Matthew · chapter 15 · verse 14
Matthew 15:14 in Kannada
ಅವರನ್ನು ಬಿಡಿರಿ; ಅವರು ಕುರುಡರನ್ನು ನಡಿಸುವ ಕುರುಡರು. ಕುರುಡನು ಕುರುಡನನ್ನು ನಡಿಸಿದರೆ ಇಬ್ಬರೂ ಕುಣಿಯೊಳಕ್ಕೆ ಬೀಳುವರು ಎಂದು ಹೇಳಿ ದನು.
Avarannu bidiri; avaru kurudarannu nadisuva kurudaru. Kurudanu kurudanannu nadisidare ibbaroo kuniyolakke beeluvaru endu heli danu.
Matthew 15:14 in English
- King James Version (KJV)
- Let them alone: they be blind leaders of the blind. And if the blind lead the blind, both shall fall into the ditch.
- World English Bible (WEB)
- Leave them alone. They are blind guides of the blind. If the blind guide the blind, both will fall into a pit.”
- American Standard Version (ASV)
- Let them alone: they are blind guides. And if the blind guide the blind, both shall fall into a pit.
- Bible in Basic English (BBE)
- Let them be: they are blind guides. And if a blind man is guiding a blind man, the two will go falling into a hole together.
- Darby Translation (DBY)
- Leave them alone; they are blind leaders of blind: but if blind lead blind, both will fall into a ditch.
- Webster's Bible (WBS)
- Let them alone: they are blind leaders of the blind. And if the blind leadeth the blind, both will fall into the ditch.
- Young's Literal Translation (YLT)
- let them alone, guides they are — blind of blind; and if blind may guide blind, both into a ditch shall fall.'
Read in context
- 12ತರುವಾಯ ಆತನ ಶಿಷ್ಯರು ಬಂದು--ಫರಿಸಾ ಯರು ನಿನ್ನ ಈ ಮಾತನ್ನು ಕೇಳಿದ ಮೇಲೆ ಅಭ್ಯಂತರ ಪಟ್ಟರೆಂದು ನಿನಗೆ ತಿಳಿಯಿತೋ ಎಂದು ಕೇಳಿದರು.
- 13ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವರಿಗೆ--ಪರ ಲೋಕದ ನನ್ನ ತಂದೆಯು ನೆಡದೆ ಇರುವ ಪ್ರತಿಯೊ ಂದು ಗಿಡವು ಬೇರು ಸಹಿತವಾಗಿ ಕಿತ್ತುಹಾಕಲ್ಪಡುವದು.
- 14ಅವರನ್ನು ಬಿಡಿರಿ; ಅವರು ಕುರುಡರನ್ನು ನಡಿಸುವ ಕುರುಡರು. ಕುರುಡನು ಕುರುಡನನ್ನು ನಡಿಸಿದರೆ ಇಬ್ಬರೂ ಕುಣಿಯೊಳಕ್ಕೆ ಬೀಳುವರು ಎಂದು ಹೇಳಿ ದನು.
- 15ತರುವಾಯ ಪೇತ್ರನು ಪ್ರತ್ಯುತ್ತರವಾಗಿ ಆತ ನಿಗೆ--ಈ ಸಾಮ್ಯವನ್ನು ನಮಗೆ ತಿಳಿಯಪಡಿಸು ಅಂದನು.
- 16ಅದಕ್ಕೆ ಯೇಸು--ನೀವು ಸಹ ಇನ್ನೂ ಗ್ರಹಿಸದೆ ಇದ್ದೀರಾ?
Cross references
- Luke 6:39 ಲೂಕನು 6:39ಆತನು ಒಂದು ಸಾಮ್ಯವನ್ನು ಅವರಿಗೆ ಹೇಳಿ ದನು--ಕುರುಡನು ಕುರುಡನನ್ನು ನಡಿಸಬಲ್ಲನೋ? (ನಡಿಸಿದರೆ) ಅವರಿಬ್ಬರೂ ಕುಣಿಯಲ್ಲಿ ಬೀಳುವದಿ ಲ್ಲವೋ?
- Isaiah 56:10 ಯೆಶಾಯ 56:10ಅವನ ಕಾವಲುಗಾರರು ಕುರುಡರು, ಅವರೆಲ್ಲರೂ ತಿಳುವಳಿಕೆ ಯಿಲ್ಲದವರು; ಅವರೆಲ್ಲರೂ ಮೂಕ ನಾಯಿಗಳು; ಅವು ಬೊಗಳಲಾರವು, ನಿದ್ರಿಸುತ್ತವೆ, ಬಿದ್ದುಕೊಂಡಿ ರುತ್ತವೆ. ತೂಕಡಿಕೆಯನ್ನು ಪ್ರೀತಿಸುತ್ತವೆ.
- Matthew 23:16–24 ಮತ್ತಾಯನು 23:16–24ಕುರುಡರಾದ ಮಾರ್ಗದರ್ಶಕರೇ, ನಿಮಗೆ ಅಯ್ಯೋ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲ ಅನ್ನುತ್ತೀರಿ; ಆದರೆ ಯಾವನಾದರೂ ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೆ ಅವನು ಸಾಲಗಾರನು ಎಂದು ಅನ್ನುತ್ತೀರಿ. ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಚಿನ್ನವೋ ಇಲ್ಲವೆ ಚಿನ್ನವನ್ನು ಪಾವನ ಮಾಡುವ ದೇವಾಲಯವೋ? ಯಾರಾದರೂ ಯಜ್ಞವೇದಿಯ ಮೇಲೆ ಆಣೆಯಿಡುವದಾದರೆ ಅದು ಏನೂ ಅಲ್ಲವೆಂದೂ ಯಾರಾದರೂ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟರೆ ಅವನು ಅಪರಾಧಿ ಯೆಂದೂ ಅನ್ನುತ್ತೀರಿ. ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಕಾಣಿಕೆಯೋ ಇಲ್ಲವೆ ಕಾಣಿಕೆಯನ್ನು ಪಾವನಮಾಡುವ ಯಜ್ಞವೇದಿಯೋ? ಆದದರಿಂದ ಯಜ್ಞವೇದಿಯ ಮೇಲೆ ಆಣೆಯಿಡು ವವನು ಅದರ ಮೇಲೆಯೂ ಅದರಲ್ಲಿರುವಂಥವುಗಳ ಮೇಲೆಯೂ ಆಣೆಯಿಡುವವನಾಗಿದ್ದಾನೆ. ದೇವಾ ಲಯದ ಮೇಲೆ ಆಣೆಯಿಡುವವನು ಅದರ ಮೇಲೆ ಯೂ ಆದರಲ್ಲಿ ವಾಸಿಸುವಾತನ ಮೇಲೆಯೂ ಆಣೆ ಯಿಡುವವನಾಗಿದ್ದಾನೆ. ಪರಲೋಕದ ಮೇಲೆ ಆಣೆ ಯಿಡುವವನು ದೇವರ ಸಿಂಹಾಸನದ ಮೇಲೆಯೂ ಅದರ ಮೇಲೆ ಕೂತಿರುವಾತನ ಮೇಲೆಯೂ ಆಣೆಯಿಡುವವನಾಗಿದ್ದಾನೆ. ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮರುಗ ಸೋಪು ಜೀರಿಗೆ ಗಳಲ್ಲಿ ದಶಮ ಭಾಗವನ್ನು ಸಲ್ಲಿಸುತ್ತೀರಿ. ಆದರೆ ನ್ಯಾಯ ಪ್ರಮಾಣದ ತೀರ್ಪು ಕರುಣೆ ನಂಬಿಕೆ ಎಂಬ ಈ ಪ್ರಾಮುಖ್ಯವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗ ಳೊಂದಿಗೆ ಆ ಬೇರೆಯವುಗಳನೂ ಕುರುಡ ಮಾರ್ಗದರ್ಶಕರಾದ ನೀವು ಸೊಳ್ಳೇ ಸೋಸುವವರು ಮತ್ತು ಒಂಟೇ ನುಂಗುವವರು.
- Malachi 2:8 ಮಲಾಕಿಯ 2:8ಆದರೆ ನೀವು ಮಾರ್ಗವನ್ನು ಬಿಟ್ಟುಹೋಗಿದ್ದೀರಿ; ಅನೇಕರನ್ನು ನ್ಯಾಯಪ್ರಮಾಣಕ್ಕೆ ಎಡವುವಂತೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಕೆಡಿಸಿದ್ದೀರೆಂದು ಸೈನ್ಯ ಗಳ ಕರ್ತನು ಹೇಳುತ್ತಾನೆ.
- Isaiah 9:16 ಯೆಶಾಯ 9:16ಈ ಜನರನ್ನು ನಡಿಸು ವವರು ದಾರಿತಪ್ಪಿಸುವವರಾಗಿದ್ದಾರೆ; ಅವರಿಂದ ನಡಿ ಸಲ್ಪಟ್ಟವರು ನಾಶವಾಗಿದ್ದಾರೆ.
- Isaiah 42:19 ಯೆಶಾಯ 42:19ನನ್ನ ಸೇವಕನಲ್ಲದೆ ಕುರುಡನು ಯಾರು? ಇಲ್ಲವೆ ನಾನು ಕಳುಹಿಸಿದ ಸೇವಕನಲ್ಲದೇ ಕಿವುಡನು ಯಾರು? ಸಂಪೂರ್ಣನಂತೆ ಕುರುಡನು ಯಾರು? ಕರ್ತನ ಸೇವಕನಂತೆ ಕುರುಡನು ಯಾರು?
- Jeremiah 5:31 ಯೆರೆಮೀಯ 5:31ಏನಂದರೆ ಪ್ರವಾದಿಗಳು ಸುಳ್ಳಾಗಿ ಪ್ರವಾದಿಸು ತ್ತಾರೆ, ಯಾಜಕರು ತಮ್ಮ ಆದಾಯದಿಂದ ದೊರೆತನ ಮಾಡುತ್ತಾರೆ; ನನ್ನ ಜನರು ಅದನ್ನು ಪ್ರೀತಿ ಮಾಡು ತ್ತಾರೆ; ಆದರೆ ಅದರ ಅಂತ್ಯದಲ್ಲಿ ನೀವು ಏನು ಮಾಡುವಿರಿ?
- Ezekiel 14:9–10 ಯೆಹೆಜ್ಕೇಲನು 14:9–10ಪ್ರವಾದಿಯು ಮೋಸಹೋಗಿ ವಾಕ್ಯವನ್ನು ಹೇಳಿದರೆ ಕರ್ತನಾದ ನಾನೇ ಆ ಪ್ರವಾದಿಯನ್ನು ಮೋಸಗೊಳಿಸಿರುತ್ತೇನೆ; ನಾನು ನನ್ನ ಕೈಯನ್ನು ಅವನ ಮೇಲೆ ಚಾಚಿ ನನ್ನ ಜನರಾದ ಇಸ್ರಾಯೇಲ್ಯರ ಮಧ್ಯ ದೊಳಗಿಂದ ನಾಶಪಡಿಸುವೆನು. ಅವರು ತಮ್ಮ ಅಕ್ರಮದ ದಂಡನೆಯನ್ನು ಹೊರುವರು; ವಿಚಾರಿಸು ವವನ ದಂಡನೆಯು ಹೇಗೋ ಹಾಗೆಯೇ ಪ್ರವಾ ದನೆಯ ದಂಡನೆಯೂ ಇರುವದು.
- 2 Peter 2:1 2 ಪೇತ್ರನು 2:1ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ
- Revelation 22:15 ಪ್ರಕಟನೆ 22:15ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.
- Jeremiah 8:12 ಯೆರೆಮೀಯ 8:12ಇಲ್ಲ, ಸ್ವಲ್ಪ ವಾದರೂ ನಾಚಿಕೆಪಡಲಿಲ್ಲ; ಇಲ್ಲವೆ ಅವರು ಲಜ್ಜೆ ಯನ್ನು ಅರಿಯರು. ಆದದರಿಂದ ಬೀಳುವವರೊಳಗೆ ಅವರು ಬೀಳುವರು; ಅವರು ವಿಚಾರಿಸಲ್ಪಡುವ ಕಾಲದಲ್ಲಿ ಕೆಳಗೆ ಹಾಕಲ್ಪಡು ವರು ಎಂದು ಕರ್ತನು ಹೇಳುತ್ತಾನೆ.
- Hosea 4:17 ಹೋಶೇಯ 4:17ಎಫ್ರಾಯಾಮನು ವಿಗ್ರಹಗಳಿಗೆ ಸೇರಿಕೊಂಡಿ ದ್ದಾನೆ, ಅವನನ್ನು ಬಿಟ್ಟುಬಿಡು.