Matthew · chapter 17 · verse 12
Matthew 17:12 in Kannada
ಆದರೆ ಎಲೀಯನು ಆಗಲೇ ಬಂದನು. ಮತ್ತು ಅವರು ಅವನನ್ನು ಅರಿಯದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದ್ದಾಯಿತು. ಅದರಂತೆಯೇ ಮನುಷ್ಯಕುಮಾರ ನು ಸಹ ಅವರಿಂದ ಶ್ರಮೆಯನ್ನು ಅನುಭವಿಸುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
Aadare eleeyanu aagale bandanu. Mattu avaru avanannu ariyade tamage ishtabandante avanige maadiddaayitu. Adaranteye manushyakumaara nu saha avarinda shrameyannu anubhavisuvanu endu naanu nimage heluttene andanu.
Matthew 17:12 in English
- King James Version (KJV)
- But I say unto you, That Elias is come already, and they knew him not, but have done unto him whatsoever they listed. Likewise shall also the Son of man suffer of them.
- World English Bible (WEB)
- but I tell you that Elijah has come already, and they didn’t recognize him, but did to him whatever they wanted to. Even so the Son of Man will also suffer by them.”
- American Standard Version (ASV)
- but I say unto you, that Elijah is come already, and they knew him not, but did unto him whatsoever they would. Even so shall the Son of man also suffer of them.
- Bible in Basic English (BBE)
- But I say to you that Elijah has come, and they had no knowledge of him, but did to him whatever they were pleased to do; the same will the Son of man undergo at their hands.
- Darby Translation (DBY)
- But I say unto you that Elias has already come, and they have not known him, but have done unto him whatever they would. Thus also the Son of man is about to suffer from them.
- Webster's Bible (WBS)
- But I say to you, that Elijah is come already, and they knew him not, but have done to him whatever they pleased: likewise will also the Son of man suffer by them.
- Young's Literal Translation (YLT)
- and I say to you — Elijah did already come, and they did not know him, but did with him whatever they would, so also the Son of Man is about to suffer by them.'
Read in context
- 10ಆಗ ಆತನ ಶಿಷ್ಯರು ಆತನಿಗೆ--ಎಲೀಯನು ಮೊದಲು ಬರುವದು ಅಗತ್ಯವೆಂದು ಶಾಸ್ತ್ರಿಗಳು ಯಾಕೆ ಹೇಳುತ್ತಾರೆ ಎಂದು ಕೇಳಿದರು.
- 11ಯೇಸು ಪ್ರತ್ಯುತ್ತರವಾಗಿ ಅವ ರಿಗೆ -- ಎಲೀಯನು ಮೊದಲು ಬಂದು ಎಲ್ಲವುಗಳನ್ನು ತಿರಿಗಿ ಯಥಾಸ್ಥಾನ ಪಡಿಸುವದು ನಿಜವೇ;
- 12ಆದರೆ ಎಲೀಯನು ಆಗಲೇ ಬಂದನು. ಮತ್ತು ಅವರು ಅವನನ್ನು ಅರಿಯದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದ್ದಾಯಿತು. ಅದರಂತೆಯೇ ಮನುಷ್ಯಕುಮಾರ ನು ಸಹ ಅವರಿಂದ ಶ್ರಮೆಯನ್ನು ಅನುಭವಿಸುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- 13ಬಾಪ್ತಿಸ್ಮ ಮಾಡಿಸುವ ಯೋಹಾನನ ವಿಷಯದಲ್ಲಿ ಆತನು ತಮ್ಮೊಂದಿಗೆ ಮಾತನಾಡಿದನೆಂದು ಶಿಷ್ಯರು ಆಗ ಗ್ರಹಿಸಿಕೊಂಡರು.
