Matthew · chapter 18 · verse 14
Matthew 18:14 in Kannada
ಅದರಂತೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ನಾಶವಾಗುವದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ.
Adaranteye ee chikkavaralli obbanaadaroo naashavaaguvadu paralokadalliruva nimma tandeya chittavalla.
Matthew 18:14 in English
- King James Version (KJV)
- Even so it is not the will of your Father which is in heaven, that one of these little ones should perish.
- World English Bible (WEB)
- Even so it is not the will of your Father who is in heaven that one of these little ones should perish.
- American Standard Version (ASV)
- Even so it is not the will of your Father who is in heaven, that one of these little ones should perish.
- Bible in Basic English (BBE)
- Even so it is not the pleasure of your Father in heaven for one of these little ones to come to destruction.
- Darby Translation (DBY)
- So it is not the will of your Father who is in [the] heavens that one of these little ones should perish.
- Webster's Bible (WBS)
- Even so it is not the will of your Father who is in heaven, that one of these little ones should perish.
- Young's Literal Translation (YLT)
- so it is not will in presence of your Father who is in the heavens, that one of these little ones may perish.
Read in context
- 12ನೀವು ಹೇಗೆ ಯೋಚಿಸುತ್ತೀರಿ? ಒಬ್ಬ ಮನುಷ್ಯ ನಿಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದು ತಪ್ಪಿಸಿಕೊಂಡು ಹೋದರೆ ಅವನು ತೊಂಭತ್ತೊಂಭತ್ತನ್ನು ಬಿಟ್ಟು ಬೆಟ್ಟಗಳಿಗೆ ಹೊರಟುಹೋಗಿ ತಪ್ಪಿಸಿಕೊಂಡ ದ್ದನ್ನು ಹುಡುಕುವದಿಲ್ಲವೇ?
- 13ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವನು ಅದನ್ನು ಕಂಡುಕೊಂಡರೆ ತಪ್ಪಿಸಿಕೊಳ್ಳದೆ ಇದ್ದ ತೊಂಭತ್ತೊಂಭತ್ತು ಕುರಿಗಳಿಗಿಂತ ಆದರ ವಿಷಯದಲ್ಲಿ ಹೆಚ್ಚು ಸಂತೋಷ ಪಡುತ್ತಾನೆ.
- 14ಅದರಂತೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ನಾಶವಾಗುವದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ.
- 15ಇದಲ್ಲದೆ ನಿನ್ನ ಸಹೋದರನು ನಿನಗೆ ವಿರೋಧ ವಾಗಿ ತಪ್ಪು ಮಾಡಿದರೆ ನೀನೂ ಅವನೂ ಮಾತ್ರ ಇರುವಾಗ ಅವನ ತಪ್ಪನ್ನು ಅವನಿಗೆ ತಿಳಿಸು; ಅವನು ನಿನ್ನ ಮಾತನ್ನು ಕೇಳಿದರೆ ನೀನು ನಿನ್ನ ಸಹೋದರನನ್ನು ಸಂಪಾದಿಸಿಕೊಂಡಿರುವಿ.
- 16ಆದರೆ ಅವನು ನಿನ್ನ ಮಾತನ್ನು ಕೇಳದೆಹೋದರೆ ನಿನ್ನೊಂದಿಗೆ ಒಬ್ಬನನ್ನು ಅಥವಾ ಇಬ್ಬರನ್ನು ಕರಕೊಂಡು ಹೋಗು; ಹೀಗೆ ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಸ್ಥಾಪಿಸಲ್ಪಡುವದು.
Cross references
- John 17:12 ಯೋಹಾನನು 17:12ನಾನು ಅವರೊಂದಿಗೆ ಲೋಕದಲ್ಲಿದ್ದಾಗ ನಿನ್ನ ಹೆಸರಿನಲ್ಲಿ ಅವರನ್ನು ಕಾಪಾಡಿದೆನು; ನೀನು ನನಗೆ ಕೊಟ್ಟವರನ್ನು ನಾನು ಕಾಪಾಡಿದ್ದೇನೆ; ಬರಹವು ನೆರವೇರುವ ಹಾಗೆ ಆ ನಾಶನದ ಮಗನೇ ಹೊರತು ಅವರಲ್ಲಿ ಒಬ್ಬನೂ ನಾಶವಾಗಲಿಲ್ಲ.
- John 6:39–40 ಯೋಹಾನನು 6:39–40ನನ್ನನ್ನು ಕಳುಹಿಸಿದ ತಂದೆಯ ಚಿತ್ತವೇನಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಒಬ್ಬನನ್ನೂ ಕಳಕೊಳ್ಳದೆ ಕಡೇ ದಿನದಲ್ಲಿ ಅವನನ್ನು ತಿರಿಗಿ ಎಬ್ಬಿಸುವದೇ. ನನ್ನನ್ನು ಕಳುಹಿಸದಾತನ ಚಿತ್ತವೇನಂದರೆ, ಮಗನನ್ನು ನೋಡಿ ಆತನ ಮೇಲೆ ನಂಬಿಕೆ ಇಡುವ ಪ್ರತಿಯೊಬ್ಬನು ನಿತ್ಯ ಜೀವವನ್ನು ಹೊಂದುವದೇ; ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು ಎಂದು ಹೇಳಿದನು.
- 2 Peter 3:9 2 ಪೇತ್ರನು 3:9ಕರ್ತನು ತನ್ನ ವಾಗ್ದಾನದ ವಿಷಯವಾಗಿ ತಡಮಾಡುತ್ತಾನೆಂಬದಾಗಿ ಕೆಲವರು ಎಣಿಸುವ ಪ್ರಕಾರ ಆತನು ತಡಮಾಡುವಾತನಲ್ಲ. ಆದರೆ ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಮ್ಮ ಕಡೆಗೆ ದೀರ್ಘಶಾಂತಿ ಯುಳ್ಳವ
- Isaiah 40:11 ಯೆಶಾಯ 40:11ಆತನು ತನ್ನ ಮಂದೆಯನ್ನು ಕುರುಬನಂತೆ ಮೇಯಿ ಸುವನು. ಕುರಿಮರಿಗಳನ್ನು ಕೂಡಿಸಿ ಅವುಗಳನ್ನು ತನ್ನ ಎದೆಗಪ್ಪಿಕೊಳ್ಳುವನು ಎಳೇಮರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.
- John 10:27–30 ಯೋಹಾನನು 10:27–30ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ. ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು. ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತಲೂ ದೊಡ್ಡವನು; ನನ್ನ ತಂದೆಯ ಕೈಯೊಳ ಗಿಂದ ಅವುಗಳನ್ನು ಯಾವನೂ ಕಸಕೊಳ್ಳಲಾರನು. ನಾನು ಮತ್ತು ನನ್ನ ತಂದೆಯು ಒಂದಾಗಿದ್ದೇವೆ ಎಂದು ಉತ್ತರಕೊಟ್ಟನು.
- Zechariah 13:7 ಜೆಕರ್ಯ 13:7ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.
- Luke 12:32 ಲೂಕನು 12:32ಚಿಕ್ಕ ಹಿಂಡೇ, ಭಯಪಡಬೇಡ; ಯಾಕಂದರೆ ನಿಮಗೆ ರಾಜ್ಯವನ್ನು ಕೊಡುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.
- Matthew 5:16 ಮತ್ತಾಯನು 5:16ಅದರಂತೆಯೇ ಜನರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವ ಹಾಗೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ.
- John 21:15 ಯೋಹಾನನು 21:15ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ--ಯೋನನ ಮಗನಾದ ಸೀಮೋನನೇ, ನೀನು ಇವುಗಳಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತ ನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇ ನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ
- Matthew 6:9 ಮತ್ತಾಯನು 6:9ಆದದರಿಂದ ನೀವು ಈ ರೀತಿಯಲ್ಲಿ ಪ್ರಾರ್ಥನೆ ಮಾಡಿರಿ--ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ.
- 2 Timothy 2:10 2 ತಿಮೊಥೆಯನಿಗೆ 2:10ಆದ ಕಾರಣ (ದೇವರು) ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯಪ್ರಭಾವ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ತಾಳಿಕೊಳ್ಳುತ್ತೇನೆ.
- Matthew 6:32 ಮತ್ತಾಯನು 6:32(ಯಾಕಂದರೆ ಇವೆಲ್ಲವುಗಳಿಗಾಗಿ ಅನ್ಯಜನರು ತವಕ ಪಡುತ್ತಾರೆ;) ಆದರೆ ಇವೆಲ್ಲವುಗಳು ನಿಮಗೆ ಅಗತ್ಯವಾಗಿವೆ ಎಂದು ಪರಲೋಕದ ನಿಮ್ಮ ತಂದೆಗೆ ತಿಳಿದದೆ.