Matthew · chapter 14 · verse 9
Matthew 14:9 in Kannada
ಆಗ ಅರಸನು ದುಃಖಪಟ್ಟಾಗ್ಯೂ ತನ್ನ ಆಣೆಯ ನಿಮಿತ್ತದಿಂದಲೂ ತನ್ನೊಂದಿಗೆ ಊಟಕ್ಕೆ ಕೂತಿದ್ದವರ ನಿಮಿತ್ತದಿಂದಲೂ ಅದನ್ನು ಅವಳಿಗೆ ಕೊಡುವಂತೆ ಅಪ್ಪಣೆಕೊಟ್ಟನು.
Aaga arasanu duhkhapattaagyoo tanna aaneya nimittadindaloo tannondige ootakke kootiddavara nimittadindaloo adannu avalige koduvante appanekottanu.
Matthew 14:9 in English
- King James Version (KJV)
- And the king was sorry: nevertheless for the oath’s sake, and them which sat with him at meat, he commanded [it] to be given [her].
- World English Bible (WEB)
- The king was grieved, but for the sake of his oaths and of those who sat at the table with him, he commanded it to be given,
- American Standard Version (ASV)
- And the king was grieved; but for the sake of his oaths, and of them that sat at meat with him, he commanded it to be given;
- Bible in Basic English (BBE)
- And the king was sad; but because of his oaths and because of his guests, he gave the order for it to be given to her;
- Darby Translation (DBY)
- And the king was grieved; but on account of the oaths, and those lying at table with [him], he commanded [it] to be given.
- Webster's Bible (WBS)
- And the king was sorry: nevertheless for the sake of the oath, and of them who sat with him at table, he commanded [it] to be given [her] .
- Young's Literal Translation (YLT)
- and the king was grieved, but because of the oaths and of those reclining with him, he commanded [it] to be given;
Read in context
- 7ಆದದರಿಂದ ಅವಳು ಏನು ಕೇಳಿಕೊಂಡರೂ ಅವಳಿಗೆ ಕೊಡುವೆನೆಂದು ಅವನು ಆಣೆಯಿಟ್ಟು ವಾಗ್ದಾನಮಾಡಿದನು.
- 8ಅವಳು ತನ್ನ ತಾಯಿಯಿಂದ ಮೊದಲೇ ಕಲಿಸಲ್ಪಟ್ಟವಳಾಗಿ-- ಬಾಪ್ತಿಸ್ಮ ಮಾಡಿಸುವ ಯೋಹಾನನ ತಲೆಯನ್ನು ಪರಾ ತಿನಲ್ಲಿ ಇಲ್ಲಿಯೇ ನನಗೆ ಕೊಡು ಎಂದು ಹೇಳಿದಳು.
- 9ಆಗ ಅರಸನು ದುಃಖಪಟ್ಟಾಗ್ಯೂ ತನ್ನ ಆಣೆಯ ನಿಮಿತ್ತದಿಂದಲೂ ತನ್ನೊಂದಿಗೆ ಊಟಕ್ಕೆ ಕೂತಿದ್ದವರ ನಿಮಿತ್ತದಿಂದಲೂ ಅದನ್ನು ಅವಳಿಗೆ ಕೊಡುವಂತೆ ಅಪ್ಪಣೆಕೊಟ್ಟನು.
- 10ಮತ್ತು ಅವನು (ಆಳುಗಳನ್ನು) ಕಳುಹಿಸಿ ಸೆರೆಯಲ್ಲಿ ಯೋಹಾನನ ತಲೆಯನ್ನು ಹೊಯಿಸಿದನು.
- 11ಇದಲ್ಲದೆ ಅವನ ತಲೆಯನ್ನು ಪರಾತಿನಲ್ಲಿ ತಂದು ಆ ಹುಡುಗಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತಂದಳು.
Cross references
- John 19:12–16 ಯೋಹಾನನು 19:12–16ಅಂದಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಪಟ್ಟನು. ಆದರೆ ಯೆಹೂದ್ಯರು--ನೀನು ಈ ಮನುಷ್ಯನನ್ನು ಹೋಗಗೊಡಿಸಿದರೆ ಕೈಸರನಿಗೆ ಸ್ನೇಹಿತನಲ್ಲ; ತನ್ನನ್ನು ಅರಸನನ್ನಾಗಿ ಮಾಡಿಕೊಳ್ಳು ವವನು ಕೈಸರನಿಗೆ ವಿರೋಧವಾಗಿ ಮಾತನಾಡುತ್ತಾನೆ ಎಂದು ಕೂಗಿ ಹೇಳಿದರು. ಆದದರಿಂದ ಪಿಲಾತನು ಆ ಮಾತನ್ನು ಕೇಳಿ ಯೇಸುವನ್ನು ಹೊರಗೆ ಕರ ಕೊಂಡು ಬಂದು ಇಬ್ರಿಯ ಮಾತಿನಲ್ಲಿ ಗಬ್ಬಥಾ ಎನಿಸಿಕೊಳ್ಳುವ ಕಲ್ಲು ಹಾಸಿದ ಕಟ್ಟೆ ಎಂದು ಕರೆಯಲ್ಪಟ್ಟ ಸ್ಥಳದಲ್ಲಿ ನ್ಯಾಯಾಸನದ ಮೇಲೆ ಕೂತುಕೊಂಡನು. ಅದು ಪಸ್ಕಕ್ಕೆ ಸಿದ್ಧಮಾಡುವ ದಿನದಲ್ಲಿ ಸುಮಾರು ಆರನೇ ತಾಸಾಗಿತ್ತು; ಅವನು ಯೆಹೂದ್ಯರಿಗೆ--ಇಗೋ, ನಿಮ್ಮ ಅರಸನು ಅಂದನು. ಆದರೆ ಅವರು--ತೆಗೆದುಹಾಕು, ತೆಗೆದುಹಾಕು, ಅವನನ್ನು ಶಿಲುಬೆಗೆ ಹಾಕು ಅಂದರು. ಅದಕ್ಕೆ ಪಿಲಾತನು ಅವರಿಗೆ--ನಿಮ್ಮ ಅರಸನನ್ನು ಶಿಲುಬೆಗೆ ಹಾಕಲೋ ಅಂದಾಗ ಪ್ರಧಾನಯಾಜಕರು--ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ ಎಂದು ಉತ್ತರ ಕೊಟ್ಟರು. ಆಗ ಅವನು ಯೇಸುವನ್ನು ಶಿಲುಬೆಗೆ ಹಾಕಿಸುವದಕ್ಕೆ ಅವರಿಗೆ ಒಪ್ಪಿಸಲಾಗಿ ಅವರು ಆತನನ್ನು ಸಾಗಿಸಿಕೊಂಡು ಹೋದರು.
- Judges 11:30–31 ನ್ಯಾಯಸ್ಥಾಪಕರು 11:30–31ಯೆಪ್ತಾಹನು ಕರ್ತನಿಗೆ ಒಂದು ಪ್ರಮಾಣವನ್ನು ಮಾಡಿ--ನೀನು ಅಮ್ಮೋನನ ಮಕ್ಕಳನ್ನು ನನ್ನ ಕೈಯಲ್ಲಿ ತಪ್ಪದೆ ಒಪ್ಪಿಸಿಕೊಟ್ಟರೆ ನಾನು ಅಮ್ಮೋನನ ಮಕ್ಕಳ ಬಳಿಯಿಂದ ಸಮಾಧಾನದಲ್ಲಿ ತಿರಿಗಿ ಬರುವಾಗ ನನ್ನ ಮನೆಯ ಬಾಗಲಿಂದ ನನ್ನನ್ನು ಎದುರುಗೊಳ್ಳಲು ಬರುವಂಥದ್ದು ನಿಜವಾಗಿ ಕರ್ತನದಾಗಿರುವದು. ಅದನ್ನು ದಹನಬಲಿಯಾಗಿ ಅರ್ಪಿಸುವೆನು ಅಂದನು.
- Luke 13:32 ಲೂಕನು 13:32ಅದಕ್ಕೆ ಆತನು ಅವರಿಗೆ--ಇಗೋ, ನಾನು ಈ ದಿವಸ ಮತ್ತು ನಾಳೆ ದೆವ್ವಗಳನ್ನು ಬಿಡಿಸಿ ಸ್ವಸ್ಥಮಾಡುತ್ತೇನೆ; ಮೂರನೆಯ ದಿನದಲ್ಲಿ ನಾನು ಸಿದ್ಧಿಗೆ ಬರುತ್ತೇನೆ ಎಂದು ನೀವು ಹೋಗಿ ಆ ನರಿಗೆ ಹೇಳಿರಿ.
- 2 Kings 6:31–33 2 ಅರಸುಗಳು 6:31–33ಆಗ ಅವನು -- ಶಾಫಾಟನ ಮಗನಾದ ಎಲೀಷನ ತಲೆಯು ಈ ದಿನ ಅವನ ಮೇಲೆ ಇದ್ದರೆ ದೇವರು ನನಗೆ ಇದರಂತೆಯೂ ಇನ್ನು ಹೆಚ್ಚಾಗಿಯೂ ಮಾಡಲಿ ಅಂದನು. ಎಲೀಷನು ಹಿರಿಯರ ಜೊತೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು; ಆಗ ಅರಸನು ತನ್ನ ಬಳಿಯಿಂದ ಒಬ್ಬ ಮನುಷ್ಯನನ್ನು ಕಳುಹಿಸಿದನು. ಆ ಸೇವಕನು ಎಲೀಷನ ಬಳಿಗೆ ಬರುವದಕ್ಕಿಂತ ಮುಂಚೆ ಅವನು ಹಿರಿಯರಿಗೆ--ಈ ಕೊಲೆಪಾತಕನ ಮಗನು ನನ್ನ ತಲೆ ಯನ್ನು ತೆಗೆಯುವದಕ್ಕೆ ಕಳುಹಿಸಿದ್ದನ್ನು ನೋಡಿದಿರೋ? ನೋಡಿರಿ; ಆ ಸೇವಕನು ಬಂದ ಕೂಡಲೆ ಬಾಗಲು ಮುಚ್ಚಿ ಬಾಗಲ ಬಳಿಯಲ್ಲಿ ಅವನನ್ನು ಗಟ್ಟಿಯಾಗಿ ಹಿಡಿದುಕೊಳ್ಳಿರಿ. ಅವನ ಯಜಮಾನನ ಪಾದಗಳ ಶಬ್ದವು ಅವನ ಹಿಂದೆ ಇಲ್ಲವೋ ಅಂದನು.ಅವನು ಅವರ ಸಂಗಡ ಇನ್ನೂ ಮಾತನಾಡುತ್ತಿರುವಾಗ ಇಗೋ, ಆ ಸೇವಕನು ತನ್ನ ಬಳಿಗೆ ಬಂದು--ಇಗೋ, ಈ ಕೇಡು ಕರ್ತನಿಂದ ಉಂಟಾಯಿತು; ನಾನು ಇನ್ನೂ ಕರ್ತನನ್ನು ನಿರೀಕ್ಷಿಸುವದೇನು ಅಂದನು. ಅವನು ಅವರ ಸಂಗಡ ಇನ್ನೂ ಮಾತನಾಡುತ್ತಿರುವಾಗ ಇಗೋ, ಆ ಸೇವಕನು ತನ್ನ ಬಳಿಗೆ ಬಂದು--ಇಗೋ, ಈ ಕೇಡು ಕರ್ತನಿಂದ ಉಂಟಾಯಿತು; ನಾನು ಇನ್ನೂ ಕರ್ತನನ್ನು ನಿರೀಕ್ಷಿಸುವದೇನು ಅಂದನು.
- Matthew 14:1 ಮತ್ತಾಯನು 14:1ಆ ಕಾಲದಲ್ಲಿ ಚತುರಾಧಿಪತಿಯಾದ ಹೆರೋದನು ಯೇಸುವಿನ ಕೀರ್ತಿಯನ್ನು ಕೇಳಿ ತನ್ನ ಸೇವಕರಿಗೆ --
- Matthew 14:5 ಮತ್ತಾಯನು 14:5ಆದದರಿಂದ ಅವನು ಯೋಹಾನನನ್ನು ಕೊಲ್ಲಬೇಕೆಂದಿದ್ದಾಗ ಜನ ಸಮೂಹಕ್ಕೆ ಭಯಪಟ್ಟನು; ಯಾಕಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು.
- Judges 11:39 ನ್ಯಾಯಸ್ಥಾಪಕರು 11:399ಎರಡು ತಿಂಗಳು ತೀರಿದಾಗ ತನ್ನ ತಂದೆಯ ಬಳಿಗೆ ಬಂದಳು. ಆಗ ಅವನು ಮಾಡಿದ್ದ ತನ್ನ ಪ್ರಮಾಣದ ಪ್ರಕಾರ ಅವಳಿಗೆ ಮಾಡಿದನು. ಅವಳು ಪುರುಷನನ್ನು ಅರಿಯದೆ ಇದ್ದಳು.ವರುಷಕ್ಕೆ ನಾಲ್ಕು ದಿವಸ ಇಸ್ರಾಯೇಲಿನ ಕುಮಾರ್ತೆಯರು ಹೋಗಿ ಗಿಲ್ಯಾದ್ಯನಾದ ಯೆಪ್ತಾಹನ ಮಗಳಿಗಾಗಿ ಗೋಳಾಡುವದು ಇಸ್ರಾಯೇಲಿನಲ್ಲಿ ಪದ್ಧತಿ ಆಯಿತು.
- Mark 6:14 ಮಾರ್ಕನು 6:14ಅರಸನಾದ ಹೆರೋದನು ಆತನ ವಿಷಯವಾಗಿ ಕೇಳಿದನು. (ಯಾಕಂದರೆ ಆತನ ಹೆಸರು ಎಲ್ಲಾ ಕಡೆಗೂ ಹರಡಿತು); ಮತ್ತು ಅವನು--ಬಾಪ್ತಿಸ್ಮ ಮಾಡಿಸುವ ಯೋಹಾನನು ಸತ್ತವರೊಳಗಿಂದ ಎದ್ದು ಬಂದಿದ್ದಾನೆ; ಆದದರಿಂದ ಮಹತ್ಕಾರ್ಯಗಳು ಅವನಲ್ಲಿ ತೋರಿ ಬರುತ್ತವೆ ಅಂದನು.
- Matthew 27:17–26 ಮತ್ತಾಯನು 27:17–26ಆದದ ರಿಂದ ಅವರು ಕೂಡಿಬಂದಿದ್ದಾಗ ಪಿಲಾತನು ಅವರಿಗೆ--ನಿಮಗೆ ಯಾರನ್ನು ಬಿಟ್ಟುಕೊಡ ಬೇಕನ್ನುತ್ತೀರಿ? ಬರಬ್ಬನನ್ನೋ? ಇಲ್ಲವೆ ಕ್ರಿಸ್ತನನ್ನಿಸಿಕೊಳ್ಳುವ ಯೇಸು ವನ್ನೋ ಎಂದು ಕೇಳಿದನು. ಯಾಕಂದರೆ ಆತನನ್ನು ಅವರು ಹೊಟ್ಟೇಕಿಚ್ಚಿನಿಂದ ಹಿಡುಕೊಟ್ಟಿದ್ದಾರೆಂದು ಅವನಿಗೆ ಗೊತ್ತಿತ್ತು. ಅವನು ನ್ಯಾಯಾಸನದ ಮೇಲೆ ಕೂತಿದ್ದಾಗ ಅವನ ಹೆಂಡತಿಯು ಅವ ನಿಗೆ--ನೀನು ಆ ನೀತಿವಂತನ ಗೊಡವೆಗೆ ಹೋಗ ಬೇಡ; ಯಾಕಂದರೆ ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ ಎಂದು ಹೇಳಿಕಳುಹಿಸಿದಳು. ಆದರೆ ಪ್ರಧಾನ ಯಾಜಕರು ಮತ್ತು ಹಿರಿಯರು ಬರಬ್ಬನನ್ನು ಬಿಟ್ಟುಕೊಟ್ಟು ಯೇಸು ವನ್ನು ಕೊಲ್ಲುವಂತೆ ಬೇಡಿಕೊಳ್ಳುವ ಹಾಗೆ ಸಮೂಹ ವನ್ನು ಒಡಂಬಡಿಸಿದರು. ಅಧಿಪತಿಯು ಪ್ರತ್ಯುತ್ತರ ವಾಗಿ ಅವರಿಗೆ--ಈ ಇಬ್ಬರಲ್ಲಿ ನಿಮಗೆ ಯಾರನ್ನು ಬಿಟ್ಟು ಕೊಡಬೇಕನ್ನುತ್ತೀರಿ ಅನ್ನಲು ಅವರು--ಬರಬ್ಬನನ್ನು ಅಂದರು. ಪಿಲಾತನು ಅವರಿಗೆ--ಹಾಗಾದರೆ ಕ್ರಿಸ್ತನನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ ಅನ್ನಲು ಅವರೆಲ್ಲರೂ--ಅವನನ್ನು ಶಿಲುಬೆಗೆ ಹಾಕಿಸು ಎಂದು ಅವನಿಗೆ ಹೇಳಿದರು. ಆಗ ಅಧಿಪತಿಯು--ಯಾಕೆ? ಆತನು ಕೆಟ್ಟದ್ದೇನು ಮಾಡಿ ದ್ದಾನೆ ಅಂದನು. ಆದರೆ ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಹೆಚ್ಚಾಗಿ ಕೂಗಿಕೊಂಡರು. ಪಿಲಾ ತನು ತನ್ನ ಯತ್ನ ನಡೆಯಲಿಲ್ಲ, ಗದ್ದಲವೇ ಹೆಚ್ಚಾಗುತ್ತದೆ ಎಂದು ನೋಡಿ ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು--ಈ ನೀತಿವಂತನ ರಕ್ತಕ್ಕೆ ನಾನು ನಿರಪರಾಧಿ, ಅದನ್ನು ನೀವೇ ನೋಡಿಕೊಳ್ಳಿರಿ ಅಂದನು. ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು. ಆಗ ಅವನು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವಂತೆ ಒಪ್ಪಿಸಿದನು.
- 1 Samuel 25:32–34 1 ಸಮುವೇಲನು 25:32–34ಆಗ ದಾವೀದನು ಅಬೀಗೈಲಳಿಗೆ--ನನ್ನನ್ನು ಎದುರು ಗೊಳ್ಳುವದಕ್ಕೆ ಈ ಹೊತ್ತು ನಿನ್ನನ್ನು ಕಳುಹಿಸಿದ ಇಸ್ರಾ ಯೇಲಿನ ದೇವರಾದ ಕರ್ತನಿಗೆ ಸ್ತೋತ್ರವಾಗಲಿ. ನಿನ್ನ ಬುದ್ಧಿಮಾತು ಆಶೀರ್ವದಿಸಲ್ಪಡಲಿ. ನಾನು ರಕ್ತ ಚೆಲ್ಲುವದನ್ನೂ ನನ್ನ ಕೈಯಿಂದ ನಾನೇ ಮುಯ್ಯಿ ತೀರಿಸದಂತೆಯೂ ಈ ಹೊತ್ತು ನನ್ನನ್ನು ಆಟಂಕಪಡಿ ಸಿದ ನಿನಗೆ ಆಶೀರ್ವಾದವಾಗಲಿ. ನಿನಗೆ ಕೇಡು ಮಾಡದ ಹಾಗೆ ನನಗೆ ಆಟಂಕ ಮಾಡಿದ ಇಸ್ರಾ ಯೇಲಿನ ದೇವರಾದ ಕರ್ತನ ಜೀವದಾಣೆ, ನೀನು ಬೇಗನೆ ಬಂದು ನನ್ನನ್ನು ಎದುರುಗೊಳ್ಳದೆ ಹೋಗಿದ್ದರೆ ಉದಯವಾಗುವಷ್ಟರಲ್ಲಿ ನಾಬಾಲನಿಗೆ ಒಬ್ಬನಾದರೂ ಉಳಿಯುತ್ತಿರಲಿಲ್ಲ ಅಂದನು.
- Acts 25:3–9 ಅಪೊಸ್ತಲರ ಕೃತ್ಯಗಳು 25:3–9ಅವನನ್ನು ಕೊಲ್ಲುವದಕ್ಕಾಗಿ ದಾರಿಯಲ್ಲಿ ಹೊಂಚು ಹಾಕುತ್ತಾ ಅವನನ್ನು ಯೆರೂಸಲೇಮಿನಿಂದ ಕರೆಯಿಸ ಬೇಕೆಂದು ಅವನಿಗೆ ವಿರೋಧವಾಗಿ ಬೇಡಿಕೊಂಡರು. ಆದರೆ ಫೆಸ್ತನು ಪ್ರತ್ಯುತ್ತರವಾಗಿ--ಪೌಲನು ಕೈಸರೈ ಯದಲ್ಲೇ ಕಾವಲಿನಲ್ಲಿಡಲ್ಪಡತಕ್ಕದ್ದೆಂದೂ ಅಲ್ಲಿಗೆ ತಾನೇ ಶೀಘ್ರವಾಗಿ ಹೋಗುವೆನೆಂದೂ ಹೇಳಿದನು. ಆದಕಾರಣ ನಿಮ್ಮಲ್ಲಿ ಸಾಮರ್ಥ್ಯವುಳ್ಳವರು ನನ್ನೊಂ ದಿಗೆ ಬಂದು ಅವನಲ್ಲಿ ದುಷ್ಟತನವೇನಾದರೂ ಇದ್ದರೆ ಅವನ ಮೇಲೆ ತಪ್ಪು ಹೊರಿಸಲಿ ಎಂದು ಅವನು ಹೇಳಿದನು. ಅವನು ಅವರ ಮಧ್ಯದಲ್ಲಿ ಹತ್ತು ದಿವಸಗಳಿಗಿಂತ ಹೆಚ್ಚು ಸಮಯವಿದ್ದ ತರುವಾಯ ಕೈಸರೈಯಕ್ಕೆ ಹೊರಟುಹೋಗಿ ಮರುದಿನ ನ್ಯಾಯಾಸನದ ಮೇಲೆ ಕೂತುಕೊಂಡು ಪೌಲನನ್ನು ಕರೆದುಕೊಂಡು ಬರ ಬೇಕೆಂದು ಅಪ್ಪಣೆಕೊಟ್ಟನು. ಅವನು ಬಂದಾಗ ಯೆರೂಸಲೇಮಿನಿಂದ ಬಂದಿದ್ದ ಯೆಹೂದ್ಯರು ಸುತ್ತಲೂ ನಿಂತುಕೊಂಡು ತಾವು ಸ್ಥಾಪಿಸಲಿಕ್ಕಾಗದ ಅನೇಕ ಕಠಿಣ ದೂರುಗಳನ್ನು ಪೌಲನಿಗೆ ವಿರೋಧ ವಾಗಿ ಹೇಳಿದರು. ಆಗ ಪೌಲನು--ಯೆಹೂದ್ಯರ ನ್ಯಾಯಪ್ರಮಾಣಕ್ಕೆ ವಿರೋಧವಾಗಿಯಾಗಲೀ ಈ ದೇವಾಲಯಕ್ಕೆ ವಿರೋಧವಾಗಿಯಾಗಲೀ ಮಾತ್ರ ವಲ್ಲದೆ ಕೈಸರನಿಗೆ ವಿರೋಧವಾಗಿಯಾಗಲೀ ನಾನು ಯಾವ ತಪ್ಪನ್ನೂ ಮಾಡಲಿಲ್ಲ ಎಂದು ಪ್ರತ್ಯುತ್ತರವಾಗಿ ಹೇಳಿದನು. ಆದರೆ ಯೆಹೂದ್ಯರನ್ನು ಸಂತೋಷ ಪಡಿಸುವದಕ್ಕಾಗಿ ಫೆಸ್ತನು ಪೌಲನಿಗೆ--ನೀನು ಯೆರೂಸಲೇಮಿಗೆ ಬಂದು ನನ್ನ ಮುಂದೆ ಇವುಗಳ ವಿಷಯವಾಗಿ ವಿಚಾರಿಸಲ್ಪಡುವದಕ್ಕೆ ನಿನಗೆ ಇಷ್ಟ ವಿದೆಯೋ ಎಂದು ಕೇಳಿದನು.
- Judges 21:7–23 ನ್ಯಾಯಸ್ಥಾಪಕರು 21:7–23ನಾವು ನಮ್ಮ ಕುಮಾರ್ತೆಯರಲ್ಲಿ ಒಬ್ಬಳನ್ನಾದರೂ ಅವರಿಗೆ ಕೊಡುವದಿಲ್ಲವೆಂದು ನಾವು ಕರ್ತನ ಮೇಲೆ ಆಣೆ ಇಟ್ಟುಕೊಂಡದ್ದರಿಂದ ಉಳಿದವರಿಗೆ ಹೆಂಡತಿ ಯರು ದೊರಕುವಂತೆ ನಾವು ಅವರಿಗೋಸ್ಕರ ಏನು ಮಾಡೋಣ ಅಂದರು. ಇಸ್ರಾಯೇಲಿನ ಗೋತ್ರ ಗಳಲ್ಲಿ ಮಿಚ್ಪೆಗೆ ಕರ್ತನ ಬಳಿಗೆ ಬಾರದವರು ಯಾರಾ ದರೂ ಒಬ್ಬರಿದ್ದಾರೋ ಅಂದರು. ಆಗ ಇಗೋ, ಯಾಬೇಷ್ ಗಿಲ್ಯಾದಿನವರಲ್ಲಿ ಒಬ್ಬನಾದರೂ ಸಭೆಯ ಬಳಿಗೆ ಪಾಳೆಯಕ್ಕೆ ಬಂದದ್ದಿರಲಿಲ್ಲ. ಜನರು ಲೆಕ್ಕ ಮಾಡಲ್ಪಟ್ಟಾಗ ಇಗೋ, ಯಾಬೇಷ್ ಗಿಲ್ಯಾದಿನಲ್ಲಿ ಇರುವವರಲ್ಲಿ ಒಬ್ಬನಾದರೂ ಇದ್ದದ್ದಿಲ್ಲ. ಆಗ ಸಭೆಯು ಪರಾಕ್ರಮಶಾಲಿಗಳಲ್ಲಿ ಹನ್ನೆರಡು ಸಾವಿರ ಮನುಷ್ಯರನ್ನು ಅಲ್ಲಿಗೆ ಕಳುಹಿಸುವಾಗ ಅವರಿಗೆ--ನೀವು ಹೋಗಿ ಯಾಬೇಷ್ ಗಿಲ್ಯಾದಿನ ನಿವಾಸಿಗಳನ್ನೂ ಸ್ತ್ರೀಯರನ್ನೂ ಚಿಕ್ಕವರನ್ನೂ ಕೂಡಾ, ಕತ್ತಿಯಿಂದ ಹೊಡೆದು ಬಿಡಿರಿ. ನೀವು ಮಾಡಬೇಕಾದದ್ದೇನಂದರೆ--ಎಲ್ಲಾ ಗಂಡಸ ರನ್ನೂ ಪುರುಷನನ್ನು ಅರಿತ ಸ್ತ್ರೀಯರನ್ನೂ ನಿರ್ಮೂಲ ಮಾಡಿರೆಂದು ಆಜ್ಞಾಪಿಸಿದರು. ಹಾಗೆಯೆ ಯಾಬೇಷ್ ಗಿಲ್ಯಾದಿನ ನಿವಾಸಿಗಳಲ್ಲಿ ಅವರ ಸಂಗಡ ಮಲಗುವದರಿಂದ ಪುರುಷರನ್ನು ಅರಿಯದೆ ಇರುವ ನಾನೂರು ಮಂದಿ ಪ್ರಾಯದ ಕನ್ನಿಕೆಯರನ್ನು ಕಂಡು ಕೊಂಡು ಅವರನ್ನು ಕಾನಾನ್ದೇಶದಲ್ಲಿರುವ ಶೀಲೋ ವಿನಲ್ಲಿದ್ದ ಪಾಳೆಯಕ್ಕೆ ತಂದರು. ಆಗ ಸಭೆಯವ ರೆಲ್ಲರೂ ರಿಮ್ಮೋನ್ ಗುಡ್ಡದಲ್ಲಿರುವ ಬೆನ್ಯಾವಿಾನನ ಮಕ್ಕಳ ಸಂಗಡ ಮಾತನಾಡಿ ಅವರಿಗೆ ಸಮಾಧಾನ ವನ್ನು ಸಾರಲು ಕೆಲವರನ್ನು ಕಳುಹಿಸಿದರು. ಆ ಕಾಲದಲ್ಲಿ ಬೆನ್ಯಾವಿಾನ್ಯರು ತಿರಿಗಿ ಅವರ ಬಳಿಗೆ ಬಂದರು. ಅವರು ಯಾಬೇಷ್ ಗಿಲ್ಯಾದಿನ ಸ್ತ್ರೀಯ ರಲ್ಲಿ ಜೀವದಿಂದ ಉಳಿಸಿದ ಸ್ತ್ರೀಯರನ್ನು ಅವರಿಗೆ ಹೆಂಡತಿಯರಾಗಿ ಕೊಟ್ಟರು. ಅದಾಗ್ಯೂ ಅವರಿಗೆ ತಕ್ಕಷ್ಟು ಹೆಂಡತಿಯರು ಸಿಕ್ಕಲಿಲ್ಲ. ಕರ್ತನು ಇಸ್ರಾಯೇಲ್ ಗೋತ್ರಗಳಲ್ಲಿ ಒಂದು ಲೋಪವನ್ನು ಮಾಡಿದ್ದರಿಂದ ಜನರು ಬೆನ್ಯಾವಿಾನ ನಿಗಾಗಿ ಪಶ್ಚಾತ್ತಾಪಪಟ್ಟರು. ಸಭೆಯ ಹಿರಿಯರುಬೆನ್ಯಾವಿಾನನ ಗೋತ್ರದ ಸ್ತ್ರೀಯರು ನಾಶವಾದದ್ದ ರಿಂದ ಉಳಿದ ಜನರಿಗೆ ಹೆಂಡತಿಯರು ದೊರಕುವದ ಕ್ಕಾಗಿ ಏನು ಮಾಡೋಣ ಅಂದರು. ಇಸ್ರಾಯೇಲಿ ನಲ್ಲಿ ಒಂದು ಗೋತ್ರವು ಅಳಿದು ಹೋಗದ ಹಾಗೆ ತಪ್ಪಿಸಿಕೊಂಡ ಬೆನ್ಯಾವಿಾನ್ಯರಿಗೆ ಬಾಧ್ಯತೆ ಇರಬೇಕು. ನಾವಾದರೋ ನಮ್ಮ ಕುಮಾರ್ತೆಯರಲ್ಲಿ ಅವರಿಗೆ ಹೆಣ್ಣು ಕೊಡಕೂಡದು. ಯಾಕಂದರೆ, ಬೆನ್ಯಾವಿಾನ್ಯರಿಗೆ ಹೆಣ್ಣು ಕೊಡುವವನು ಶಪಿಸಲ್ಪಡಲೆಂದು ಇಸ್ರಾಯೇ ಲಿನ ಮಕ್ಕಳು ಆಣೆ ಇಟ್ಟುಕೊಂಡಿದ್ದಾರೆ ಅಂದರು. ಅವರು--ಇಗೋ, ಬೇತೇಲಿಗೆ ಉತ್ತರದಲ್ಲಿಯೂ ಬೇತೇಲಿನಿಂದ ಶೆಕೆಮಿಗೆ ಹೋಗುವ ಹೆದ್ದಾರಿಯ ಮೂಡಲಲ್ಲಿಯೂ ಲೆಬೋನಕ್ಕೆ ದಕ್ಷಿಣದಲ್ಲಿರುವ ಶೀಲೋವಿನಲ್ಲಿ ಪ್ರತಿ ವರುಷ ಕರ್ತನ ಹಬ್ಬ ಉಂಟೆಂದು ಹೇಳಿದರು. ಅವರು ಬೆನ್ಯಾವಿಾನನ ಮಕ್ಕಳಿಗೆನೀವು ಹೋಗಿ ದ್ರಾಕ್ಷೇ ತೋಟಗಳಲ್ಲಿ ಹೊಂಚಿ ಕೊಂಡಿರ್ರಿ. ಇಗೋ, ಶೀಲೋವಿನ ಕುಮಾರ್ತೆ ಯರು ನಾಟ್ಯಮಾಡುತ್ತಾ ಹೊರಟು ಬರುವರು. ನೀವು ಅವರನ್ನು ನೋಡಿದಾಗ ದ್ರಾಕ್ಷೇ ತೋಟಗಳಿಂದ ಹೊರಟು ಶೀಲೋವಿನ ಕುಮಾರ್ತೆಯರಲ್ಲಿ ನಿಮ್ಮಲ್ಲಿ ಅವನವನು ತನಗೆ ಹೆಂಡತಿಯಾಗಿ ಒಬ್ಬೊಬ್ಬಳನ್ನು ಹಿಡುಕೊಂಡು ಬೆನ್ಯಾವಿಾನನ ದೇಶಕ್ಕೆ ಹೋಗಿರಿ ಎಂದು ಆಜ್ಞಾಪಿಸಿದರು. ಅವರ ತಂದೆಗಳಾದರೂ ಅವರ ಸಹೋದರರಾದರೂ ನಮ್ಮ ಸಂಗಡ ವ್ಯಾಜ್ಯ ವಾಡುವದಕ್ಕೆ ಬಂದರೆ ನಾವು ಅವರಿಗೆ--ಯುದ್ದದಲ್ಲಿ ನಾವು ಅವನಿಗೆ ಹೆಂಡತಿಯನ್ನು ತಕ್ಕೊಳ್ಳದ ಕಾರಣ ನಮಗೋಸ್ಕರ ಅವರ ಮೇಲೆ ದಯೆ ತೋರಿಸಿರಿ. ಯಾಕಂದರೆ ನೀವು ಈ ಸಮಯದಲ್ಲಿ ಅವರಿಗೆ ಕೊಟ್ಟು ಅಪರಾಧಸ್ಥರಾಗಲಿಲ್ಲ ಎಂಬದಾಗಿ ಹೇಳುತ್ತೇವೆ ಅಂದರು. ಆಗ ಬೆನ್ಯಾವಿಾನನ ಮಕ್ಕಳು ಅದೇ ಪ್ರಕಾರಮಾಡಿ ನಾಟ್ಯವಾಡುವ ಹೆಣ್ಣುಗಳಲ್ಲಿ ತಮ್ಮ ಲೆಕ್ಕಕ್ಕೆ ಸರಿಯಾಗಿ ಹಿಡುಕೊಂಡವರನ್ನು ಅವನವನು ತನಗೆ ಹೆಂಡತಿಯಾಗಿ ತೆಗೆದುಕೊಂಡು ತಮ್ಮ ಬಾಧ್ಯತೆಗೆ ತಿರುಗಿಕೊಂಡು ಹೋಗಿ ಪಟ್ಟಣಗಳನ್ನು ಕಟ್ಟಿ ಅವು ಗಳಲ್ಲಿ ವಾಸಿಸಿದರು.