Matthew · chapter 14 · verse 17
Matthew 14:17 in Kannada
ಅವರು ಆತನಿಗೆ--ನಮ್ಮ ಹತ್ತಿರ ಐದು ರೊಟ್ಟಿ ಎರಡು ಮಾನುಗಳು ಮಾತ್ರ ಇವೆ ಎಂದು ಹೇಳಿದರು.
Avaru aatanige--namma hattira aidu rotti eradu maanugalu maatra ive endu helidaru.
Matthew 14:17 in English
- King James Version (KJV)
- And they say unto him, We have here but five loaves, and two fishes.
- World English Bible (WEB)
- They told him, “We only have here five loaves and two fish.”
- American Standard Version (ASV)
- And they say unto him, We have here but five loaves, and two fishes.
- Bible in Basic English (BBE)
- And they say to him, We have here but five cakes of bread and two fishes.
- Darby Translation (DBY)
- But they say to him, We have not here save five loaves and two fishes.
- Webster's Bible (WBS)
- And they say to him, We have here but five loaves, and two fishes.
- Young's Literal Translation (YLT)
- And they say to him, 'We have not here except five loaves, and two fishes.'
Read in context
- 15ಸಾಯಂಕಾಲವಾದಾಗ ಆತನ ಶಿಷ್ಯರು ಆತನ ಬಳಿಗೆ ಬಂದು--ಇದು ಅಡವಿಯ ಸ್ಥಳ, ಸಮಯವು ದಾಟಿತು; ಜನರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರವನ್ನು ಕೊಂಡುಕೊಳ್ಳುವಂತೆ ಅವರನ್ನು ಕಳುಹಿಸಿಬಿಡು ಅಂದರು.
- 16ಆದರೆ ಯೇಸು ಅವ ರಿಗೆ--ಅವರು ಹೋಗುವದು ಅವಶ್ಯವಿಲ್ಲ; ಅವರು ಊಟಮಾಡುವದಕ್ಕೆ ನೀವೇ ಕೊಡಿರಿ ಎಂದು ಹೇಳಿದನು.
- 17ಅವರು ಆತನಿಗೆ--ನಮ್ಮ ಹತ್ತಿರ ಐದು ರೊಟ್ಟಿ ಎರಡು ಮಾನುಗಳು ಮಾತ್ರ ಇವೆ ಎಂದು ಹೇಳಿದರು.
- 18ಆತನು--ಅವುಗಳನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಅಂದನು.
- 19ಜನ ಸಮೂಹವು ಹುಲ್ಲಿನಮೇಲೆ ಕೂತುಕೊಳ್ಳಬೇಕೆಂದು ಆತನು ಅಪ್ಪಣೆಕೊಟ್ಟು ಆ ಐದು ರೊಟ್ಟಿ ಎರಡು ಮಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಮುರಿದು ಆ ರೊಟ್ಟಿಗಳನ್ನು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು.
Cross references
- Luke 9:13 ಲೂಕನು 9:13ಆದರೆ ಆತನು ಅವರಿಗೆ--ನೀವೇ ಅವ ರಿಗೆ ಊಟಕ್ಕೆ ಕೊಡಿರಿ ಅಂದನು. ಅದಕ್ಕೆ ಅವರು--ನಾವು ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡುಕೊಳ್ಳದ ಹೊರತು ನಮ್ಮಲ್ಲಿ ಐದು ರೊಟ್ಟಿ ಎರಡು ವಿಾನುಗಳಿಗಿಂತ ಹೆಚ್ಚೇನೂ ಇಲ್ಲ ಅಂದರು.
- Mark 6:37–38 ಮಾರ್ಕನು 6:37–38ಆತನು ಪ್ರತ್ಯುತ್ತರವಾಗಿ ಅವ ರಿಗೆ--ನೀವೇ ಅವರಿಗೆ ತಿನ್ನುವದಕ್ಕೆ ಕೊಡಿರಿ ಅಂದನು. ಅದಕ್ಕೆ ಅವರು ಆತನಿಗೆ--ನಾವು ಹೋಗಿ ಎರಡು ನೂರು ಹಣದ (ಪೆನ್ನಿ: ಇಂಗ್ಲೀಷ್ಹಣ) ರೊಟಿಯನ್ನು ಕೊಂಡುಕೊಂಡು ಅವರಿಗೆ ತಿನ್ನುವದಕ್ಕೆ ಕೊಡೋಣವೋ ಅಂದರು. ಆತನು ಅವರಿಗೆ--ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿರಿ ಅನ್ನಲು ಅವರು ತಿಳಿದುಕೊಂಡು--ಐದು ರೊಟ್ಟಿ ಮತ್ತು ಎರಡು ವಿಾನುಗಳು ಇವೆ ಎಂದು ಹೇಳಿದರು.
- Matthew 15:33–34 ಮತ್ತಾಯನು 15:33–34ಅದಕ್ಕೆ ಆತನ ಶಿಷ್ಯರು ಆತನಿಗೆ--ಇಂಥಾ ದೊಡ್ಡ ಸಮೂಹವನ್ನು ತೃಪ್ತಿಪಡಿಸುವಂತೆ ಈ ಅರಣ್ಯದಲ್ಲಿ ನಮಗೆ ಎಲ್ಲಿಂದ ರೊಟ್ಟಿಯು ಸಿಕ್ಕೀತು ಅಂದರು. ಆಗ ಯೇಸು ಅವರಿಗೆ--ನಿಮ್ಮ ಹತ್ತಿರ ಎಷ್ಟು ರೊಟ್ಟಿಗಳಿವೆ ಎಂದು ಕೇಳಿದನು. ಅವರು--ಏಳು ರೊಟ್ಟಿಗಳು ಮತ್ತು ಕೆಲವು ಚಿಕ್ಕ ಮಾನುಗಳಿವೆ ಅಂದರು.
- John 6:5–9 ಯೋಹಾನನು 6:5–9ಜನರ ದೊಡ್ಡ ಗುಂಪು ತನ್ನ ಕಡೆಗೆ ಬರುವದನ್ನು ಯೇಸು ಕಣ್ಣೆತ್ತಿ ನೋಡಿ ಫಿಲಿಪ್ಪ ನಿಗೆ--ಇವರು ಊಟ ಮಾಡುವಂತೆ ನಾವು ರೊಟ್ಟಿ ಯನ್ನು ಎಲ್ಲಿಂದ ಕೊಂಡು ತರೋಣ ಅಂದನು. ಅವ ನನ್ನು ಪರೀಕ್ಷಿಸುವದಕ್ಕಾಗಿ ಆತನು ಇದನ್ನು ಹೇಳಿದನು; ಯಾಕಂದರೆ ತಾನು ಮಾಡಬೇಕೆಂದಿದ್ದದ್ದು ಆತನು ತಾನೇ ತಿಳಿದವನಾಗಿದ್ದನು. ಫಿಲಿಪ್ಪನು ಪ್ರತ್ಯುತ್ತರ ವಾಗಿ ಆತನಿಗೆ--ಇವರಲ್ಲಿ ಪ್ರತಿಯೊಬ್ಬನು ಸ್ವಲ್ಪ ಸ್ವಲ್ಪ ತಿಂದರೂ ಇನ್ನೂರು ಹಣಗಳಷ್ಟು ರೊಟ್ಟಿಗಳು ಅವ ರಿಗೆ ಸಾಲುವದಿಲ್ಲ ಅಂದನು. ಆಗ ಆತನ ಶಿಷ್ಯರಲ್ಲಿ ಒಬ್ಬನಾಗಿರುವ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು ಆತನಿಗೆ-- ಇಲ್ಲಿ ಒಬ್ಬ ಹುಡುಗನಿ ದ್ದಾನೆ; ಅವನಲ್ಲಿ ಐದು ಜವೆಗೋದಿಯ ರೊಟ್ಟಿಗಳೂ ಎರಡು ಸಣ್ಣ ವಿಾನುಗಳೂ ಅವೆ; ಆದರೆ ಇಷ್ಟೊಂದು ಜನರಿಗೆ ಅವು ಯಾತಕ್ಕಾದಾವು ಅಂದನು.
- Matthew 16:9 ಮತ್ತಾಯನು 16:9ಐದು ರೊಟ್ಟಿಗಳನ್ನು ಐದು ಸಾವಿರ ಜನರಿಗೆ ಹಂಚಿದಾಗ ಎಷ್ಟು ಪುಟ್ಟಿಗಳನ್ನು ತುಂಬಿದಿರೆಂದು ನೀವು ಇನ್ನೂ ಗ್ರಹಿಸಲಿಲ್ಲವೋ? ಇಲ್ಲವೆ ನಿಮಗೆ ನೆನಪಿಲ್ಲವೋ?
- Mark 8:4–5 ಮಾರ್ಕನು 8:4–5ಅದಕ್ಕೆ ಆತನ ಶಿಷ್ಯರು ಪ್ರತ್ಯುತ್ತರವಾಗಿ ಆತನಿಗೆ-- ಒಬ್ಬನು ಈ ಅಡವಿಯಲ್ಲಿ ರೊಟ್ಟಿಯಿಂದ ಈ ಜನರನ್ನು ಎಲ್ಲಿಂದ ತೃಪ್ತಿಪಡಿಸಾನು ಅಂದರು. ಆತನು ಅವರಿಗೆ--ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ ಎಂದು ಕೇಳಿದ್ದಕ್ಕೆ ಅವರು --ಏಳು ರೊಟ್ಟಿಗಳು ಇವೆ ಅಂದರು.
- Psalm 78:19–20 ಕೀರ್ತನೆಗಳು 78:19–20ಹೌದು, ಅವರು ದೇವರಿಗೆ ವಿರೋಧ ವಾಗಿ ಮಾತನಾಡಿ--ದೇವರು ಅರಣ್ಯದಲ್ಲಿ ಮೇಜನ್ನು ಸಿದ್ಧ ಮಾಡಬಲ್ಲನೋ ಅಂದರು. ಇಗೋ, ಆತನು ಬಂಡೆಯನ್ನು ಹೊಡೆಯಲಾಗಿ ನೀರು ಹೊರಟಿತು; ಹಳ್ಳಗಳು ಹರಿದವು; ರೊಟ್ಟಿಯನ್ನೂ ಕೊಡಬಲ್ಲನೋ? ತನ್ನ ಜನರಿಗೆ ಮಾಂಸವನ್ನು ಸಿದ್ಧ ಮಾಡುವನೋ ಅಂದರು.
- Numbers 11:21–23 ಅರಣ್ಯಕಾಂಡ 11:21–23ಅದಕ್ಕೆ ಮೋಶೆಯು ಹೇಳಿದ್ದೇನಂದರೆ--ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು. ಪೂರ್ತಿ ಒಂದು ತಿಂಗಳು ತಿನ್ನುವ ಹಾಗೆ ಅವರಿಗೆ ನಾನು ಮಾಂಸವನ್ನು ಕೊಡುವೆನೆಂದು ನೀನು ಹೇಳಿದ್ದೀ. ಅವರಿಗೆ ಸಾಕಾಗುವ ಹಾಗೆ ಕುರಿ ದನಗಳನ್ನು ಅವರಿಗೋಸ್ಕರ ಕೊಯ್ಯಬೇಕೋ? ಅವರಿಗೆ ಸಾಕಾಗುವ ಹಾಗೆ ಸಮುದ್ರದ ವಿಾನುಗಳನ್ನೆಲ್ಲಾ ಕೂಡಿಸಿ ತರಬೇಕೋ ಅಂದನು. ಆಗ ಕರ್ತನು ಮೋಶೆಗೆ ಹೇಳಿದ್ದೇನಂದರೆ--ಕರ್ತನ ಕೈ ಮೋಟು ಗೈಯೋ? ನನ್ನ ಮಾತು ನೆರವೇರುತ್ತದೋ ಇಲ್ಲವೋ ನೀನು ನೋಡುವಿ ಅಂದನು.