Matthew · chapter 13 · verse 43
Matthew 13:43 in Kannada
ತರುವಾಯ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ.
Taruvaaya neetivantaru tamma tandeya raajyadalli sooryanante prakaashisuvaru. Keluvadakke kivigalullavanu kelali.
Matthew 13:43 in English
- King James Version (KJV)
- Then shall the righteous shine forth as the sun in the kingdom of their Father. Who hath ears to hear, let him hear.
- World English Bible (WEB)
- Then the righteous will shine like the sun in the Kingdom of their Father. He who has ears to hear, let him hear.
- American Standard Version (ASV)
- Then shall the righteous shine forth as the sun in the kingdom of their Father. He that hath ears, let him hear.
- Bible in Basic English (BBE)
- Then will the upright be shining as the sun in the kingdom of their Father. He who has ears, let him give ear.
- Darby Translation (DBY)
- Then the righteous shall shine forth as the sun in the kingdom of their Father. He that has ears, let him hear.
- Webster's Bible (WBS)
- Then shall the righteous shine as the sun in the kingdom of their Father. Who hath ears to hear, let him hear.
- Young's Literal Translation (YLT)
- 'Then shall the righteous shine forth as the sun in the reign of their Father. He who is having ears to hear — let him hear.
Read in context
- 41ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿ ಸುವನು; ಅವರು ಆತಂಕ ಮಾಡುವ ಎಲ್ಲವುಗಳನ್ನೂ ದುಷ್ಟತನ ಮಾಡುವವರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು;
- 42ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
- 43ತರುವಾಯ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ.
- 44ಪರಲೋಕರಾಜ್ಯವು ಹೊಲದಲ್ಲಿ ಬಚ್ಚಿಟ್ಟಿದ ಸಂಪತ್ತಿಗೆ ಹೋಲಿಕೆಯಾಗಿದೆ; ಅದನ್ನು ಒಬ್ಬ ಮನು ಷ್ಯನು ಕಂಡುಕೊಂಡು ಬಚ್ಚಿಟ್ಟು ಅದರ ಸಂತೋಷದ ನಿಮಿತ್ತ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಳ್ಳುತ್ತಾನೆ.
- 45ಪರಲೋಕರಾಜ್ಯವು ಒಳ್ಳೇ ಮುತ್ತುಗಳನ್ನು ಹುಡುಕುವ ವ್ಯಾಪಾರಸ್ಥನಿಗೆ ಹೋಲಿಕೆಯಾಗಿದೆ.
Cross references
- Daniel 12:3 ದಾನಿಯೇಲನು 12:3ಬುದ್ಧಿವಂತರಾದವರು ಆಕಾಶದ ಕಾಂತಿಯ ಹಾಗೆ ಯೂ ಅನೇಕರನ್ನು ನೀತಿಯ ಕಡೆಗೆ ತಿರುಗಿಸಿದ ವರು ನಕ್ಷತ್ರಗಳ ಹಾಗೆಯೂ ಎಂದೆಂದಿಗೂ ಪ್ರಕಾಶಿಸು ವರು;
- Luke 12:32 ಲೂಕನು 12:32ಚಿಕ್ಕ ಹಿಂಡೇ, ಭಯಪಡಬೇಡ; ಯಾಕಂದರೆ ನಿಮಗೆ ರಾಜ್ಯವನ್ನು ಕೊಡುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.
- Matthew 11:15 ಮತ್ತಾಯನು 11:15ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ.
