Matthew · chapter 17 · verse 9
Matthew 17:9 in Kannada
ಅವರು ಬೆಟ್ಟದಿಂದ ಇಳಿದು ಬರುತ್ತಿದ್ದಾಗ ಯೇಸು ಅವರಿಗೆ--ಮನುಷ್ಯಕುಮಾರನು ಸತ್ತವರೊಳಗಿಂದ ಎದ್ದು ಬರುವವರೆಗೆ ಈ ದರ್ಶನವನ್ನು ಯಾರಿಗೂ ಹೇಳಬಾರದೆಂದು ಅವರಿಗೆ ಆಜ್ಞಾಪಿಸಿದನು.
Avaru bettadinda ilidu baruttiddaaga yesu avarige--manushyakumaaranu sattavarolaginda eddu baruvavarege ee darshanavannu yaarigoo helabaaradendu avarige aajnyaapisidanu.
Matthew 17:9 in English
- King James Version (KJV)
- And as they came down from the mountain, Jesus charged them, saying, Tell the vision to no man, until the Son of man be risen again from the dead.
- World English Bible (WEB)
- As they were coming down from the mountain, Jesus commanded them, saying, “Don’t tell anyone what you saw, until the Son of Man has risen from the dead.”
- American Standard Version (ASV)
- And as they were coming down from the mountain, Jesus commanded them, saying, Tell the vision to no man, until the Son of man be risen from the dead.
- Bible in Basic English (BBE)
- And when they were coming down from the mountain, Jesus gave them orders, saying, Let no man have word of what you have seen, till the Son of man has come again from the dead.
- Darby Translation (DBY)
- And as they descended from the mountain, Jesus charged them, saying, Tell the vision to no one, until the Son of man be risen up from among [the] dead.
- Webster's Bible (WBS)
- And as they were descending the mountain, Jesus charged them, saying, Tell the vision to no man, until the Son of man be raised again from the dead.
- Young's Literal Translation (YLT)
- And as they are coming down from the mount, Jesus charged them, saying, 'Say to no one the vision, till the Son of Man out of the dead may rise.'
Read in context
- 7ಆಗ ಯೇಸು ಬಂದು ಅವರನ್ನು ಮುಟ್ಟಿ--ಏಳಿರಿ, ಹೆದರಬೇಡಿರಿ ಎಂದು ಹೇಳಿದನು.
- 8ಅವರು ತಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿದಾಗ ಯೇಸುವನ್ನೇ ಹೊರತು ಮತ್ತಾರನ್ನೂ ನೋಡಲಿಲ್ಲ.
- 9ಅವರು ಬೆಟ್ಟದಿಂದ ಇಳಿದು ಬರುತ್ತಿದ್ದಾಗ ಯೇಸು ಅವರಿಗೆ--ಮನುಷ್ಯಕುಮಾರನು ಸತ್ತವರೊಳಗಿಂದ ಎದ್ದು ಬರುವವರೆಗೆ ಈ ದರ್ಶನವನ್ನು ಯಾರಿಗೂ ಹೇಳಬಾರದೆಂದು ಅವರಿಗೆ ಆಜ್ಞಾಪಿಸಿದನು.
- 10ಆಗ ಆತನ ಶಿಷ್ಯರು ಆತನಿಗೆ--ಎಲೀಯನು ಮೊದಲು ಬರುವದು ಅಗತ್ಯವೆಂದು ಶಾಸ್ತ್ರಿಗಳು ಯಾಕೆ ಹೇಳುತ್ತಾರೆ ಎಂದು ಕೇಳಿದರು.
- 11ಯೇಸು ಪ್ರತ್ಯುತ್ತರವಾಗಿ ಅವ ರಿಗೆ -- ಎಲೀಯನು ಮೊದಲು ಬಂದು ಎಲ್ಲವುಗಳನ್ನು ತಿರಿಗಿ ಯಥಾಸ್ಥಾನ ಪಡಿಸುವದು ನಿಜವೇ;
Cross references
- Mark 8:30 ಮಾರ್ಕನು 8:30ತನ್ನ ವಿಷಯ ವಾಗಿ ಅವರು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು.
- Luke 24:46–47 ಲೂಕನು 24:46–47ಅವರಿಗೆ--ಕ್ರಿಸ್ತನು ಹೀಗೆ ಶ್ರಮೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವದು ಅಗತ್ಯವಾಗಿತ್ತೆಂತಲೂ ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.
- Matthew 8:20 ಮತ್ತಾಯನು 8:20ಅದಕ್ಕೆ ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ, ಆಕಾಶದ ಪಕ್ಷಿಗಳಿಗೆ ಗೂಡು ಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆಯಿಡು ವದಕ್ಕೂ ಸ್ಥಳವಿಲ್ಲ ಎಂದು ಹೇಳಿದನು.
- Luke 8:56 ಲೂಕನು 8:56ಆಗ ಆಕೆಯ ತಂದೆತಾಯಿಗಳು ಬೆರಗಾದರು; ಆದರೆ ನಡೆದದ್ದನ್ನು ಅವರು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು.
- Mark 9:9–13 ಮಾರ್ಕನು 9:9–13ಅವರು ಬೆಟ್ಟದಿಂದಿಳಿದು ಬರುವಾಗ ಮನುಷ್ಯ ಕುಮಾರನು ಸತ್ತವರೊಳಗಿಂದ ಎದ್ದು ಬರುವ ವರೆಗೆ ತಾವು ಕಂಡವುಗಳನ್ನು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು. ಮತ್ತು ಸತ್ತವರೊಳಗಿಂದ ಎದ್ದು ಬರುವದರ ಅರ್ಥವೇನೆಂದು ಅವರು ಒಬ್ಬರಿಗೊಬ್ಬರು ಪ್ರಶ್ನಿಸಿಕೊಳ್ಳುತ್ತಾ ಆ ಮಾತನ್ನು ತಮ್ಮೊಳಗೆ ಇಟ್ಟುಕೊಂಡರು. ಇದಲ್ಲದೆ ಅವರು ಆತನಿಗೆ--ಎಲೀಯನು ಮೊದಲು ಬರುವದು ಅಗತ್ಯವೆಂದು ಶಾಸ್ತ್ರಿಗಳು ಯಾಕೆ ಹೇಳುತ್ತಾರೆ ಎಂದು ಕೇಳಿದರು. ಆತನು ಅವರಿಗೆ ಪ್ರತ್ಯುತ್ತರವಾಗಿ-- ನಿಜವಾಗಿಯೂ ಎಲೀಯನು ಮೊದಲು ಬಂದು ಎಲ್ಲವುಗಳನ್ನು ಯಥಾಸ್ಥಾನಪಡಿಸುತ್ತಾನೆ; ಆದರೆ ಮನುಷ್ಯಕುಮಾರನು ಬಹಳ ಶ್ರಮೆಗಳನ್ನನುಭವಿ ಸುವದು ಮತ್ತು ತಿರಸ್ಕರಿಸಲ್ಪಡುವದು ಅಗತ್ಯವೆಂದು ಆತನ ವಿಷಯವಾಗಿ ಬರೆದಿರುವದು ಹೇಗೆ? ಆದರೆ ನಾನು ನಿಮಗೆ ಹೇಳುವದೇನಂದರೆ-- ಎಲೀಯನು ನಿಜವಾಗಿಯೂ ಬಂದನು. ಅವನ ವಿಷಯವಾಗಿ ಬರೆದಿರುವಂತೆ ಅವರು ತಮ್ಮ ಮನಸ್ಸಿಗೆ ಬಂದ ಹಾಗೆ ಅವನಿಗೆ ಮಾಡಿದರು ಅಂದನು.
- Matthew 17:12 ಮತ್ತಾಯನು 17:12ಆದರೆ ಎಲೀಯನು ಆಗಲೇ ಬಂದನು. ಮತ್ತು ಅವರು ಅವನನ್ನು ಅರಿಯದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದ್ದಾಯಿತು. ಅದರಂತೆಯೇ ಮನುಷ್ಯಕುಮಾರ ನು ಸಹ ಅವರಿಂದ ಶ್ರಮೆಯನ್ನು ಅನುಭವಿಸುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Matthew 16:20–21 ಮತ್ತಾಯನು 16:20–21ತರುವಾಯ ತಾನು ಕ್ರಿಸ್ತನಾಗಿರುವ ಯೇಸು ಎಂದು ಯಾರಿಗೂ ಹೇಳಬಾರದು ಎಂಬದಾಗಿ ತನ್ನ ಶಿಷ್ಯರಿಗೆ ಆಜ್ಞಾಪಿಸಿದನು. ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು.
- Matthew 17:23 ಮತ್ತಾಯನು 17:23ಅವರು ಆತನನ್ನು ಕೊಲ್ಲುವರು; ಇದಲ್ಲದೆ ಮೂರನೇ ದಿನದಲ್ಲಿ ಆತನು ತಿರಿಗಿ ಎಬ್ಬಿಸಲ್ಪಡುವನು ಎಂದು ಹೇಳಿದನು. ಅದಕ್ಕೆ ಅವರು ಬಹಳ ದುಃಖಪಟ್ಟರು.
- Matthew 8:4 ಮತ್ತಾಯನು 8:4ಯೇಸು ಅವನಿಗೆ--ನೀನು ಯಾರಿಗೂ ಹೇಳಬೇಡ ನೋಡು; ಹೊರಟುಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಅವರಿಗೆ ಸಾಕ್ಷಿಯಾಗಿರುವಂತೆ ಮೋಶೆಯು ಆಜ್ಞಾಪಿಸಿದ ಕಾಣಿಕೆಯನ್ನು ಅರ್ಪಿಸು ಎಂದು ಹೇಳಿದನು.
- Luke 9:21–22 ಲೂಕನು 9:21–22ಆ ಸಂಗತಿಯನ್ನು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿ-- ಮನುಷ್ಯಕುಮಾ ರನು ಬಹಳ ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಪ್ರಧಾನಯಾಜಕರಿಂದಲೂ ಶಾಸ್ತ್ರಿಗಳಿಂದಲೂ ತಿರಸ್ಕರಿ ಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವದು ಅಗತ್ಯವಾಗಿದೆ ಎಂದು ಆಜ್ಞಾಪಿಸಿ ದನು.
- Luke 18:33–34 ಲೂಕನು 18:33–34ಇದಲ್ಲದೆ ಅವರು ಆತನನ್ನು ಕೊರಡೆಗಳಿಂದ ಹೊಡೆದು ಕೊಲ್ಲುವರು. ಮೂರನೆಯ ದಿನದಲ್ಲಿ ಆತನು ತಿರಿಗಿ ಏಳುವನು ಅಂದನು. ಆದರೆ ಶಿಷ್ಯರು ಇವುಗಳಲ್ಲಿ ಒಂದನ್ನೂ ಗ್ರಹಿಸಲಿಲ್ಲ; ಈ ಮಾತು ಅವರಿಗೆ ಮರೆಯಾಗಿದ್ದದರಿಂದ ಆತನು ಹೇಳಿದವು ಗಳನ್ನು ಅವರು ತಿಳಿಯಲಿಲ್ಲ.