Matthew · chapter 13 · verse 45
Matthew 13:45 in Kannada
ಪರಲೋಕರಾಜ್ಯವು ಒಳ್ಳೇ ಮುತ್ತುಗಳನ್ನು ಹುಡುಕುವ ವ್ಯಾಪಾರಸ್ಥನಿಗೆ ಹೋಲಿಕೆಯಾಗಿದೆ.
Paralokaraajyavu olle muttugalannu hudukuva vyaapaarasthanige holikeyaagide.
Matthew 13:45 in English
- King James Version (KJV)
- Again, the kingdom of heaven is like unto a merchant man, seeking goodly pearls:
- World English Bible (WEB)
- “Again, the Kingdom of Heaven is like a man who is a merchant seeking fine pearls,
- American Standard Version (ASV)
- Again, the kingdom of heaven is like unto a man that is a merchant seeking goodly pearls:
- Bible in Basic English (BBE)
- Again, the kingdom of heaven is like a trader searching for beautiful jewels.
- Darby Translation (DBY)
- Again, the kingdom of the heavens is like a merchant seeking beautiful pearls;
- Webster's Bible (WBS)
- Again, the kingdom of heaven is like a merchant seeking goodly pearls:
- Young's Literal Translation (YLT)
- 'Again, the reign of the heavens is like to a man, a merchant, seeking goodly pearls,
Read in context
- 43ತರುವಾಯ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ.
- 44ಪರಲೋಕರಾಜ್ಯವು ಹೊಲದಲ್ಲಿ ಬಚ್ಚಿಟ್ಟಿದ ಸಂಪತ್ತಿಗೆ ಹೋಲಿಕೆಯಾಗಿದೆ; ಅದನ್ನು ಒಬ್ಬ ಮನು ಷ್ಯನು ಕಂಡುಕೊಂಡು ಬಚ್ಚಿಟ್ಟು ಅದರ ಸಂತೋಷದ ನಿಮಿತ್ತ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಳ್ಳುತ್ತಾನೆ.
- 45ಪರಲೋಕರಾಜ್ಯವು ಒಳ್ಳೇ ಮುತ್ತುಗಳನ್ನು ಹುಡುಕುವ ವ್ಯಾಪಾರಸ್ಥನಿಗೆ ಹೋಲಿಕೆಯಾಗಿದೆ.
- 46ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡುಕೊಂಡು ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಅದನ್ನು ಕೊಂಡುಕೊಂಡನು.
- 47ಪರಲೋಕರಾಜ್ಯವು ಸಮುದ್ರದಲ್ಲಿ ಬೀಸಲ್ಪಟ್ಟು ಎಲ್ಲಾ ತರವಾದದ್ದನ್ನು (ಮಾನುಗಳನ್ನು) ಕೂಡಿಸಿದ ಬಲೆಗೆ ಹೋಲಿಕೆಯಾಗಿದೆ.
Cross references
- Proverbs 8:10–11 ಜ್ಞಾನೋಕ್ತಿಗಳು 8:10–11ಬೆಳ್ಳಿಯನ್ನಲ್ಲ, ನನ್ನ ಶಿಕ್ಷಣವನ್ನೂ ಆಯಲ್ಪಟ್ಟ ಬಂಗಾ ರಕ್ಕಿಂತ ತಿಳುವಳಿಕೆಯನ್ನೂ ಪಡೆದುಕೋ. ಮಾಣಿಕ್ಯ ಗಳಿಗಿಂತ ಜ್ಞಾನವು ಉತ್ತಮ, ಅಪೇಕ್ಷಿಸಲ್ಪಡತಕ್ಕ ಎಲ್ಲಾ ವಸ್ತುಗಳು ಅದಕ್ಕೆ ಹೋಲಿಸುವದಕ್ಕಾಗದು.