- 14ಅವರು ಜನಸಮೂಹದ ಬಳಿಗೆ ಬಂದಾಗ ಒಬ್ಬ ಮನುಷ್ಯನು ಆತನ ಬಳಿಗೆ ಬಂದು ಮೊಣ ಕಾಲೂರಿ--
Cross references
- Isaiah 53:3–12 ಯೆಶಾಯ 53:3–12ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ. ನಿಶ್ಚಯವಾಗಿಯೂ ಆತನು ನಮ್ಮ ಸಂಕಟಗಳನ್ನು ಸಹಿಸಿಕೊಂಡು ನಮ್ಮ ದುಃಖಗಳನ್ನು ಹೊತ್ತನು; ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಹೊಡೆಯಲ್ಪಟ್ಟವನು, (ಶಿಕ್ಷಿಸಲ್ಪಟ್ಟವನು) ಹಿಂಸಿಸಲ್ಪಟ್ಟವನು ಎಂದು ಭಾವಿಸಿ ಕೊಂಡೆವು. ನಮ್ಮ ದ್ರೋಹಗಳ ನಿಮಿತ್ತ ಆತನಿಗೆ ಗಾಯವಾಯಿತು, ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಲ್ಪಟ್ಟನು; ನಮ್ಮ ಸಮಾಧಾನಕ್ಕೆ ಕಾರಣವಾದ ಶಿಕ್ಷೆಯು ಆತನ ಮೇಲೆ ಬಿತ್ತು; ಆತನ ಬಾಸುಂಡೆ ಗಳಿಂದ ನಮಗೆ ಸ್ವಸ್ಥವಾಯಿತು. ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು. ಆತನು ಪೀಡಿಸಲ್ಪಟ್ಟವನೂ ಮತ್ತು ಹಿಂಸಿಸಲ್ಪಟ್ಟವನೂ ಆಗಿದ್ದನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ; ವಧಿಸುವದಕ್ಕೆ ತರಲ್ಪ ಡುವ ಕುರಿಮರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನ ವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ. ಆತನು ಸೆರೆಯಿಂದಲೂ ನ್ಯಾಯತೀರ್ಪಿ ನಿಂದಲೂ ತೆಗೆಯಲ್ಪಟ್ಟನು; ಆತನ ಸಂತತಿಯನ್ನು ತಿಳಿಯಪಡಿಸಿದವರು ಯಾರು? ಆತನು ಜೀವಿತರ ದೇಶದಿಂದ ಕಡಿಯಲ್ಪಟ್ಟವನು (ತೆಗೆಯಲ್ಪಟ್ಟನು); ತನ್ನ ಪ್ರಜೆಯ ದ್ರೋಹಕ್ಕಾಗಿ ಆತನು ಪೆಟ್ಟು ತಿಂದನು. ಆತನು ಮರಣವನ್ನು ಧನಿಕರೊಂದಿಗೂ ಆತನ ಸಮಾಧಿಯನ್ನು ದುಷ್ಟರೊಂದಿಗೂ ಮಾಡಿಕೊಂಡನು. ಆತನು ಯಾವ ಬಲಾತ್ಕಾರವನ್ನೂ ಮಾಡಲಿಲ್ಲ ಇಲ್ಲವೆ ಆತನ ಬಾಯಲ್ಲಿ ಯಾವ ವಂಚನೆಯೂ ಇರಲಿಲ್ಲ. ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು. ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು. ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
- Acts 13:24–28 ಅಪೊಸ್ತಲರ ಕೃತ್ಯಗಳು 13:24–28ಆತನ ಆಗಮನಕ್ಕೆ ಮುಂಚೆ ಯೋಹಾನನು ಮೊದಲು ಇಸ್ರಾಯೇಲ್ ಜನರೆ ಲ್ಲರಿಗೆ ಮಾನಸಾಂತರದ ಬಾಪ್ತಿಸ್ಮವನ್ನು ಸಾರಿದನು. ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರಿವಾಗ ಜನರಿಗೆ--ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ; ಆದರೆ ಇಗೋ, ನನ್ನ ಹಿಂದೆ ಒಬ್ಬಾತನು ಬರುತ್ತಾನೆ, ಆತನ ಪಾದದ ಕೆರಗಳನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು. ಜನರೇ, ಸಹೋದರರೇ, ಅಬ್ರಹಾಮನ ವಂಶ ಸ್ಥರೇ, ನಿಮ್ಮಲ್ಲಿ ದೇವರಿಗೆ ಭಯಪಡುವವರೇ, ನಿಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿಯದೆ. ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು. ಮರಣದಂಡನೆಗೆ ಕಾರಣವೇನೂ ತಮಗೆ ಸಿಕ್ಕದಿದ್ದರೂ ಆತನನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು.
