Matthew · chapter 18 · verse 12
Matthew 18:12 in Kannada
ನೀವು ಹೇಗೆ ಯೋಚಿಸುತ್ತೀರಿ? ಒಬ್ಬ ಮನುಷ್ಯ ನಿಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದು ತಪ್ಪಿಸಿಕೊಂಡು ಹೋದರೆ ಅವನು ತೊಂಭತ್ತೊಂಭತ್ತನ್ನು ಬಿಟ್ಟು ಬೆಟ್ಟಗಳಿಗೆ ಹೊರಟುಹೋಗಿ ತಪ್ಪಿಸಿಕೊಂಡ ದ್ದನ್ನು ಹುಡುಕುವದಿಲ್ಲವೇ?
Neevu hege yochisutteeri? Obba manushya nige nooru kurigaliralaagi avugalalli ondu tappisikondu hodare avanu tombhattombhattannu bittu bettagalige horatuhogi tappisikonda ddannu hudukuvadillave?
Matthew 18:12 in English
- King James Version (KJV)
- How think ye? if a man have an hundred sheep, and one of them be gone astray, doth he not leave the ninety and nine, and goeth into the mountains, and seeketh that which is gone astray?
- World English Bible (WEB)
- “What do you think? If a man has one hundred sheep, and one of them goes astray, doesn’t he leave the ninety-nine, go to the mountains, and seek that which has gone astray?
- American Standard Version (ASV)
- How think ye? if any man have a hundred sheep, and one of them be gone astray, doth he not leave the ninety and nine, and go unto the mountains, and seek that which goeth astray?
- Bible in Basic English (BBE)
- What would you say now? if a man has a hundred sheep, and one of them has gone wandering away, will he not let the ninety-nine be, and go to the mountains in search of the wandering one?
- Darby Translation (DBY)
- What think ye? If a certain man should have a hundred sheep, and one of them be gone astray, does he not, leaving the ninety and nine on the mountains, go and seek the one that has gone astray?
- Webster's Bible (WBS)
- How think ye? if a man hath a hundred sheep, and one of them is gone astray, doth he not leave the ninety and nine, and go to the mountains, and seek that which is gone astray?
- Young's Literal Translation (YLT)
- 'What think ye? if a man may have an hundred sheep, and there may go astray one of them, doth he not — having left the ninety-nine, having gone on the mountains — seek that which is gone astray?
Read in context
- 10ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ತಾತ್ಸಾರ ಮಾಡದಂತೆ ನೋಡಿಕೊಳ್ಳಿರಿ; ಯಾಕಂದರೆ ನಾನು ನಿಮಗೆ ಹೇಳುವದೇನಂದರೆ--ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಾರೆ.
- 11ಯಾಕಂದರೆ ಮನುಷ್ಯಕುಮಾರನು ಕಳೆದುಹೋದ ದ್ದನ್ನು ರಕ್ಷಿಸುವದಕ್ಕಾಗಿ ಬಂದನು.
- 12ನೀವು ಹೇಗೆ ಯೋಚಿಸುತ್ತೀರಿ? ಒಬ್ಬ ಮನುಷ್ಯ ನಿಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದು ತಪ್ಪಿಸಿಕೊಂಡು ಹೋದರೆ ಅವನು ತೊಂಭತ್ತೊಂಭತ್ತನ್ನು ಬಿಟ್ಟು ಬೆಟ್ಟಗಳಿಗೆ ಹೊರಟುಹೋಗಿ ತಪ್ಪಿಸಿಕೊಂಡ ದ್ದನ್ನು ಹುಡುಕುವದಿಲ್ಲವೇ?
- 13ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವನು ಅದನ್ನು ಕಂಡುಕೊಂಡರೆ ತಪ್ಪಿಸಿಕೊಳ್ಳದೆ ಇದ್ದ ತೊಂಭತ್ತೊಂಭತ್ತು ಕುರಿಗಳಿಗಿಂತ ಆದರ ವಿಷಯದಲ್ಲಿ ಹೆಚ್ಚು ಸಂತೋಷ ಪಡುತ್ತಾನೆ.
