Matthew · chapter 15 · verse 19
Matthew 15:19 in Kannada
ಯಾಕಂದರೆ ಹೃದಯದೊಳಗಿಂದ ಕೆಟ್ಟ ಆಲೋಚನೆಗಳು, ಕೊಲೆಗಳು, ಹಾದರಗಳು, ಜಾರತ್ವ ಗಳು, ಕಳ್ಳತನಗಳು, ಸುಳ್ಳುಸಾಕ್ಷಿ, ದೇವ ದೂಷಣೆಗಳು ಹೊರಗೆ ಬರುತ್ತವೆ.
Yaakandare hrudayadolaginda ketta aalochanegalu, kolegalu, haadaragalu, jaaratva galu, kallatanagalu, sullusaakshi, deva dooshanegalu horage baruttave.
Matthew 15:19 in English
- King James Version (KJV)
- For out of the heart proceed evil thoughts, murders, adulteries, fornications, thefts, false witness, blasphemies:
- World English Bible (WEB)
- For out of the heart come evil thoughts, murders, adulteries, sexual sins, thefts, false testimony, and blasphemies.
- American Standard Version (ASV)
- For out of the heart come forth evil thoughts, murders, adulteries, fornications, thefts, false witness, railings:
- Bible in Basic English (BBE)
- For out of the heart come evil thoughts, the taking of life, broken faith between the married, unclean desires of the flesh, taking of property, false witness, bitter words:
- Darby Translation (DBY)
- For out of the heart come forth evil thoughts, murders, adulteries, fornications, thefts, false witnessings, blasphemies;
- Webster's Bible (WBS)
- For out of the heart proceed evil thoughts, murders, adulteries, fornications, thefts, false witness, blasphemies:
- Young's Literal Translation (YLT)
- for out of the heart come forth evil thoughts, murders, adulteries, whoredoms, thefts, false witnessings, evil speakings:
Read in context
- 17ಬಾಯೊಳಗೆ ಹೋಗಿ ಹೊಟ್ಟೆ ಯಲ್ಲಿ ಸೇರುವದೆಲ್ಲವೂ ಬಹಿರ್ಭೂಮಿಗೆ ಹೋಗುವ ದೆಂದು ನೀವು ಇನ್ನೂ ಗ್ರಹಿಸಲಿಲ್ಲವೋ?
- 18ಆದರೆ ಬಾಯೊಳಗಿಂದ ಹೊರಗೆ ಹೊರಡುವಂಥವುಗಳು ಹೃದಯದೊಳಗಿಂದ ಬಂದು ಮನುಷ್ಯನನ್ನು ಹೊಲೆ ಮಾಡುತ್ತವೆ.
- 19ಯಾಕಂದರೆ ಹೃದಯದೊಳಗಿಂದ ಕೆಟ್ಟ ಆಲೋಚನೆಗಳು, ಕೊಲೆಗಳು, ಹಾದರಗಳು, ಜಾರತ್ವ ಗಳು, ಕಳ್ಳತನಗಳು, ಸುಳ್ಳುಸಾಕ್ಷಿ, ದೇವ ದೂಷಣೆಗಳು ಹೊರಗೆ ಬರುತ್ತವೆ.
- 20ಇಂಥವುಗಳೇ ಮನುಷ್ಯನನ್ನು ಹೊಲೆಮಾಡುತ್ತವೆ; ಆದರೆ ಕೈತೊಳಕೊಳ್ಳದೆ ಊಟ ಮಾಡುವದು ಮನುಷ್ಯನನ್ನು ಹೊಲೆಮಾಡುವದಿಲ್ಲ ಅಂದನು.
- 21ತರುವಾಯ ಯೇಸು ಅಲ್ಲಿಂದ ಹೊರಟು ತೂರ್ ಸೀದೋನ್ ತೀರಗಳಿಗೆ ಬಂದನು.
Cross references
- Mark 7:21–23 ಮಾರ್ಕನು 7:21–23ಯಾಕಂದರೆ ಮನುಷ್ಯರ ಹೃದಯದೊಳಗಿಂದ ಹೊರಡುವಂಥದ್ದು ಅಂದರೆ ಕೆಟ್ಟಆಲೋಚನೆಗಳು ವ್ಯಭಿಚಾರಗಳು ಹಾದರಗಳು ಕೊಲೆಗಳು ಕಳ್ಳತನಗಳು ದುರಾಶೆ ಕೆಟ್ಟತನ ಮೋಸ ಕಾಮಾಭಿಲಾಷೆ ಕೆಟ್ಟದೃಷಿ ದೇವದೂಷಣೆ ಗರ್ವ ಬುದ್ಧಿಗೇಡಿತನ ಈ ಎಲ್ಲಾ ಕೆಟ್ಟವುಗಳು ಒಳಗಿನಿಂದ ಬಂದು ಮನುಷ್ಯನನ್ನು ಹೊಲೆ ಮಾಡುತ್ತವೆ ಅಂದನು.
- Galatians 5:19–21 ಗಲಾತ್ಯದವರಿಗೆ 5:19–21ಶರೀರದ ಕೃತ್ಯಗಳು ಸ್ಪಷ್ಟವಾಗಿ ತೋರಿಬಂದಿವೆ; ಅವು ಯಾವವೆಂದರೆ--ವ್ಯಭಿಚಾರ ಜಾರತ್ವ ಅಶುದ್ಧತ್ವ ಬಂಡುತನ ವಿಗ್ರಹಾರಾಧನೆ ಮಾಟ ಹಗೆತನ ಮತಭೇದ ಹೊಟ್ಟೇಕಿಚ್ಚು ಸಿಟ್ಟು ಜಗಳ ಒಳಸಂಚು ಭಿನ್ನಾಭಿಪ್ರಾಯಗಳು ಅಸೂಯೆ ಗಳು ಕೊಲೆಗಳು ಕುಡುಕತನ ದುಂದೌತನ ಈ ಮೊದಲಾದವುಗಳೇ; ಇಂಥ ಕೃತ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.
- Jeremiah 17:9 ಯೆರೆಮೀಯ 17:9ಹೃದಯವು ಎಲ್ಲಾದಕ್ಕಿಂತ ವಂಚನೆಯುಳ್ಳದ್ದಾ ಗಿಯೂ ಮಹಾದುಷ್ಟತನದ್ದೂ ಆಗಿದೆ, ಅದನ್ನು ತಿಳಿಯುವವನಾರು?
- Titus 3:2–6 ತೀತನಿಗೆ 3:2–6ಯಾರ ವಿಷಯವಾಗಿಯೂ ಕೆಟ್ಟ ಮಾತನ್ನಾಡದವರೂ ಜಗಳವಾಡದವರೂ ಆಗಿದ್ದು ಸಾಧು ಸ್ವಭಾವವುಳ್ಳವರಾಗಿ ಎಲ್ಲಾ ಮನುಷ್ಯರಿಗೆ ಪೂರ್ಣ ಸಾತ್ವಿಕತ್ವವನ್ನು ತೋರಿಸಬೇಕೆಂತಲೂ ಅವ ರಿಗೆ ಜ್ಞಾಪಕಮಾಡು. ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು. ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು. ಆತನು (ದೇವರು) ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಮೂಲಕ ಆತನನ್ನು (ಪವಿತ್ರಾತ್ಮನನ್ನು) ನಮ್ಮ ಮೇಲೆ ಧಾರಾಳವಾಗಿ ಸುರಿಸಿ ದ್ದಾನೆ.
- James 1:13–15 ಯಾಕೋಬನು 1:13–15ಯಾವನಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ--ಈ ಪ್ರೇರಣೆಯು ನನಗೆ ದೇವರಿಂದ ಉಂಟಾಯಿತೆಂದು ಹೇಳಬಾರದು. ಯಾಕಂದರೆ ದೇವರು ಕೆಟ್ಟದ್ದರಿಂದ ಶೋಧಿಸಲಾರನು; ಆತನು ಯಾರನ್ನೂ ಶೋಧಿಸುವದೂ ಇಲ್ಲ. ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಯಿಂದ ಎಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ. ಆಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ; ಪಾಪವು ಸಂಪೂರ್ಣವಾದ ಮೇಲೆ ಮರಣ ವನ್ನು ಹಡೆಯುತ್ತದೆ.
- Proverbs 4:23 ಜ್ಞಾನೋಕ್ತಿಗಳು 4:23ಬಹು ಜಾಗ್ರತೆಯಿಂದ ನಿನ್ನ ಹೃದಯವನ್ನು ಕಾಪಾಡಿಕೋ; ಜೀವಧಾರೆಗಳು ಅದರೊಳಗಿಂದ ಹೊರಡುವವು.
- Genesis 6:5 ಆದಿಕಾಂಡ 6:5ಮನುಷ್ಯನ ದುಷ್ಟತ್ವವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳ ಕಲ್ಪನೆಗಳೆಲ್ಲಾ ಯಾವಾಗಲೂ ಬರೀ ಕೆಟ್ಟವುಗಳೆಂದೂ ದೇವರು ನೋಡಿದನು.
- Romans 3:10–19 ರೋಮಾಪುರದವರಿಗೆ 3:10–19ಬರೆದಿರುವ ಪ್ರಕಾರ--ನೀತಿವಂತನು ಇಲ್ಲ, ಒಬ್ಬನಾದರೂ ಇಲ್ಲ; ತಿಳುವಳಿಕೆಯುಳ್ಳವನು ಇಲ್ಲ, ದೇವರನ್ನು ಹುಡುಕುವವನೂ ಇಲ್ಲ. ಎಲ್ಲರೂ ದಾರಿತಪ್ಪಿದವರಾಗಿ ಕೆಲಸಕ್ಕೆ ಬಾರದವರಾದರು, ಒಳ್ಳೆ ಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ. ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ತಮ್ಮ ನಾಲಿಗೆಗಳಿಂದ ವಂಚಿಸುತ್ತಾರೆ; ಅವರ ತುಟಿಗಳ ಕೆಳಗೆ ಹಾವಿನ ವಿಷವಿದೆ. ಅವರ ಬಾಯಿ ಶಾಪದಿಂದಲೂ ವಿಷದಿಂದಲೂ ತುಂಬಿ ಅದೆ. ಅವರ ಕಾಲುಗಳು ರಕ್ತವನ್ನು ಸುರಿಸಲು ಆತುರ ಪಡುತ್ತವೆ. ಅವರ ದಾರಿಗಳಲ್ಲಿ ನಾಶ ಸಂಕಟಗಳು ಉಂಟಾಗುತ್ತವೆ. ಅವರು ಸಮಾಧಾನದ ಮಾರ್ಗ ವನ್ನೇ ಅರಿತವರಲ್ಲ; ಅವರ ಕಣ್ಣೆದುರಿಗೆ ದೇವರ ಭಯವೇ ಇಲ್ಲ ಎಂಬವುಗಳೇ. ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
- Jeremiah 4:14 ಯೆರೆಮೀಯ 4:14ಯೆರೂಸಲೇಮೇ, ನೀನು ರಕ್ಷಿಸಲ್ಪಡುವ ಹಾಗೆ ನಿನ್ನ ಹೃದಯವನ್ನು ಕೆಟ್ಟತನದಿಂದ ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರ ವರೆಗೆ ನಿನ್ನಲ್ಲಿ ತಂಗುವವು?
- Acts 8:22 ಅಪೊಸ್ತಲರ ಕೃತ್ಯಗಳು 8:22ಆದದರಿಂದ ಈ ನಿನ್ನ ಕೆಟ್ಟತನದ ವಿಷಯವಾಗಿ ಮಾನಸಾಂತರಪಟ್ಟು ದೇವರನ್ನು ಬೇಡಿಕೋ, ಆಗ ನಿನ್ನ ಹೃದಯದ ಆಲೋಚನೆಯು ಕ್ಷಮಿಸಲ್ಪಡಬಹುದು.
- Isaiah 59:7 ಯೆಶಾಯ 59:7ಅವರ ಕಾಲುಗಳು ಕೇಡಿಗೆ ಓಡುತ್ತವೆ; ಅಪರಾಧವಿಲ್ಲದ ರಕ್ತ ವನ್ನು ಚೆಲ್ಲುವದಕ್ಕೆ ತ್ವರೆಪಡುತ್ತವೆ. ಅವರ ಆಲೋ ಚನೆ ಗಳು ದುಷ್ಟತನದ ಆಲೋಚನೆಗಳೇ; ನಷ್ಟವೂ ನಾಶವೂ ಅವರ ಮಾರ್ಗಗಳಲ್ಲಿ ಅವೆ.
- Proverbs 6:14 ಜ್ಞಾನೋಕ್ತಿಗಳು 6:14ಅವನ ಹೃದಯದಲ್ಲಿ ಮೂರ್ಖ ತನವಿದೆ. ಯಾವಾಗಲೂ ಅವನು ಕೇಡನ್ನು ಕಲ್ಪಿಸು ತ್ತಾನೆ. ಅವನು ವೈಷಮ್ಯವನ್ನು ಬಿತ್ತುತ್ತಾನೆ.