- Matthew 16:21 ಮತ್ತಾಯನು 16:21ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು.
- Mark 6:14–28 ಮಾರ್ಕನು 6:14–28ಅರಸನಾದ ಹೆರೋದನು ಆತನ ವಿಷಯವಾಗಿ ಕೇಳಿದನು. (ಯಾಕಂದರೆ ಆತನ ಹೆಸರು ಎಲ್ಲಾ ಕಡೆಗೂ ಹರಡಿತು); ಮತ್ತು ಅವನು--ಬಾಪ್ತಿಸ್ಮ ಮಾಡಿಸುವ ಯೋಹಾನನು ಸತ್ತವರೊಳಗಿಂದ ಎದ್ದು ಬಂದಿದ್ದಾನೆ; ಆದದರಿಂದ ಮಹತ್ಕಾರ್ಯಗಳು ಅವನಲ್ಲಿ ತೋರಿ ಬರುತ್ತವೆ ಅಂದನು. ಬೇರೆಯವರು--ಈತನು ಎಲೀಯನು ಅಂದರು; ಇನ್ನು ಕೆಲವರು--ಈತನು ಒಬ್ಬ ಪ್ರವಾದಿಯಾಗಿದ್ದಾನೆ ಇಲ್ಲವೆ ಪ್ರವಾದಿಗಳಲ್ಲಿ ಒಬ್ಬ ನಂತೆ ಇದ್ದಾನೆ ಅಂದರು. ಹೆರೋದನಾದರೋ ಆತನ ವಿಷಯವಾಗಿ ಕೇಳಿದಾಗ -- ನಾನು ತಲೆ ಹೊಯಿಸಿದ ಯೋಹಾನನು ಇವನೇ; ಇವನು ಸತ್ತವ ರೊಳಗಿಂದ ಎದ್ದು ಬಂದಿದ್ದಾನೆ ಅಂದನು. ಯಾಕಂ ದರೆ ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿ ಹೆರೋದನು ತಾನೇ ಯೋಹಾನನನ್ನು ಕರೇ ಕಳುಹಿಸಿ ಹಿಡಿದು ಕಟ್ಟಿ ಅವನನ್ನು ಸೆರೆಯಲ್ಲಿ ಹಾಕಿದ್ದನು; ಯಾಕಂದರೆ ಅವನು ಅವಳನ್ನು ವಿವಾಹ ಮಾಡಿಕೊಂಡಿದ್ದನು. ಆದರೆ ಯೋಹಾ ನನು ಹೆರೋದನಿಗೆ--ನಿನ್ನ ಸಹೋದರನ ಹೆಂಡತಿ ಯನ್ನು ಇಟ್ಟುಕೊಂಡಿರುವದು ನ್ಯಾಯವಲ್ಲವೆಂದು ಹೇಳಿ ದ್ದನು. ಆದಕಾರಣ ಹೆರೋದ್ಯಳು ಅವನಿಗೆ ವಿರೋ ಧವಾಗಿ ಹಗೆ ಇಟ್ಟುಕೊಂಡು ಅವನನ್ನು ಕೊಲ್ಲಿಸಬೇ ಕೆಂದಿದ್ದಳು; ಆದರೆ ಅವಳಿಗೆ ಆಗಲಿಲ್ಲ. ಯಾಕಂದರೆ ಯೋಹಾನನು ನೀತಿವಂತನೂ ಪರಿಶುದ್ಧನೂ ಆದ ಮನುಷ್ಯನೆಂದು ಹೆರೋದನು ತಿಳಿದವನಾಗಿ ಅವನಿಗೆ ಭಯಪಟ್ಟು ಅವನನ್ನು ಕಾಪಾಡುತ್ತಿದ್ದನು; ಮತ್ತು ಅವನು ಹೇಳಿದ್ದನ್ನು ಕೇಳಿ ಆನೇಕ ಕಾರ್ಯಗಳನ್ನು