- Proverbs 3:13–18 ಜ್ಞಾನೋಕ್ತಿಗಳು 3:13–18ಜ್ಞಾನವನ್ನು ಕಂಡು ಕೊಳ್ಳುವವನೂ ವಿವೇಕವನ್ನು ಸಂಪಾದಿಸಿಕೊಳ್ಳುವವನೂ ಧನ್ಯನು. ಅದರ ವ್ಯಾಪಾರವೂ ಬೆಳ್ಳಿಯ ವ್ಯಾಪಾರಕ್ಕಿಂತಲೂ ಅದರ ಲಾಭವು ಸೋಸಿದ ಬಂಗಾರಕ್ಕಿಂತಲೂ ಉತ್ತಮವಾಗಿದೆ. ಅದು ಮಾಣಿಕ್ಯಗಳಿಗಿಂತಲೂ ಬಹು ಅಮೂಲ್ಯವುಳ್ಳದ್ದಾಗಿದ್ದು ನಿನ್ನ ಇಷ್ಟ ವಸ್ತುಗಳೆಲ್ಲವೂ ಅದಕ್ಕೆ ಸಮವಾಗುವದಿಲ್ಲ. ಆಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ ಎಡಗೈಯಲ್ಲಿ ಐಶ್ವರ್ಯವೂ ಘನತೆಯೂ ಇವೆ. ಅವಳ ಮಾರ್ಗ ಗಳು ಸಂತೋಷಕರವೂ ಎಲ್ಲಾ ದಾರಿಗಳು ಸಮಾ ಧಾನಕರವೂ ಆಗಿವೆ. ತನ್ನನ್ನು ಹಿಡಿದುಕೊಳ್ಳುವ ವರಿಗೆ ಆಕೆಯು ಜೀವದ ವೃಕ್ಷವಾಗಿದ್ದಾಳೆ; ಆಕೆಯನ್ನು ಭದ್ರವಾಗಿ ಇಟ್ಟುಕೊಳ್ಳುವ ಪ್ರತಿಯೊಬ್ಬನೂ ಧನ್ಯನು.
- Matthew 16:26 ಮತ್ತಾಯನು 16:26ಒಬ್ಬ ಮನುಷ್ಯನು ಇಡೀ ಲೋಕವನ್ನು ಸಂಪಾದಿಸಿ ಕೊಂಡು ತನ್ನ ಆತ್ಮವನ್ನು ನಷ್ಟಪಡಿಸಿ ಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ತನ್ನ ಆತ್ಮಕ್ಕೆ ಬದಲಾಗಿ ಒಬ್ಬ ಮನುಷ್ಯನು ಏನು ಕೊಟ್ಟಾನು?
- Matthew 13:24 ಮತ್ತಾಯನು 13:24ಆತನು ಮತ್ತೊಂದು ಸಾಮ್ಯವನ್ನು ಹೇಳಿದ್ದೇ ನಂದರೆ--ಪರಲೋಕ ರಾಜ್ಯವು ಒಳ್ಳೇ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ್ದ ಒಬ್ಬ ಮನುಷ್ಯನಿಗೆ ಹೋಲಿಕೆ ಯಾಗಿದೆ.
- Job 28:18 ಯೋಬನು 28:18ಹವಳವನ್ನೂ ಮುತ್ತುಗಳನ್ನೂ ನೆನಪು ಮಾಡುವದಿಲ್ಲ; ಜ್ಞಾನದ ಸಂಪತ್ತು ಮಾಣಿಕ್ಯಗಳಿಗಿಂತ ಮೇಲಾದದ್ದು.
- Proverbs 8:18–20 ಜ್ಞಾನೋಕ್ತಿಗಳು 8:18–20ಐಶ್ವರ್ಯವೂ ಘನತೆಯೂ ಹೌದು, ಶ್ರೇಷ್ಠ ಸಂಪತ್ತೂ ನೀತಿಯೂ ನನ್ನೊಂದಿಗಿವೆ. ನನ್ನ ಫಲವು ಬಂಗಾರಕ್ಕಿಂತಲೂ ಹೌದು, ಚೊಕ್ಕ ಬಂಗಾರಕ್ಕಿಂತಲೂ ನನ್ನ ಆದಾಯವು ಆಯಲ್ಪಟ್ಟ ಬೆಳ್ಳಿಗಿಂತಲೂ ಶ್ರೇಷ್ಠವಾಗಿದೆ. ನೀತಿಯ ಮಾರ್ಗದಲ್ಲಿ ನ್ಯಾಯದ ದಾರಿಗಳ ಮಧ್ಯದಲ್ಲಿ ನಾನು ನಡಿಸುತ್ತೇನೆ.
- Ecclesiastes 12:13 ಪ್ರಸಂಗಿ 12:13ಸಮಸ್ತ ವಿಷಯವನ್ನು ನಾವು ಕೇಳಿ ಮುಗಿಸೋಣ; ದೇವರಿಗೆ ಭಯಪಡು; ಆತನ ಆಜ್ಞೆಗಳನ್ನು ಪಾಲಿಸು; ಇದೇ ಮನುಷ್ಯನ ಪ್ರಮುಖ ಕರ್ತವ್ಯ.ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.
- Matthew 22:5 ಮತ್ತಾಯನು 22:5ಕರೆಯಲ್ಪಟ್ಟವರು ಅದನ್ನು ಅಲಕ್ಷ್ಯಮಾಡಿ ಒಬ್ಬನು ತನ್ನ ಹೊಲಕ್ಕೂ ಇನ್ನೊಬ್ಬನು ತನ್ನ ವ್ಯಾಪಾರಕ್ಕೂ ಹೊರಟುಹೋದರು.
- Psalm 4:6–7 ಕೀರ್ತನೆಗಳು 4:6–7ನಮಗೆ ಒಳ್ಳೇದನ್ನು ಮಾಡುವವರು ಯಾರೆಂದು ಹೇಳುವವರು ಅನೇಕರು. ಕರ್ತನೇ, ನಿನ್ನ ಮುಖದ ಬೆಳಕನ್ನು ನಮ್ಮ ಮೇಲೆ ಪ್ರಕಾಶಗೊಳಿಸು. ಅವರ ಧಾನ್ಯವೂ ದ್ರಾಕ್ಷಾರಸವೂ ಹೆಚ್ಚಿದ ಕಾಲಕ್ಕಿಂತ ಅಧಿಕ ವಾಗಿ ನನ್ನ ಹೃದಯದಲ್ಲಿ ಸಂತೋಷವನ್ನು ಇಟ್ಟಿದ್ದೀ.ಸಮಾಧಾನವಾಗಿ ಮಲಗಿ ನಿದ್ರೆ ಸಹ ಮಾಡುವೆನು; ಯಾಕಂದರೆ ಕರ್ತನೇ, ನೀನೋಬ್ಬನೇ ನನ್ನನ್ನು ಸುರ ಕ್ಷಿತವಾಗಿ ವಾಸಿಸುವಂತೆ ಮಾಡುತ್ತೀ.
- Psalm 39:6–7 ಕೀರ್ತನೆಗಳು 39:6–7ನಿಶ್ಚಯವಾಗಿ ಮನುಷ್ಯನು ವ್ಯರ್ಥವಾದ ತೋರಿಕೆ ಯಲ್ಲಿ ನಡೆದುಕೊಳ್ಳುತ್ತಾನೆ; ನಿಶ್ಚಯವಾಗಿ ವ್ಯರ್ಥ ವಾದ ಗದ್ದಲ ಮಾಡುತ್ತಾರೆ. ಅವನು ಐಶ್ವರ್ಯವನ್ನು ಕುಪ್ಪೆ ಮಾಡುತ್ತಾನೆ; ಆದರೆ ಅದನ್ನು ಕೂಡಿಸುವವರು ಯಾರೋ ಅರಿಯನು. ಹೀಗಿರಲಾಗಿ ಕರ್ತನೇ, ನಾನು ಇನ್ನು ಯಾವದಕ್ಕೆ ಕಾದುಕೊಳ್ಳಲಿ? ನನ್ನ ನಿರೀಕ್ಷೆ ನಿನ್ನಲ್ಲಿ ಅದೆ.
- Ecclesiastes 12:8 ಪ್ರಸಂಗಿ 12:8ವ್ಯರ್ಥದ ವ್ಯರ್ಥಗಳೂ ಎಲ್ಲವೂ ವ್ಯರ್ಥವೇ ಎಂದು ಪ್ರಸಂಗಿ ಹೇಳುವನು.
- Ecclesiastes 2:2–12 ಪ್ರಸಂಗಿ 2:2–12ನಗೆಯ ವಿಷಯವಾಗಿ--ಇದು ಹುಚ್ಚು ಎಂದೂ ಸಂತೋಷದ ವಿಷಯವಾಗಿ--ಇದೇನು ಮಾಡುತ್ತದೆ ಎಂದೂ ನಾನು ಹೇಳಿದೆನು. ಜ್ಞಾನದಿಂದ ನನ್ನ ಹೃದಯವನ್ನು ಇನ್ನು ಸಂತೋಷಪಡಿಸುವದಕ್ಕಾಗಿ ದ್ರಾಕ್ಷಾರಸಕ್ಕೆ ನನ್ನನ್ನು ನಾನು ಒಪ್ಪಿಸಿ ಕೊಳ್ಳುವಂತೆಯೂ ಆಕಾಶದ ಕೆಳಗೆ ತಮ್ಮ ಜೀವ ಮಾನದಲ್ಲೆಲ್ಲಾ ಮನುಷ್ಯ ಪುತ್ರರಿಗೆ ಒಳ್ಳೆಯದೇನೆಂದು ನೋಡುವ ತನಕ ಬುದ್ಧಿ ಹೀನತೆಯನ್ನು ಹಿಡಿಯುವದಕ್ಕೂ ನಾನು ನನ್ನ ಹೃದಯ ದಲ್ಲಿ ವಿಚಾರ ಮಾಡಿಕೊಂಡೆನು. ನಾನು ಮಹ ತ್ತಾದ ಕಾರ್ಯಗಳನ್ನು ನಡಿಸಿದೆನು, ಮನೆಗಳನ್ನು ಕಟ್ಟಿಸಿ ಕೊಂಡೆನು; ದ್ರಾಕ್ಷಾತೋಟಗಳನ್ನು ನೆಟ್ಟೆನು. ಉದ್ಯಾನ ವನಗಳನ್ನೂ ಹಣ್ಣು ತೋಟಗಳನ್ನೂ ಮಾಡಿಕೊಂಡು ಅವುಗಳಲ್ಲಿ ತರತರವಾದ ಹಣ್ಣಿನ ವೃಕ್ಷಗಳನ್ನು ನೆಟ್ಟೆನು. ವೃಕ್ಷಗಳನ್ನು ಬೆಳೆಸುವ ಮರಕ್ಕೆ ನೀರು ಹಾಯಿಸುವ ದಕ್ಕೆ ನಾನು ಕೊಳಗಳನ್ನು ಮಾಡಿಕೊಂಡೆನು. ನನಗೆ ದಾಸದಾಸಿಯರು ಇದ್ದರು; ನನ್ನ ಮನೆಯಲ್ಲಿ ಹುಟ್ಟಿದ ದಾಸರು ನನಗೆ ಇದ್ದರು; ನನಗೆ ಮುಂಚೆ ಯೆರೂಸ ಲೇಮಿನಲ್ಲಿ ಇದ್ದವರಿಗಿಂತ ದನಕುರಿಗಳ ಸಂಪತ್ತು ಹೆಚ್ಚಾ ಗಿತ್ತು. ನಾನು ಬೆಳ್ಳಿ ಬಂಗಾರಗಳನ್ನು ಅರಸರ ಮತ್ತು ಪ್ರಾಂತ್ಯಗಳ ವಿಶೇಷವಾದ ಸಂಪತ್ತನ್ನು ಸಂಗ್ರಹಿಸಿ ಕೊಂಡೆನು; ಗಾಯಕ ಗಾಯಕಿಯರನ್ನು ಮತ್ತು ಮನುಷ್ಯ ಪುತ್ರರಿಗೆ ಆನಂದಕರವಾದ ಸಂಗೀತ ವಾದ್ಯ ಗಳನ್ನು ಅವುಗಳಿಗೆ ಸಂಭವಿಸಿದವುಗಳನ್ನು ಸಂಪಾದಿಸಿ ಕೊಂಡೆನು. ಹೀಗೆ ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಇದ್ದ ಎಲ್ಲರಿಗಿಂತಲೂ ನಾನು ಅಭಿವೃದ್ಧಿ ಹೊಂದಿ ದೊಡ್ಡವನಾಗಿದ್ದೆನು. ನನ್ನ ಕಣ್ಣುಗಳು ಬಯಸಿದ್ದೆಲ್ಲವನ್ನು ಅವುಗಳಿಂದ ಹಿಂತೆಗೆಯಲಿಲ್ಲ, ಯಾವ ಸಂತೋಷಕ್ಕಾಗಿಯೂ ನನ್ನ ಹೃದಯವನ್ನು ನಾನು ತಡೆಯಲಿಲ್ಲ; ನನ್ನ ಎಲ್ಲಾ ಪ್ರಯಾಸದಲ್ಲಿ ನನ್ನ ಹೃದಯವು ಸಂತೋಷಿಸಿತು; ನನ್ನ ಪ್ರಯಾಸ ದಿಂದೆಲ್ಲಾ ನನಗಾದ ಪಾಲು ಇದೆ. ಆಗ ನನ್ನ ಕೈಗಳು ನಡಿಸಿದವುಗಳೆಲ್ಲವನ್ನು ನಾನು ಪ್ರಯಾಸ ಪಟ್ಟ ಪ್ರಯಾಸವನ್ನು ದೃಷ್ಟಿಸಿದೆನು; ಇಗೋ, ಎಲ್ಲವೂ ವ್ಯರ್ಥ ಮತ್ತು ಮನಸ್ಸಿಗೆ ಆಯಾಸಕರ. ಸೂರ್ಯನ ಕೆಳಗೆ ಯಾವ ಲಾಭವಿಲ್ಲ. ಜ್ಞಾನವನ್ನೂ ಹುಚ್ಚುತನವನ್ನೂ ಮೂಢತೆಯನ್ನೂ ನೋಡುವದಕ್ಕೆ ನಾನು ತಿರುಗಿಕೊಂಡೆನು; ಅರಸನ ತರುವಾಯ ಬರುವ ಮನುಷ್ಯನು ಏನು ಮಾಡಾನು? ಮೊದಲಿದ್ದದ್ದು ಆಗಲೇ ನಡೆಯಿತು.