Matthew · chapter 15 · verse 5
Matthew 15:5 in Kannada
ಆದರೆ ನೀವು--ಯಾವನಾದರೂ ತನ್ನ ತಂದೆಗಾಗಲೀ ತಾಯಿಗಾಗಲೀ-- ನನ್ನಿಂದ ನಿನಗೆ ಪ್ರಯೋಜನ ವಾಗತಕ್ಕದ್ದು ಕಾಣಿಕೆಯಾಯಿತು ಎಂದು ಹೇಳುವದಾ ದರೆ
Aadare neevu--yaavanaadaroo tanna tandegaagalee taayigaagalee-- nanninda ninage prayojana vaagatakkaddu kaanikeyaayitu endu heluvadaa dare
Matthew 15:5 in English
- King James Version (KJV)
- But ye say, Whosoever shall say to [his] father or [his] mother, [It is] a gift, by whatsoever thou mightest be profited by me;
- World English Bible (WEB)
- But you say, ‘Whoever may tell his father or his mother, “Whatever help you might otherwise have gotten from me is a gift devoted to God,”
- American Standard Version (ASV)
- But ye say, Whosoever shall say to his father or his mother, That wherewith thou mightest have been profited by me is given [to God];
- Bible in Basic English (BBE)
- But you say, If a man says to his father or his mother, That by which you might have had profit from me is given to God;
- Darby Translation (DBY)
- But ye say, Whosoever shall say to his father or mother, It is a gift, whatsoever [it be] by which [received] from me thou wouldest be profited:
- Webster's Bible (WBS)
- But ye say, Whoever shall say to [his] father or [his] mother, [It is] a gift, by whatever thou mightest be profited by me;
- Young's Literal Translation (YLT)
- but ye say, Whoever may say to father or mother, An offering [is] whatever thou mayest be profited by me; —
Read in context
- 3ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವ ರಿಗೆ--ನೀವು ಸಹ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ಯಾಕೆ ಮಾರುತ್ತೀರಿ?
- 4ಯಾಕಂ ದರೆ ದೇವರು ಅಪ್ಪಣೆ ಕೊಟ್ಟು ಹೇಳಿದ್ದೇನಂದರೆ--ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು. ಮತ್ತು--ಯಾವನಾದರೂ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಶಪಿಸಿದರೆ ಅವನು ಸಾಯಲೇಬೇಕು ಎಂಬದೇ.
- 5ಆದರೆ ನೀವು--ಯಾವನಾದರೂ ತನ್ನ ತಂದೆಗಾಗಲೀ ತಾಯಿಗಾಗಲೀ-- ನನ್ನಿಂದ ನಿನಗೆ ಪ್ರಯೋಜನ ವಾಗತಕ್ಕದ್ದು ಕಾಣಿಕೆಯಾಯಿತು ಎಂದು ಹೇಳುವದಾ ದರೆ
- 6ಅವನು ತನ್ನ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಸನ್ಮಾನಿಸುವದರಿಂದ ಬಿಡುಗಡೆಯಾಗಿದ್ದಾನೆಂದು ನೀವು ಹೇಳುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ನಿರರ್ಥಕ ಮಾಡಿದ್ದೀರಿ.
- 7ಕಪಟಿಗಳೇ, ನಿಮ್ಮ ವಿಷಯವಾಗಿ ಯೆಶಾಯನು ಸರಿಯಾಗಿ ಪ್ರವಾದಿಸಿದನು;
Cross references
- Mark 7:10–13 ಮಾರ್ಕನು 7:10–13ಯಾಕಂದರೆ ಮೋಶೆಯು--ನಿನ್ನ ತಂದೆಯನ್ನು ನಿನ್ನ ತಾಯಿಯನ್ನು ಸನ್ಮಾನಿಸಬೇಕೆಂತಲೂ ಮತ್ತು--ತಂದೆಯನ್ನಾಗಲೀ ತಾಯಿಯನ್ನಾಗಲೀ ಶಪಿಸುವವನು ಸಾಯಲೇ ಬೇಕೆಂತಲೂ ಹೇಳಿದ್ದಾನೆ. ಆದರೆ ನೀವು--ಒಬ್ಬ ಮನುಷ್ಯನು ತನ್ನ ತಂದೆಗಾಗಲೀ ಅಥವಾ ತಾಯಿ ಗಾಗಲೀ--ನೀನು ನನ್ನಿಂದ ಹೊಂದಲಿಕ್ಕಿರುವ ಪ್ರಯೋಜನವು ಕೊರ್ಬಾನ್ (ಅಂದರೆ ಒಂದು ದಾನ) ಆಗಿದೆ ಎಂದು ಹೇಳಿದರೆ ಅವನು ಸ್ವತಂತ್ರ ನಾಗುವನು ಎಂದು ಅನ್ನುತ್ತೀರಿ; ಅವನು ತನ್ನ ತಂದೆಗಾದರೂ ತಾಯಿಗಾದರೂ ಏನನ್ನೂ ನೀವು ಮಾಡಗೊಡಿಸದೆ ನೀವು ಕಲಿಸಿರುವ ನಿಮ್ಮ ಸಂಪ್ರದಾಯದ ಮೂಲಕ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ, ಇಂಥ ಅನೇಕವಾದವುಗಳನ್ನು ನೀವು ಮಾಡುತ್ತೀರಿ ಅಂದನು.
- Acts 5:29 ಅಪೊಸ್ತಲರ ಕೃತ್ಯಗಳು 5:29ಆಗ ಪೇತ್ರನೂ ಉಳಿದ ಅಪೊಸ್ತಲರೂ ಪ್ರತ್ಯುತ್ತರವಾಗಿ--ನಾವು ಮನುಷ್ಯರಿಗಿಂತ ದೇವರಿಗೆ ವಿಧೇಯರಾಗತಕ್ಕದ್ದು.
- Matthew 23:16–18 ಮತ್ತಾಯನು 23:16–18ಕುರುಡರಾದ ಮಾರ್ಗದರ್ಶಕರೇ, ನಿಮಗೆ ಅಯ್ಯೋ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲ ಅನ್ನುತ್ತೀರಿ; ಆದರೆ ಯಾವನಾದರೂ ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೆ ಅವನು ಸಾಲಗಾರನು ಎಂದು ಅನ್ನುತ್ತೀರಿ. ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಚಿನ್ನವೋ ಇಲ್ಲವೆ ಚಿನ್ನವನ್ನು ಪಾವನ ಮಾಡುವ ದೇವಾಲಯವೋ? ಯಾರಾದರೂ ಯಜ್ಞವೇದಿಯ ಮೇಲೆ ಆಣೆಯಿಡುವದಾದರೆ ಅದು ಏನೂ ಅಲ್ಲವೆಂದೂ ಯಾರಾದರೂ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟರೆ ಅವನು ಅಪರಾಧಿ ಯೆಂದೂ ಅನ್ನುತ್ತೀರಿ.
- Leviticus 27:9–34 ಯಾಜಕಕಾಂಡ 27:9–34ಮನುಷ್ಯನು ಕರ್ತನಿಗೆ ಅರ್ಪಣೆಗಾಗಿ ತರುವವುಗ ಳಲ್ಲಿ ಅದು ಪಶುವಾಗಿದ್ದರೆ ಅವನು ಕೊಡುವಂತವು ಗಳೆಲ್ಲಾ ಕರ್ತನಿಗೆ ಶುದ್ಧವಾಗಿರುವದು. ಅದನ್ನು ಒಳ್ಳೇದಕ್ಕೆ ಕೆಟ್ಟದ್ದನ್ನಾಗಲಿ ಕೆಟ್ಟದ್ದಕ್ಕೆ ಒಳ್ಳೇದನ್ನಾಗಲಿ ಬದಲು ಮಾಡಬಾರದು ಮತ್ತು ಮಾರ್ಪಡಿ ಸಲೂಬಾರದು; ಹೇಗಾದರೂ ಒಂದು ಪಶುವಿಗೆ ಮತ್ತೊಂದನ್ನು ಬದಲು ಮಾಡಿದರೆ ಅದು ಅದರ ಬದಲೂ ಪರಿಶುದ್ಧವಾಗಿರಬೇಕು. ಅದು ಕರ್ತನಿಗೆ ಅರ್ಪಣೆಯಾಗಿ ತಾರದ ಯಾವದಾದರೂ ಅಶುದ್ಧ ಪಶುವಾಗಿದ್ದರೆ ಆ ಪಶುವನ್ನು ಅವನು ಯಾಜಕನ ಮುಂದೆ ನಿಲ್ಲಿಸಬೇಕು. ಆಗ ಯಾಜಕನು ಅದಕ್ಕೆ ಒಳ್ಳೇದಾಗಲಿ ಕೆಟ್ಟದ್ದಾಗಲಿ ಅದಕ್ಕೆ ಕ್ರಯಕಟ್ಟಬೇಕು. ಯಾಜಕನಾದ ನೀನು ಮಾಡಿದ ಕ್ರಯವೇ ಕ್ರಯವಾ ಗಿರಬೇಕು. ಅದನ್ನು ಹೇಗಾದರೂ ವಿಮೋಚಿಸ ಬೇಕೆಂದಿದ್ದರೆ ನೀನು ಮಾಡಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಪಾಲನ್ನು ಅದಕ್ಕೆ ಕೂಡಿಸಬೇಕು. ಒಬ್ಬನು ತನ್ನ ಮನೆಯನ್ನು ಕರ್ತನಿಗೆ ಪರಿಶುದ್ಧ ವಾಗಿರಲೆಂದು ಅದನ್ನು ಪರಿಶುದ್ಧ ಮಾಡಿದರೆ ಯಾಜ ಕನು ಅದಕ್ಕೆ ಒಳ್ಳೇದಾಗಲಿ ಕೆಟ್ಟದ್ದಾಗಲಿ ಕ್ರಯವನ್ನು ಕಟ್ಟಬೇಕು; ಯಾಜಕನು ಕ್ರಯಕಟ್ಟುವ ಪ್ರಕಾರವೇ ಅದು ಸ್ಥಿರವಾಗಿರಬೇಕು. ಆದರೆ ಪರಿಶುದ್ಧ ಮಾಡಿ ದವನು ತನ್ನ ಮನೆಯನ್ನು ವಿಮೋಚಿಸಬೇಕೆಂದಿದ್ದರೆ ನೀನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೆಯ ಪಾಲಿನ ಹಣವನ್ನು ಕೊಡಲಿ; ಆಗ ಅದು ಅವನದಾಗಿರುವದು. ಒಬ್ಬನು ತನ್ನ ಸ್ವಾಸ್ತ್ಯದ ಹೊಲದಲ್ಲಿ ಏನಾದರೂ ಕರ್ತನಿಗೆ ಪರಿಶುದ್ಧ ಮಾಡಿದರೆ ನೀನು ಅದರ ಬೀಜದ ಪ್ರಕಾರ ಕ್ರಯಕಟ್ಟಬೇಕು; ಜವೆಗೋಧಿಯ ಒಂದು ಓಮೆರಷ್ಟು ಬೀಜಕ್ಕೆ ಐವತ್ತು ಬೆಳ್ಳಿ ಶೇಕೆಲುಗಳು. ಜೂಬಿಲಿ ಸಂವತ್ಸರ ಮೊದಲುಗೊಂಡು ಅವನು ತನ್ನ ಹೊಲವನ್ನು ಪರಿಶುದ್ಧ ಮಾಡಿದರೆ ನೀನು ಕಟ್ಟುವ ಕ್ರಯದ ಪ್ರಕಾರ ಅದು ಸ್ಥಿರವಾಗಿರಬೇಕು. ಆದರೆ ಜೂಬಿಲಿ ಸಂವತ್ಸರವಾದ ಮೇಲೆ ತನ್ನ ಹೊಲವನ್ನು ಪರಿಶುದ್ಧ ಮಾಡಿದರೆ ಜೂಬಿಲಿ ಸಂವತ್ಸರದ ವರೆಗೆ ಮಿಕ್ಕ ವರುಷಗಳ ಲೆಕ್ಕದ ಪ್ರಕಾರ ಯಾಜಕನು ಅವನಿಗೆ ಹಣವನ್ನು ಎಣಿಸಿ ನೀನು ಕಟ್ಟಿದ ಕ್ರಯದಿಂದ ಕಳೆಯ ಬೇಕು. ಇದಲ್ಲದೆ ಆ ಹೊಲವನ್ನು ಪರಿಶುದ್ಧ ಮಾಡಿ ದವನು ಅದನ್ನು ಹೇಗಾದರೂ ವಿಮೋಚಿಸಬೇಕೆಂದಿ ದ್ದರೆ ನೀನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಪಾಲನ್ನು ಅವನು ಕೊಡಬೇಕು; ಆಗ ಅವನಿಗೆ ಅದು ಸ್ಥಿರವಾಗಿರುವದು. ಆದರೆ ಅವನು ಹೊಲವನ್ನು ವಿಮೋಚಿಸದೆ ಹೋದರೆ ಇಲ್ಲವೆ ಮತ್ತೊಬ್ಬನಿಗೆ ಆ ಹೊಲವನ್ನು ಮಾರಿದ್ದರೆ ಅದನ್ನು ಇನ್ನು ಮೇಲೆ ವಿಮೋಚಿಸಕೂಡದು. ಆ ಹೊಲವು ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗುವಾಗ ಪ್ರತ್ಯೇಕಿಸಲ್ಪಟ್ಟು ಒಪ್ಪಿಸಲ್ಪಟ್ಟ ಹೊಲದ ಹಾಗೆ ಕರ್ತನಿಗೆ ಅದು ಪರಿಶುದ್ಧವಾಗಿರಬೇಕು; ಅದರ ಸ್ವಾಸ್ತ್ಯವು ಯಾಜಕ ನಿಗೆ ಸಲ್ಲಬೇಕು. ತನ್ನ ಸ್ವಾಸ್ತ್ಯದ ಹೊಲಗಳಲ್ಲಿ ಸೇರದಂಥ, ತಾನು ಕೊಂಡುಕೊಂಡ ಹೊಲವನ್ನು ಒಬ್ಬನು ಕರ್ತನಿಗೆ ಪರಿಶುದ್ಧ ಮಾಡಿದರೆ ಯಾಜಕನು ಅವನಿಗೆ ನೀನು ನೇಮಿಸಿದ ಕ್ರಯದ ಹಣವನ್ನು ಜೂಬಿಲಿ ಸಂವತ್ಸರದ ವರೆಗೂ ಎಣಿಸಬೇಕು; ಅವರು ಆ ದಿವಸದಲ್ಲಿ ನೀನು ಕಟ್ಟಿದ ಕ್ರಯವನ್ನು ಕರ್ತನಿಗೆ ಪರಿಶುದ್ಧವಾದದ್ದಾಗಿ ಅವನು ಕೊಡಬೇಕು. ಜೂಬಿಲಿ ಸಂವತ್ಸರದಲ್ಲಿ ಆ ಹೊಲದ ಭೂಮಿಯ ಸ್ವಾಸ್ತ್ಯವುಂಟಾದವನಿಗೆ ಅಂದರೆ ಇವನು ಯಾವನಿಂದ ಕೊಂಡುಕೊಂಡನೋ ಅವನಿಗೆ ತಿರುಗಿ ಹಿಂದಕ್ಕೆ ಕೊಡಬೇಕು. ನೀನು ನೇಮಿಸಿದ ಕ್ರಯಗಳೆಲ್ಲಾ ಪರಿಶುದ್ಧ ಶೇಕೆಲಿನ ಮೇರೆಗೆ ಇರಬೇಕು; ಶೇಕೆಲಿಗೆ ಇಪ್ಪತ್ತು ಗೇರಗಳಿರಬೇಕು. ಪಶುಗಳಲ್ಲಿ ಮೊದಲಾಗಿ ಹುಟ್ಟಿದ್ದು ಮಾತ್ರವೇ ಕರ್ತನ ಚೊಚ್ಚಲಾಗಿರುವದು. ಅದನ್ನು ಯಾವನೂ ಪ್ರತಿಷ್ಠೆಮಾಡಲಾರನು. ಅದು ಎತ್ತಾಗಲಿ ಇಲ್ಲವೆ ಕುರಿ ಯಾಗಲಿ ಅದು ಕರ್ತನದೇ. ಆದರೆ ಅದು ಅಶುದ್ಧ ಪಶುವಾಗಿದ್ದರೆ ನೀನು ಕ್ರಯ ಕಟ್ಟಿದ ಪ್ರಕಾರ ಅದಕ್ಕೆ ಹೆಚ್ಚಾಗಿ ಐದನೇ ಪಾಲನ್ನು ಕೊಟ್ಟು ಅವನು ಅದನ್ನು ವಿಮೋಚಿಸಬೇಕು; ವಿಮೋಚಿಸದಿದ್ದರೆ ಅದನ್ನು ನೀನು ಕ್ರಯ ಕಟ್ಟಿದ ಪ್ರಕಾರ ಮಾರಬೇಕು. ಆದಾಗ್ಯೂ ಪ್ರತ್ಯೇಕಿಸಲ್ಪಟ್ಟ ಯಾವದಾದರೂ ಅಂದರೆ ಮನುಷ್ಯನನ್ನಾಗಲಿ ಪಶುವನ್ನಾಗಲಿ ತನ್ನ ಸ್ವಾಸ್ತ್ಯದ ಹೊಲವನ್ನಾಗಲಿ ತನಗಿದ್ದದ್ದನ್ನೆಲ್ಲಾ ಒಬ್ಬ ಮನುಷ್ಯನು ಕರ್ತನಿಗಾಗಿ ಪ್ರತ್ಯೇಕಿಸಿದರೆ ಅದನ್ನು ಮಾರಬಾರದು ಇಲ್ಲವೆ ವಿಮೋಚಿಸಬಾರದು; ಪ್ರತ್ಯೇಕಿ ಸಲ್ಪಟ್ಟ ಪ್ರತಿಯೊಂದು ಕರ್ತನಿಗೆ ಅತೀ ಪರಿಶುದ್ಧ ವಾದದ್ದೇ. ಮನುಷ್ಯರಲ್ಲಿ ಪ್ರತ್ಯೇಕಿಸಲ್ಪಟ್ಟವನು ಯಾವನಾದರು ಪ್ರತ್ಯೇಕಿಸಲ್ಪಡದೆ ಹೋದರೆ ಅವನನ್ನು (ಕ್ರಯಕೊಟ್ಟು) ವಿಮೋಚಿಸಬಾರದು. ಖಂಡಿತವಾಗಿ ಅವನನ್ನು ಕೊಲ್ಲಬೇಕು. ಭೂಮಿಯ ಬೀಜದಲ್ಲಾಗಲಿ ಮರದ ಫಲದ ಲ್ಲಾಗಲಿ ಹತ್ತನೇ ಪಾಲೆಲ್ಲಾ ಕರ್ತನದೇ. ಅದು ಕರ್ತನಿಗೆ ಪರಿಶುದ್ಧವಾದದ್ದು. ಯಾವನಾದರೂ ತನ್ನ ಹತ್ತನೇ ಪಾಲುಗಳನ್ನು ವಿಮೋಚಿಸಬೇಕೆಂದಿದ್ದರೆ ಅದಕ್ಕಿಂತ ಹೆಚ್ಚಾಗಿ ಅದರ ಐದನೇ ಪಾಲನ್ನು ಕೊಡಬೇಕು. ಇದಲ್ಲದೆ ದನಕುರಿಗಳಲ್ಲಿಯೂ ಕೋಲಿನ ಕೆಳಗೆ ದಾಟುವ ಎಲ್ಲಾದರಲ್ಲಿಯೂ ಹತ್ತರಲ್ಲಿ ಒಂದು ಭಾಗ ಕರ್ತನಿಗೆ ಪರಿಶುದ್ಧವಾಗಿರುವದು. ಅದು ಒಳ್ಳೆ ಯದೋ ಕೆಟ್ಟದ್ದೋ ಎಂದು ಅವನು ವಿಚಾರಿಸ ಬಾರದು, ಅದನ್ನು ಬದಲು ಮಾಡಬಾರದು. ಹೇಗಾ ದರೂ ಅದನ್ನು ಬದಲು ಮಾಡಿದರೆ ಅದೂ ಬದಲು ಮಾಡಿದ್ದೂ ಪರಿಶುದ್ಧವಾಗಿರಬೇಕು. ಅದನ್ನು ವಿಮೋಚಿಸಬಾರದು.ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಇಸ್ರಾಯೇಲ್ ಮಕ್ಕಳಿಗಾಗಿ ಕೊಟ್ಟ ಆಜ್ಞೆಗಳು ಇವೇ. ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಇಸ್ರಾಯೇಲ್ ಮಕ್ಕಳಿಗಾಗಿ ಕೊಟ್ಟ ಆಜ್ಞೆಗಳು ಇವೇ.
- Amos 7:15–17 ಆಮೋಸ 7:15–17ನಾನು ಕುರಿಯ ಹಿಂಡನ್ನು ಹಿಂಬಾಲಿಸುವ ವೇಳೆ ಯಲ್ಲಿ ಕರ್ತನು ನನ್ನನ್ನು ಕರೆದು ಹೇಳಿದ್ದೇನಂದರೆ--ನೀನು ಹೋಗಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಪ್ರವಾದಿಸು. ಹೀಗಿರುವದರಿಂದ ನೀನು ಈಗ ಕರ್ತನ ವಾಕ್ಯವನ್ನು ಕೇಳು; ಇಸ್ರಾಯೇಲಿಗೆ ಪ್ರವಾದನೆ ಮಾಡಬೇಡವೆಂದೂ ಇಸಾಕನ ಮನೆತನಕ್ಕೆ ವಿರೋಧ ವಾಗಿ ಖಂಡನೆ ಮಾಡಬಾರದೆಂದೂ ನೀನು ಹೇಳುವಿ ಯಲ್ಲಾ.ಆದದರಿಂದ ಕರ್ತನು ಹೇಳುವದೇ ನಂದರೆ--ನಿನ್ನ ಹೆಂಡತಿ ಪಟ್ಟಣದಲ್ಲಿ ಸೂಳೆಯಾಗು ವಳು; ನಿನ್ನ ಕುಮಾರರೂ ಕುಮಾರ್ತೆಯರೂ ಕತ್ತಿ ಯಿಂದ ಬೀಳುವರು; ನಿನ್ನ ದೇಶವು ನೂಲಿನಿಂದ ವಿಭಾಗಿಸಲ್ಪಡುವದು; ನೀನು ಅಪವಿತ್ರವಾದ ದೇಶದಲ್ಲಿ ಸಾಯುವಿ. ಇಸ್ರಾಯೇಲ್ ನಿಶ್ಚಯವಾಗಿ ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಡುವದು. ಆದದರಿಂದ ಕರ್ತನು ಹೇಳುವದೇ ನಂದರೆ--ನಿನ್ನ ಹೆಂಡತಿ ಪಟ್ಟಣದಲ್ಲಿ ಸೂಳೆಯಾಗು ವಳು; ನಿನ್ನ ಕುಮಾರರೂ ಕುಮಾರ್ತೆಯರೂ ಕತ್ತಿ ಯಿಂದ ಬೀಳುವರು; ನಿನ್ನ ದೇಶವು ನೂಲಿನಿಂದ ವಿಭಾಗಿಸಲ್ಪಡುವದು; ನೀನು ಅಪವಿತ್ರವಾದ ದೇಶದಲ್ಲಿ ಸಾಯುವಿ. ಇಸ್ರಾಯೇಲ್ ನಿಶ್ಚಯವಾಗಿ ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಡುವದು.
- Acts 4:19 ಅಪೊಸ್ತಲರ ಕೃತ್ಯಗಳು 4:19ಅದಕ್ಕೆ ಪೇತ್ರ ಯೋಹಾನರು ಪ್ರತ್ಯುತ್ತರವಾಗಿ ಅವರಿಗೆ--ದೇವರ ಮಾತಿಗಿಂತ ನಿಮ್ಮ ಮಾತನ್ನು ಕೇಳು ವದು ದೇವರ ದೃಷ್ಟಿಯಲ್ಲಿ ಸರಿಯೋ ನೀವೇ ತೀರ್ಪು ಮಾಡಿರಿ.
- Proverbs 20:25 ಜ್ಞಾನೋಕ್ತಿಗಳು 20:25ಪರಿಶುದ್ಧವಾದದ್ದನ್ನು ನುಂಗಿದವನಾಗಿ ತರುವಾಯ ವಿಚಾರಿಸುವದಕ್ಕಾಗಿ ಆಣೆಯಿಟ್ಟು ಕೊಳ್ಳುವದು ಒಬ್ಬ ಮನುಷ್ಯನಿಗೆ ಉರ್ಲಾ ಗಿದೆ.