ಮಾಡಿದ್ದಲ್ಲದೆ ಅವನು ಹೇಳುವದನ್ನು ಸಂತೋಷದಿಂದ ಕೇಳಿದನು. ಹೀಗಿರಲಾಗಿ ಅನುಕೂಲವಾದ ಒಂದು ದಿನವು ಅಂದರೆ ಹೆರೋದನ ಹುಟ್ಟಿದ ದಿನದಲ್ಲಿ ಅವನು ತನ್ನ ಪ್ರಭುಗಳಿಗೂ ಸೈನ್ಯಾಧಿಪತಿಗಳಿಗೂ ಗಲಿಲಾಯದ ಪ್ರಮುಖರಿಗೂ ಔತಣವನ್ನು ಮಾಡಿಸಿದನು; ಆಗ ಆ ಹೆರೋದ್ಯಳ ಮಗಳು ಒಳಗೆ ಬಂದು ನಾಟ್ಯವಾಡಿ ಹೆರೋದನನ್ನೂ ಅವನ ಸಂಗಡ ಕೂತಿದ್ದವರನ್ನೂ ಮೆಚ್ಚಿಸಿದ್ದರಿಂದ ಅರಸನು ಆ ಹುಡುಗಿಗೆ--ನಿನಗೆ ಬೇಕಾದದ್ದನ್ನು ನನ್ನಿಂದ ಕೇಳಿಕೋ; ನಾನು ಅದನ್ನು ನಿನಗೆ ಕೊಡುತ್ತೇನೆ ಎಂದು ಹೇಳಿದನು. ಅವನು--ನೀನು ನನ್ನಿಂದ ಯಾವದನ್ನು ಕೇಳಿಕೊಂಡರೂ ಅಂದರೆ ಅದು ನನ್ನ ರಾಜ್ಯದಲ್ಲಿ ಅರ್ಧವಾಗಿದ್ದರೂ ನಾನು ನಿನಗೆ ಕೊಡುತ್ತೇನೆ ಎಂದು ಅವಳಿಗೆ ಆಣೆಯಿಟ್ಟು ಹೇಳಿದನು. ಆಗ ಅವಳು ಹೊರಟುಹೋಗಿ ತನ್ನ ತಾಯಿಗೆ--ನಾನು ಏನು ಕೇಳಿಕೊಳ್ಳಲಿ ಎಂದು ಕೇಳಲು ಅವಳು --ಬಾಪ್ತಿಸ್ಮ ಮಾಡಿಸುವ ಯೋಹಾನನ ತಲೆಯನ್ನು ಕೇಳಿಕೋ ಅಂದಳು. ಕೂಡಲೆ ಅವಳು ಅರಸನ ಬಳಿಗೆ ಅವಸರದಿಂದ ಬಂದು-- ಬಾಪ್ತಿಸ್ಮಮಾಡಿಸುವ ಯೊಹಾನನ ತಲೆಯನ್ನು ನೀನು ಕೂಡಲೆ ಪರಾತಿನಲ್ಲಿ ನನಗೆ ಕೊಡಬೇಕೆಂದು ನಾನು ಕೇಳಿಕೊಳ್ಳುತ್ತೇನೆ ಅಂದಳು. ಆಗ ಅರಸನು ಬಹಳವಾಗಿ ದುಃಖಪಟ್ಟನು; ಆದಾಗ್ಯೂ ತನ್ನ ಆಣೆಯ ನಿಮಿತ್ತವಾಗಿಯೂ ತನ್ನೊಂದಿಗೆ ಕೂತಿದ್ದವರ ನಿಮಿತ್ತವಾಗಿಯೂ ಅವಳನ್ನು ತಿರಸ್ಕರಿಸುವದಕ್ಕೆ ಮನಸ್ಸಿಲ್ಲದವನಾದನು. ಕೂಡಲೆ ಅವನ ತಲೆಯನ್ನು ತರುವದಕ್ಕಾಗಿ ಅರಸನು ಒಬ್ಬ ಕೊಲೆ ಯಾಳಿಗೆ ಅಪ್ಪಣೆಕೊಟ್ಟು ಕಳುಹಿಸಿದನು; ಅವನು ಹೋಗಿ ಸೆರೆಮನೆಯಲ್ಲಿ ಅವನ ತಲೆಯನ್ನು ಹೊಯು ಕೂಡಲೆ ಅವನ ತಲೆಯನ್ನು ತರುವದಕ್ಕಾಗಿ ಅರಸನು ಒಬ್ಬ ಕೊಲೆ ಯಾಳಿಗೆ ಅಪ್ಪಣೆಕೊಟ್ಟು ಕಳುಹಿಸಿದನು; ಅವನು ಹೋಗಿ ಸೆರೆಮನೆಯಲ್ಲಿ ಅವನ ತಲೆಯನ್ನು ಹೊಯು
