Matthew · chapter 16 · verse 10
Matthew 16:10 in Kannada
ಇದಲ್ಲದೆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿದಾಗ ಎಷ್ಟು ಪುಟ್ಟಿಗಳನ್ನು ತುಂಬಿದಿರಿ?
Idallade elu rottigalannu naalku saavira janarige hanchidaaga eshtu puttigalannu tumbidiri?
Matthew 16:10 in English
- King James Version (KJV)
- Neither the seven loaves of the four thousand, and how many baskets ye took up?
- World English Bible (WEB)
- or the seven loaves for the four thousand, and how many baskets you took up?
- American Standard Version (ASV)
- Neither the seven loaves of the four thousand, and how many baskets ye took up?
- Bible in Basic English (BBE)
- Or the seven cakes of bread of the four thousand, and the number of baskets you took up?
- Darby Translation (DBY)
- nor the seven loaves of the four thousand, and how many baskets ye took [up]?
- Webster's Bible (WBS)
- Neither the seven loaves of the four thousand, and how many baskets ye took up?
- Young's Literal Translation (YLT)
- nor the seven loaves of the four thousand, and how many baskets ye took up?
Read in context
- 8ಯೇಸು ಅದನ್ನು ತಿಳುಕೊಂಡವನಾಗಿ ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ರೊಟ್ಟಿಯನ್ನು ತಕ್ಕೊಂಡು ಬರಲಿಲ್ಲವೆಂದು ನಿಮ್ಮಲ್ಲಿ ಯಾಕೆ ಅಂದುಕೊಳ್ಳುತ್ತೀರಿ?
- 9ಐದು ರೊಟ್ಟಿಗಳನ್ನು ಐದು ಸಾವಿರ ಜನರಿಗೆ ಹಂಚಿದಾಗ ಎಷ್ಟು ಪುಟ್ಟಿಗಳನ್ನು ತುಂಬಿದಿರೆಂದು ನೀವು ಇನ್ನೂ ಗ್ರಹಿಸಲಿಲ್ಲವೋ? ಇಲ್ಲವೆ ನಿಮಗೆ ನೆನಪಿಲ್ಲವೋ?
- 10ಇದಲ್ಲದೆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿದಾಗ ಎಷ್ಟು ಪುಟ್ಟಿಗಳನ್ನು ತುಂಬಿದಿರಿ?
- 11ನಾನು ರೊಟ್ಟಿಯ ವಿಷಯದಲ್ಲಿ ಅಲ್ಲ, ಫರಿಸಾಯರ ಮತ್ತು ಸದ್ದುಕಾಯರ ಹುಳಿಯ ವಿಷಯದಲ್ಲಿ ಎಚ್ಚರವಾಗಿರಬೇಕೆಂದು ಹೇಳಿದ್ದನ್ನು ನೀವು ಗ್ರಹಿಸದೆ ಇರುವದು ಹೇಗೆ ಎಂದು ಹೇಳಿದನು.
- 12ಆಗ ಅವರು ರೊಟ್ಟೀ ಹುಳಿಯ ವಿಷಯದಲ್ಲಿ ಅಲ್ಲ, ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯ ವಿಷಯದಲ್ಲಿ ತಾವು ಎಚ್ಚರವಾಗಿರಬೇಕೆಂದು ಆತನು ಹೇಳಿದನು ಎಂದು ಅವರು ಗ್ರಹಿಸಿಕೊಂಡರು.
Cross references
- Matthew 15:34–38 ಮತ್ತಾಯನು 15:34–38ಆಗ ಯೇಸು ಅವರಿಗೆ--ನಿಮ್ಮ ಹತ್ತಿರ ಎಷ್ಟು ರೊಟ್ಟಿಗಳಿವೆ ಎಂದು ಕೇಳಿದನು. ಅವರು--ಏಳು ರೊಟ್ಟಿಗಳು ಮತ್ತು ಕೆಲವು ಚಿಕ್ಕ ಮಾನುಗಳಿವೆ ಅಂದರು. ಆಗ ಜನಸಮೂಹವು ನೆಲದ ಮೇಲೆ ಕೂತುಕೊಳ್ಳ ಬೇಕೆಂದು ಆತನು ಅಪ್ಪಣೆಕೊಟ್ಟನು. ಆತನು ಆ ಏಳು ರೊಟ್ಟಿಗಳನ್ನು ಮತ್ತು ಮಾನುಗಳನ್ನು ತಕ್ಕೊಂಡು ಸ್ತೋತ್ರಮಾಡಿ ಅವುಗಳನ್ನು ಮುರಿದು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು. ಅವರೆಲ್ಲರೂ ಊಟಮಾಡಿ ತೃಪ್ತರಾದರು; ಮತ್ತು ಅವರು ಮಿಕ್ಕ ತುಂಡುಗಳನ್ನು ಕೂಡಿಸಲಾಗಿ ಏಳು ಪುಟ್ಟಿಗಳು ತುಂಬಿದವು. ಊಟಮಾಡಿದವರು ಸ್ತ್ರೀಯರೂ ಮಕ್ಕಳೂ ಅಲ್ಲದೆ ನಾಲ್ಕು ಸಾವಿರ ಗಂಡಸರು.ತರುವಾಯ ಆತನು ಜನಸಮೂಹವನ್ನು ಕಳುಹಿಸಿಬಿಟ್ಟು ದೋಣಿಯನ್ನು ಹತ್ತಿ ಮಗ್ದಲ ತೀರಕ್ಕೆ ಬಂದನು.
- Mark 8:5–9 ಮಾರ್ಕನು 8:5–9ಆತನು ಅವರಿಗೆ--ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ ಎಂದು ಕೇಳಿದ್ದಕ್ಕೆ ಅವರು --ಏಳು ರೊಟ್ಟಿಗಳು ಇವೆ ಅಂದರು. ಆಗ ಜನರು ನೆಲದ ಮೇಲೆ ಕೂತುಕೊಳ್ಳುವಂತೆ ಆತನು ಅಪ್ಪಣೆ ಕೊಟ್ಟು ಆ ಏಳು ರೊಟ್ಟಿಗಳನ್ನು ತಕ್ಕೊಂಡು ಸ್ತೋತ್ರ ಮಾಡಿ ಮುರಿದು ಜನರಿಗೆ ಹಂಚುವದಕ್ಕಾಗಿ ತನ್ನ ಶಿಷ್ಯರಿಗೆ ಕೊಟ್ಟನು; ಅವರು ಜನರಿಗೆ ಹಂಚಿದರು. ಇದಲ್ಲದೆ ಅವರಲ್ಲಿ ಕೆಲವು ಸಣ್ಣ ವಿಾನುಗಳಿದ್ದವು; ಆತನು ಅವುಗಳನ್ನೂ ಆಶೀರ್ವದಿಸಿ ಅವರಿಗೆ ಹಂಚು ವಂತೆ ಆಜ್ಞಾಪಿಸಿದನು. ಅವರೆಲ್ಲರೂ ತಿಂದು ತೃಪ್ತರಾ ದರು; ಮುರಿದ ಮಿಕ್ಕತುಂಡುಗಳನ್ನು ಅವರು ಏಳು ಪುಟ್ಟಿ ತುಂಬಿದರು. ಊಟಮಾಡಿದವರು ಸುಮಾರು ನಾಲ್ಕು ಸಾವಿರ ಮಂದಿ; ಆತನು ಅವರನ್ನು ಕಳುಹಿಸಿ ಬಿಟ್ಟನು.
- Mark 8:17–21 ಮಾರ್ಕನು 8:17–21ಯೇಸು ಅದನ್ನು ತಿಳಿದುಕೊಂಡು ಅವರಿಗೆ ಹೇಳಿದ್ದೇನಂದರೆನಿಮ್ಮಲ್ಲಿ ರೊಟ್ಟಿ ಇಲ್ಲವೆಂದು ಯಾಕೆ ತರ್ಕಿಸಿಕೊಳ್ಳುತ್ತೀರಿ? ನೀವು ಇನ್ನೂ ಗ್ರಹಿಸದೆಯೂ ತಿಳಿದುಕೊಳ್ಳದೆಯೂ ಇದ್ದೀರೋ? ನೀವು ನಿಮ್ಮ ಹೃದಯವನ್ನು ಇನ್ನೂ ಕಠಿಣಮಾಡಿಕೊಂಡಿದ್ದಿರೋ? ಕಣ್ಣುಗಳಿದ್ದೂ ನೀವು ನೋಡುವದಿಲ್ಲವೋ? ಕಿವಿಗಳಿದ್ದೂ ನೀವು ಕೆಳುವ ದಿಲ್ಲವೋ? ಮತ್ತು ನೀವು ಜ್ಞಾಪಕಮಾಡಿಕೊಳ್ಳುವದಿ ಲ್ಲವೋ? ನಾನು ಆ ಐದು ರೊಟ್ಟಿಗಳನ್ನು ಐದು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಪುಟ್ಟಿಗಳ ತುಂಬ ರೊಟ್ಟಿಯ ತುಂಡುಗಳನ್ನು ಎತ್ತಿದಿರಿ ಎಂದು ಕೇಳಲು ಅವರು ಆತನಿಗೆ--ಹನ್ನೆರಡು ಅಂದರು. ಮತ್ತು ಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಪುಟ್ಟಿಗಳ ತುಂಬ ತುಂಡುಗಳನ್ನು ಎತ್ತಿದಿರಿ ಎಂದು ಕೇಳಲು ಅವರು--ಏಳು ಅಂದರು. ಯೇಸು ಅವರಿಗೆ--ಹಾಗಾದರೆ ನೀವು ಗ್ರಹಿಸದೆ ಇರುವದು ಹೇಗೆ ಎಂದು ಹೇಳಿದನು.