Matthew · chapter 18 · verse 1
Matthew 18:1 in Kannada
ಅದೇ ಸಮಯದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು--ಪರಲೋಕ ರಾಜ್ಯದಲ್ಲಿ ಅತಿ ದೊಡ್ಡವನು ಯಾರು ಎಂದು ಕೇಳಿದರು.
Ade samayadalli shishyaru yesuvina balige bandu--paraloka raajyadalli ati doddavanu yaaru endu kelidaru.
Matthew 18:1 in English
- King James Version (KJV)
- At the same time came the disciples unto Jesus, saying, Who is the greatest in the kingdom of heaven?
- World English Bible (WEB)
- In that hour the disciples came to Jesus, saying, “Who then is greatest in the Kingdom of Heaven?”
- American Standard Version (ASV)
- In that hour came the disciples unto Jesus, saying, Who then is greatest in the kingdom of heaven?
- Bible in Basic English (BBE)
- In that hour the disciples came to Jesus, saying, Who is greatest in the kingdom of heaven?
- Darby Translation (DBY)
- In that hour the disciples came to Jesus saying, Who then is greatest in the kingdom of the heavens?
- Webster's Bible (WBS)
- At the same time came the disciples to Jesus, saying, Who is the greatest in the kingdom of heaven?
- Young's Literal Translation (YLT)
- At that hour came the disciples near to Jesus, saying, 'Who, now, is greater in the reign of the heavens?'
Read in context
- 1ಅದೇ ಸಮಯದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು--ಪರಲೋಕ ರಾಜ್ಯದಲ್ಲಿ ಅತಿ ದೊಡ್ಡವನು ಯಾರು ಎಂದು ಕೇಳಿದರು.
- 2ಆಗ ಯೇಸು ಒಂದು ಚಿಕ್ಕ ಮಗುವನ್ನು ತನ್ನ ಬಳಿಗೆ ಕರೆದು ಅವನನ್ನು ಅವರ ಮಧ್ಯದಲ್ಲಿ ನಿಲ್ಲಿಸಿ--
- 3ನೀವು ತಿರುಗಿ ಕೊಂಡು ಚಿಕ್ಕ ಮಕ್ಕಳಂತೆ ಆಗದೆಹೋದರೆ ಪರಲೋಕ ರಾಜ್ಯದೊಳಗೆ ಪ್ರವೇಶಿಸುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
Cross references
- Mark 9:33–37 ಮಾರ್ಕನು 9:33–37ಆತನು ಕಪೆರ್ನೌಮಿಗೆ ಬಂದು ಮನೆಯಲ್ಲಿದ್ದಾಗ ಅವರಿಗೆ--ದಾರಿಯಲ್ಲಿ ನಿಮ್ಮೊಳಗೆ ನೀವು ಏನು ವಾಗ್ವಾದ ಮಾಡಿದಿರಿ ಎಂದು ಕೇಳಿದನು. ಆದರೆ ಅವರು ಸುಮ್ಮನಿದ್ದರು; ಯಾಕಂದರೆ ಅವರು ತಮ್ಮೊಳಗೆ ಯಾವನು ಅತಿ ದೊಡ್ಡವನಾಗಿರಬೇಕೆಂದು ದಾರಿ ಯಲ್ಲಿ ವಾಗ್ವಾದ ಮಾಡಿದ್ದರು. ಆಗ ಆತನು ಕೂತುಕೊಂಡು ಹನ್ನೆರಡು ಮಂದಿಯನ್ನು ಕರೆದು ಅವರಿಗೆ--ಯಾವನಾದರೂ ಮೊದಲಿನವನಾಗಬೇ ಕೆಂದು ಇಷ್ಟಪಟ್ಟರೆ ಅವನು ಎಲ್ಲರಿಗಿಂತ ಕಡೆಯ ವನೂ ಎಲ್ಲರ ಸೇವಕನೂ ಆಗಿರಬೇಕು ಅಂದನು. ಆತನು ಒಂದು ಮಗುವನ್ನು ತಕ್ಕೊಂಡು ಅದನ್ನು ಅವರ ಮಧ್ಯದಲ್ಲಿ ನಿಲ್ಲಿಸಿ ತನ್ನ ಕೈಗಳಲ್ಲಿ ಅದನ್ನು ಎತ್ತಿಕೊಂಡು ಅವರಿಗೆ-- ಯಾವನಾದರೂ ಇಂಥ ಮಕ್ಕಳಲ್ಲಿ ಒಂದನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿದರೆ ನನ್ನನ್ನು ಅಂಗೀಕರಿಸುತ್ತಾನೆ; ಮತ್ತು ಯಾವನು ನನ್ನನ್ನು ಅಂಗೀಕರಿಸುವನೋ ಅವನು ನನ್ನನ್ನಲ್ಲದೆ ನನ್ನನ್ನು ಕಳುಹಿಸಿದಾತನನ್ನೇ ಅಂಗೀಕರಿಸುತ್ತಾನೆ ಅಂದನು.