- 14ಅದರಂತೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ನಾಶವಾಗುವದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ.
Cross references
- Ezekiel 34:12 ಯೆಹೆಜ್ಕೇಲನು 34:12ಕುರುಬನು ಚದರಿದ್ದ ತನ್ನ ಕುರಿಗಳ ಮಧ್ಯದಲ್ಲಿ ಇರುವ ದಿನದಲ್ಲಿ ತನ್ನ ಮಂದೆಯನ್ನು ಹುಡುಕುವ ಪ್ರಕಾರ ನಾನು ನನ್ನ ಕುರಿಗಳನ್ನು ಹುಡುಕಿ ಕಾರ್ಮುಗಿಲಿನ ದಿನದಲ್ಲಿ ಚದರಿ ಹೋದ ಅವುಗಳನ್ನು ಎಲ್ಲಾ ಸ್ಥಳಗಳಿಂದ ಬಿಡಿಸುವೆನು.
- Luke 15:4–7 ಲೂಕನು 15:4–7ನಿಮ್ಮಲ್ಲಿ ಯಾವ ಮನುಷ್ಯನು ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದನ್ನು ಕಳೆದು ಕೊಂಡರೆ ಅವನು ತೊಂಭತ್ತೊಂಭತ್ತನ್ನು ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ವರೆಗೆ ಅದನ್ನು ಹುಡುಕಿಕೊಂಡು ಹೋಗದಿರುವನೇ? ಅವನು ಆ ಕುರಿಯನ್ನು ಕಂಡುಕೊಂಡ ಮೇಲೆ ಸಂತೋಷ ಪಡುತ್ತಾ ಅದನ್ನು ತನ್ನ ಹೆಗಲುಗಳ ಮೇಲೆ ಹೊತ್ತು ಕೊಳ್ಳುವನು. ಆಮೇಲೆ ಅವನು ಮನೆಗೆ ಬಂದು ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಾಗಿ ಕರೆದು ಅವರಿಗೆ--ನನ್ನ ಸಂಗಡ ಸಂತೋಷಪಡಿರಿ;ಯಾಕಂದರೆ ಕಳೆದುಹೋದ ನನ್ನ ಕುರಿಯನ್ನು ನಾನು ಕಂಡು ಕೊಂಡೆನು ಅನ್ನುವನು. ಆದರಂತೆಯೇ ಮಾನಸಾಂತ ರಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ನೀತಿವಂತರಿಗಿಂತ ಮಾನಸಾಂತರಪಡುವ ಒಬ್ಬಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Ezekiel 34:16 ಯೆಹೆಜ್ಕೇಲನು 34:16ಕಳೆದು ಹೋದದ್ದನ್ನು ನಾನೇ ಹುಡುಕುವೆನು; ಓಡಿಸಲ್ಪಟ್ಟಿದ್ದನ್ನು ನಾನೇ ಮತ್ತೆ ತರುವೆನು, ಮುರಿದದ್ದನ್ನು ನಾನೇ ಕಟ್ಟುವೆನು, ಬಲಹೀನವಾದದ್ದನ್ನು ನಾನೇ ಬಲಪಡಿಸುವೆನು. ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸು ವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ಮೇಯಿಸುವೆನು.
- Isaiah 53:6 ಯೆಶಾಯ 53:6ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು.
- Ezekiel 34:28 ಯೆಹೆಜ್ಕೇಲನು 34:28ಅವರು ಇನ್ನು ಮೇಲೆ ಅನ್ಯಜನಾಂಗಗಳಿಗೆ ಕೊಳ್ಳೆಯಾಗು ವದಿಲ್ಲ; ಭೂಮಿಯ ಮೃಗಗಳು ಅವರನ್ನು ತಿನ್ನುವದಿಲ್ಲ; ಯಾರೂ ಅವರನ್ನು ಹೆದರಿಸುವವರಿಲ್ಲದೆ ನಿರ್ಭಯ ವಾಗಿ ವಾಸಿಸುವರು.
- Ezekiel 34:6 ಯೆಹೆಜ್ಕೇಲನು 34:6ನನ್ನ ಕುರಿಗಳು ಎಲ್ಲಾ ಪರ್ವತಗಳ ಮೇಲೆಯೂ ಪ್ರತಿಯೊಂದು ಎತ್ತರವಾದ ಬೆಟ್ಟಗಳ ಮೇಲೆಯೂ ಅಲೆದಾಡುತ್ತಿವೆ; ಹೌದು, ನನ್ನ ಮಂದೆಯು ಭೂಮಂಡಲದಲ್ಲೆಲ್ಲಾ ಚದರಿ ಹೋಗಿದೆ; ಯಾವನೂ ಅವುಗಳಿಗಾಗಿ ವಿಚಾರಿಸಲಿಲ್ಲ ಅಥವಾ ಹುಡುಕಲಿಲ್ಲ.
- 1 Peter 2:25 1 ಪೇತ್ರನು 2:25ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
- Psalm 119:176 ಕೀರ್ತನೆಗಳು 119:176ತಪ್ಪಿಹೋದ ಕುರಿಯ ಹಾಗೆ ತೊಳಲ್ಲಿದ್ದೇನೆ; ನಿನ್ನ ಸೇವಕನನ್ನು ಹುಡುಕು; ನಿನ್ನ ಆಜ್ಞೆಗಳನ್ನು ಮರೆತುಬಿಡೆನು.
- Jeremiah 50:6 ಯೆರೆಮೀಯ 50:6ನನ್ನ ಜನರು ಕಳೆದುಹೋದ ಕುರಿಗಳಾಗಿದ್ದರು; ಅವರ ಕುರುಬರು ಅವರನ್ನು ತಪ್ಪಿ ಹೋಗುವಂತೆ ಮಾಡಿದರು; ಅವರನ್ನು ಬೆಟ್ಟಗಳ ಮೇಲೆ ತಿರುಗಿಸಿ ಅಡ್ಡಾಡಿಸಿದರು; ಅವರು ಬೆಟ್ಟದಿಂದ ಗುಡ್ಡಕ್ಕೆ ಹೋದರು; ಮಲಗುವ ಸ್ಥಳವನ್ನು ಮರೆತುಬಿಟ್ಟರು.
- John 10:11–21 ಯೋಹಾನನು 10:11–21ನಾನೇ ಒಳ್ಳೇ ಕುರುಬನು; ಒಳ್ಳೇ ಕುರುಬನು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ. ಆದರೆ ಕೂಲಿಯವನು ಕುರುಬನಲ್ಲವಾದದ ರಿಂದಲೂ ಕುರಿಗಳು ತನ್ನವುಗಳಲ್ಲವಾದದರಿಂದಲೂ ತೋಳ ಬರುವದನ್ನು ಕಂಡು ಕುರಿಗಳನ್ನು ಬಿಟ್ಟು ಓಡಿ ಹೋಗುತ್ತಾನೆ; ಆಗ ತೋಳವು ಕುರಿಗಳನ್ನು ಹಿಡಿದು ಕೊಂಡು ಅವುಗಳನ್ನು ಚದರಿಸುತ್ತದೆ. ಕೂಲಿಯವನು ಕೂಲಿಯವನೇ ಆಗಿರುವದರಿಂದ ಕುರಿಗಳಿಗೋಸ್ಕರ ಚಿಂತಿಸದೆ ಓಡಿ ಹೋಗುತ್ತಾನೆ. ನಾನೇ ಒಳ್ಳೇ ಕುರುಬನು; ನನ್ನ ಕುರಿಗಳನ್ನು ನಾನು ಬಲ್ಲೆನು. ನನ್ನ ಕುರಿಗಳು ನನ್ನನ್ನು ತಿಳಿದವೆ. ತಂದೆಯು ನನ್ನನ್ನು ತಿಳಿದಿರುವಂತೆ ನಾನು ತಂದೆಯನ್ನು ತಿಳಿದಿರುತ್ತೇನೆ; ಕುರಿಗಳಿಗೋಸ್ಕರ ನನ್ನ ಪ್ರಾಣವನ್ನು ಕೊಡುತ್ತೇನೆ. ಇದಲ್ಲದೆ ಈ ಹಟ್ಟಿಗೆ ಸೇರದ ಬೇರೆ ಕುರಿಗಳು ನನಗುಂಟು; ಅವುಗಳನ್ನು ಸಹ ನಾನು ತರಬೇಕು ಮತ್ತು ಅವು ನನ್ನ ಸ್ವರಕ್ಕೆ ಕಿವಿಗೊಡುವವು; ಆಗ ಒಂದೇ ಹಿಂಡು ಆಗುವದು ಮತ್ತು ಒಬ್ಬನೇ ಕುರುಬನು ಇರುವನು. ಯಾಕಂದರೆ ನಾನು ನನ್ನ ಪ್ರಾಣವನ್ನು ತಿರಿಗಿಪಡಕೊಳ್ಳುವಂತೆ ಅದನ್ನು ಕೊಡುತ್ತೇನೆ; ಆದದ ರಿಂದ ನನ್ನ ತಂದೆಯು ನನ್ನನ್ನು ಪ್ರೀತಿಸುತ್ತಾನೆ. ಯಾವ ಮನುಷ್ಯನಾದರೂ ಅದನ್ನು ನನ್ನಿಂದ ತೆಗೆಯುವದಿಲ್ಲ; ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ. ನಾನು ಅದನ್ನು ಕೊಡುವದಕ್ಕೆ ನನಗೆ ಅಧಿಕಾರವಿದೆ; ಅದನ್ನು ತಿರಿಗಿ ಪಡಕೊಳ್ಳುವದಕ್ಕೆ ನನಗೆ ಅಧಿಕಾರವಿದೆ. ಈ ಅಪ್ಪಣೆಯನ್ನು ನಾನು ನನ್ನ ತಂದೆ ಯಿಂದ ಹೊಂದಿದ್ದೇನೆ ಅಂದನು. ಈ ಮಾತುಗಳ ದೆಸೆಯಿಂದ ಯೆಹೂದ್ಯರ ಮಧ್ಯದಲ್ಲಿ ತಿರಿಗಿ ಭೇದಉಂಟಾಯಿತು. ಅವರಲ್ಲಿ ಅನೇಕರು--ಅವನಿಗೆ ದೆವ್ವ ಹಿಡಿದದೆ ಮತ್ತು ಹುಚ್ಚನಾಗಿ ದ್ದಾನೆ; ನೀವು ಯಾಕೆ ಅವನ ಮಾತನ್ನು ಕೇಳುತ್ತೀರಿ ಅಂದರು. ಬೇರೆಯವರು--ಇವು ದೆವ್ವ ಹಿಡಿದವನ ಮಾತುಗಳಲ್ಲ, ದೆವ್ವವು ಕುರುಡನ ಕಣ್ಣುಗಳನ್ನು ತೆರೆ ಯುವದಕ್ಕಾದೀತೇ ಅಂದರು.
- Matthew 12:11 ಮತ್ತಾಯನು 12:11ಅದಕ್ಕಾತನು ಅವರಿಗೆ-- ನಿಮ್ಮಲ್ಲಿ ಯಾವನಿಗಾದರೂ ಒಂದು ಕುರಿಯಿರಲಾಗಿ ಅದು ಸಬ್ಬತ್ ದಿನದಲ್ಲಿ ಕುಣಿಯೊಳಗೆ ಬಿದ್ದರೆ ಅವನು ಅದನ್ನು ಹಿಡಿದು ಮೇಲಕ್ಕೆ ಎತ್ತದೆ ಇರುವನೇ?
- Matthew 21:28 ಮತ್ತಾಯನು 21:28ನೀವು ನೆನಸುವದೇನು? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು; ಅವನು ಮೊದಲನೆಯವನ ಬಳಿಗೆ ಬಂದು--ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷೇತೋಟದಲ್ಲಿ ಕೆಲಸಮಾಡು ಎಂದು ಹೇಳಿದನು.