Matthew · chapter 13 · verse 49
Matthew 13:49 in Kannada
ಹಾಗೆಯೇ ಲೋಕಾಂತ್ಯ ದಲ್ಲಿ ಇರುವದು; ದೂತರು ಹೊರಟುಬಂದು ನೀತಿವಂತರ ಮಧ್ಯದಿಂದ ಕೆಡುಕರನ್ನು ಪ್ರತ್ಯೇಕಿಸುವರು.
Haageye lokaantya dalli iruvadu; dootaru horatubandu neetivantara madhyadinda kedukarannu pratyekisuvaru.
Matthew 13:49 in English
- King James Version (KJV)
- So shall it be at the end of the world: the angels shall come forth, and sever the wicked from among the just,
- World English Bible (WEB)
- So it will be in the end of the world. The angels will come and separate the wicked from among the righteous,
- American Standard Version (ASV)
- So shall it be in the end of the world: the angels shall come forth, and sever the wicked from among the righteous,
- Bible in Basic English (BBE)
- So will it be in the end of the world: the angels will come and take out the bad from the good,
- Darby Translation (DBY)
- Thus shall it be in the completion of the age: the angels shall go forth and sever the wicked from the midst of the just,
- Webster's Bible (WBS)
- So shall it be at the end of the world: the angels shall come forth, and sever the wicked from among the just,
- Young's Literal Translation (YLT)
- so shall it be in the full end of the age, the messengers shall come forth and separate the evil out of the midst of the righteous,
Read in context
- 47ಪರಲೋಕರಾಜ್ಯವು ಸಮುದ್ರದಲ್ಲಿ ಬೀಸಲ್ಪಟ್ಟು ಎಲ್ಲಾ ತರವಾದದ್ದನ್ನು (ಮಾನುಗಳನ್ನು) ಕೂಡಿಸಿದ ಬಲೆಗೆ ಹೋಲಿಕೆಯಾಗಿದೆ.
- 48ಅದು ತುಂಬಿದಾಗ ಅವರು ಅದನ್ನು ದಡಕ್ಕೆ ಎಳೆದು ಕೂತುಕೊಂಡು ಒಳ್ಳೆಯವುಗಳನ್ನು ಪಾತ್ರೆಗಳಲ್ಲಿ ತುಂಬಿಸಿ ಕೆಟ್ಟವುಗಳನ್ನು ಹೊರಗೆ ಬಿಸಾಡಿದರು.
- 49ಹಾಗೆಯೇ ಲೋಕಾಂತ್ಯ ದಲ್ಲಿ ಇರುವದು; ದೂತರು ಹೊರಟುಬಂದು ನೀತಿವಂತರ ಮಧ್ಯದಿಂದ ಕೆಡುಕರನ್ನು ಪ್ರತ್ಯೇಕಿಸುವರು.
- 50ಮತ್ತು ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು ಎಂದು ಹೇಳಿದನು.
- 51ಇದಲ್ಲದೆ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ಗ್ರಹಿಸಿದ್ದೀರಾ ಎಂದು ಕೇಳಿದ್ದಕ್ಕೆ ಅವರು ಆತ ನಿಗೆ--ಕರ್ತನೇ, ಹೌದು ಎಂದು ಹೇಳಿದರು.
Cross references
- Revelation 20:12–15 ಪ್ರಕಟನೆ 20:12–15ಇದಲ್ಲದೆ ಸತ್ತವರಾದ ಚಿಕ್ಕವರೂ ದೊಡ್ಡವರೂ ದೇವರ ಮುಂದೆ ನಿಂತಿರುವದನ್ನು ನಾನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಜೀವಗ್ರಂಥವೆಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು; ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು; ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು. ಆಮೇಲೆ ಮೃತ್ಯುವೂ ನರಕವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು; ಇದೇ ಎರಡನೆಯ ಮರಣವು.ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು. ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.
- Matthew 13:39 ಮತ್ತಾಯನು 13:39ಅದನ್ನು ಬಿತ್ತಿದ ವೈರಿಯು ಸೈತಾನನೇ; ಸುಗ್ಗೀ ಕಾಲವು ಲೋಕದ ಅಂತ್ಯವಾಗಿದೆ; ಮತ್ತು ಕೊಯ್ಯುವವರು ದೂತರೇ.
- Matthew 24:31 ಮತ್ತಾಯನು 24:31ತರುವಾಯ ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು; ಆಗ ಅವರು ಆತನಿಂದ ಆಯಲ್ಪಟ್ಟವರನ್ನು ನಾಲ್ಕು ದಿಕ್ಕುಗಳಿಂದ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು.
- Matthew 22:12–14 ಮತ್ತಾಯನು 22:12–14ಅವನು ಆ ಮನುಷ್ಯನಿಗೆ--ಸ್ನೇಹಿತನೇ, ಮದುವೆಯ ಉಡುಪಿಲ್ಲದೆ ನೀನು ಒಳಗೆ ಹೇಗೆ ಬಂದಿ ಎಂದು ಕೇಳಲು ಅವನು ಸುಮ್ಮನಿದ್ದನು. ತರುವಾಯ ಅರಸನು ಸೇವಕರಿಗೆ--ಅವನ ಕೈ ಕಾಲುಗಳನ್ನು ಕಟ್ಟಿ ತಕ್ಕೊಂಡು ಹೋಗಿ ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು. ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಅಂದನು.
- 2 Thessalonians 1:7–10 2 ಥೆಸಲೊನೀಕದವರಿಗೆ 1:7–10ರ್ತನಾದ ಯೇಸು ತನ್ನ ಬಲವುಳ್ಳ ದೂತರೊಂದಿಗೆ ಪರಲೋಕ ದಿಂದ ಪ್ರತ್ಯಕ್ಷನಾಗುವಾಗ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನ ಮಾಡುವದೂ ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ; ಅಂಥವರು ಕರ್ತನ ಸಾನಿಧ್ಯದಿಂದಲೂ ಬಲವುಳ್ಳ ಆತನ ಮಹಿಮೆಯಿಂದಲೂ ನಿತ್ಯ ನಾಶನವೆಂಬ ಶಿಕ್ಷೆ ಯನ್ನು ಹೊಂದುವರು. ಆ ದಿನದಲ್ಲಿ ಆತನು ತನ್ನ ಪರಿಶುದ್ಧರಲ್ಲಿ ಮಹಿಮೆ ಹೊಂದುವಂತೆಯೂ ನಂಬುವವರೆಲ್ಲರಲ್ಲಿ ಮೆಚ್ಚಿಕೆ ಹೊಂದುವಂತೆಯೂ ಬರುವನು. (ಯಾಕಂದರೆ ನೀವು ನಮ್ಮ ಸಾಕ್ಷಿಯನ್ನು ನಂಬಿದಿರಿ).
- Matthew 25:19–33 ಮತ್ತಾಯನು 25:19–33ಬಹುಕಾಲವಾದ ಮೇಲೆ ಆ ಸೇವಕರ ಯಜ ಮಾನನು ಬಂದು ಅವರಿಂದ ಲೆಕ್ಕಾ ತೆಗೆದುಕೊಂಡನು. ಆಗ ಐದು ತಲಾಂತುಗಳನ್ನು ಹೊಂದಿದ್ದವನು ಬಂದು ಬೇರೆ ಐದು ತಲಾಂತುಗಳನ್ನು ತಂದು--ಒಡೆಯನೇ, ನೀನು ನನಗೆ ಐದು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಬೇರೆ ಐದು ತಲಾಂತುಗಳನ್ನು ನಾನು ಸಂಪಾದಿಸಿದ್ದೇನೆ ಅಂದನು. ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇದನ್ನು ಮಾಡಿದ್ದೀ. ಸ್ವಲ್ಪವಾದವುಗಳಲ್ಲಿ ನೀನು ನಂಬಿಗಸ್ತ ನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು. ಎರಡು ತಲಾಂತುಗಳನ್ನು ಹೊಂದಿದ್ದವನು ಸಹ ಬಂದು--ಒಡೆಯನೇ, ನೀನು ನನಗೆ ಎರಡು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಇನ್ನೂ ಎರಡು ತಲಾಂತುಗಳನ್ನು ನಾನು ಸಂಪಾದಿಸಿ ದ್ದೇನೆ ಅಂದನು. ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇ ದನ್ನು ಮಾಡಿದ್ದೀ; ಸ್ವಲ್ಪವಾದವುಗಳಲ್ಲಿ ನೀನು ನಂಬಿಗ ಸ್ತನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು. ಆಗ ಒಂದು ತಲಾಂತು ಹೊಂದಿದ್ದ ವನು ಬಂದು--ಒಡೆಯನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನೂ ತೂರದಿರುವಲ್ಲಿ ಕೂಡಿಸುವವನೂ ಆಗಿರುವ ಕಠಿಣ ಮನುಷ್ಯನೆಂದು ನಾನು ಬಲ್ಲೆನು; ಅದಕ್ಕೆ ನಾನು ಭಯಪಟ್ಟು ಹೋಗಿ ನಿನ್ನ ತಲಾಂತನ್ನು ಭೂಮಿಯಲ್ಲಿ ಬಚ್ಚಿಟ್ಟೆನು. ಇಗೋ, ನಿನ್ನದು ನಿನಗೆ ಸಲ್ಲಿದೆ ಅಂದನು. ಅದಕ್ಕೆ ಅವನ ಯಜ ಮಾನನು ಪ್ರತ್ಯುತ್ತರವಾಗಿ--ಮೈಗಳ್ಳನಾದ ಕೆಟ್ಟ ಸೇವಕನೇ, ನಾನು ಬಿತ್ತದಿರುವಲ್ಲಿ ಕೊಯ್ಯುವವನೆ ಂತಲೂ ತೂರದಿರುವಲ್ಲಿ ಕೂಡಿಸುವವನೆಂತಲೂ ನೀನು ತಿಳಿದಿದ್ದೀಯಲ್ಲಾ. ಹಾಗಾದರೆ ನೀನು ನನ್ನ ಹಣವನ್ನು ಬಡ್ಡಿಗಾಗಿ ಕೊಡತಕ್ಕದ್ದಾಗಿತ್ತು; ನಾನು ಬಂದಾಗ ನನ್ನ ಸ್ವಂತದ್ದನ್ನು ಬಡ್ಡಿ ಸಹಿತವಾಗಿ ಹೊಂದಿ ಕೊಳ್ಳುತ್ತಿದ್ದೆನು. ಆ ತಲಾಂತನ್ನು ತೆಗೆದುಕೊಂಡು ಹತ್ತು ತಲಾಂತುಗಳುಳ್ಳವನಿಗೆ ಕೊಡಿರಿ. ಇದ್ದ ಪ್ರತಿ ಯೊಬ್ಬನಿಗೆ ಕೊಡಲ್ಪಡುವದು ಮತ್ತು ಅವನಿಗೆ ಸಮೃದ್ಧಿ ಯಾಗುವದು; ಇಲ್ಲದವನ ಕಡೆಯಿಂದ ಅವನಿಗೆ ಇದ್ದದ್ದೂ ತೆಗೆಯಲ್ಪಡುವದು. ಮತ್ತು ನಿಷ್ಪ್ರಯೋ ಜಕನಾದ ಈ ಸೇವಕನನ್ನು ನೀವು ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು ಅಂದನು. ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು; ಮತ್ತು ಆತನ ಮುಂದೆ ಎಲ್ಲಾ ಜನಾಂಗಗಳವರು ಕೂಡಿಸಲ್ಪ ಡುವರು; ಆಗ ಕುರುಬನು ತನ್ನ ಕುರಿಗಳನ್ನು ಆಡುಗ ಳಿಂದ ಪ್ರತ್ಯೇಕಿಸುವಂತೆಯೇ ಆತನು ಅವರನ್ನು ಪ್ರತ್ಯೇ ಕಿಸುವನು; ಆತನು ಕುರಿಗಳನ್ನು ತನ್ನ ಬಲಗಡೆ ಯಲ್ಲಿಯೂ ಆಡುಗಳನ್ನು ತನ್ನ ಎಡಗಡೆಯಲ್ಲಿಯೂ ನಿಲ್ಲಿಸುವನು.
- Matthew 25:5–12 ಮತ್ತಾಯನು 25:5–12ಮದಲಿಂಗನು ತಡಮಾಡಿದಾಗ ಅವರೆಲ್ಲರೂ ತೂಕಡಿಸಿ ನಿದ್ರಿಸಿದರು. ಮಧ್ಯರಾತ್ರಿಯಲ್ಲಿ--ಇಗೋ, ಮದಲಿಂಗನು ಬರುತ್ತಾನೆ; ಅವನನ್ನು ಎದುರುಗೊಳ್ಳುವದಕ್ಕಾಗಿ ಹೊರಡಿರಿ ಎಂಬ ಕೂಗಾ ಯಿತು. ಆಗ ಆ ಕನ್ಯೆಯರೆಲ್ಲರೂ ಎದ್ದು ತಮ್ಮ ದೀಪಗಳನ್ನು ಸರಿಪಡಿಸಿಕೊಂಡರು; ಬುದ್ಧಿಹೀನರು ಬುದ್ಧಿವಂತೆಯರಿಗೆ-- ನಿಮ್ಮ ಎಣ್ಣೆಯಲ್ಲಿ ನಮಗೆ ಕೊಡಿರಿ; ಯಾಕಂದರೆ ನಮ್ಮ ದೀಪಗಳು ಆರಿಹೋಗಿವೆ ಅಂದರು. ಆದರೆ ಬುದ್ಧಿವಂತೆಯರು ಪ್ರತ್ಯುತ್ತರ ವಾಗಿ--ಹಾಗಲ್ಲ, ಅದು ನಮಗೂ ನಿಮಗೂ ಸಾಲದೆ ಹೋದೀತು; ಆದದರಿಂದ ನೀವು ಮಾರು ವವರ ಬಳಿಗೆ ಹೋಗಿ ನಿಮಗೋಸ್ಕರ ಕೊಂಡು ಕೊಳ್ಳಿರಿ ಅಂದರು. ಅವರು ಕೊಂಡುಕೊಳ್ಳುವದಕ್ಕೆ ಹೋದಾಗ ಮದಲಿಂಗನು ಬಂದನು. ಆಗ ಸಿದ್ಧವಾಗಿ ದ್ದವರು ಮದುವೆಗೆ ಆತನೊಂದಿಗೆ ಒಳಕ್ಕೆ ಹೊದರು; ತರುವಾಯ ಬಾಗಲು ಮುಚ್ಚಲಾಯಿತು. ಇದಾದ ಮೇಲೆ ಆ ಬೇರೆ ಕನ್ಯೆಯರು ಸಹ ಬಂದು--ಕರ್ತನೇ, ಕರ್ತನೇ, ನಮಗೆ ಬಾಗಲನ್ನು ತೆರೆ ಅಂದರು. ಆದರೆ ಅವನು ಪ್ರತ್ಯುತ್ತರವಾಗಿ--ನಿಮ್ಮನ್ನು ಅರಿ ಯೆನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.