Matthew · chapter 16 · verse 4
Matthew 16:4 in Kannada
ವ್ಯಭಿಚಾರಿ ಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ; ಆದರೆ ಪ್ರವಾದಿಯಾದ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡುವದಿಲ್ಲ ಎಂದು ಹೇಳಿದನು. ತರುವಾಯ ಆತನು ಅವರನ್ನು ಬಿಟ್ಟು ಹೊರಟುಹೋದನು.
Vyabhichaari yaada ee ketta santatiyu soochakakaaryavannu hudukuttade; aadare pravaadiyaada yonanalli aada soochakakaaryave horatu bere yaava soochakakaaryavoo idakke kodalpaduvadilla endu helidanu. Taruvaaya aatanu avarannu bittu horatuhodanu.
Matthew 16:4 in English
- King James Version (KJV)
- A wicked and adulterous generation seeketh after a sign; and there shall no sign be given unto it, but the sign of the prophet Jonas. And he left them, and departed.
- World English Bible (WEB)
- An evil and adulterous generation seeks after a sign, and there will be no sign given to it, except the sign of the prophet Jonah.” He left them and departed.
- American Standard Version (ASV)
- An evil and adulterous generation seeketh after a sign; and there shall no sign be given unto it, but the sign of Jonah. And he left them, and departed.
- Bible in Basic English (BBE)
- An evil and false generation is searching after a sign; and no sign will be given to it but the sign of Jonah. And he went away from them.
- Darby Translation (DBY)
- A wicked and adulterous generation seeks after a sign, and a sign shall not be given to it save the sign of Jonas. And he left them and went away.
- Webster's Bible (WBS)
- A wicked and adulterous generation seeketh for a sign; and there shall no sign been to it, but the sign of the prophet Jonah. And he left them, and departed.
- Young's Literal Translation (YLT)
- 'A generation evil and adulterous doth seek a sign, and a sign shall not be given to it, except the sign of Jonah the prophet;' and having left them he went away.
Read in context
- 2ಆತನು ಪ್ರತ್ಯು ತ್ತರವಾಗಿ ಅವರಿಗೆ--ಸಾಯಂಕಾಲವಾದಾಗ ಆಕಾಶವು ಕೆಂಪಾಗಿದ್ದರೆ ಒಳ್ಳೆಯ ಹವಾಮಾನ ಇರುವದೆಂದೂ
- 3ಬೆಳಿಗ್ಗೆ ಆಕಾಶವು ಮೋಡಕವಿದು ಕೆಂಪಾಗಿದ್ದರೆ--ಈ ಹೊತ್ತು ಕೆಟ್ಟ ಹವಾಮಾನ ಇದೆಯೆಂದೂ ನೀವು ಅನ್ನುತ್ತೀರಿ. ಓ ಕಪಟಿಗಳೇ, ಆಕಾಶದಲ್ಲಾಗುವ ಸೂಚನೆ ಗಳನ್ನು ನೀವು ಗ್ರಹಿಸಬಲ್ಲಿರಿ; ಆದರೆ ಸಮಯಗಳ ಸೂಚನೆಗಳನ್ನು ನೀವು ಗ್ರಹಿಸಲಾರಿರಾ?
- 4ವ್ಯಭಿಚಾರಿ ಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ; ಆದರೆ ಪ್ರವಾದಿಯಾದ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡುವದಿಲ್ಲ ಎಂದು ಹೇಳಿದನು. ತರುವಾಯ ಆತನು ಅವರನ್ನು ಬಿಟ್ಟು ಹೊರಟುಹೋದನು.
- 5ಆತನ ಶಿಷ್ಯರು ರೊಟ್ಟಿ ತಕ್ಕೊಳ್ಳುವದನ್ನು ಮರೆತು ಆಚೇದಡಕ್ಕೆ ಬಂದಿದ್ದರು.
- 6ಆಗ ಯೇಸು ಅವರಿಗೆ--ಫರಿಸಾಯರ ಮತ್ತು ಸದ್ದುಕಾಯರ ಹುಳಿಯ ವಿಷಯದಲ್ಲಿ ಎಚ್ಚರಿಕೆಯಿಂದ ಜಾಗರೂಕ ರಾಗಿರ್ರಿ ಎಂದು ಹೇಳಿದನು.
Cross references
- Luke 11:29–30 ಲೂಕನು 11:29–30ಜನರು ಗುಂಪುಗುಂಪಾಗಿ ಕೂಡಿ ಬಂದಿದ್ದಾಗ ಆತನು--ಇದು ದುಷ್ಟಸಂತತಿಯು; ಇದು ಸೂಚಕ ಕಾರ್ಯವನ್ನು ಹುಡುಕುತ್ತದೆ. ಪ್ರವಾದಿಯಾದ ಯೋನ ನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡ ಲಾರದು. ಯೋನನು ನಿನೆವೆಯವರಿಗೆ ಸೂಚನೆ ಯಾಗಿದ್ದಂತೆಯೇ ಮನುಷ್ಯಕುಮಾರನು ಸಹ ಈ ಸಂತತಿಗೆ ಸೂಚನೆಯಾಗಿರುವನು.
- Matthew 12:39–40 ಮತ್ತಾಯನು 12:39–40ಆತನು ಪ್ರತ್ಯುತ್ತರವಾಗಿ ಅವರಿಗೆ--ವ್ಯಭಿಚಾರಿಣಿ ಯಾದ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡು ಕುತ್ತದೆ; ಪ್ರವಾದಿಯಾದ ಯೋನನಲ್ಲಿ ಆದ ಸೂಚಕ ಕಾರ್ಯವೇ ಹೊರತು ಅದಕ್ಕೆ ಇನ್ಯಾವ ಸೂಚಕಕಾರ್ಯ ವೂ ಕೊಡಲ್ಪಡುವದಿಲ್ಲ. ಯಾಕಂದರೆ ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ಮಾನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಕುಮಾರನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭ ದಲ್ಲಿರುವನು.
- Jonah 1:17 ಯೋನ 1:17ಆದರೆ ಕರ್ತನು ಯೋನನನ್ನು ನುಂಗುವ ಹಾಗೆ ದೊಡ್ಡ ವಿಾನನ್ನು ಸಿದ್ಧಮಾಡಿದ್ದನು; ಯೋನನು ಆ ವಿಾನಿನ ಹೊಟ್ಟೆಯಲ್ಲಿ ಮೂರು ಹಗಲು ಮೂರು ರಾತ್ರಿಯು ಇದ್ದನು.
- Mark 8:12 ಮಾರ್ಕನು 8:12ಆತನು ತನ್ನ ಆತ್ಮದಲ್ಲಿ ದೀರ್ಘವಾಗಿ ನಿಟ್ಟುಸಿರುಬಿಟ್ಟು--ಈ ಸಂತ ತಿಯು ಸೂಚಕಕಾರ್ಯವನ್ನು ಹುಡುಕುವದು ಯಾಕೆ? ಈ ಸಂತತಿಗೆ ಯಾವ ಸೂಚಕಕಾರ್ಯವೂ ಕೊಡಲ್ಪಡು ವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- Mark 8:38 ಮಾರ್ಕನು 8:38ಆದದರಿಂದ ಯಾವನಾದರೂ ವ್ಯಭಿಚಾರಿಣಿಯಾದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯ ವಾಗಿ ನಾಚಿಕೊಳ್ಳುವನೋ ಅವನ ವಿಷಯದಲ್ಲಿ ಮನುಷ್ಯಕುಮಾರನು ಸಹ ತನ್ನ ತಂದೆಯ ಮಹಿಮೆ ಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿ ಕೊಳ್ಳುವನು ಎಂದು ಹೇಳಿದನು.
- Matthew 15:14 ಮತ್ತಾಯನು 15:14ಅವರನ್ನು ಬಿಡಿರಿ; ಅವರು ಕುರುಡರನ್ನು ನಡಿಸುವ ಕುರುಡರು. ಕುರುಡನು ಕುರುಡನನ್ನು ನಡಿಸಿದರೆ ಇಬ್ಬರೂ ಕುಣಿಯೊಳಕ್ಕೆ ಬೀಳುವರು ಎಂದು ಹೇಳಿ ದನು.
- Mark 5:17–18 ಮಾರ್ಕನು 5:17–18ಆಗ ಅವರು ತಮ್ಮ ಮೇರೆಗಳನ್ನು ಬಿಟ್ಟುಹೋಗ ಬೇಕೆಂದು ಆತನನ್ನು ಬೇಡಿಕೊಳ್ಳಲಾರಂಭಿಸಿದರು. ಆತನು ದೋಣಿಯೊಳಗೆ ಬಂದಾಗ ಆ ದೆವ್ವ ಹಿಡಿದಿದ್ದವನು ತಾನು ಆತನ ಜೊತೆಯಲ್ಲಿಯೇ ಇರುತ್ತೇನೆಂದು ಆತನನ್ನು ಬೇಡಿಕೊಂಡನು.
- Genesis 6:3 ಆದಿಕಾಂಡ 6:3ಆಗ ಕರ್ತನು--ನನ್ನ ಆತ್ಮನು ಮನುಷ್ಯನ ಸಂಗಡ ಯಾವಾಗಲೂ ವಿವಾದಮಾಡುವದಿಲ್ಲ; ಅವನು ಮನುಷ್ಯನಷ್ಟೆ. ಆದರೂ ಅವನ ದಿನಗಳು ಇನ್ನು ನೂರ ಇಪ್ಪತ್ತು ವರುಷಗಳಾಗಿರುವವು ಅಂದನು.
- Hosea 4:17 ಹೋಶೇಯ 4:17ಎಫ್ರಾಯಾಮನು ವಿಗ್ರಹಗಳಿಗೆ ಸೇರಿಕೊಂಡಿ ದ್ದಾನೆ, ಅವನನ್ನು ಬಿಟ್ಟುಬಿಡು.
- Hosea 9:12 ಹೋಶೇಯ 9:12ಅವರು ತಮ್ಮ ಮಕ್ಕಳನ್ನು ಬೆಳೆಸಿದಾಗ್ಯೂ ಒಬ್ಬ ಮನುಷ್ಯನು ಉಳಿಯದ ಹಾಗೆ ನಾನು ಅವರನ್ನು ಅನಾಥರನ್ನಾಗಿ ಮಾಡುವೆನು. ಹೌದು, ನಾನು ಅವ ರನ್ನು ಬಿಟ್ಟು ಹೋಗುವಾಗ ಅವರಿಗೆ ಅಯ್ಯೋ!
- Acts 18:6 ಅಪೊಸ್ತಲರ ಕೃತ್ಯಗಳು 18:6ಅವರು ಎದುರಿಸಿ ದೇವದೂಷಣೆ ಮಾಡಲಾಗಿ ಅವನು ತನ್ನ ವಸ್ತ್ರವನ್ನು ಝಾಡಿಸಿ ಅವರಿಗೆ--ನಿಮ್ಮ ರಕ್ತವು ನಿಮ್ಮ ತಲೆಗಳ ಮೇಲೆ ಇರಲಿ; ನಾನು ಇಂದಿನಿಂದ ದೋಷರಹಿತನಾಗಿ ಅನ್ಯಜನರ ಬಳಿಗೆ ಹೋಗುತ್ತೇನೆ ಎಂದು ಹೇಳಿ
- Acts 2:40 ಅಪೊಸ್ತಲರ ಕೃತ್ಯಗಳು 2:40ಅವನು ಇನ್ನೂ ಬೇರೆ ಅನೇಕ ಮಾತುಗಳಿಂದ ಸಾಕ್ಷಿಕೊಟ್ಟು--ಈ ಮೂರ್ಖ ಸಂತತಿಯವರಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಿರಿ ಎಂದು ಎಚ್ಚರಿಸಿ ಹೇಳಿದನು.