Matthew · chapter 16 · verse 9
Matthew 16:9 in Kannada
ಐದು ರೊಟ್ಟಿಗಳನ್ನು ಐದು ಸಾವಿರ ಜನರಿಗೆ ಹಂಚಿದಾಗ ಎಷ್ಟು ಪುಟ್ಟಿಗಳನ್ನು ತುಂಬಿದಿರೆಂದು ನೀವು ಇನ್ನೂ ಗ್ರಹಿಸಲಿಲ್ಲವೋ? ಇಲ್ಲವೆ ನಿಮಗೆ ನೆನಪಿಲ್ಲವೋ?
Aidu rottigalannu aidu saavira janarige hanchidaaga eshtu puttigalannu tumbidirendu neevu innoo grahisalillavo? Illave nimage nenapillavo?
Matthew 16:9 in English
- King James Version (KJV)
- Do ye not yet understand, neither remember the five loaves of the five thousand, and how many baskets ye took up?
- World English Bible (WEB)
- Don’t you yet perceive or remember the five loaves for the five thousand, and how many baskets you took up,
- American Standard Version (ASV)
- Do ye not yet perceive, neither remember the five loaves of the five thousand, and how many baskets ye took up?
- Bible in Basic English (BBE)
- Do you still not see, or keep in mind the five cakes of bread of the five thousand, and the number of baskets you took up?
- Darby Translation (DBY)
- Do ye not yet understand nor remember the five loaves of the five thousand, and how many hand-baskets ye took [up]?
- Webster's Bible (WBS)
- Do ye not yet understand, neither remember the five loaves of the five thousand, and how many baskets ye took up?
- Young's Literal Translation (YLT)
- do ye not yet understand, nor remember the five loaves of the five thousand, and how many hand-baskets ye took up?
Read in context
- 7ಅದಕ್ಕೆ ಅವರು ತಮ್ಮ ತಮ್ಮಲ್ಲಿಯೇ--ನಾವು ರೊಟ್ಟಿಯನ್ನು ತಕ್ಕೊಳ್ಳದೆ ಇರುವ ದರಿಂದ (ಹೀಗೆ ಹೇಳುತ್ತಾನೆ) ಎಂದು ಅಂದು ಕೊಂಡರು.
- 8ಯೇಸು ಅದನ್ನು ತಿಳುಕೊಂಡವನಾಗಿ ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ರೊಟ್ಟಿಯನ್ನು ತಕ್ಕೊಂಡು ಬರಲಿಲ್ಲವೆಂದು ನಿಮ್ಮಲ್ಲಿ ಯಾಕೆ ಅಂದುಕೊಳ್ಳುತ್ತೀರಿ?
- 9ಐದು ರೊಟ್ಟಿಗಳನ್ನು ಐದು ಸಾವಿರ ಜನರಿಗೆ ಹಂಚಿದಾಗ ಎಷ್ಟು ಪುಟ್ಟಿಗಳನ್ನು ತುಂಬಿದಿರೆಂದು ನೀವು ಇನ್ನೂ ಗ್ರಹಿಸಲಿಲ್ಲವೋ? ಇಲ್ಲವೆ ನಿಮಗೆ ನೆನಪಿಲ್ಲವೋ?
- 10ಇದಲ್ಲದೆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿದಾಗ ಎಷ್ಟು ಪುಟ್ಟಿಗಳನ್ನು ತುಂಬಿದಿರಿ?
- 11ನಾನು ರೊಟ್ಟಿಯ ವಿಷಯದಲ್ಲಿ ಅಲ್ಲ, ಫರಿಸಾಯರ ಮತ್ತು ಸದ್ದುಕಾಯರ ಹುಳಿಯ ವಿಷಯದಲ್ಲಿ ಎಚ್ಚರವಾಗಿರಬೇಕೆಂದು ಹೇಳಿದ್ದನ್ನು ನೀವು ಗ್ರಹಿಸದೆ ಇರುವದು ಹೇಗೆ ಎಂದು ಹೇಳಿದನು.
