Matthew · chapter 15 · verse 6
Matthew 15:6 in Kannada
ಅವನು ತನ್ನ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಸನ್ಮಾನಿಸುವದರಿಂದ ಬಿಡುಗಡೆಯಾಗಿದ್ದಾನೆಂದು ನೀವು ಹೇಳುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ನಿರರ್ಥಕ ಮಾಡಿದ್ದೀರಿ.
Avanu tanna tandeyannaagalee taayiyannaa galee sanmaanisuvadarinda bidugadeyaagiddaanendu neevu helutteeri. Heege nimma sampradaayada nimittavaagi devara aajnyeyannu nirarthaka maadiddeeri.
Matthew 15:6 in English
- King James Version (KJV)
- And honour not his father or his mother, [he shall be free]. Thus have ye made the commandment of God of none effect by your tradition.
- World English Bible (WEB)
- he shall not honor his father or mother.’ You have made the commandment of God void because of your tradition.
- American Standard Version (ASV)
- he shall not honor his father. And ye have made void the word of God because of your tradition.
- Bible in Basic English (BBE)
- There is no need for him to give honour to his father. And you have made the word of God without effect because of your teaching.
- Darby Translation (DBY)
- and he shall in no wise honour his father or his mother; and ye have made void the commandment of God on account of your traditional teaching.
- Webster's Bible (WBS)
- And honor not his father or his mother, [he shall be free] . Thus have ye made the commandment of God of no effect by your tradition.
- Young's Literal Translation (YLT)
- and he may not honour his father or his mother, and ye did set aside the command of God because of your tradition.
Read in context
- 4ಯಾಕಂ ದರೆ ದೇವರು ಅಪ್ಪಣೆ ಕೊಟ್ಟು ಹೇಳಿದ್ದೇನಂದರೆ--ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು. ಮತ್ತು--ಯಾವನಾದರೂ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಶಪಿಸಿದರೆ ಅವನು ಸಾಯಲೇಬೇಕು ಎಂಬದೇ.
- 5ಆದರೆ ನೀವು--ಯಾವನಾದರೂ ತನ್ನ ತಂದೆಗಾಗಲೀ ತಾಯಿಗಾಗಲೀ-- ನನ್ನಿಂದ ನಿನಗೆ ಪ್ರಯೋಜನ ವಾಗತಕ್ಕದ್ದು ಕಾಣಿಕೆಯಾಯಿತು ಎಂದು ಹೇಳುವದಾ ದರೆ
- 6ಅವನು ತನ್ನ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಸನ್ಮಾನಿಸುವದರಿಂದ ಬಿಡುಗಡೆಯಾಗಿದ್ದಾನೆಂದು ನೀವು ಹೇಳುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ನಿರರ್ಥಕ ಮಾಡಿದ್ದೀರಿ.
- 7ಕಪಟಿಗಳೇ, ನಿಮ್ಮ ವಿಷಯವಾಗಿ ಯೆಶಾಯನು ಸರಿಯಾಗಿ ಪ್ರವಾದಿಸಿದನು;
- 8ಆದೇ ನಂದರೆ-- ಈ ಜನರು ತಮ್ಮ ಬಾಯಿಂದ ನನ್ನನ್ನು ಸಮಾಪಿಸಿ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ.
Cross references
- 1 Timothy 5:8 1 ತಿಮೊಥೆಯನಿಗೆ 5:8ಯಾವನಾದರೂ ಸ್ವಂತದವರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ನಂಬಿಕೆಯನ್ನು ಅಲ್ಲಗಳೆ ದವನು ನಂಬದವನಿಗಿಂತ ಕೆಟ್ಟವನೂ ಆಗಿದ್ದಾನೆ.
- Jeremiah 8:8 ಯೆರೆಮೀಯ 8:8ಹೀಗಿರಲು--ನಾವು ಜ್ಞಾನಿಗಳು, ಕರ್ತನ ನ್ಯಾಯ ಪ್ರಮಾಣವು ನಮ್ಮ ಸಂಗಡ ಇದೆ ಎಂದು ನೀವು ಹೇಳುವದು ಹೇಗೆ? ಇಗೋ, ನಿಶ್ಚಯವಾಗಿ ಆತನು ಅದನ್ನು ವ್ಯರ್ಥವಾಗಿ ಮಾಡಿದ್ದಾನೆ. ಶಾಸ್ತ್ರಿಗಳ ಲೇಖ ನಿಯು ವ್ಯರ್ಥವಾಗಿದೆ.
- Psalm 119:126 ಕೀರ್ತನೆಗಳು 119:126ಕರ್ತನೆ, ಕೆಲಸಮಾಡುವದಕ್ಕೆ ಇದು ನಿನಗೆ ಸಮಯವಾಗಿದೆ; ಅವರು ನಿನ್ನ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡಿ ದ್ದಾರೆ.
- Mark 7:13 ಮಾರ್ಕನು 7:13ನೀವು ಕಲಿಸಿರುವ ನಿಮ್ಮ ಸಂಪ್ರದಾಯದ ಮೂಲಕ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ, ಇಂಥ ಅನೇಕವಾದವುಗಳನ್ನು ನೀವು ಮಾಡುತ್ತೀರಿ ಅಂದನು.
- Psalm 119:139 ಕೀರ್ತನೆಗಳು 119:139ನನ್ನ ವೈರಿಗಳು ನಿನ್ನ ವಾಕ್ಯಗಳನ್ನು ಮರೆತುಬಿಡುವದರಿಂದ ನನ್ನ ಆಸಕ್ತಿಯು ನನ್ನನ್ನು ದಹಿಸಿಯದೆ.
- 1 Timothy 5:3–4 1 ತಿಮೊಥೆಯನಿಗೆ 5:3–4ನಿಜವಾಗಿಯೂ ವಿಧವೆಯಾಗಿರುವವರನ್ನು ಗೌರ ವಿಸು; ಅವರು ವಿಧವೆಯರಾಗಿದ್ದಾರಲ್ಲಾ. ಆದರೆ ಯಾವ ವಿಧವೆಗಾದರೂ ಮಕ್ಕಳಾಗಲಿ, ಮೊಮ್ಮಕ್ಕಳಾ ಗಲಿ, ಇದ್ದರೆ ಅವರೇ ಮೊದಲು ತಮ್ಮ ಮನೆಯಲ್ಲಿ ಭಕ್ತಿ ತೋರಿಸುವದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪ ಕಾರ ಮಾಡುವದಕ್ಕೂ ಕಲಿತುಕೊಳ್ಳಲಿ; ಇದು ದೇವರ ದೃಷ್ಟಿಯಲ್ಲಿ ಯೋಗ್ಯವಾದದ್ದೂ ಮೆಚ್ಚಿಕೆಯಾದದ್ದೂ ಆಗಿದೆ.
- 1 Timothy 5:16 1 ತಿಮೊಥೆಯನಿಗೆ 5:16ನಂಬುವವರಾದ ಪುರುಷನ ಇಲ್ಲವೆ ಸ್ತ್ರೀಯ ಅಧೀನತೆಯಲ್ಲಿ ವಿಧವೆಯರಿದ್ದರೆ ಅವರೇ ಅವರನ್ನು ಸಂರಕ್ಷಿಸಲಿ. ಸಭೆಯು ದಿಕ್ಕಿಲ್ಲದ ವಿಧವೆಯರಿಗೆ ಸಹಾಯಮಾಡಬೇಕಾಗಿರುವದರಿಂದ ವಿಧವೆಯರು ಆ ಭಾರವನ್ನು ಸಭೆಯ ಮೇಲೆ ಹಾಕಬಾರದು.
- Hosea 4:6 ಹೋಶೇಯ 4:6ನನ್ನ ಜನರು ತಿಳುವಳಿ ಕೆಯ ಕೊರತೆಯಿಂದ ನಾಶವಾಗಿದ್ದಾರೆ; ಆದಕಾರಣ ನೀನು ತಿಳುವಳಿಕೆಯನ್ನು ತಳ್ಳಿಬಿಟ್ಟದ್ದರಿಂದ ನಾನು ಸಹ ನನಗೆ ಯಾಜಕನಾಗದಂತೆ ನಿನ್ನನ್ನು ತಳ್ಳಿಬಿಡುತ್ತೇನೆ; ನೀನು ನಿನ್ನ ದೇವರ ನ್ಯಾಯಪ್ರಮಾಣವನ್ನು ಮರೆತು ಬಿಟ್ಟಿದ್ದರಿಂದ ನಾನು ಸಹ ನಿನ್ನ ಮಕ್ಕಳನ್ನು ಮರೆತು ಬಿಡುವೆನು.
- Malachi 2:7–9 ಮಲಾಕಿಯ 2:7–9ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡತಕ್ಕದ್ದು, ನ್ಯಾಯಪ್ರಮಾಣ ವನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು; ಯಾಕಂದರೆ ಅವನು ಸೈನ್ಯಗಳ ಕರ್ತನ ಸೇವಕನೇ. ಆದರೆ ನೀವು ಮಾರ್ಗವನ್ನು ಬಿಟ್ಟುಹೋಗಿದ್ದೀರಿ; ಅನೇಕರನ್ನು ನ್ಯಾಯಪ್ರಮಾಣಕ್ಕೆ ಎಡವುವಂತೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಕೆಡಿಸಿದ್ದೀರೆಂದು ಸೈನ್ಯ ಗಳ ಕರ್ತನು ಹೇಳುತ್ತಾನೆ. ಆದದರಿಂದ ನೀವು ನನ್ನ ಮಾರ್ಗಗಳನ್ನು ಕೈಕೊಳ್ಳದೆ, ನನ್ನ ನ್ಯಾಯ ಪ್ರಮಾಣದ ವಿಷಯವಾಗಿ ಮುಖದಾಕ್ಷಿಣ್ಯ ತೋರಿಸಿದ ಪ್ರಕಾರವೇ ನಾನು ನಿಮ್ಮನ್ನು ಜನರೆಲ್ಲರ ಮುಂದೆ ಅಸಡ್ಡೆ ಮಾಡಲ್ಪಟ್ಟ ವರನ್ನಾಗಿಯೂ ನೀಚರನ್ನಾಗಿಯೂ ಮಾಡಿದ್ದೇನೆ.
- Romans 3:31 ರೋಮಾಪುರದವರಿಗೆ 3:31ಹಾಗಾದರೆ ನಂಬಿಕೆಯಿಂದ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡುತ್ತೇವೋ? ಹಾಗೆ ಎಂದಿಗೂ ಅಲ್ಲ; ಹೌದು, ನಾವು ನ್ಯಾಯಪ್ರಮಾಣವನ್ನು ಸ್ಥಿರಪಡಿಸುತ್ತೇವೆ.