- Matthew 25:34 ಮತ್ತಾಯನು 25:34ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;
- 1 Corinthians 15:41–54 1 ಕೊರಿಂಥದವರಿಗೆ 15:41–54ಸೂರ್ಯನ ಮಹಿಮೆ ಒಂದು ವಿಧ, ಚಂದ್ರನ ಮಹಿಮೆ ಮತ್ತೊಂದು ವಿಧ, ನಕ್ಷತ್ರಗಳ ಮಹಿಮೆ ಇನ್ನೊಂದು ವಿಧ ಮಹಿಮೆಯಲ್ಲಿ ಒಂದು ನಕ್ಷತ್ರಕ್ಕೂ ಇನ್ನೊಂದು ನಕ್ಷತ್ರಕ್ಕೂ ಹೆಚ್ಚು ಕಡಿಮೆಯುಂಟಷ್ಟೆ. ಸತ್ತವರಿಗಾಗುವ ಪುನರುತ್ಥಾನವು ಅದೇ ಪ್ರಕಾರ ವಾಗಿರುವದು. ದೇಹವು ಲಯಾವಸ್ಥೆಯಲ್ಲಿ ಬಿತ್ತಲ್ಪಡು ತ್ತದೆ. ನಿರ್ಲಯಾವಸ್ಥೆಯಲ್ಲಿ ಎಬ್ಬಿಸಲ್ಪಡುತ್ತದೆ. ಹೀನಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಮಹಿಮೆಯಲ್ಲಿ ಎಬ್ಬಿಸಲ್ಪಡುತ್ತದೆ; ನಿರ್ಬಲಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಬಲಾವಸ್ಥೆಯಲ್ಲಿ ಎಬ್ಬಿಸಲ್ಪಡುತ್ತದೆ. ಪ್ರಾಕೃತ ದೇಹವಾಗಿ ಬಿತ್ತಲ್ಪಡುತ್ತದೆ, ಆತ್ಮಿಕದೇಹವಾಗಿ ಎಬ್ಬಿಸಲ್ಪಡುತ್ತದೆ; ಪ್ರಾಕೃತದೇಹವಿರುವದಾದರೆ ಆತ್ಮಿಕ ದೇಹವೂ ಇರುವದು. ಬರೆದಿರುವ ಪ್ರಕಾರ-- ಮೊದಲನೆಯ ಮನುಷ್ಯನಾದ ಆದಾಮನು ಜೀವಾತ್ಮ ನಾದನು; ಕಡೇ ಆದಾಮನು ಬದುಕಿಸುವ ಆತ್ಮ ನಾಗಿದ್ದಾನೆ. ಹೇಗಿದ್ದರೂ ಆತ್ಮಿಕವಾದದ್ದು ಮೊದಲ ನೆಯದಲ್ಲ, ಪ್ರಾಕೃತವಾದದ್ದು ಮೊದಲನೆಯದು; ಆಮೇಲೆ ಆತ್ಮಿಕವಾದದ್ದು. ಮೊದಲನೆಯ ಮನುಷ್ಯನು ಮಣ್ಣಿನಿಂದ ಉಂಟಾಗಿ ಮಣ್ಣಿಗೆ ಸಂಬಂಧ ಪಟ್ಟವನು; ಎರಡನೆಯ ಮನುಷ್ಯನು ಪರಲೋಕದಿಂದ ಬಂದ ಕರ್ತನು. ಮೊದಲನೆಯ ಮನುಷ್ಯನು ಮಣ್ಣಿನಿಂದ ಉಂಟಾಗಿ ಮಣ್ಣಿಗೆ ಸಂಬಂಧ ಪಟ್ಟವನು; ಎರಡನೆಯ ಮನುಷ್ಯನು ಪರಲೋಕದಿಂದ ಬಂದ ಕರ್ತನು. ನಾವು ಮಣ್ಣಿನಿಂದ ಹುಟ್ಟಿದವನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ ಪರಲೋಕದಿಂದ ಬಂದಾ ತನ ಸಾರೂಪ್ಯವನ್ನೂ ಧರಿಸಿಕೊಳ್ಳುವೆವು. ಸಹೋದರರೇ, ನಾನು ಹೇಳುವದೇನಂದರೆ-- ಮಾಂಸವು ರಕ್ತವು ದೇವರ ರಾಜ್ಯಕ್ಕೆ ಬಾಧ್ಯವಾಗ ಲಾರವು; ಇಲ್ಲವೆ ಲಯವಾಗುವದು ನಿರ್ಲಯತ್ವಕ್ಕೆ ಬಾಧ್ಯವಾಗುವದಿಲ್ಲ. ಇಗೋ, ಮರ್ಮವಾಗಿದ್ದ ಒಂದು ಸಂಗತಿಯನ್ನು ನಿಮಗೆ ತಿಳಿಸುತ್ತೇನೆ-- ನಾವೆಲ್ಲರೂ ನಿದ್ರೆಹೋಗುವದಿಲ್ಲ, ಆದರೆ ನಾವೆ ಲ್ಲರೂ ಮಾರ್ಪಡುವೆವು. ಕಡೇ ತುತೂರಿಯು ಧ್ವನಿಯಾಗುವಾಗ ನಾವು ಒಂದು ಕ್ಷಣದಲ್ಲೇ ರೆಪ್ಪೆಬಡಿಯುವಷ್ಟರೊಳಗಾಗಿ ಮಾರ್ಪಡುವೆವು. ತುತೂರಿಯು ಊದಲಾಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ಮಾರ್ಪಡುವೆವು. ಲಯ ವಾಗುವಂಥದ್ದು (ಈ ದೇಹವು) ನಿರ್ಲಯತ್ವವನ್ನು ಧರಿಸಿಕೊಳ್ಳುವದೂ ಮರಣಾಧೀನವಾಗಿರುವಂಥ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವದೂ ಅವಶ್ಯ. ಲಯವಾಗುವಂಥದ್ದು ನಿರ್ಲಯತ್ವವನ್ನು ಧರಿಸಿ ಕೊಳ್ಳುವದು, ಮರಣಾಧೀನವಾಗಿರುವಂಥದ್ದು ಅಮರ ತ್ವವನ್ನು ಧರಿಸಿಕೊಳ್ಳುವದು; ಆಗ ಬರೆದಿರುವ ಮಾತು ನೆರವೇರುವದು, ಆ ಮಾತು ಏನಂದರೆ--ಜಯವು ಮರಣವನ್ನು ನುಂಗಿತು ಎಂಬದೇ.
- Revelation 21:22–23 ಪ್ರಕಟನೆ 21:22–23ಪಟ್ಟಣದಲ್ಲಿ ನಾನು ಆಲಯವನ್ನು ಕಾಣಲಿಲ್ಲ; ಯಾಕಂದರೆ ಸರ್ವಶಕ್ತನಾದ ದೇವರಾಗಿ ರುವ ಕರ್ತನೂ ಕುರಿಮರಿಯಾದಾತನೂ ಅದರ ಆಲಯವಾಗಿದ್ದಾರೆ. ಪಟ್ಟಣದಲ್ಲಿ ಬೆಳಕನ್ನು ಕೊಡು ವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಯಾಕಂದರೆ ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಕುರಿಮರಿಯಾದಾತನೇ ಅದರ ದೀಪ.
- Revelation 21:3–5 ಪ್ರಕಟನೆ 21:3–5ಇದಲ್ಲದೆ ಪರಲೋಕದೊಳಗಿಂದ ಬಂದ ಮಹಾಶಬ್ದವು ನನಗೆ ಕೇಳಿಸಿತು. ಅದು-ಇಗೋ, ದೇವರ ಗುಡಾರವು ಮನುಷ್ಯರೊಂದಿಗೆ ಅದೆ; ಆತನು ಅವರೊಡನೆ ವಾಸ ಮಾಡುವನು, ಅವರು ಆತನ ಪ್ರಜೆಗಳಾಗಿರುವರು; ದೇವರು ತಾನೇ ಅವರ ಸಂಗಡ ಇರುವನು, ಇದಲ್ಲದೆ ಆತನು ಅವರ ದೇವರಾಗಿ ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣ ವಿರುವದಿಲ್ಲ. ಇನ್ನು ದುಃಖವಾಗಲಿ ಗೋಳಾಟವಾಗಲಿ ನೋವಾಗಲಿ ಇರುವದೇ ಇಲ್ಲ. ಮೊದಲಿದ್ದವುಗಳೆಲ್ಲಾ ಇಲ್ಲದೆ ಹೋದವು ಎಂದು ಹೇಳಿತು. ಆಗ ಸಿಂಹಾಸ ನದ ಮೇಲೆ ಕೂತಿದ್ದಾತನು--ಇಗೋ, ಎಲ್ಲವನ್ನು ನಾನು ಹೊಸದು ಮಾಡುತ್ತೇನೆ ಅಂದನು. ಆತನು ನನಗೆ--ಈ ಮಾತುಗಳು ಸತ್ಯವಾದವುಗಳು ನಂಬ ತಕ್ಕವುಗಳೂ ಆಗಿವೆ ಎಂಬದಾಗಿ ಬರೆ ಎಂದು ನನಗೆ ಹೇಳಿದನು.
- James 2:5 ಯಾಕೋಬನು 2:5ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
- Matthew 25:36 ಮತ್ತಾಯನು 25:36ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿ ದಿರಿ; ನಾನು ಅಸ್ವಸ್ಥನಾಗಿದ್ದೆನು; ನೀವು ನನ್ನನ್ನು ಸಂಧಿಸಿ ದಿರಿ; ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ ಎಂದು ಹೇಳುವನು.
- Luke 22:29 ಲೂಕನು 22:29ನನ್ನ ತಂದೆಯು ನನಗೆ ರಾಜ್ಯವನ್ನು ನೇಮಕ ಮಾಡಿದ ಹಾಗೆಯೇ ನಾನೂ ನಿಮಗೆ ರಾಜ್ಯ ವನ್ನು ನೇಮಕ ಮಾಡುತ್ತೇನೆ.
- 1 Corinthians 15:58 1 ಕೊರಿಂಥದವರಿಗೆ 15:58ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
- Matthew 26:29 ಮತ್ತಾಯನು 26:29ಮತ್ತು ನಾನು ನಿಮಗೆ ಹೇಳುವದೇನಂದರೆ--ಇಂದಿನಿಂದ ನನ್ನ ತಂದೆಯ ರಾಜ್ಯದಲ್ಲಿ ನಿಮ್ಮೊಂದಿಗೆ ಹೊಸದಾಗಿ ಕುಡಿಯುವ ಆ ದಿನದವರೆಗೆ ನಾನು ಈ ದ್ರಾಕ್ಷಾರಸ ವನ್ನು ಕುಡಿಯುವದೇ ಇಲ್ಲ ಎಂದು ಹೇಳಿದನು.