Cross references
- Matthew 14:17–21 ಮತ್ತಾಯನು 14:17–21ಅವರು ಆತನಿಗೆ--ನಮ್ಮ ಹತ್ತಿರ ಐದು ರೊಟ್ಟಿ ಎರಡು ಮಾನುಗಳು ಮಾತ್ರ ಇವೆ ಎಂದು ಹೇಳಿದರು. ಆತನು--ಅವುಗಳನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಅಂದನು. ಜನ ಸಮೂಹವು ಹುಲ್ಲಿನಮೇಲೆ ಕೂತುಕೊಳ್ಳಬೇಕೆಂದು ಆತನು ಅಪ್ಪಣೆಕೊಟ್ಟು ಆ ಐದು ರೊಟ್ಟಿ ಎರಡು ಮಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಮುರಿದು ಆ ರೊಟ್ಟಿಗಳನ್ನು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು. ಅವರೆಲ್ಲರೂ ತಿಂದು ತೃಪ್ತರಾದರು; ಮತ್ತು ಅವರು ಉಳಿದ ತುಂಡುಗಳನ್ನು ಕೂಡಿಸಿ ಹನ್ನೆ ರಡು ಪುಟ್ಟಿಗಳಲ್ಲಿ ತುಂಬಿಸಿದರು. ಊಟ ಮಾಡಿ ದವರು ಸ್ತ್ರೀಯರೂ ಮಕ್ಕಳೂ ಅಲ್ಲದೆ ಗಂಡಸರೇ ಹೆಚ್ಚು ಕಡಿಮೆ ಐದು ಸಾವಿರ ಇದ್ದರು.
- Luke 9:13–17 ಲೂಕನು 9:13–17ಆದರೆ ಆತನು ಅವರಿಗೆ--ನೀವೇ ಅವ ರಿಗೆ ಊಟಕ್ಕೆ ಕೊಡಿರಿ ಅಂದನು. ಅದಕ್ಕೆ ಅವರು--ನಾವು ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡುಕೊಳ್ಳದ ಹೊರತು ನಮ್ಮಲ್ಲಿ ಐದು ರೊಟ್ಟಿ ಎರಡು ವಿಾನುಗಳಿಗಿಂತ ಹೆಚ್ಚೇನೂ ಇಲ್ಲ ಅಂದರು. ಯಾಕಂದರೆ ಅವರು ಹೆಚ್ಚು ಕಡಿಮೆ ಗಂಡಸರೇ ಐದು ಸಾವಿರ ಇದ್ದರು. ಆಗ ಆತನು ತನ್ನ ಶಿಷ್ಯ ರಿಗೆ--ಪಂಕ್ತಿಗಳಲ್ಲಿ ಐವತ್ತರಂತೆ ಅವರನ್ನು ಕೂಡ್ರಿಸಿರಿ ಅಂದನು. ಅವರು ಅದರಂತೆಯೇ ಮಾಡಿ ಅವರೆ ಲ್ಲರನ್ನೂ ಕೂಡ್ರಿಸಿದರು. ತರುವಾಯ ಆತನು ಐದು ರೊಟ್ಟಿಗಳನ್ನೂ ಎರಡು ವಿಾನುಗಳನ್ನೂ ತಕ್ಕೊಂಡು ಪರಲೋಕದ ಕಡೆಗೆ ನೋಡಿ ಅವುಗಳನ್ನು ಆಶೀರ್ವದಿಸಿ ಮುರಿದು ಜನಸಮೂಹಕ್ಕೆ ಹಂಚುವಂತೆ ಶಿಷ್ಯರಿಗೆ ಕೊಟ್ಟನು. ಆಗ ಅವರೆಲ್ಲರೂ ತಿಂದು ತೃಪ್ತರಾದರು; ಉಳಿದ ತುಂಡುಗಳನ್ನು ಕೂಡಿಸಲು ಅವರಿಗೆ ಹನ್ನೆರಡು ಪುಟ್ಟಿಗಳು ಉಳಿದವು.
- John 6:9–13 ಯೋಹಾನನು 6:9–13ಇಲ್ಲಿ ಒಬ್ಬ ಹುಡುಗನಿ ದ್ದಾನೆ; ಅವನಲ್ಲಿ ಐದು ಜವೆಗೋದಿಯ ರೊಟ್ಟಿಗಳೂ ಎರಡು ಸಣ್ಣ ವಿಾನುಗಳೂ ಅವೆ; ಆದರೆ ಇಷ್ಟೊಂದು ಜನರಿಗೆ ಅವು ಯಾತಕ್ಕಾದಾವು ಅಂದನು. ಆಗ ಯೇಸು--ಜನರನ್ನು ಕೂಡ್ರಿಸಿರಿ ಅಂದನು. ಆ ಸ್ಥಳ ದಲ್ಲಿ ಬಹಳ ಹುಲ್ಲು ಇರಲಾಗಿ ಜನರೆಲ್ಲರು ಕುಳಿತು ಕೊಂಡರು ಅವರಲ್ಲಿ ಸುಮಾರು ಐದು ಸಾವಿರ ಪುರುಷರೇ ಇದ್ದರು. ತರುವಾಯ ಯೇಸು ರೊಟ್ಟಿ ಗಳನ್ನು ತೆಗೆದುಕೊಂಡು ಸ್ತೋತ್ರಮಾಡಿ ಶಿಷ್ಯರಿಗೆ ಹಂಚಿದನು; ಅವರು ಕುಳಿತುಕೊಂಡವರಿಗೆ ಹಂಚಿ ದರು; ಅದೇ ರೀತಿಯಲ್ಲಿ ವಿಾನುಗಳನ್ನು ಅವರಿಗೆ ಬೇಕಾದಷ್ಟು ಹಂಚಿದರು. ಅವರಿಗೆ ತೃಪ್ತಿಯಾದ ಮೇಲೆ ಯೇಸು ತನ್ನ ಶಿಷ್ಯರಿಗೆ--ಏನೂ ನಷ್ಟವಾಗ ದಂತೆ ಮಿಕ್ಕಿದ ತುಂಡುಗಳನ್ನು ಕೂಡಿಸಿರಿ ಅಂದನು. ಆದದರಿಂದ ಅವರು ಐದು ಜವೆಗೋದಿಯ ರೊಟ್ಟಿಗಳಲ್ಲಿ ತಿಂದವರಿಂದ ಮಿಕ್ಕಿದ ತುಂಡುಗಳನ್ನು ಕೂಡಿಸಿ ಹನ್ನೆರಡು ಪುಟ್ಟಿಗಳಲ್ಲಿ ತುಂಬಿದರು.
- Matthew 15:16–17 ಮತ್ತಾಯನು 15:16–17ಅದಕ್ಕೆ ಯೇಸು--ನೀವು ಸಹ ಇನ್ನೂ ಗ್ರಹಿಸದೆ ಇದ್ದೀರಾ? ಬಾಯೊಳಗೆ ಹೋಗಿ ಹೊಟ್ಟೆ ಯಲ್ಲಿ ಸೇರುವದೆಲ್ಲವೂ ಬಹಿರ್ಭೂಮಿಗೆ ಹೋಗುವ ದೆಂದು ನೀವು ಇನ್ನೂ ಗ್ರಹಿಸಲಿಲ್ಲವೋ?
- Mark 6:38–44 ಮಾರ್ಕನು 6:38–44ಆತನು ಅವರಿಗೆ--ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿರಿ ಅನ್ನಲು ಅವರು ತಿಳಿದುಕೊಂಡು--ಐದು ರೊಟ್ಟಿ ಮತ್ತು ಎರಡು ವಿಾನುಗಳು ಇವೆ ಎಂದು ಹೇಳಿದರು. ಆಗ ಎಲ್ಲರೂ ಹಸುರು ಹುಲ್ಲಿನ ಮೇಲೆ ಪಂಕ್ತಿ ಪಂಕ್ತಿಗಳಾಗಿ ಕೂತುಕೊಳ್ಳುವಂತೆ ಆತನು ಅವರಿಗೆ ಅಪ್ಪಣೆಕೊಟ್ಟನು. ಅವರು ನೂರರಂತೆ ಐವತ್ತರಂತೆ ಸಾಲುಸಾಲಾಗಿ ಕೂತುಕೊಂಡರು. ಆಗ ಆತನು ಐದು ರೊಟ್ಟಿ ಎರಡು ವಿಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಆ ರೊಟ್ಟಿಗಳನ್ನು ಮುರಿದು, ಅವರಿಗೆ ಹಂಚುವದಕ್ಕಾಗಿ ತನ್ನ ಶಿಷ್ಯರಿಗೆ ಕೊಟ್ಟನು; ಮತ್ತು ಎರಡು ವಿಾನುಗಳನ್ನು ಆತನು ಅವರೆಲ್ಲರಿಗೂ ಹಂಚಿದನು. ಅವರೆಲ್ಲರೂ ತಿಂದು ತೃಪ್ತರಾದರು. ಆಗ ಅವರು ಹನ್ನೆರಡು ಪುಟ್ಟಿಗಳಲ್ಲಿ ರೊಟ್ಟಿ ಮತ್ತು ವಿಾನಿನ ತುಂಡುಗಳನ್ನು ತುಂಬಿದರು. ಆ ರೊಟ್ಟಿಗಳನ್ನು ತಿಂದವರು ಸುಮಾರು ಐದು ಸಾವಿರ ಗಂಡಸರು.
- Luke 24:25–27 ಲೂಕನು 24:25–27ಆಗ ಆತನು ಅವರಿಗೆ--ಓ ಬುದ್ದಿಹೀನರೇ, ಪ್ರವಾದಿಗಳು ಹೇಳಿ ದ್ದೆಲ್ಲವನ್ನು ನಂಬುವದರಲ್ಲಿ ಮಂದ ಹೃದಯದವರೇ, ಕ್ರಿಸ್ತನು ಇವೆಲ್ಲಾ ಶ್ರಮೆಗಳನ್ನು ಅನುಭವಿಸಿ ತನ ಮಹಿಮೆಯಲ್ಲಿ ಪ್ರವೇಶಿಸುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ ಮೋಶೆಯ ಮತ್ತು ಎಲ್ಲಾ ಪ್ರವಾದಿ ಗಳಿಂದ ಆರಂಭಿಸಿ ಸಮಸ್ತ ಬರಹಗಳಲ್ಲಿ ತನ್ನ ವಿಷಯವಾದವುಗಳನ್ನು ಅವರಿಗೆ ವಿವರಿಸಿದನು.
- Revelation 3:19 ಪ್ರಕಟನೆ 3:19ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ; ಆದದರಿಂದ ನೀನು ಆಸಕ್ತನಾಗಿರು; ಮಾನಸಾಂತರಪಡು.
- Mark 7:18 ಮಾರ್ಕನು 7:18ಆಗ ಆತನು ಅವರಿಗೆ-- ನೀವು ಸಹ ಗ್ರಹಿಕೆ ಇಲ್ಲದವರಾಗಿದ್ದೀರಾ? ಹೊರಗಿ ನಿಂದ ಮನುಷ್ಯನೊಳಗೆ ಸೇರುವಂಥದ್ದು ಯಾವದೂ ಅವನನ್ನು ಹೊಲೆಮಾಡಲಾರದು ಎಂದು ನೀವು ತಿಳಿದುಕೊಳ್ಳುವದಿಲ್ಲವೋ?