- Mark 9:12–13 ಮಾರ್ಕನು 9:12–13ಆತನು ಅವರಿಗೆ ಪ್ರತ್ಯುತ್ತರವಾಗಿ-- ನಿಜವಾಗಿಯೂ ಎಲೀಯನು ಮೊದಲು ಬಂದು ಎಲ್ಲವುಗಳನ್ನು ಯಥಾಸ್ಥಾನಪಡಿಸುತ್ತಾನೆ; ಆದರೆ ಮನುಷ್ಯಕುಮಾರನು ಬಹಳ ಶ್ರಮೆಗಳನ್ನನುಭವಿ ಸುವದು ಮತ್ತು ತಿರಸ್ಕರಿಸಲ್ಪಡುವದು ಅಗತ್ಯವೆಂದು ಆತನ ವಿಷಯವಾಗಿ ಬರೆದಿರುವದು ಹೇಗೆ? ಆದರೆ ನಾನು ನಿಮಗೆ ಹೇಳುವದೇನಂದರೆ-- ಎಲೀಯನು ನಿಜವಾಗಿಯೂ ಬಂದನು. ಅವನ ವಿಷಯವಾಗಿ ಬರೆದಿರುವಂತೆ ಅವರು ತಮ್ಮ ಮನಸ್ಸಿಗೆ ಬಂದ ಹಾಗೆ ಅವನಿಗೆ ಮಾಡಿದರು ಅಂದನು.
- Acts 4:10 ಅಪೊಸ್ತಲರ ಕೃತ್ಯಗಳು 4:10ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ.
- John 5:32–36 ಯೋಹಾನನು 5:32–36ನನ್ನನ್ನು ಕುರಿತು ಸಾಕ್ಷಿಕೊಡುವಾತನು ಬೇರೊಬ್ಬನಿ ದ್ದಾನೆ; ಆತನು ನನ್ನ ವಿಷಯದಲ್ಲಿ ಕೊಡುವ ಸಾಕ್ಷಿಯು ನಿಜವೆಂದು ನಾನು ಬಲ್ಲೆನು. ನೀವು ಯೋಹಾನನ ಬಳಿಗೆ ಕಳುಹಿಸಿದಿರಿ; ಅವನು ಸತ್ಯಕ್ಕೆ ಸಾಕ್ಷಿಕೊಟ್ಟನು. ನಾನು ಮನುಷ್ಯನಿಂದ ಸಾಕ್ಷಿ ಅಂಗೀಕರಿಸುವದಿಲ್ಲ; ಆದರೆ ನೀವು ರಕ್ಷಣೆ ಹೊಂದುವಂತೆ ನಾನು ಇವು ಗಳನ್ನು ಹೇಳುತ್ತೇನೆ. ಅವನು ಉರಿದು ಪ್ರಕಾಶಿಸುವ ದೀಪವಾಗಿದ್ದನು; ನೀವು ಸ್ವಲ್ಪಕಾಲ ಅವನ ಬೆಳಕಿನಲ್ಲಿ ಸಂತೋಷಿಸುವದಕ್ಕೆ ಮನಸ್ಸುಳ್ಳವರಾಗಿದ್ದೀರಿ; ಆದರೆ ಯೋಹಾನನಿಗಿಂತಲೂ ಹೆಚ್ಚಿನ ಸಾಕ್ಷಿ ನನಗುಂಟು; ಹೇಗೆಂದರೆ ಪೂರೈಸುವದಕ್ಕಾಗಿ ತಂದೆಯು ನನಗೆ ಕೊಟ್ಟ ಕೆಲಸಗಳು ಅಂದರೆ ನಾನು ಮಾಡುತ್ತಿರುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.
- Acts 3:14–15 ಅಪೊಸ್ತಲರ ಕೃತ್ಯಗಳು 3:14–15ಹೀಗೆ ಪರಿಶುದ್ಧನೂ ನೀತಿವಂತನೂ ಆಗಿರುವಾತ ನನ್ನು ನೀವು ಬೇಡವೆಂದು ಹೇಳಿ ಒಬ್ಬ ಕೊಲೆಗಾರನನ್ನು ನಿಮಗಾಗಿ ಬಿಟ್ಟುಕೊಡುವಂತೆ ಅಪೇಕ್ಷಿಸಿ ಜೀವಾಧಿ ಪತಿಯನ್ನು ಕೊಲ್ಲಿಸಿದಿರಿ; ದೇವರು ಆತನನ್ನೇ ಸತ್ತವ ರೊಳಗಿಂದ ಎಬ್ಬಿಸಿದ್ದಾನೆ; ಇದಕ್ಕೆ ನಾವು ಸಾಕ್ಷಿಗಳಾ ಗಿದ್ದೇವೆ.
- Matthew 21:23–25 ಮತ್ತಾಯನು 21:23–25ಆತನು ದೇವಾಲಯಕ್ಕೆ ಬಂದು ಬೋಧಿಸು ತ್ತಿದ್ದಾಗ ಪ್ರಧಾನಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು--ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಮತ್ತು ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು ಎಂದು ಕೇಳಿದರು. ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ಒಂದು ವಿಷಯ ನಿಮ್ಮನ್ನು ಕೇಳುತ್ತೇನೆ; ಅದನ್ನು ನೀವು ನನಗೆ ಹೇಳಿದರೆ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇ ನೆಂದು ನಿಮಗೆ ಹೇಳುವೆನು ಎಂದು ಹೇಳಿ--ಯೋಹಾನನ ಬಾಪ್ತಿಸ್ಮವು ಎಲ್ಲಿಂದ ಬಂತು? ಪರ ಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ ಎಂದು ಕೇಳಿದಾಗ ಅವರು ತಮ್ಮತಮ್ಮೊಳಗೆ ತರ್ಕಿ ಸುತ್ತಾ--ಪರಲೋಕದಿಂದ ಎಂದು ಹೇಳಿದರೆ ಆತನು ನಮಗೆ--ನೀವು ಅವನನ್ನು ಯಾಕೆ ನಂಬಲಿಲ್ಲ ಎಂದು ಹೇಳಾನು.
- Mark 11:30–32 ಮಾರ್ಕನು 11:30–32ಯೋಹಾನನ ಬಾಪ್ತಿಸ್ಮವು ಪರಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ, ನನಗೆ ಉತ್ತರಕೊಡಿರಿ ಅಂದನು. ಆಗ ಅವರು --ಪರಲೋಕದಿಂದ ಎಂದು ನಾವು ಹೇಳಿದರೆ--ನೀವು ಯಾಕೆ ಅವನನ್ನು ನಂಬಲಿಲ್ಲ ಎಂದು ಕೇಳಿ ಯಾನು; ಆದರೆ ನಾವು--ಮನುಷ್ಯರಿಂದ ಎಂದು ಹೇಳುವದಾದರೆ ನಮಗೆ ಜನರ ಭಯವಿದೆ; ಯಾಕಂದರೆ ಯೋಹಾನನು ನಿಜವಾಗಿಯೂ ಪ್ರವಾದಿಯೆಂದು ಎಲ್ಲರೂ ಎಣಿಸಿಕೊಂಡಿರುವರು ಎಂದು ಅವರು ತಮ್ಮಲ್ಲಿ ತರ್ಕಿಸಿಕೊಂಡರು.ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳಲಾರೆವು ಎಂದು ಉತ್ತರ ಕೊಟ್ಟರು. ಅದಕ್ಕೆ ಯೇಸು--ನಾನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೇನೆಂದು ನಾನೂ ನಿಮಗೆ ಹೇಳುವದಿಲ್ಲ ಎಂದು ಅವರಿಗೆ ಉತ್ತರ ಕೊಟ್ಟನು.
- Matthew 11:9–15 ಮತ್ತಾಯನು 11:9–15ಆದರೆ ನೀವು ಏನು ನೋಡುವದಕ್ಕಾಗಿ ಹೋದಿರಿ? ಪ್ರವಾದಿ ಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನು ಎಂದು ನಾನು ನಿಮಗೆ ಹೇಳುತ್ತೇನೆ. ಯಾಕಂ ದರೆ--ಇಗೋ, ನಿನ್ನ ಮಾರ್ಗವನ್ನು ನಿನ್ನ ಮುಂದೆ ಸಿದ್ಧಪಡಿಸುವ ನನ್ನ ದೂತನನ್ನು ನಾನು ನಿನ್ನ ಮುಂದೆ ಕಳುಹಿಸುತ್ತೇನೆಂದು ಯಾವನ ವಿಷಯವಾಗಿ ಬರೆದಿ ದೆಯೋ ಅವನೇ ಇವನು. ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಸ್ತ್ರೀಯರಲ್ಲಿ ಹುಟ್ಟಿದವರೊ ಳಗೆ ಬಾಪ್ತಿಸ್ಮ ಮಾಡಿಸುವ ಯೋಹಾನನಿಗಿಂತ ದೊಡ್ಡವನು ಏಳಲಿಲ್ಲ; ಆದಾಗ್ಯೂ ಪರಲೋಕ ರಾಜ್ಯದಲ್ಲಿ ಅತ್ಯಲ್ಪನಾದವನು ಅವನಿಗಿಂತಲೂ ದೊಡ್ಡ ವನಾಗಿದ್ದಾನೆ. ಇದಲ್ಲದೆ ಬಾಪ್ತಿಸ್ಮ ಮಾಡಿಸುವ ಯೋಹಾನನ ದಿನಗಳಿಂದ ಇದುವರೆಗೆ ಪರಲೋಕ ರಾಜ್ಯವು ಬಲಾತ್ಕಾರಕ್ಕೆ ಗುರಿಯಾಗಿದೆ; ಮತ್ತು ಬಲಾತ್ಕಾರಿಗಳು ಅದನ್ನು ಒತ್ತಾಯದಿಂದ ತೆಗೆದು ಕೊಳ್ಳುತ್ತಾರೆ. ಯಾಕಂದರೆ ಎಲ್ಲಾ ಪ್ರವಾದಿಗಳೂ ನ್ಯಾಯಪ್ರಮಾಣವೂ ಯೋಹಾನನ ವರೆಗೆ ಪ್ರವಾದಿ ಸಿದ್ದುಂಟು. ನೀವು ಇದನ್ನು ಅಂಗೀಕರಿಸುವದಕ್ಕೆ ಮನಸ್ಸಿದ್ದರೆ ಬರಬೇಕಾಗಿದ್ದ ಎಲೀಯನು ಇವನೇ. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ.
- Matthew 11:2 ಮತ್ತಾಯನು 11:2ಆಗ ಯೋಹಾನನು ಸೆರೆಮನೆಯಲ್ಲಿ ಕ್ರಿಸ್ತನ ಕಾರ್ಯಗಳನ್ನು ಕೇಳಿದ್ದರಿಂದ ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಆತನಿಗೆ--