂತನು ತನ್ನ ಕುಡುಗೋಲನ್ನು ಭೂಮಿಗೆ ಹಾಕಿ ಭೂಮಿಯ ದ್ರಾಕ್ಷೇಹಣ್ಣನ್ನು ಕೂಡಿಸಿ ದೇವರ ರೌದ್ರದ ದೊಡ್ಡ ದ್ರಾಕ್ಷೇತೊಟ್ಟಿಯಲ್ಲಿ ಹಾಕಿದನು.ಆ ದ್ರಾಕ್ಷೇ ತೊಟ್ಟಿಯನ್ನು ಪಟ್ಟಣದ ಹೊರಗೆ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಇನ್ನೂರು ಮೈಲಿ ದೂರ ಹರಿಯಿತು.
- Matthew 13:49 ಮತ್ತಾಯನು 13:49ಹಾಗೆಯೇ ಲೋಕಾಂತ್ಯ ದಲ್ಲಿ ಇರುವದು; ದೂತರು ಹೊರಟುಬಂದು ನೀತಿವಂತರ ಮಧ್ಯದಿಂದ ಕೆಡುಕರನ್ನು ಪ್ರತ್ಯೇಕಿಸುವರು.
- Matthew 25:31 ಮತ್ತಾಯನು 25:31ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು;
- Joel 3:13 ಯೋವೇಲ 3:13ಕುಡುಗೋಲನ್ನು ಹಾಕಿರಿ, ಬೆಳೆ ಪಕ್ವವಾಯಿತು; ಬಂದು ಇಳಿಯಿರಿ; ದ್ರಾಕ್ಷೆಯ ಅಲೆ ತುಂಬಿ ಅದೆ; ತೊಟ್ಟಿಗಳು ತುಳುಕುತ್ತವೆ; ಅವರ ಕೆಟ್ಟತನವು ಬಹಳವಾಗಿದೆ.
- Revelation 19:20 ಪ್ರಕಟನೆ 19:20ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
- Revelation 12:9 ಪ್ರಕಟನೆ 12:9ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.
- Matthew 24:3 ಮತ್ತಾಯನು 24:3ಆತನು ಎಣ್ಣೇಮರಗಳ ಗುಡ್ಡದ ಮೇಲೆ ಕೂತುಕೊಂಡಾಗ ಶಿಷ್ಯರು ಪ್ರತ್ಯೇಕವಾಗಿ ಆತನ ಬಳಿಗೆ ಬಂದು--ಇವು ಯಾವಾಗ ಆಗುವವು? ಮತ್ತು ನಿನ್ನ ಬರೋಣಕ್ಕೂ ಲೋಕವು ಅಂತ್ಯವಾಗುವದಕ್ಕೂ ಸೂಚನೆ ಏನು? ನಮಗೆ ಹೇಳು ಎಂದು ಕೇಳಿದರು.
- Revelation 13:14 ಪ್ರಕಟನೆ 13:14ಮೃಗದ ಮುಂದೆ ಇಂಥಾ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರ ವನ್ನು ಹೊಂದಿ ಭೂಮಿಯ ಮೇಲೆ ವಾಸಿಸುವ ಜನರನ್ನು ಮೋಸಗೊಳಿಸುವದಲ್ಲದೆ ಕತ್ತಿಯಿಂದ ಗಾಯಹೊಂದಿ ಬದುಕಿದ ಮೃಗಕ್ಕಾಗಿ ವಿಗ್ರಹವನ್ನು ಮಾಡಿಕೊಳ್ಳ ಬೇಕೆಂದು ಅವರಿಗೆ ಹೇಳುತ್ತದೆ.
- Matthew 13:25 ಮತ್ತಾಯನು 13:25ಹೇಗಂದರೆ ಜನರು ನಿದ್ರೆ ಮಾಡುತ್ತಿದ್ದಾಗ ಅವನ ವೈರಿಯು ಬಂದು ಗೋದಿಯ ನಡುವೆ ಹಣಜಿ ಯನ್ನು ಬಿತ್ತಿ ಹೊರಟು ಹೋದನು.
- 2 Thessalonians 1:7–10 2 ಥೆಸಲೊನೀಕದವರಿಗೆ 1:7–10ರ್ತನಾದ ಯೇಸು ತನ್ನ ಬಲವುಳ್ಳ ದೂತರೊಂದಿಗೆ ಪರಲೋಕ ದಿಂದ ಪ್ರತ್ಯಕ್ಷನಾಗುವಾಗ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನ ಮಾಡುವದೂ ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ; ಅಂಥವರು ಕರ್ತನ ಸಾನಿಧ್ಯದಿಂದಲೂ ಬಲವುಳ್ಳ ಆತನ ಮಹಿಮೆಯಿಂದಲೂ ನಿತ್ಯ ನಾಶನವೆಂಬ ಶಿಕ್ಷೆ ಯನ್ನು ಹೊಂದುವರು. ಆ ದಿನದಲ್ಲಿ ಆತನು ತನ್ನ ಪರಿಶುದ್ಧರಲ್ಲಿ ಮಹಿಮೆ ಹೊಂದುವಂತೆಯೂ ನಂಬುವವರೆಲ್ಲರಲ್ಲಿ ಮೆಚ್ಚಿಕೆ ಹೊಂದುವಂತೆಯೂ ಬರುವನು. (ಯಾಕಂದರೆ ನೀವು ನಮ್ಮ ಸಾಕ್ಷಿಯನ್ನು ನಂಬಿದಿರಿ).
- 1 Peter 5:8 1 ಪೇತ್ರನು 5:8ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.
- Hebrews 9:26 ಇಬ್ರಿಯರಿಗೆ 9:26ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು; ಆದರೆ ಈಗ ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪನಿವಾರಣೆ ಮಾಡುವದಕ್ಕೆ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷ ನಾದನು.