Matthew · chapter 17 · verse 15
Matthew 17:15 in Kannada
ಕರ್ತನೇ, ನನ್ನ ಮಗನ ಮೇಲೆ ಕರುಣೆಯಿಡು; ಯಾಕಂದರೆ ಅವನು ಚಂದ್ರರೋಗ ದಿಂದ ಬಹಳವಾಗಿ ಕಷ್ಟಪಡುತ್ತಾನೆ, ಅನೇಕಸಾರಿ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಬೀಳುತ್ತಾನೆ.
Kartane, nanna magana mele karuneyidu; yaakandare avanu chandraroga dinda bahalavaagi kashtapaduttaane, anekasaari benkiyalliyoo neerinalliyoo beeluttaane.
Matthew 17:15 in English
- King James Version (KJV)
- Lord, have mercy on my son: for he is lunatick, and sore vexed: for ofttimes he falleth into the fire, and oft into the water.
- World English Bible (WEB)
- “Lord, have mercy on my son, for he is epileptic and suffers grievously; for he often falls into the fire, and often into the water.
- American Standard Version (ASV)
- Lord, have mercy on my son: for he is epileptic, and suffereth grievously; for oft-times he falleth into the fire, and oft-times into the water.
- Bible in Basic English (BBE)
- Lord have mercy on my son: for he is off his head, and is in great pain; and frequently he goes falling into the fire, and frequently into the water.
- Darby Translation (DBY)
- Lord, have mercy on my son, for he is lunatic, and suffers sorely; for often he falls into the fire and often into the water.
- Webster's Bible (WBS)
- Lord, have mercy on my son; for he is lunatic, and grievously distressed; for often he falleth into the fire, and often into the water.
- Young's Literal Translation (YLT)
- and saying, 'Sir, deal kindly with my son, for he is lunatic, and doth suffer miserably, for often he doth fall into the fire, and often into the water,
Read in context
- 13ಬಾಪ್ತಿಸ್ಮ ಮಾಡಿಸುವ ಯೋಹಾನನ ವಿಷಯದಲ್ಲಿ ಆತನು ತಮ್ಮೊಂದಿಗೆ ಮಾತನಾಡಿದನೆಂದು ಶಿಷ್ಯರು ಆಗ ಗ್ರಹಿಸಿಕೊಂಡರು.
- 14ಅವರು ಜನಸಮೂಹದ ಬಳಿಗೆ ಬಂದಾಗ ಒಬ್ಬ ಮನುಷ್ಯನು ಆತನ ಬಳಿಗೆ ಬಂದು ಮೊಣ ಕಾಲೂರಿ--
- 15ಕರ್ತನೇ, ನನ್ನ ಮಗನ ಮೇಲೆ ಕರುಣೆಯಿಡು; ಯಾಕಂದರೆ ಅವನು ಚಂದ್ರರೋಗ ದಿಂದ ಬಹಳವಾಗಿ ಕಷ್ಟಪಡುತ್ತಾನೆ, ಅನೇಕಸಾರಿ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಬೀಳುತ್ತಾನೆ.
- 16ನಾನು ಅವನನ್ನು ನಿನ್ನ ಶಿಷ್ಯರ ಬಳಿಗೆ ಕರೆತಂದೆನು; ಅವರು ಅವನನ್ನು ಸ್ವಸ್ಥಮಾಡಲಾರದೆ ಹೋದರು ಎಂದು ಹೇಳಿದನು.
- 17ಆಗ ಯೇಸು ಪ್ರತ್ಯುತ್ತರ ವಾಗಿ--ನಂಬಿಕೆಯಿಲ್ಲದ ಓ ಮೂರ್ಖ ಸಂತತಿಯೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.
Cross references
- Matthew 4:24 ಮತ್ತಾಯನು 4:24ಆತನ ಕೀರ್ತಿಯು ಸಿರಿಯದಲ್ಲೆಲ್ಲಾ ಹರಡಿತು; ಆಗ ನಾನಾ ವಿಧವಾದ ರೋಗಗಳಿಂದ ಮತ್ತು ಯಾತನೆಗಳಿಂದ ಅಸ್ವಸ್ಥರಾದವರೆಲ್ಲರನ್ನೂ ದೆವ್ವಗಳು ಹಿಡಿದವರನ್ನೂ ಮೂರ್ಛಾ ರೋಗಿಗಳನ್ನೂ ಪಾರ್ಶ್ವವಾಯುರೋಗಿ ಗಳನ್ನೂ ಆತನ ಬಳಿಗೆ ತಂದರು. ಆತನು ಅವರನ್ನು ಸ್ವಸ್ಥಪಡಿಸಿದನು.ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.
- Matthew 15:22 ಮತ್ತಾಯನು 15:22ಆಗ ಇಗೋ, ಕಾನಾನ್ಯಳಾದ ಒಬ್ಬ ಸ್ತ್ರೀಯು ಅದೇ ಪ್ರಾಂತ್ಯಗಳಿಂದ ಬಂದು ಆತನಿಗೆ--ಓ ಕರ್ತನೇ, ದಾವೀದನ ಕುಮಾ ರನೇ, ನನ್ನ ಮೇಲೆ ಕರುಣೆಯಿಡು; ನನ್ನ ಮಗಳು ದೆವ್ವದಿಂದ ಬಹಳವಾಗಿ ಸಂಕಟಪಡುತ್ತಿದ್ದಾಳೆ ಎಂದು ಕೂಗಿಕೊಂಡಳು.
- Matthew 8:31–32 ಮತ್ತಾಯನು 8:31–32ಆದದರಿಂದ ದೆವ್ವಗಳು ಆತನಿಗೆ--ನೀನು ನಮ್ಮನ್ನು ಹೊರಗೆ ಹಾಕುವದಾದರೆ ಆ ಹಂದಿಗಳ ಗುಂಪಿನೊಳಗೆ ಸೇರಿಕೊಳ್ಳುವದಕ್ಕೆ ನಮಗೆ ಅಪ್ಪಣೆ ಕೊಡು ಎಂದು ಬೇಡಿಕೊಂಡವು. ಆತನು ಅವುಗಳಿಗೆ--ಹೋಗಿರಿ ಅಂದನು. ಆಗ ಅವು ಹೊರಗೆ ಬಂದು ಹಂದಿಗಳ ಗುಂಪಿನೊಳಗೆ ಸೇರಿಕೊಂಡವು; ಆಗ ಇಗೋ, ಹಂದಿಗಳ ಗುಂಪೆಲ್ಲಾ ಸಮುದ್ರದ ಕಡಿದಾದ ಸ್ಥಳಕ್ಕೆ ಉಗ್ರವಾಗಿ ಓಡಿಹೋಗಿ ನೀರಿನಲ್ಲಿ ಬಿದ್ದು ಸತ್ತು ಹೋದವು.
- Mark 9:17–18 ಮಾರ್ಕನು 9:17–18ಆಗ ಸಮೂಹದಲ್ಲಿ ಒಬ್ಬನು ಪ್ರತ್ಯುತ್ತರವಾಗಿ--ಬೋಧಕನೇ, ಮೂಕದೆವ್ವ ಹಿಡಿದ ನನ್ನ ಮಗನನ್ನು ನಿನ್ನ ಬಳಿಗೆ ತಕ್ಕೊಂಡು ಬಂದೆನು. ಅದು ಅವನನ್ನು ತೆಗೆದುಕೊಂಡು ಹೋದಲ್ಲೆಲ್ಲಾ ಅವನನ್ನು ಒದ್ದಾಡಿಸುತ್ತದೆ; ಮತ್ತು ಅವನು ನೊರೆ ಸುರಿಸುತ್ತಾ ತನ್ನ ಹಲ್ಲು ಕಡಿಯುತ್ತಾ ಕುಂದಿ ಹೋಗುತ್ತಾನೆ; ಅದನ್ನು (ದೆವ್ವವನ್ನು) ಬಿಡಿಸಬೇಕೆಂದು ನಾನು ನಿನ ಶಿಷ್ಯರಿಗೆ ಹೇಳಿದೆನು; ಆದರೆ ಅವರಿಂದ ಆಗಲಿಲ್ಲ ಎಂದು ಹೇಳಿದನು.
- Job 1:10–19 ಯೋಬನು 1:10–19ನೀನು ಅವನಿಗೂ ಅವನ ಮನೆಗೂ ಅವನಿಗೆ ಉಂಟಾದ ಎಲ್ಲವುಗಳಿಗೂ ಸುತ್ತಲೂ ಬೇಲಿ ಕಟ್ಟಿದೆಯಲ್ಲಾ? ಅವನ ಕೈ ಕೆಲಸವನ್ನು ಆಶೀರ್ವದಿಸಿದಿ; ಅವನ ಸಂಪತ್ತು ದೇಶದಲ್ಲಿ ಹಬ್ಬಿಯದೆ. ಆದರೆ ನಿನ್ನ ಕೈ ಚಾಚಿ ಅವನಿಗಿದ್ದದ್ದನ್ನೆಲ್ಲಾ ಮುಟ್ಟು; ಅವನು ನಿನ್ನೆದುರಿನಲ್ಲಿಯೇ ನಿನ್ನನ್ನು ಶಪಿಸುವನು ಅಂದನು. ಕರ್ತನು ಸೈತಾನನಿಗೆ--ಇಗೋ, ಅವನದೆಲ್ಲಾ ನಿನ್ನ ಅಧಿಕಾರ ದಲ್ಲಿ ಅದೆ; ಅವನ ಮೇಲೆ ಮಾತ್ರ ನಿನ್ನ ಕೈ ಹಾಕಬೇಡ ಅಂದನು. ಆಗ ಸೈತಾನನು ಕರ್ತನ ಸಮ್ಮುಖದಿಂದ ಹೊರಟನು. ಒಂದು ದಿನ ಅವನ ಕುಮಾರರೂ ಕುಮಾರ್ತೆ ಯರೂ ತಮ್ಮ ಹಿರಿಯವನ ಮನೆಯಲ್ಲಿ ತಿಂದು ದ್ರಾಕ್ಷಾರಸವನ್ನು ಕುಡಿಯುತ್ತಿದ್ದರು. ಒಬ್ಬ ಸೇವಕನು ಯೋಬನ ಬಳಿಗೆ ಬಂದು--ಎತ್ತುಗಳು ಉಳುತ್ತಾ ಕತ್ತೆಗಳು ಅವುಗಳ ಹತ್ತಿರ ಮೇಯುತ್ತಾ ಇರಲಾಗಿ ಶೆಬದವರು ಅವುಗಳ ಮೇಲೆ ಬಿದ್ದು ಅವುಗಳನ್ನು ತಕ್ಕೊಂಡು ಹೋದರು; ಹೌದು, ಸೇವಕರನ್ನು ಸಹ ಕತ್ತಿಯಿಂದ ಸಂಹರಿಸಿದರು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು. ಅವನು ಇನ್ನೂ ಮಾತನಾಡುತ್ತಿರಲು ಮತ್ತೊಬ್ಬನೂ ಬಂದು--ದೇವರ ಬೆಂಕಿ ಆಕಾಶದಿಂದ ಬಿದ್ದು ಕುರಿ ಗಳಲ್ಲಿಯೂ ಸೇವಕರಲ್ಲಿಯೂ ಉರಿದು ಅವರನ್ನು ಸಂಹರಿಸಿತು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು. ಅವನು ಇನ್ನೂ ಮಾತ ನಾಡುತ್ತಿರಲು ಮತ್ತೊಬ್ಬನು ಬಂದು--ಕಸ್ದೀಯರು ಮೂರು ದಂಡುಗಳನ್ನು ಕಟ್ಟಿ, ಒಂಟೆಗಳ ಮೇಲೆ ಬಿದ್ದು, ಅವುಗಳನ್ನು ತಕ್ಕೊಂಡು ಸಂಹರಿಸಿದರು; ಹೌದು, ಸೇವಕರನ್ನು ಕತ್ತಿಯಿಂದ ಹೊಡೆದರು; ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿ ಕೊಂಡೆನು ಅಂದನು. ಅವನು ಇನ್ನೂ ಮಾತನಾ ಡುತ್ತಿರಲು ಮತ್ತೊಬ್ಬನು ಬಂದು--ನಿನ್ನ ಕುಮಾರರೂ ಕುಮಾರ್ತೆಯರೂ ತಮ್ಮ ಹಿರಿಯವನ ಮನೆಯಲ್ಲಿ ತಿನ್ನುತ್ತಾ ದ್ರಾಕ್ಷಾರಸವನ್ನು ಕುಡಿಯುತ್ತಿರುವಲ್ಲಿ ಅಗೋ, ದೊಡ್ಡ ಗಾಳಿ ಬಂದು ಮನೆಯ ನಾಲ್ಕು ಮೂಲೆಗಳಿಗೆ ಹೊಡೆದದ್ದರಿಂದ ಅದು ಯೌವನಸ್ಥರ ಮೇಲೆ ಬಿತ್ತು; ಅವರು ಸತ್ತರು; ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿಕೊಂಡೆನು ಅಂದನು.
- Job 2:7 ಯೋಬನು 2:7ಆಗ ಸೈತಾನನು ಕರ್ತನ ಸಮ್ಮುಖ ದಿಂದ ಹೊರಟು ಯೋಬನಿಗೆ ಅಂಗಾಲಿನಿಂದ ನೆತ್ತಿಯ ವರೆಗೆ ಕೆಟ್ಟ ಹುಣ್ಣುಗಳು ಬರುವ ಹಾಗೆ ಅವನನ್ನು ಹೊಡೆದನು.
- Mark 5:4–5 ಮಾರ್ಕನು 5:4–5ಯಾಕಂದರೆ ಅನೇಕ ಸಾರಿ ಅವನನ್ನು ಬೇಡಿಗಳಿಂದ ಮತ್ತು ಸರಪಣಿಗಳಿಂದ ಕಟ್ಟಿದ್ದರೂ ಅವನು ಸರಪಣಿ ಗಳನ್ನು ಕಿತ್ತುಹಾಕಿ ಬೇಡಿಗಳನ್ನು ಮುರಿದು ತುಂಡು ಮಾಡುತ್ತಿದ್ದದ್ದರಿಂದ ಯಾವ ಮನುಷ್ಯನೂ ಅವನನ್ನು ಹತೋಟಿಗೆ ತರಲಾರದೆ ಇದ್ದನು. ಅವನು ರಾತ್ರಿ ಹಗಲು ಯಾವಾಗಲೂ ಬೆಟ್ಟಗಳಲ್ಲಿಯೂ ಸಮಾಧಿಗಳ ಲ್ಲಿಯೂ ಕೂಗುತ್ತಾ ಕಲ್ಲುಗಳಿಂದ ತನ್ನನ್ನು ತಾನೇ ಕೊಯ್ದುಕೊಳ್ಳುತ್ತಿದ್ದನು.
- Luke 9:38–42 ಲೂಕನು 9:38–42ಆಗ ಇಗೋ, ಆ ಗುಂಪಿನೊಳಗಿಂದ ಒಬ್ಬ ಮನುಷ್ಯನು ಕೂಗಿ--ಬೋಧಕನೇ, ನನ್ನ ಮಗನ ಮೇಲೆ ದೃಷ್ಟಿಯಿಡು ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ; ಯಾಕಂದರೆ ಅವನು ನನಗೆ ಒಬ್ಬನೇ ಮಗನು. ಇಗೋ, ದೆವ್ವವು ಅವನನ್ನು ಹಿಡಿಯುತ್ತಲೇ ಅವನು ಫಕ್ಕನೆ ಕೂಗಿಕೊಳ್ಳುತ್ತಾನೆ; ಇದಲ್ಲದೆ ಅದು ನೊರೆ ಸುರಿಯುವಷ್ಟು ಅವನನ್ನು ಒದ್ದಾಡಿಸುವದಲ್ಲದೆ ಜಜ್ಜುವದು. ಅದು ಅವನನ್ನು ಬಿಟ್ಟುಹೋಗುವದು ಕಷ್ಟ. ಅದನ್ನು ಬಿಡಿಸುವಂತೆ ನಾನು ನಿನ್ನ ಶಿಷ್ಯರನ್ನು ಬೇಡಿಕೊಂಡೆನು; ಆದರೆ ಅದು ಅವರಿಂದ ಆಗಲಿಲ್ಲ ಅಂದನು. ಯೇಸು ಪ್ರತ್ಯುತ್ತರ ವಾಗಿ--ಓ ನಂಬಿಕೆಯಿಲ್ಲದ ವಕ್ರಸಂತತಿಯೇ, ನಾನು ಎಷ್ಟು ಕಾಲ ನಿಮ್ಮೊಂದಿಗಿರಲಿ ಮತ್ತು ನಿಮ್ಮನ್ನು ಸಹಿಸಲಿ ಎಂದು ಹೇಳಿ--ನಿನ್ನ ಮಗನನ್ನು ಇಲ್ಲಿಗೆ ಕರಕೊಂಡು ಬಾ ಅಂದನು. ಅವನು ಇನ್ನೂ ಬರುತ್ತಿದ್ದಾಗಲೇ ದೆವ್ವವು ಅವನನ್ನು ಒದ್ದಾಡಿಸಿ ನೆಲಕ್ಕೆ ಅಪ್ಪಳಿಸಿತು. ಯೇಸು ಆ ಅಶುದ್ಧಾತ್ಮವನ್ನು ಗದರಿಸಿ ಮಗನನ್ನು ಸ್ವಸ್ಥಮಾಡಿ ಅವನನ್ನು ಅವನ ತಂದೆಗೆ ತಿರಿಗಿ ಒಪ್ಪಿ ಸಿದನು.
- John 4:46–47 ಯೋಹಾನನು 4:46–47ಹೀಗೆ ಯೇಸು ತಾನು ನೀರನ್ನು ದ್ರಾಕ್ಷಾರಸ ವನ್ನಾಗಿ ಮಾಡಿದ ಗಲಿಲಾಯದ ಕಾನಾನಿಗೆ ತಿರಿಗಿ ಬಂದನು. ಆಗ ಕಪೆರ್ನೌಮಿನಲ್ಲಿದ್ದ ಒಬ್ಬ ಪ್ರಧಾನನ ಮಗನು ಅಸ್ವಸ್ಥನಾಗಿದ್ದನು. ಯೇಸು ಯೂದಾಯ ದಿಂದ ಗಲಿಲಾಯಕ್ಕೆ ಬಂದನೆಂದು ಅವನು ಕೇಳಿದಾಗ ಆತನ ಬಳಿಗೆ ಹೋಗಿ ತಾನು ಬಂದು ತನ್ನ ಮಗನನ್ನು ಸ್ವಸ್ಥಪಡಿಸಬೇಕೆಂದು ಆತನನ್ನು ಬೇಡಿಕೊಂಡನು; ಯಾಕಂದರೆ ಅವನು ಸಾಯುವ ಹಾಗಿದ್ದನು.
- Mark 5:22–23 ಮಾರ್ಕನು 5:22–23ಆಗ ಇಗೋ, ಸಭಾಮಂದಿರದ ಅಧಿಕಾರಿ ಗಳಲ್ಲಿ ಯಾಯಿರನೆಂದು ಹೆಸರಿದ್ದ ಒಬ್ಬನು ಬಂದು ಆತನನ್ನು ಕಂಡು ಆತನ ಪಾದಗಳಿಗೆ ಬಿದ್ದು-- ನನ್ನ ಚಿಕ್ಕಮಗಳು ಸಾಯುವ ಸ್ಥಿತಿಯಲ್ಲಿ ಮಲಗಿದ್ದಾಳೆ, ಅವಳು ಸ್ವಸ್ಥಳಾಗುವಂತೆ ನೀನು ಬಂದು ನಿನ್ನ ಕೈಗಳನ್ನು ಅವಳ ಮೇಲೆ ಇಡು; ಆಗ ಅವಳು ಬದುಕುವಳು ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು.
- Mark 9:20–22 ಮಾರ್ಕನು 9:20–22ಆಗ ಅವರು ಅವನನ್ನು ಆತನ ಬಳಿಗೆ ತಂದರು; ಅವನು ಆತನನ್ನು ನೋಡಿದ ತಕ್ಷಣವೇ ಆ ಆತ್ಮವು ಅವನನ್ನು ಒದ್ದಾಡಿಸಿದ್ದರಿಂದ ಅವನು ನೆಲಕ್ಕೆ ಬಿದ್ದು ನೊರೆ ಸುರಿಸುತ್ತಾ ಹೊರಳಾಡಿದನು. ಆತನು ಅವನ ತಂದೆಗೆ--ಇದು ಅವನನ್ನು ಹಿಡಿದು ಎಷ್ಟು ಕಾಲವಾಯಿತು ಎಂದು ಕೇಳಲು ಅವನು-- ಬಾಲ್ಯದಿಂದಲೇ; ಅದು ಅವನನ್ನು ನಾಶಪಡಿಸಲು ಅನೇಕ ಸಾರಿ ಬೆಂಕಿಯೊಳಗೂ ನೀರಿನೊಳಗೂ ಹಾಕಿತು; ಆದರೆ ನೀನು ಏನಾದರೂ ಮಾಡಲು ಸಾಧ್ಯ ವಿದ್ದರೆ ನಮ್ಮ ಮೇಲೆ ಕರುಣೆಯಿಟ್ಟು ನಮಗೆ ಸಹಾಯ ಮಾಡು ಅಂದನು.
Original words (Greek)
- Lord · G2962κύριος kýrios
- mercy · G1653ἐλεέω eleéō
- on · G5207υἱός huiós
- my · G3450μοῦ moû
- son · G5207υἱός huiós
- for · G3754ὅτι hóti
- lunatick · G4583σεληνιάζομαι selēniázomai
- and · G2532καί kaí
- sore · G2560κακῶς kakōs
- vexed · G3958πάσχω páschō
- for · G1063γάρ gár
- ofttimes · G4178πολλάκις pollákis
- falleth · G4098πίπτω píptō
- into · G1519εἰς eis
- fire · G4442πῦρ pŷr
- and · G2532καί kaí
- oft · G4178πολλάκις pollákis
- into · G1519εἰς eis
- water · G5204ὕδωρ hýdōr