Matthew · chapter 14 · verse 27
Matthew 14:27 in Kannada
ಆದರೆ ಯೇಸು ತಕ್ಷಣವೇ ಮಾತನಾಡಿ ಅವರಿಗೆ--ಧೈರ್ಯವಾಗಿರ್ರಿ; ನಾನೇ, ಭಯಪಡಬೇಡಿರಿಅಂದನು.
Aadare yesu takshanave maatanaadi avarige--dhairyavaagirri; naane, bhayapadabediriandanu.
Matthew 14:27 in English
- King James Version (KJV)
- But straightway Jesus spake unto them, saying, Be of good cheer; it is I; be not afraid.
- World English Bible (WEB)
- But immediately Jesus spoke to them, saying, “Cheer up! It is I! Don’t be afraid.”
- American Standard Version (ASV)
- But straightway Jesus spake unto them, saying, Be of good cheer; it is I; be not afraid.
- Bible in Basic English (BBE)
- But straight away Jesus said to them, Take heart; it is I, have no fear.
- Darby Translation (DBY)
- But Jesus immediately spoke to them, saying, Take courage; it is I: be not afraid.
- Webster's Bible (WBS)
- But immediately Jesus spoke to them, saying, Be of good cheer; it is I; be not afraid.
- Young's Literal Translation (YLT)
- and immediately Jesus spake to them, saying, 'Be of good courage, I am [he], be not afraid.'
Read in context
- 25ಮತ್ತು ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆಯುತ್ತಾ ಅವರ ಬಳಿಗೆ ಹೋದನು.
- 26ಆತನು ಸಮುದ್ರದ ಮೇಲೆ ನಡೆಯುವದನ್ನು ಶಿಷ್ಯರು ನೋಡಿ ಕಳವಳಪಟ್ಟು--ಇದು ಭೂತ ಎಂದು ಭೀತಿಯಿಂದ ಕೂಗಿ ಕೊಂಡರು.
- 27ಆದರೆ ಯೇಸು ತಕ್ಷಣವೇ ಮಾತನಾಡಿ ಅವರಿಗೆ--ಧೈರ್ಯವಾಗಿರ್ರಿ; ನಾನೇ, ಭಯಪಡಬೇಡಿರಿಅಂದನು.
- 28ಆಗ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನೇ ಆಗಿದ್ದರೆ ನೀರಿನ ಮೇಲೆ ನಡೆದು ನಿನ್ನ ಬಳಿಗೆ ಬರಲು ನನಗೆ ಅಪ್ಪಣೆಕೊಡು ಅಂದನು.
- 29ಅದಕ್ಕಾತನು--ಬಾ ಅಂದನು. ಆಗ ಪೇತ್ರನು ದೋಣಿಯಿಂದ ಇಳಿದು ಯೇಸುವಿನ ಬಳಿಗೆ ಹೋಗು ವದಕ್ಕಾಗಿ ನೀರಿನ ಮೇಲೆ ನಡೆದನು.
Cross references
- John 16:33 ಯೋಹಾನನು 16:33ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
- Revelation 1:17–18 ಪ್ರಕಟನೆ 1:17–18ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ. ಸತ್ತವನಾದೆನು,ಈಗ ಬದುಕುವವನಾಗಿದ್ದೇನೆ. ಇಗೋ, ನಾನು ಎಂದೆಂ ದಿಗೂ ಬದುಕುವವನಾಗಿದ್ದೇನೆ. ಆಮೆನ್. ನರಕದ ಮತ್ತು ಮರಣದ ಬೀಗದ ಕೈಗಳೂ ನನ್ನಲ್ಲಿ ಅವೆ.
- Isaiah 41:10 ಯೆಶಾಯ 41:10ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
- Acts 23:11 ಅಪೊಸ್ತಲರ ಕೃತ್ಯಗಳು 23:11ಮರುದಿನ ರಾತ್ರಿ ಕರ್ತನು ಅವನ ಬಳಿಯಲ್ಲಿ ನಿಂತು--ಪೌಲನೇ, ಧೈರ್ಯವಾಗಿರು; ಯೆರೂಸ ಲೇಮಿನಲ್ಲಿ ನನ್ನ ವಿಷಯವಾಗಿ ನೀನು ಸಾಕ್ಷಿ ಹೇಳಿ ದಂತೆ ರೋಮ್ನಲ್ಲಿಯೂ ಸಾಕ್ಷಿ ಹೇಳತಕ್ಕದ್ದು ಎಂದು ಹೇಳಿದನು.
