Matthew · chapter 14 · verse 1
Matthew 14:1 in Kannada
ಆ ಕಾಲದಲ್ಲಿ ಚತುರಾಧಿಪತಿಯಾದ ಹೆರೋದನು ಯೇಸುವಿನ ಕೀರ್ತಿಯನ್ನು ಕೇಳಿ ತನ್ನ ಸೇವಕರಿಗೆ --
Aa kaaladalli chaturaadhipatiyaada herodanu yesuvina keertiyannu keli tanna sevakarige --
Matthew 14:1 in English
- King James Version (KJV)
- At that time Herod the tetrarch heard of the fame of Jesus,
- World English Bible (WEB)
- At that time, Herod the tetrarch heard the report concerning Jesus,
- American Standard Version (ASV)
- At that season Herod the tetrarch heard the report concerning Jesus,
- Bible in Basic English (BBE)
- At that time news of Jesus came to Herod the king;
- Darby Translation (DBY)
- At that time Herod the tetrarch heard of the fame of Jesus,
- Webster's Bible (WBS)
- At that time Herod the Tetrarch heard of the fame of Jesus,
- Young's Literal Translation (YLT)
- At that time did Herod the tetrarch hear the fame of Jesus,
Read in context
- 1ಆ ಕಾಲದಲ್ಲಿ ಚತುರಾಧಿಪತಿಯಾದ ಹೆರೋದನು ಯೇಸುವಿನ ಕೀರ್ತಿಯನ್ನು ಕೇಳಿ ತನ್ನ ಸೇವಕರಿಗೆ --
- 2ಇವನು ಬಾಪ್ತಿಸ್ಮ ಮಾಡಿಸುವ ಯೋಹಾನನೇ; ಈಗ ಇವನು ಸತ್ತವರೊಳಗಿಂದ ಎದ್ದಿದ್ದಾನೆ; ಆದದರಿಂದಲೇ ಮಹತ್ಕಾರ್ಯಗಳು ಇವನಲ್ಲಿ ತೋರಿಬರುತ್ತವೆ ಎಂದು ಹೇಳಿದನು.
- 3ಯಾಕಂದರೆ ಹೆರೋದನು ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿಯಾಗಿದ್ದ ಹೆರೋದ್ಯಳ ನಿಮಿತ್ತವಾಗಿ ಯೋಹಾನನನ್ನು ಹಿಡಿದು ಕಟ್ಟಿ ಸೆರೆಯಲ್ಲಿ ಹಾಕಿದ್ದನು.
Cross references
- Luke 3:1 ಲೂಕನು 3:1ಕೈಸರನಾದ ತಿಬೇರಿಯನ ಆಳಿಕೆಯ ಕಾಲದ ಹದಿನೈದನೇ ವರುಷದಲ್ಲಿ ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ ಹೆರೋದನು ಗಲಿಲಾ ಯಕ್ಕೆ ಚತುರಾಧಿಪತಿಯೂ ಅವನ ಸಹೋದರನಾದ ಫಿಲಿಪ್ಪನು ಇತುರಾಯ ಮತ್ತು ತ್ರಕೋನೀತಿ ಸೀಮೆಗೆ ಚತುರಾಧಿಪತಿಯೂ ಲುಸನ್ಯನು ಅಬಿಲೇನೆಗೆ ಚತುರಾ ಧಿಪತಿಯೂ
- Mark 8:15 ಮಾರ್ಕನು 8:15ಆತನು ಅವರಿಗೆ--ಫರಿಸಾಯರ ಹುಳಿಯ ವಿಷಯ ದಲ್ಲಿಯೂ ಹೆರೋದನ ಹುಳಿಯ ವಿಷಯದಲ್ಲಿಯೂ ನೀವು ಎಚ್ಚರಿಕೆಯಿಂದ ಇರ್ರಿ ಎಂದು ಖಂಡಿತವಾಗಿ ಹೇಳಿದನು.
- Mark 6:14–29 ಮಾರ್ಕನು 6:14–29ಅರಸನಾದ ಹೆರೋದನು ಆತನ ವಿಷಯವಾಗಿ ಕೇಳಿದನು. (ಯಾಕಂದರೆ ಆತನ ಹೆಸರು ಎಲ್ಲಾ ಕಡೆಗೂ ಹರಡಿತು); ಮತ್ತು ಅವನು--ಬಾಪ್ತಿಸ್ಮ ಮಾಡಿಸುವ ಯೋಹಾನನು ಸತ್ತವರೊಳಗಿಂದ ಎದ್ದು ಬಂದಿದ್ದಾನೆ; ಆದದರಿಂದ ಮಹತ್ಕಾರ್ಯಗಳು ಅವನಲ್ಲಿ ತೋರಿ ಬರುತ್ತವೆ ಅಂದನು. ಬೇರೆಯವರು--ಈತನು ಎಲೀಯನು ಅಂದರು; ಇನ್ನು ಕೆಲವರು--ಈತನು ಒಬ್ಬ ಪ್ರವಾದಿಯಾಗಿದ್ದಾನೆ ಇಲ್ಲವೆ ಪ್ರವಾದಿಗಳಲ್ಲಿ ಒಬ್ಬ ನಂತೆ ಇದ್ದಾನೆ ಅಂದರು. ಹೆರೋದನಾದರೋ ಆತನ ವಿಷಯವಾಗಿ ಕೇಳಿದಾಗ -- ನಾನು ತಲೆ ಹೊಯಿಸಿದ ಯೋಹಾನನು ಇವನೇ; ಇವನು ಸತ್ತವ ರೊಳಗಿಂದ ಎದ್ದು ಬಂದಿದ್ದಾನೆ ಅಂದನು. ಯಾಕಂ ದರೆ ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿ ಹೆರೋದನು ತಾನೇ ಯೋಹಾನನನ್ನು ಕರೇ ಕಳುಹಿಸಿ ಹಿಡಿದು ಕಟ್ಟಿ ಅವನನ್ನು ಸೆರೆಯಲ್ಲಿ ಹಾಕಿದ್ದನು; ಯಾಕಂದರೆ ಅವನು ಅವಳನ್ನು ವಿವಾಹ ಮಾಡಿಕೊಂಡಿದ್ದನು. ಆದರೆ ಯೋಹಾ ನನು ಹೆರೋದನಿಗೆ--ನಿನ್ನ ಸಹೋದರನ ಹೆಂಡತಿ ಯನ್ನು ಇಟ್ಟುಕೊಂಡಿರುವದು ನ್ಯಾಯವಲ್ಲವೆಂದು ಹೇಳಿ ದ್ದನು. ಆದಕಾರಣ ಹೆರೋದ್ಯಳು ಅವನಿಗೆ ವಿರೋ ಧವಾಗಿ ಹಗೆ ಇಟ್ಟುಕೊಂಡು ಅವನನ್ನು ಕೊಲ್ಲಿಸಬೇ ಕೆಂದಿದ್ದಳು; ಆದರೆ ಅವಳಿಗೆ ಆಗಲಿಲ್ಲ. ಯಾಕಂದರೆ ಯೋಹಾನನು ನೀತಿವಂತನೂ ಪರಿಶುದ್ಧನೂ ಆದ ಮನುಷ್ಯನೆಂದು ಹೆರೋದನು ತಿಳಿದವನಾಗಿ ಅವನಿಗೆ ಭಯಪಟ್ಟು ಅವನನ್ನು ಕಾಪಾಡುತ್ತಿದ್ದನು; ಮತ್ತು ಅವನು ಹೇಳಿದ್ದನ್ನು ಕೇಳಿ ಆನೇಕ ಕಾರ್ಯಗಳನ್ನು ಮಾಡಿದ್ದಲ್ಲದೆ ಅವನು ಹೇಳುವದನ್ನು ಸಂತೋಷದಿಂದ ಕೇಳಿದನು. ಹೀಗಿರಲಾಗಿ ಅನುಕೂಲವಾದ ಒಂದು ದಿನವು ಅಂದರೆ ಹೆರೋದನ ಹುಟ್ಟಿದ ದಿನದಲ್ಲಿ ಅವನು ತನ್ನ ಪ್ರಭುಗಳಿಗೂ ಸೈನ್ಯಾಧಿಪತಿಗಳಿಗೂ ಗಲಿಲಾಯದ ಪ್ರಮುಖರಿಗೂ ಔತಣವನ್ನು ಮಾಡಿಸಿದನು; ಆಗ ಆ ಹೆರೋದ್ಯಳ ಮಗಳು ಒಳಗೆ ಬಂದು ನಾಟ್ಯವಾಡಿ ಹೆರೋದನನ್ನೂ ಅವನ ಸಂಗಡ ಕೂತಿದ್ದವರನ್ನೂ ಮೆಚ್ಚಿಸಿದ್ದರಿಂದ ಅರಸನು ಆ ಹುಡುಗಿಗೆ--ನಿನಗೆ ಬೇಕಾದದ್ದನ್ನು ನನ್ನಿಂದ ಕೇಳಿಕೋ; ನಾನು ಅದನ್ನು ನಿನಗೆ ಕೊಡುತ್ತೇನೆ ಎಂದು ಹೇಳಿದನು. ಅವನು--ನೀನು ನನ್ನಿಂದ ಯಾವದನ್ನು ಕೇಳಿಕೊಂಡರೂ ಅಂದರೆ ಅದು ನನ್ನ ರಾಜ್ಯದಲ್ಲಿ ಅರ್ಧವಾಗಿದ್ದರೂ ನಾನು ನಿನಗೆ ಕೊಡುತ್ತೇನೆ ಎಂದು ಅವಳಿಗೆ ಆಣೆಯಿಟ್ಟು ಹೇಳಿದನು. ಆಗ ಅವಳು ಹೊರಟುಹೋಗಿ ತನ್ನ ತಾಯಿಗೆ--ನಾನು ಏನು ಕೇಳಿಕೊಳ್ಳಲಿ ಎಂದು ಕೇಳಲು ಅವಳು --ಬಾಪ್ತಿಸ್ಮ ಮಾಡಿಸುವ ಯೋಹಾನನ ತಲೆಯನ್ನು ಕೇಳಿಕೋ ಅಂದಳು. ಕೂಡಲೆ ಅವಳು ಅರಸನ ಬಳಿಗೆ ಅವಸರದಿಂದ ಬಂದು-- ಬಾಪ್ತಿಸ್ಮಮಾಡಿಸುವ ಯೊಹಾನನ ತಲೆಯನ್ನು ನೀನು ಕೂಡಲೆ ಪರಾತಿನಲ್ಲಿ ನನಗೆ ಕೊಡಬೇಕೆಂದು ನಾನು ಕೇಳಿಕೊಳ್ಳುತ್ತೇನೆ ಅಂದಳು. ಆಗ ಅರಸನು ಬಹಳವಾಗಿ ದುಃಖಪಟ್ಟನು; ಆದಾಗ್ಯೂ ತನ್ನ ಆಣೆಯ ನಿಮಿತ್ತವಾಗಿಯೂ ತನ್ನೊಂದಿಗೆ ಕೂತಿದ್ದವರ ನಿಮಿತ್ತವಾಗಿಯೂ ಅವಳನ್ನು ತಿರಸ್ಕರಿಸುವದಕ್ಕೆ ಮನಸ್ಸಿಲ್ಲದವನಾದನು. ಕೂಡಲೆ ಅವನ ತಲೆಯನ್ನು ತರುವದಕ್ಕಾಗಿ ಅರಸನು ಒಬ್ಬ ಕೊಲೆ ಯಾಳಿಗೆ ಅಪ್ಪಣೆಕೊಟ್ಟು ಕಳುಹಿಸಿದನು; ಅವನು ಹೋಗಿ ಸೆರೆಮನೆಯಲ್ಲಿ ಅವನ ತಲೆಯನ್ನು ಹೊಯು ಕೂಡಲೆ ಅವನ ತಲೆಯನ್ನು ತರುವದಕ್ಕಾಗಿ ಅರಸನು ಒಬ್ಬ ಕೊಲೆ ಯಾಳಿಗೆ ಅಪ್ಪಣೆಕೊಟ್ಟು ಕಳುಹಿಸಿದನು; ಅವನು ಹೋಗಿ ಸೆರೆಮನೆಯಲ್ಲಿ ಅವನ ತಲೆಯನ್ನು ಹೊಯು ಅವನ ಶಿಷ್ಯರು ಅದನ್ನು ಕೇಳಿದಾಗ ಬಂದು ಅವನ ಶವವನ್ನು ತಕ್ಕೊಂಡು ಸಮಾಧಿಯಲ್ಲಿ ಇಟ್ಟರು.
- Luke 9:7–9 ಲೂಕನು 9:7–9ಚತುರಾಧಿಪತಿಯಾದ ಹೆರೋದನು ಯೇಸು ಮಾಡಿದವುಗಳನ್ನೆಲ್ಲಾ ಕೇಳಿ ಕಳವಳಗೊಂಡನು. ಯಾಕಂದರೆ ಯೋಹಾನನು ಸತ್ತವರೊಳಗಿಂದ ಎದ್ದಿ ದ್ದಾನೆಂದು ಕೆಲವರು ಹೇಳುತ್ತಿದ್ದರು. ಎಲೀಯನು ಪ್ರತ್ಯಕ್ಷವಾಗಿದ್ದಾನೆಂದು ಕೆಲವರು ಹಿಂದಿನ ಕಾಲದ ಪ್ರವಾದಿಗಳಲ್ಲಿ ಒಬ್ಬನು ಎದ್ದಿದ್ದಾನೆಂದು ಇನ್ನು ಬೇರೆ ಯವರು ಹೇಳುತ್ತಿದ್ದರು. ಆಗ ಹೆರೋದನು--ನಾನು ಯೋಹಾನನ ತಲೆ ಹೊಯ್ಸಿದ್ದೇನೆ; ಆದರೆ ನಾನು ಯಾರನ್ನು ಕುರಿತು ಈ ವಿಷಯಗಳನ್ನು ಕೇಳು ತ್ತೇನೋ ಇವನು ಯಾರು ಎಂದು ಹೇಳಿ ಅವನು ಆತನನ್ನು ನೋಡಲು ಅಪೇಕ್ಷಿಸಿದನು.
- Acts 4:27 ಅಪೊಸ್ತಲರ ಕೃತ್ಯಗಳು 4:27ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್ ಜನರ ಸಹಿತ ಒಂದಾಗಿ ಕೂಡಿಕೊಂಡು
- Luke 23:15 ಲೂಕನು 23:15ಮಾತ್ರವಲ್ಲದೆ ಹೆರೋದ ನಿಗೆ ಸಹ ಯಾವದೂ ಕಾಣಲಿಲ್ಲ; ಯಾಕಂದರೆ ನಾನು ನಿಮ್ಮನ್ನು ಅವನ ಬಳಿಗೆ ಕಳುಹಿಸಿದೆನು; ಇಗೋ, ಅವನೂ ಆತನಲ್ಲಿ ಮರಣಕ್ಕೆ ಯೋಗ್ಯವಾದದ್ದೇನೂ ಕಾಣಲಿಲ್ಲ.
- Luke 23:7–12 ಲೂಕನು 23:7–12ಆತನು ಹೆರೋದನ ಅಧಿಕಾರದ ವಿಭಾಗಕ್ಕೆ ಸಂಬಂಧಪಟ್ಟವನೆಂದು ತಿಳಿದ ಕೂಡಲೆ ಆ ಸಮಯದಲ್ಲಿ ಯೆರೂಸಲೇಮಿನಲ್ಲಿಯೇ ಇದ್ದ ಹೆರೋದನ ಬಳಿಗೆ ಆತನನ್ನು ಕಳುಹಿಸಿದನು. ಹೆರೋದನು ಯೇಸುವನ್ನು ನೋಡಿದಾಗ ಅತ್ಯಂತ ಸಂತೋಷಪಟ್ಟನು; ಯಾಕಂದರೆ ಅವನು ಆತನ ವಿಷಯವಾಗಿ ಅನೇಕ ಸಂಗತಿಗಳನ್ನು ಕೇಳಿದ್ದರಿಂದ ಆತನನ್ನು ನೋಡುವಂತೆ ಬಹಳ ಕಾಲದಿಂದ ಆಶೆಪಟ್ಟಿ ದ್ದನು. ಆತನಿಂದಾಗುವ ಅದ್ಭುತ ಕಾರ್ಯವನ್ನು ನೋಡ ಲು ನಿರೀಕ್ಷಿಸುತ್ತಿದ್ದನು. ಆಗ ಅವನು ಆತನನ್ನು ಅನೇಕ ಮಾತುಗಳಿಂದ ಪ್ರಶ್ನಿಸಿದಾಗ್ಯೂ ಆತನು ಅವನಿಗೆ ಏನೂ ಉತ್ತರಕೊಡಲಿಲ್ಲ. ಆಗ ಪ್ರಧಾನಯಾಜಕರೂ ಶಾಸ್ತ್ರಿಗಳೂ ನಿಂತುಕೊಂಡು ಉಗ್ರತೆಯಿಂದ ಆತನ ಮೇಲೆ ದೂರು ಹೇಳಿದರು. ಹೆರೋದನು ತನ್ನ ಯುದ್ಧಭಟರೊಂದಿಗೆ ಆತನನ್ನು ತಿರಸ್ಕರಿಸಿ ಹಾಸ್ಯಮಾಡಿ ಆತನ ಮೇಲೆ ಶೋಭಾಯಮಾನವಾದ ವಸ್ತ್ರವನ್ನು ಹೊದಿಸಿ ಆತನನ್ನು ತಿರಿಗಿ ಪಿಲಾತನ ಬಳಿಗೆ ಕಳುಹಿಸಿ ದನು. ಇದಲ್ಲದೆ ಪಿಲಾತನು ಹೆರೋದನು ಅದೇ ದಿನದಲ್ಲಿ ಒಬ್ಬರಿಗೊಬ್ಬರು ಸ್ನೇಹಿತರಾದರು; ಯಾಕಂ ದರೆ ಅವರಲ್ಲಿ ಮೊದಲು ಹಗೆತನವಿತ್ತು.
- Luke 3:19 ಲೂಕನು 3:19ಆದರೆ ಚತುರಾಧಿಪತಿಯಾದ ಹೆರೋದನು ತನ್ನ ಸಹೋದರನಾದ ಫಿಲಿಪ್ಪನ ಹೆಂಡ ತಿಯಾದ ಹೆರೋದ್ಯಳಿಗಾಗಿಯೂ ಹೆರೋದನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳಿಗಾಗಿಯೂ ಯೋಹಾ ನನು ಅವನನ್ನು ಗದರಿಸಿದ್ದರಿಂದ
- Luke 13:31–32 ಲೂಕನು 13:31–32ಅದೇ ದಿನದಲ್ಲಿ ಫರಿಸಾಯರಲ್ಲಿ ಕೆಲವರು ಆತನ ಬಳಿಗೆ ಬಂದು--ನೀನು ಇಲ್ಲಿಂದ ಹೊರಟುಹೋಗು; ಯಾಕಂದರೆ ಹೆರೋದನು ನಿನ್ನನ್ನು ಕೊಲ್ಲುವನು ಎಂದು ಆತನಿಗೆ ಹೇಳಿದರು. ಅದಕ್ಕೆ ಆತನು ಅವರಿಗೆ--ಇಗೋ, ನಾನು ಈ ದಿವಸ ಮತ್ತು ನಾಳೆ ದೆವ್ವಗಳನ್ನು ಬಿಡಿಸಿ ಸ್ವಸ್ಥಮಾಡುತ್ತೇನೆ; ಮೂರನೆಯ ದಿನದಲ್ಲಿ ನಾನು ಸಿದ್ಧಿಗೆ ಬರುತ್ತೇನೆ ಎಂದು ನೀವು ಹೋಗಿ ಆ ನರಿಗೆ ಹೇಳಿರಿ.
- Acts 12:1 ಅಪೊಸ್ತಲರ ಕೃತ್ಯಗಳು 12:1ಆ ಕಾಲದಲ್ಲಿ ಅರಸನಾದ ಹೆರೋದನು ಸಭೆಯಲ್ಲಿ ಕೆಲವರನ್ನು ಬಾಧಿಸುವದಕ್ಕಾಗಿ ತನ್ನ ಕೈ ಎತ್ತಿ