- Luke 9:46–48 ಲೂಕನು 9:46–48ಆಗ ತಮ್ಮಲ್ಲಿ ಯಾವನು ಎಲ್ಲರಿಗಿಂತ ದೊಡ್ಡ ವನು ಎಂಬ ತರ್ಕವು ಅವರೊಳಗೆ ಎದ್ದಿತು. ಆದರೆ ಯೇಸು ಅವರ ಹೃದಯದ ಆಲೋಚನೆಯನ್ನು ತಿಳಿದವನಾಗಿ ಒಂದು ಮಗುವನ್ನು ತಕ್ಕೊಂಡು ತನ್ನ ಬಳಿಯಲ್ಲಿ ನಿಲ್ಲಿಸಿ ಅವರಿಗೆ ಯಾವನಾದರೂ ಈ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಯಾವನಾದರೂ ನನ್ನನ್ನು ಅಂಗೀಕರಿಸಿಕೊಂಡರೆ ನನ್ನನ್ನು ಕಳುಹಿಸಿ ಕೊಟ್ಟಾತನನ್ನೇ ಅಂಗೀಕರಿಸಿಕೊಳ್ಳುತ್ತಾನೆ. ಯಾಕಂ ದರೆ ನಿಮ್ಮೆಲ್ಲರಲ್ಲಿ ಚಿಕ್ಕವನಾಗಿರುವವನೇ ದೊಡ್ಡ
- Matthew 20:20–28 ಮತ್ತಾಯನು 20:20–28ತರುವಾಯ ಜೆಬೆದಾಯನ ಮಕ್ಕಳ ತಾಯಿಯು ತನ್ನ ಕುಮಾರರೊಂದಿಗೆ ಆತನ ಬಳಿಗೆ ಬಂದು ಆತ ನನ್ನು ಆರಾಧಿಸುತ್ತಾ ಆತನನ್ನು ಏನೋ ಬೇಡಿಕೊಳ್ಳ ಬೇಕೆಂದು ಅಪೇಕ್ಷಿಸಿದಳು. ಆತನು ಆಕೆಗೆ--ನೀನು ಏನು ಅಪೇಕ್ಷಿಸುತ್ತೀ ಎಂದು ಕೇಳಲು ಆಕೆಯು ಆತನಿಗೆ -- ನಿನ್ನ ರಾಜ್ಯದಲ್ಲಿ ಈ ನನ್ನ ಇಬ್ಬರು ಕುಮಾರರು ಒಬ್ಬನು ನಿನ್ನ ಬಲಗಡೆಯಲ್ಲೂ ಇನ್ನೊಬ್ಬನು ನಿನ್ನ ಎಡಗಡೆಯಲ್ಲೂ ಕೂತುಕೊಳ್ಳುವಂತೆ ಅನುಗ್ರಹಿಸ ಬೇಕು ಎಂದು ಬೇಡಿಕೊಂಡಳು. ಆದರೆ ಯೇಸು ಪ್ರತ್ಯುತ್ತರವಾಗಿ -- ನೀವು ಬೇಡಿಕೊಳ್ಳುವದೇನೆಂದು ನಿಮಗೆ ತಿಳಿಯದು. ನಾನು ಕುಡಿಯುವದಕ್ಕಿರುವ ಪಾತ್ರೆಯಲ್ಲಿ ಕುಡಿಯಲು ನಿಮ್ಮಿಂದಾದೀತೇ? ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದು ವಿರೋ ಎಂದು ಕೇಳಿದಾಗ ಅವರು ಆತನಿಗೆ--ನಮ್ಮಿಂದ ಆಗುವದು ಎಂದು ಹೇಳಿದ ಮತ್ತು ಆತನು ಅವರಿಗೆ--ನನ್ನ ಪಾತ್ರೆಯಲ್ಲಿ ನೀವು ಕುಡಿಯು ವದು ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದುವದು ನಿಜ; ಆದರೆ ನನ್ನ ಬಲಗಡೆಯಲ್ಲಾ ಗಲೀ ಎಡಗಡೆಯಲ್ಲಾಗಲೀ ಕೂತುಕೊಳ್ಳುವಂತೆ ಅನುಗ್ರಹಿಸುವದು ನನ್ನದಲ್ಲ; ಆದರೆ ನನ್ನ ತಂದೆಯಿಂದ ಯಾರಿಗೋಸ್ಕರ ಅದು ಸಿ ಬೇರೆ ಹತ್ತು ಮಂದಿಯು ಅದನ್ನು ಕೇಳಿ ಆ ಇಬ್ಬರು ಸಹೋದ ರರಿಗೆ ವಿರೋಧವಾಗಿ ಕೋಪಗೊಂಡರು. ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು--ಅನ್ಯ ಜನಾಂಗಗಳ ಅಧಿಪತಿಗಳು ಅವರ ಮೇಲೆ ದೊರೆತನ ಮಾಡುವರೆಂದೂ ದೊಡ್ಡವರು ಅವರ ಮೇಲೆ ಅಧಿಕಾರವನ್ನು ನಡಿಸುವರೆಂದೂ ನಿಮಗೆ ತಿಳಿದಿದೆ. ಆದರೆ ನಿಮ್ಮಲ್ಲಿ ಅದು ಹಾಗಿರಬಾರದು. ನಿಮ್ಮಲ್ಲಿ ದೊಡ್ಡವನಾಗಿರಬೇಕೆಂದಿರುವವನು ನಿಮ್ಮ ಸೇವಕನಾಗಿ ರಲಿ ನಿಮ್ಮಲ್ಲಿ ಯಾವನಾದರೂ ಪ್ರಮುಖನಾಗಬೇಕೆ ಂದಿದ್ದರೆ ಅವನು ನಿಮ್ಮ ಆಳಾಗಿರಲಿ. ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು.
- Luke 22:24–27 ಲೂಕನು 22:24–27ಇದಲ್ಲದೆ ತಮ್ಮೊಳಗೆ ಯಾವನು ಅತಿ ದೊಡ್ಡವ ನೆಂದು ಎಣಿಸಲ್ಪಡುವನು ಎಂದು ಅವರಲ್ಲಿ ವಿವಾದವು ಸಹ ಇತ್ತು. ಆಗ ಆತನು ಅವರಿಗೆ--ಅನ್ಯಜನಗಳ ಅರಸರು ಅವರ ಮೇಲೆ ದೊರೆತನ ಮಾಡುತ್ತಾರೆ; ಅವರ ಮೇಲೆ ಅಧಿಕಾರವನ್ನು ನಡಿಸುವವರು ಉಪ ಕಾರಿಗಳೆಂದು ಕರೆಯಲ್ಪಡುತ್ತಾರೆ. ಆದರೆ ನೀವು ಹಾಗಿರಬಾರದು. ನಿಮ್ಮೊಳಗೆ ಅತಿದೊಡ್ಡವನಾಗಿರು ವವನು ಚಿಕ್ಕವನಂತೆ ಇರಲಿ; ಮುಖ್ಯಸ್ಥನಾಗಿರುವವನು ಸೇವೆ ಮಾಡುವವನಂತೆ ಇರಲಿ. ಹಾಗಾದರೆ ಯಾರು ದೊಡ್ಡವರು? ಊಟಕ್ಕೆ ಕೂತುಕೊಂಡಿರುವ ವನೋ ಇಲ್ಲವೆ ಸೇವೆ ಮಾಡುವವನೋ? ಊಟಕ್ಕೆ ಕೂತುಕೊಂಡವನಲ್ಲವೋ? ಆದರೆ ನಾನು ನಿಮ್ಮೊಳಗೆ ಸೇವೆ ಮಾಡುವವನಂತಿದ್ದೇನೆ.
- Philippians 2:3 ಫಿಲಿಪ್ಪಿಯವರಿಗೆ 2:3ಕಲಹದಿಂದಾಗಲಿ ಒಣ ಹೆಮ್ಮೆಯಿಂದಾಗಲಿ ಯಾವ ದನ್ನೂ ಮಾಡದೆ ಪ್ರತಿಯೊಬ್ಬನು ದೀನ ಮನಸ್ಸಿನಿಂದ ಬೇರೆಯವರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.
- Mark 10:35–45 ಮಾರ್ಕನು 10:35–45ಆಗ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರು ಆತನ ಬಳಿಗೆ ಬಂದು--ಬೋಧಕನೇ, ನಾವು ಅಪೇಕ್ಷಿಸುವದನ್ನು ನೀನು ನಮಗೋಸ್ಕರ ಮಾಡಬೇಕೆಂದು ನಾವು ಬಯಸುತ್ತೇವೆ ಅಂದರು. ಅದಕ್ಕೆ ಆತನು ಅವರಿಗೆ--ನಾನು ನಿಮಗೆ ಏನು ಮಾಡಬೇಕೆಂದು ಅಪೇಕ್ಷಿಸುತ್ತೀರಿ ಎಂದು ಕೇಳಲು ಅವರು ಆತನಿಗೆ--ನಾವು ನಿನ್ನ ಮಹಿಮೆಯಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲಿಯೂ ಮತ್ತೊಬ್ಬನು ನಿನ್ನ ಎಡಗಡೆಯಲ್ಲಿಯೂ ಕೂತುಕೊಳ್ಳುವಂತೆ ನಮಗೆ ಅನುಗ್ರಹಿಸು ಅಂದರು. ಆದರೆ ಯೇಸು ಅವರಿಗೆ -- ನೀವು ಏನು ಬೇಡಿಕೊಳ್ಳುತ್ತೀರೋ ನಿಮಗೆ ತಿಳಿಯದು; ನಾನು ಕುಡಿಯುವ ಪಾತ್ರೆಯಲ್ಲಿ ನೀವು ಕುಡಿಯುವಿರೋ? ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದುವಿರೋ ಅಂದನು. ಅದಕ್ಕೆ ಅವರು ಆತನಿಗೆ--ನಮ್ಮಿಂದಾಗುವದು ಅಂದರು. ಆದರೆ ಯೇಸು ಅವರಿಗೆ--ನಾನು ಕುಡಿ ಯುವ ಪಾತ್ರೆಯಲ್ಲಿ ನೀವು ನಿಜವಾಗಿಯೂ ಕುಡಿಯು ವಿರಿ; ಮತ್ತು ನಾನು ಹೊಂದುವ ಬಾಪ್ತಿಸ್ಮದಿಂದ ನೀವು ಬಾಪ್ತಿಸ್ಮ ಹೊಂದುವಿರಿ. ಆದರೆ ನನ್ನ ಬಲಗಡೆಯಲ್ಲಿ ಮತ್ತು ನನ್ನ ಎಡಗಡೆಯಲ್ಲಿ ಕೂತು ಕೊಳ್ಳುವಂತೆ ಅನುಗ್ರಹ ಮಾಡುವದು ನನ್ನದಲ್ಲ; ಅದು ಯಾರಿ ಗೋಸ್ಕರ ಸಿದ್ಧಮಾಡಲ್ಪಟ್ಟಿದೆಯೋ ಅವರಿಗೆ ಕೊಡ ಲ್ಪಡುವದು ಅಂದನು. ಆ ಹತ್ತು ಮಂದಿಯು ಅದನ್ನು ಕೇಳಿದಾಗ ಯಾಕೋಬ ಯೋಹಾನರ ಮೇಲೆ ಅವರು ಬಹಳವಾಗಿ ಕೋಪಗೊಳ್ಳಲಾರಂಭಿಸಿದರು. ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು ಅವರಿಗೆ--ಅನ್ಯಜನಗಳನ್ನು ಆಳುವದಕ್ಕೆ ನೇಮಿಸಲ್ಪ ಟ್ಟವರು ಅವರ ಮೇಲೆ ದೊರೆತನ ಮಾಡುತ್ತಾರೆ; ಮತ್ತು ಅವರಲ್ಲಿ ದೊಡ್ಡ ವರು ಅವರ ಮೇಲೆ ಅಧಿಕಾರ ಮಾಡುತ್ತಾರೆಂದು ನೀವು ಬಲ್ಲಿರಿ. ಆದರೆ ನಿಮ್ಮೊಳಗೆ ಹಾಗಿರಬಾರದು; ಮತ್ತು ನಿಮ್ಮೊಳಗೆ ದೊಡ್ಡವನಾಗಿರ ಬೇಕೆಂದಿರುವವನು ನಿಮ್ಮ ಸೇವಕನಾಗಿರಬೇಕು. ನಿಮ್ಮಲ್ಲಿ ಮುಖ್ಯಸ್ಥನಾಗಬೇಕೆಂದಿರುವವನು ಎಲ್ಲರಿಗೆ ಸೇವಕನಾಗಿರಬೇಕು. ಯಾಕಂದರೆ ಮನುಷ್ಯಕು ಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಆದರೆ ಸೇವೆ ಮಾಡುವದಕ್ಕೂ ತನ್ನ ಪ್ರಾಣವನ್ನು ಅನೇಕರಿಗೋಸ್ಕರ ಈಡುಕೊಡುವದಕ್ಕೂ ಬಂದನು ಎಂದು ಹೇಳಿದನು.
- Matthew 23:11 ಮತ್ತಾಯನು 23:11ಆದರೆ ನಿಮ್ಮಲ್ಲಿ ಅತಿ ದೊಡ್ಡವನಾಗಿರುವವನು ನಿಮ್ಮ ಸೇವಕನಾಗಿರಬೇಕು.
- Mark 10:14–15 ಮಾರ್ಕನು 10:14–15ಆದರೆ ಯೇಸು ಅದನ್ನು ನೋಡಿದಾಗ ಬಹಳವಾಗಿ ಕೋಪಗೊಂಡು ಅವರಿಗೆ--ಚಿಕ್ಕಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡ ಬೇಡಿರಿ; ಯಾಕಂದರೆ ದೇವರ ರಾಜ್ಯವು ಇಂಥವರದೇ ಅಂದನು. ನಾನು ನಿಮಗೆ ನಿಜವಾಗಿ ಹೇಳುವದೇ ನಂದರೆ--ಯಾವನಾದರೂ ಚಿಕ್ಕ ಮಗುವಿನಂತೆ ದೇವರ ರಾಜ್ಯವನ್ನು ಅಂಗೀಕರಿಸದಿದ್ದರೆ ಅವನು ಅದರೊಳಗೆ ಪ್ರವೇಶಿಸುವದಿಲ್ಲ.
- Romans 12:10 ರೋಮಾಪುರದವರಿಗೆ 12:10ಸಹೋದರ ಪ್ರೀತಿಯಿಂದ ಒಬ್ಬರಿಗೊಬ್ಬರು ಕರುಣಾ ವಾತ್ಸಲ್ಯವುಳ್ಳ ವರಾಗಿರ್ರಿ; ಸನ್ಮಾನಿಸುವದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರ್ರಿ.
- Matthew 7:21 ಮತ್ತಾಯನು 7:21ಕರ್ತನೇ, ಕರ್ತನೇ ಎಂದು ನನಗೆ ಹೇಳುವ ಪ್ರತಿಯೊಬ್ಬನು ಪರಲೋಕರಾಜ್ಯದಲ್ಲಿ ಪ್ರವೇಶಿಸು ವದಿಲ್ಲ; ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ಅದರಲ್ಲಿ ಪ್ರವೇಶಿ ಸುವನು.
Original words (Greek)
- At · G1722ἐν en
- same · G1565ἐκεῖνος ekeînos
- time · G5610ὥρα hṓra
- came · G4334προσέρχομαι prosérchomai
- disciples · G3101μαθητής mathētḗs
- Jesus · G2424Ἰησοῦς Iēsoûs
- saying · G3004λέγω légō
- Who · G5101τίς tís
- is · G2076ἐστί estí
- greatest · G3187μείζων meízōn
- in · G1722ἐν en
- kingdom · G932βασιλεία basileía
- heaven · G3772οὐρανός ouranós