- Isaiah 41:4 ಯೆಶಾಯ 41:4ಇದನ್ನೆಲ್ಲಾ ನಡೆಯಿಸಿ ನೆರವೇರಿ ಸಿದವನು ಆದಿಯಿಂದ ತಲತಲಾಂತರಗಳನ್ನು ಬರ ಮಾಡಿದವನು ಯಾರು? ಕರ್ತನಾಗಿರುವ ನಾನೇ ಮೊದಲನೆಯವನು ಅಂತ್ಯಕಾಲದಲ್ಲಿ ಸಂಗಡಿಗನು ಆಗಿರುವಾತನೇ ನಾನು.
- John 14:1–3 ಯೋಹಾನನು 14:1–3ನಿಮ್ಮ ಹೃದಯವು ಕಳವಳಗೊಳ್ಳದೆ ಇರಲಿ; ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ. ನನ್ನ ತಂದೆಯ ಮನೆಯಲ್ಲಿ ಬಹಳ ಭವನ ಗಳಿವೆ; ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು, ನಾನು ನಿಮಗೆ ಸ್ಥಳವನ್ನು ಸಿದ್ಧಮಾಡುವದಕ್ಕೆ ಹೋಗು ತ್ತೇನಲ್ಲಾ. ನಾನು ಹೋಗಿ ನಿಮಗೋಸ್ಕರ ಸ್ಥಳವನ್ನು ಸಿದ್ಧಮಾಡಿ ತಿರಿಗಿ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು; ಆಗ ನಾನಿರುವಲ್ಲಿ ನೀವು ಸಹ ಇರುವಿರಿ.
- John 6:20 ಯೋಹಾನನು 6:20ಆದರೆ ಆತನು ಅವರಿಗೆ--ನಾನೇ, ಭಯಪಡಬೇಡಿರಿ ಅಂದನು.
- Isaiah 51:12 ಯೆಶಾಯ 51:12ನಾನೇ, ನಾನೇ ನಿನ್ನನ್ನು ಆದರಿಸುವವನಾಗಿ ದ್ದೇನೆ; ಹಾಗಾದರೆ ಸಾಯುವ ಮನುಷ್ಯನಿಗೂ ಹುಲ್ಲಿನಂತೆ ಮಾಡಲ್ಪಟ್ಟಿರುವ ನರಪುತ್ರನಿಗೂ ಭಯ ಪಡುವ ನೀನು ಯಾರು?
- Matthew 9:2 ಮತ್ತಾಯನು 9:2ಇಗೋ, ಹಾಸಿಗೆಯ ಮೇಲೆ ಮಲಗಿದ್ದ ಒಬ್ಬ ಪಾರ್ಶ್ವವಾಯು ರೋಗಿಯನ್ನು ಜನರು ಆತನ ಬಳಿಗೆ ತಂದರು; ಮತ್ತು ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ--ಮಗನೇ, ಧೈರ್ಯವಾಗಿರು, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅಂದನು.
- Matthew 17:7 ಮತ್ತಾಯನು 17:7ಆಗ ಯೇಸು ಬಂದು ಅವರನ್ನು ಮುಟ್ಟಿ--ಏಳಿರಿ, ಹೆದರಬೇಡಿರಿ ಎಂದು ಹೇಳಿದನು.
- Luke 24:38–39 ಲೂಕನು 24:38–39ಆದರೆ ಆತನು ಅವರಿಗೆ--ಯಾಕೆ ನೀವು ಕಳವಳಗೊಳ್ಳುತ್ತೀರಿ? ನಿಮ್ಮ ಹೃದಯಗಳಲ್ಲಿ ಆಲೋಚನೆಗಳು ಹುಟ್ಟುವದು ಯಾಕೆ? ನನ್ನ ಕೈಗಳನ್ನು ಮತ್ತು ನನ್ನ ಕಾಲುಗಳನ್ನು ನೋಡಿರಿ; ನಾನೇ ಅಲ್ಲವೇ; ನನ್ನನ್ನು ಮುಟ್ಟಿ ನೋಡಿರಿ, ಯಾಕಂದರೆ ನೀವು ನೋಡುವಂತೆ ನನಗಿರುವ ಮಾಂಸ ಮತ್ತು ಎಲುಬುಗಳು ಭೂತಕ್ಕೆ ಇಲ್ಲ ಅಂದನು.
- Luke 1:30 ಲೂಕನು 1:30ಆ ದೂತನು ಆಕೆಗೆ-- ಮರಿಯಳೇ, ಹೆದರಬೇಡ; ಯಾಕಂದರೆ ನೀನು ದೇವರ ದಯೆಯನ್ನು ಹೊಂದಿದ್ದೀ;