Matthew · chapter 15 · verse 11
Matthew 15:11 in Kannada
ಬಾಯೊಳಗೆ ಹೋಗುವಂಥದು ಮನುಷ್ಯನನ್ನು ಹೊಲೆಮಾಡುವದಿಲ್ಲ; ಆದರೆ ಬಾಯೊ ಳಗಿಂದ ಹೊರಗೆ ಬರುವಂಥದೇ ಮನುಷ್ಯನನ್ನು ಹೊಲೆಮಾಡುತ್ತದೆ ಎಂದು ಹೇಳಿದನು.
Baayolage hoguvanthadu manushyanannu holemaaduvadilla; aadare baayo laginda horage baruvanthade manushyanannu holemaaduttade endu helidanu.
Matthew 15:11 in English
- King James Version (KJV)
- Not that which goeth into the mouth defileth a man; but that which cometh out of the mouth, this defileth a man.
- World English Bible (WEB)
- That which enters into the mouth doesn’t defile the man; but that which proceeds out of the mouth, this defiles the man.”
- American Standard Version (ASV)
- Not that which entereth into the mouth defileth the man; but that which proceedeth out of the mouth, this defileth the man.
- Bible in Basic English (BBE)
- Not that which goes into the mouth makes a man unclean, but that which comes out of the mouth.
- Darby Translation (DBY)
- Not what enters into the mouth defiles the man; but what goes forth out of the mouth, this defiles the man.
- Webster's Bible (WBS)
- Not that which goeth into the mouth defileth a man; but that which cometh out of the mouth, this defileth a man.
- Young's Literal Translation (YLT)
- not that which is coming into the mouth doth defile the man, but that which is coming forth from the mouth, this defileth the man.'
Read in context
- 9ಅವರು ಮನುಷ್ಯರ ಆಜ್ಞೆಗಳನ್ನು ಬೋಧಿಸಿ ಕಲಿಸುವ ದರಿಂದ ನನ್ನನ್ನು ಆರಾಧಿಸುವದು ವ್ಯರ್ಥ ಎಂಬದೇ.
- 10ಆತನುಜನ ಸಮೂಹಗಳನ್ನು ಕರೆದು ಅವರಿಗೆ--ಕೇಳಿ ತಿಳುಕೊಳ್ಳಿರಿ;
- 11ಬಾಯೊಳಗೆ ಹೋಗುವಂಥದು ಮನುಷ್ಯನನ್ನು ಹೊಲೆಮಾಡುವದಿಲ್ಲ; ಆದರೆ ಬಾಯೊ ಳಗಿಂದ ಹೊರಗೆ ಬರುವಂಥದೇ ಮನುಷ್ಯನನ್ನು ಹೊಲೆಮಾಡುತ್ತದೆ ಎಂದು ಹೇಳಿದನು.
- 12ತರುವಾಯ ಆತನ ಶಿಷ್ಯರು ಬಂದು--ಫರಿಸಾ ಯರು ನಿನ್ನ ಈ ಮಾತನ್ನು ಕೇಳಿದ ಮೇಲೆ ಅಭ್ಯಂತರ ಪಟ್ಟರೆಂದು ನಿನಗೆ ತಿಳಿಯಿತೋ ಎಂದು ಕೇಳಿದರು.
- 13ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವರಿಗೆ--ಪರ ಲೋಕದ ನನ್ನ ತಂದೆಯು ನೆಡದೆ ಇರುವ ಪ್ರತಿಯೊ ಂದು ಗಿಡವು ಬೇರು ಸಹಿತವಾಗಿ ಕಿತ್ತುಹಾಕಲ್ಪಡುವದು.
Cross references
- Mark 7:15 ಮಾರ್ಕನು 7:15ಹೊರಗಿನಿಂದ ಮನುಷ್ಯನೊಳಗೆ ಸೇರಿ ಅವನನ್ನು ಹೊಲೆಮಾಡು ವಂಥದ್ದು ಯಾವದೂ ಇಲ್ಲ. ಆದರೆ ಅವನೊಳಗಿಂದ ಹೊರಗೆ ಬರುವಂಥವುಗಳೇ ಮನುಷ್ಯನನ್ನು ಹೊಲೆ ಮಾಡುವವುಗಳಾಗಿವೆ.
- Matthew 15:18–20 ಮತ್ತಾಯನು 15:18–20ಆದರೆ ಬಾಯೊಳಗಿಂದ ಹೊರಗೆ ಹೊರಡುವಂಥವುಗಳು ಹೃದಯದೊಳಗಿಂದ ಬಂದು ಮನುಷ್ಯನನ್ನು ಹೊಲೆ ಮಾಡುತ್ತವೆ. ಯಾಕಂದರೆ ಹೃದಯದೊಳಗಿಂದ ಕೆಟ್ಟ ಆಲೋಚನೆಗಳು, ಕೊಲೆಗಳು, ಹಾದರಗಳು, ಜಾರತ್ವ ಗಳು, ಕಳ್ಳತನಗಳು, ಸುಳ್ಳುಸಾಕ್ಷಿ, ದೇವ ದೂಷಣೆಗಳು ಹೊರಗೆ ಬರುತ್ತವೆ. ಇಂಥವುಗಳೇ ಮನುಷ್ಯನನ್ನು ಹೊಲೆಮಾಡುತ್ತವೆ; ಆದರೆ ಕೈತೊಳಕೊಳ್ಳದೆ ಊಟ ಮಾಡುವದು ಮನುಷ್ಯನನ್ನು ಹೊಲೆಮಾಡುವದಿಲ್ಲ ಅಂದನು.
- James 3:5–8 ಯಾಕೋಬನು 3:5–8ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಇಗೋ, ಎಷ್ಟು ಕೊಂಚ ಕಿಚ್ಚು ದೊಡ್ಡ ಕಾಡನ್ನು ಸುಡುತ್ತದೆ ನೋಡಿರಿ. ನಾಲಿಗೆಯು ಬೆಂಕಿಯೂ ದುಷ್ಟಲೋಕವೂ ಆಗಿದೆ. ಹೀಗೆ ಅದು ನಮ್ಮ ಅಂಗಗಳಲ್ಲಿ ಇದ್ದು ದೇಹವನ್ನೆಲ್ಲಾ ಹೊಲೆಮಾಡಿ ಪ್ರಕೃತಿಯ ಕ್ರಮಕ್ಕೆ ಬೆಂಕಿ ಹಚ್ಚುವ ಹಾಗೆಯೂ ನರಕದ ಬೆಂಕಿಯನ್ನು ಹಚ್ಚಿಕೊಳ್ಳುವ ದಾಗಿಯೂ ಇದೆ. ಮನುಷ್ಯ ಜಾತಿಯು ಸಕಲ ವಿಧವಾದ ಮೃಗ, ಪಕ್ಷಿ, ಸರ್ಪ, ಜಲಚರಗಳನ್ನು ಹತೋಟಿಗೆ ತರುವದುಂಟು ಮತ್ತು ತಂದದ್ದುಂಟು. ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋ ಟಿಗೆ ತರಲಾರನು. ಅದು ಸ್ವಾಧೀನವಾಗದ ಕೆಡುಕಾ ಗಿದೆ; ಮರಣಕರವಾದ ವಿಷದಿಂದ ತುಂಬಿ ಇದೆ.
- 1 Timothy 4:4–5 1 ತಿಮೊಥೆಯನಿಗೆ 4:4–5ದೇವರ ಪ್ರತಿಯೊಂದು ಸೃಷ್ಟಿಯೂ ಒಳ್ಳೇದಾಗಿದೆ; ಸ್ತೋತ್ರ ಮಾಡಿ ತೆಗೆದು ಕೊಳ್ಳುವ ಪಕ್ಷಕ್ಕೆ ಯಾವದನ್ನೂ ನಿರಾಕರಿಸಬಾರದು. ದೇವರ ವಾಕ್ಯದಿಂದಲೂ ಪ್ರಾರ್ಥನೆಯಿಂದಲೂ ಅದು ಪವಿತ್ರವಾಗುತ್ತದಲ್ಲಾ.
- Matthew 12:34–37 ಮತ್ತಾಯನು 12:34–37ಓ ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ. ಒಳ್ಳೇಮನುಷ್ಯನು ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯವುಗಳನ್ನು ಹೊರಗೆ ತರುತ್ತಾನೆ; ಮತ್ತು ಕೆಟ್ಟಮನುಷ್ಯನು ಕೆಟ್ಟಬೊಕ್ಕಸದಿಂದ ಕೆಟ್ಟವುಗಳನ್ನು ಹೊರಗೆ ತರುತ್ತಾನೆ. ಆದರೆ ನಾನು ನಿಮಗೆ ಹೇಳುವದೇನಂದರೆ-- ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥವಾದ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು. ನೀನು ನಿನ್ನ ಮಾತುಗಳಿಂದಲೇ ನೀತಿವಂತನಾಗುವಿ ಮತ್ತು ನಿನ್ನ ಮಾತುಗಳಿಂದಲೇ ನೀನು ಅಪರಾಧಿಯಾಗುವಿ ಎಂದು ಹೇಳಿದನು.
- Acts 10:14–15 ಅಪೊಸ್ತಲರ ಕೃತ್ಯಗಳು 10:14–15ಅದಕ್ಕೆ ಪೇತ್ರನು--ಕರ್ತನೇ, ಹಾಗಲ್ಲ, ನಾನೆಂದೂ ಹೊಲೆಯಾದ ಪದಾರ್ಥವನ್ನಾಗಲೀ ಅಶುದ್ಧ ಪದಾ ರ್ಥವನ್ನಾಗಲೀ ತಿಂದವನಲ್ಲ ಅಂದನು. ದೇವರು ಶುದ್ಧಮಾಡಿದ್ದನ್ನು ನೀನು ಹೊಲೆಯೆನ್ನಬೇಡ ಎಂದು ತಿರಿಗಿ ಎರಡನೆಯ ಸಾರಿ ಅವನಿಗೆ ಹೇಳುವ ಧ್ವನಿಯು ಕೇಳಿಸಿತು.
- Romans 14:17 ರೋಮಾಪುರದವರಿಗೆ 14:17ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ.
- Luke 11:38–41 ಲೂಕನು 11:38–41ಆದರೆ ಊಟಕ್ಕೆ ಮೊದಲು ಆತನು ಕೈತೊಳಕೊಳ್ಳದೆ ಇರುವದನ್ನು ಫರಿಸಾಯನು ಕಂಡು ಆಶ್ಚರ್ಯಪಟ್ಟನು. ಆಗ ಕರ್ತನು ಅವನಿಗೆ-- ಫರಿಸಾಯರಾದ ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ; ಆದರೆ ನಿಮ್ಮ ಒಳಭಾಗವು ಸುಲಿಗೆಯಿಂದಲೂ ಕೆಟ್ಟತನ ದಿಂದಲೂ ತುಂಬಿರುತ್ತದೆ ಮೂರ್ಖರೇ, ಹೊರ ಭಾಗವನ್ನು ಮಾಡಿದಾತನು ಒಳಭಾಗವನ್ನು ಸಹ ಮಾಡಿದನಲ್ಲವೇ? ಆದರೆ ನಿಮಗೆ ಇರುವವುಗಳಲ್ಲಿ ನೀವು ದಾನಾಕೊಡಿರಿ; ಆಗ ಇಗೋ, ನಿಮಗೆ ಎಲ್ಲವು ಗಳು ಶುದ್ಧವಾಗಿರುವವು.
- Psalm 12:2 ಕೀರ್ತನೆಗಳು 12:2ಒಬ್ಬೊಬ್ಬನು ತನ್ನ ನೆರೆಯವನ ಸಂಗಡ ವ್ಯರ್ಥವಾದ ಮಾತನ್ನು ಆಡುತ್ತಾನೆ; ಮುಖಸ್ತುತಿಯ ತುಟಿಯಿಂದಲೂ ವಂಚನೆಯ ಹೃದಯದಿಂದಲೂ ಅವರು ಮಾತನಾಡುತ್ತಾರೆ.
- Romans 3:13–14 ರೋಮಾಪುರದವರಿಗೆ 3:13–14ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ತಮ್ಮ ನಾಲಿಗೆಗಳಿಂದ ವಂಚಿಸುತ್ತಾರೆ; ಅವರ ತುಟಿಗಳ ಕೆಳಗೆ ಹಾವಿನ ವಿಷವಿದೆ. ಅವರ ಬಾಯಿ ಶಾಪದಿಂದಲೂ ವಿಷದಿಂದಲೂ ತುಂಬಿ ಅದೆ.
- Isaiah 59:13–15 ಯೆಶಾಯ 59:13–15ದ್ರೋಹ ಮಾಡಿ ದ್ದೇವೆ, ಕರ್ತನಿಗೆ ಸುಳ್ಳಾಡಿದ್ದೇವೆ; ನಮ್ಮ ದೇವರ ಕಡೆಯಿಂದ ಹಿಂದಿರುಗಿದ್ದೇವೆ; ಬಲಾತ್ಕಾರದಿಂದ ತಿರುಗಿ ಬೀಳುವಿಕೆಯ ಕಾರ್ಯಗಳನ್ನು ಮಾತಾಡಿದ್ದೇವೆ; ಹೃದಯದಲ್ಲಿ ಸುಳ್ಳು ಮಾತುಗಳನ್ನು ಕಲ್ಪಿಸಿಕೊಂಡು ನುಡಿದಿದ್ದೇವೆ. ನ್ಯಾಯವು ಸಹ ಹಿಂದಕ್ಕೆ ತಿರುಗಿ ಸಲ್ಪಟ್ಟಿದೆ. ನೀತಿಯು ದೂರದಲ್ಲಿ ನಿಲ್ಲುತ್ತದೆ; ಸತ್ಯವು ಬೀದಿಯಲ್ಲಿ ಬಿದ್ದುಹೋಯಿತು. ಯಥಾರ್ಥತೆಯು ಪ್ರವೇಶಿಸುವದೇ ಇಲ್ಲ. ಹೌದು, ಸತ್ಯವು ಇಲ್ಲದೇ ಹೋಯಿತು; ಕೆಟ್ಟದ್ದನ್ನು ಬಿಟ್ಟುಬಿಡುವವನು ಸುಲಿಗೆ ಯಾಗುತ್ತಾನೆ; ಕರ್ತನು ಅದನ್ನು ನೋಡಿದನು, ಅದ ರಲ್ಲಿ ನ್ಯಾಯವಿಲ್ಲದ್ದರಿಂದ ಆತನಿಗೆ ಮೆಚ್ಚಿಕೆಯಾಗಲಿಲ್ಲ.
- Psalm 52:2–4 ಕೀರ್ತನೆಗಳು 52:2–4ಮೋಸ ಮಾಡುವ ಹದವಾದ ಕತ್ತಿಯ ಹಾಗೆ ನಿನ್ನ ನಾಲಿಗೆಯು ಕೇಡುಗಳನ್ನು ಕಲ್ಪಿಸುತ್ತದೆ. ಒಳ್ಳೇದಕ್ಕಿಂತ ಕೆಟ್ಟದ್ದನ್ನೂ ನೀತಿಯನ್ನು ಮಾತನಾಡುವದಕ್ಕಿಂತ ಸುಳ್ಳನ್ನೂ ಪ್ರೀತಿ ಮಾಡುತ್ತೀ ಸೆಲಾ. ಓ ಮೋಸದ ನಾಲಿಗೆಯೇ, ನೀನು ನುಂಗಿಬಿಡುವ ಮಾತುಗಳನ್ನೆಲ್ಲಾ ಪ್ರೀತಿ ಮಾಡುತ್ತೀ.