Matthew · chapter 16 · verse 17
Matthew 16:17 in Kannada
ಆಗ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಯಾಕಂದರೆ ರಕ್ತಮಾಂಸವಲ್ಲ (ಮನುಷ್ಯರಲ್ಲ), ಪರಲೋಕದಲ್ಲಿರುವ ನನ್ನ ತಂದೆಯೇ ಅದನ್ನು ನಿನಗೆ ಪ್ರಕಟಿಸಿದನು ಎಂದು ಹೇಳಿದನು.
Aaga yesu pratyuttaravaagi avanige--yonana maganaada seemonane, neenu dhanyanu; yaakandare raktamaansavalla (manushyaralla), paralokadalliruva nanna tandeye adannu ninage prakatisidanu endu helidanu.
Matthew 16:17 in English
- King James Version (KJV)
- And Jesus answered and said unto him, Blessed art thou, Simon Bar-jona: for flesh and blood hath not revealed [it] unto thee, but my Father which is in heaven.
- World English Bible (WEB)
- Jesus answered him, “Blessed are you, Simon Bar Jonah, for flesh and blood has not revealed this to you, but my Father who is in heaven.
- American Standard Version (ASV)
- And Jesus answered and said unto him, Blessed art thou, Simon Bar-Jonah: for flesh and blood hath not revealed it unto thee, but my Father who is in heaven.
- Bible in Basic English (BBE)
- And Jesus made answer and said to him, A blessing on you, Simon Bar-jonah: because this knowledge has not come to you from flesh and blood, but from my Father in heaven.
- Darby Translation (DBY)
- And Jesus answering said to him, Blessed art thou, Simon Bar-jona, for flesh and blood has not revealed [it] to thee, but my Father who is in the heavens.
- Webster's Bible (WBS)
- And Jesus answered and said to him, Blessed art thou, Simon-Barjona: for flesh and blood hath not revealed [it] to thee, but my Father who is in heaven.
- Young's Literal Translation (YLT)
- And Jesus answering said to him, 'Happy art thou, Simon Bar-Jona, because flesh and blood did not reveal [it] to thee, but my Father who is in the heavens.
Read in context
- 15ಆತನು ಅವರಿಗೆ--ಆದರೆ ನೀವು ನನ್ನನ್ನು ಯಾರನ್ನುತ್ತೀರಿ ಎಂದು ಕೇಳಿ ದನು.
- 16ಅದಕ್ಕೆ ಸೀಮೋನ ಪೇತ್ರನು ಪ್ರತ್ಯುತ್ತರ ವಾಗಿ--ನೀನು ಕ್ರಿಸ್ತನು, ಜೀವವುಳ್ಳ ದೇವರಕುಮಾರನು ಎಂದು ಹೇಳಿದನು.
- 17ಆಗ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಯಾಕಂದರೆ ರಕ್ತಮಾಂಸವಲ್ಲ (ಮನುಷ್ಯರಲ್ಲ), ಪರಲೋಕದಲ್ಲಿರುವ ನನ್ನ ತಂದೆಯೇ ಅದನ್ನು ನಿನಗೆ ಪ್ರಕಟಿಸಿದನು ಎಂದು ಹೇಳಿದನು.
- 18ನಾನು ಸಹ ನಿನಗೆ ಹೇಳುವದೇ ನಂದರೆ--ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು; ನರಕದ ದ್ವಾರಗಳು ಅದನ್ನು ಜಯಿಸಲಾರವು.
- 19ನಾನು ನಿನಗೆ ಪರಲೋಕ ರಾಜ್ಯದ ಬೀಗದ ಕೈಗಳನ್ನು ಕೊಡುತ್ತೇನೆ; ನೀನು ಯಾವದನ್ನು ಭೂಮಿಯ ಮೇಲೆ ಕಟ್ಟುತ್ತೀಯೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡುವದು; ನೀನು ಯಾವ ದನ್ನು ಭೂಮಿಯ ಮೇಲೆ ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಡುವದು ಅಂದನು.
Cross references
- John 6:45 ಯೋಹಾನನು 6:45ಅವರೆಲ್ಲರು ದೇವರಿಂದ ಬೋಧಿಸಲ್ಪಡುವರೆಂದು ಪ್ರವಾದನೆಗಳಲ್ಲಿ ಬರೆಯಲ್ಪಟ್ಟಿದೆ. ಆದಕಾರಣ ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬ ಮನುಷ್ಯನು ನನ್ನ ಬಳಿಗೆ ಬರುತ್ತಾನೆ.
- Ephesians 1:17–18 ಎಫೆಸದವರಿಗೆ 1:17–18ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಪ್ರಭಾವಪೂರ್ಣನಾದ ತಂದೆಯೂ ಆಗಿರುವಾತನು ತನ್ನ ವಿಷಯವಾದ ತಿಳುವಳಿಕೆಗನುಸಾರವಾಗಿ ಜ್ಞಾನ ಪ್ರಕಟನೆಗಳ ಆತ್ಮ ವನ್ನು ನಿಮಗೆ ಅನುಗ್ರಹಿಸುವಂತೆಯೂ ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನ ಕರೆಯು ವಿಕೆಯ ನಿರೀಕ್ಷೆಯು ಎಂಥದೆಂಬದನ್ನೂ ಪರಿಶುದ್ಧ ರಲ್ಲಿರುವ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ
- Matthew 11:25–27 ಮತ್ತಾಯನು 11:25–27ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಇದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದಾಗಿ ತೋಚಿತು. ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಇಲ್ಲವೆ ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದ
- Galatians 1:16 ಗಲಾತ್ಯದವರಿಗೆ 1:16ಇದಲ್ಲದೆ ದೇವರು ಅನ್ಯಜನರಲ್ಲಿ ತನ್ನ ಮಗನನ್ನು ನಾನು ಸಾರುವವನಾಗಬೇಕೆಂದು ಆತನನ್ನು ನನ್ನೊಳಗೆ ಪ್ರಕಟಿಸುವದಕ್ಕೆ ಇಚ್ಛೈಸಿದಾಗಲೇ ನಾನು ಮನುಷ್ಯರನ್ನು ವಿಚಾರಿಸದೆ
- 1 John 5:20 1 ಯೋಹಾನನು 5:20ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
- 1 Corinthians 15:50 1 ಕೊರಿಂಥದವರಿಗೆ 15:50ಸಹೋದರರೇ, ನಾನು ಹೇಳುವದೇನಂದರೆ-- ಮಾಂಸವು ರಕ್ತವು ದೇವರ ರಾಜ್ಯಕ್ಕೆ ಬಾಧ್ಯವಾಗ ಲಾರವು; ಇಲ್ಲವೆ ಲಯವಾಗುವದು ನಿರ್ಲಯತ್ವಕ್ಕೆ ಬಾಧ್ಯವಾಗುವದಿಲ್ಲ.
- Matthew 13:16–17 ಮತ್ತಾಯನು 13:16–17ಆದರೆ ನಿಮ್ಮ ಕಣ್ಣುಗಳು ನೋಡುವದ ರಿಂದಲೂ ನಿಮ್ಮ ಕಿವಿಗಳು ಕೇಳುವದರಿಂದಲೂ ಅವು ಧನ್ಯವಾದವುಗಳೇ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನೀವು ನೋಡುವಂಥವುಗಳನ್ನು ಮತ್ತು ಕೇಳುವಂಥವುಗಳನ್ನು ಅನೇಕ ಪ್ರವಾದಿಗಳು ಮತ್ತು ನೀತಿವಂತರು ನೋಡುವದಕ್ಕೂ ಕೇಳುವದಕ್ಕೂ ಅಪೇಕ್ಷಿಸಿದರು; ಆದರೆ ಅವರು ನೋಡಲಿಲ್ಲ ಮತ್ತು ಕೇಳಲಿಲ್ಲ.
- Galatians 1:11–12 ಗಲಾತ್ಯದವರಿಗೆ 1:11–12ಸಹೋದರರೇ, ನಾನು ಸಾರಿದ ಸುವಾರ್ತೆ ಯಂತೂ ಮನುಷ್ಯನಿಂದ ಬಂದದ್ದಲ್ಲವೆಂದು ನಿಮಗೆ ದೃಢವಾಗಿ ಹೇಳುತ್ತೇನೆ. ನಾನು ಅದನ್ನು ಮನುಷ್ಯ ನಿಂದ ಹೊಂದಲಿಲ್ಲ. ಇಲ್ಲವೆ ನನಗೆ ಯಾರೂ ಉಪದೇಶಿಸಲಿಲ್ಲ. ಆದರೆ ಯೇಸು ಕ್ರಿಸ್ತನಿಂದಲೇ ಅದು ನನಗೆ ಪ್ರಕಟವಾಯಿತು.
- Luke 10:21–24 ಲೂಕನು 10:21–24ಆ ಗಳಿಗೆಯಲ್ಲಿ ಯೇಸು ಆತ್ಮದಲ್ಲಿ ಉಲ್ಲಾಸ ಗೊಂಡು -- ಓ ತಂದೆಯೇ, ಪರಲೋಕ, ಭೂಲೋಕ ಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿ ಗಳಿಗೂ ಬುದ್ಧಿವಂತರಿಗೂ ಮರೆಮಾಡಿ ಕೂಸುಗಳಿಗೆ ಪ್ರಕಟಮಾಡಿರುವದರಿಂದ ನಿನ್ನನ್ನು ಕೊಂಡಾಡುತ್ತೇನೆ; ಹೌದು, ತಂದೆಯೇ, ಅದು ನಿನ್ನ ದೃ ಎಲ್ಲವುಗಳು ನನ್ನ ತಂದೆಯಿಂದ ನನಗೆ ಒಪ್ಪಿಸಲ್ಪಟ್ಟಿವೆ; ತಂದೆಯ ಹೊರತು ಯಾರೂ ಮಗನನ್ನು ಅರಿಯರು. ಮಗನೂ ತಾನು ಯಾರಿಗೆ ತಂದೆಯನ್ನು ಪ್ರಕಟಮಾಡುವನೋ ಅವನೂ ಅಲ್ಲದೆ ಆತನನ್ನು (ತಂದೆಯನ್ನು) ಯಾರೂ ಅರಿತವರಲ್ಲ. ಆತನು ತನ್ನ ಶಿಷ್ಯರ ಕಡೆಗೆ ತಿರುಗಿಕೊಂಡು--ನೀವು ನೋಡು ತ್ತಿರುವವುಗಳನ್ನು ನೋಡುವ ಕಣ್ಣುಗಳು ಧನ್ಯವಾದವು ಗಳು ಎಂದು ಪ್ರತ್ಯೇಕವಾಗಿ ಹೇಳಿದನು. ಯಾಕಂದರೆ ಅನೇಕ ಪ್ರವಾದಿಗಳೂ ಅರಸರೂ ನೀವು ನೋಡು ವಂಥವುಗಳನ್ನು ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಿಲ್ಲ ಮತ್ತು ನೀವು ಕೇಳುವಂಥವುಗಳನ್ನು ಕೇಳ ಬೇಕೆಂದು ಅಪೇಕ್ಷಿಸಿದರೂ ಅವರು ಕೇಳಲಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- 1 Corinthians 2:9–12 1 ಕೊರಿಂಥದವರಿಗೆ 2:9–12ಆದರೆ ಬರೆದಿರುವ ಪ್ರಕಾರ--ದೇವರು ತನ್ನನ್ನು ಪ್ರೀತಿಸು ವವರಿಗಾಗಿ ಸಿದ್ಧಮಾಡಿರುವಂಥವುಗಳನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಇಲ್ಲವೆ ಅವು ಮನುಷ್ಯನ ಹೃದಯದಲ್ಲಿ ಸೇರಲಿಲ್ಲ. ನಮಗಾದರೋ ದೇವರು ತನ್ನ ಆತ್ಮನ ಮೂಲಕ ಅವುಗಳನ್ನು ಪ್ರಕಟಿಸಿದನು. ಆ ಆತ್ಮನು ಎಲ್ಲಾ ವಿಷಯಗಳನ್ನು, ಹೌದು, ದೇವರ ಅಗಾಧವಾದ ವಿಷಯಗಳನ್ನು ಕೂಡ ಪರಿಶೋಧಿಸು ವವನಾಗಿದ್ದಾನೆ. ಮನುಷ್ಯನ ಒಳಗಿನ ವಿಷಯಗಳು ಅವನಲ್ಲಿರುವ ಆತ್ಮಕ್ಕೆ ಹೊರತು ಮತ್ತಾರಿಗೆ ತಿಳಿದಾವು? ಹಾಗೆಯೇ ದೇವರ ವಿಷಯಗಳನ್ನು ದೇವರ ಆತ್ಮನೇ ಹೊರತು ಬೇರೆ ಯಾರೂ ಗ್ರಹಿಸುವದಿಲ್ಲ. ನಾವು ಪ್ರಾಪಂಚಿಕ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವವುಗಳನ್ನು ತಿಳುಕೊಳ್ಳು ವದಕ್ಕಾಗಿ ದೇವರ ಆತ್ಮನನ್ನೇ ಹೊಂದಿದೆವು.
- Ephesians 3:5 ಎಫೆಸದವರಿಗೆ 3:5ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಆತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿ ಮನುಷ್ಯ ಪುತ್ರರಿಗೆ ತಿಳಿಸಲ್ಪಡಲಿಲ್ಲ.
- Colossians 1:26–27 ಕೊಲೊಸ್ಸೆಯವರಿಗೆ 1:26–27ಆ ವಾಕ್ಯವು ಹಿಂದಿನ ಯುಗಗಳಿಂದಲೂ ತಲಾತಲಾಂತರಗಳಿಂದಲೂ ಮರೆ ಯಾಗಿತ್ತು; ಅದು ಈಗಿನ ಕಾಲದಲ್ಲಿ ಆತನ ಪರಿಶುದ್ಧರಿಗೆ ತಿಳಿಸಲ್ಪಟ್ಟಿದೆ; ಅನ್ಯಜನಗಳಲ್ಲಿ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ (ಪರಿಶುದ್ಧರಿಗೆ) ತಿಳಿಸುವದಕ್ಕೆ ಮನಸ್ಸು ಮಾಡಿ ಕೊಂಡನು. ಈ ಮರ್ಮವು ಏನೆಂದರೆ ನಿಮ್ಮಲ್ಲಿರುವ ಕ್ರಿಸ್ತನು ಮಹಿಮೆಯ ನಿರೀಕ್ಷೆಯಾಗಿದ್ದಾನೆ ಎಂಬದೇ.