Matthew · chapter 19 · verse 17
Matthew 19:17 in Kannada
ಆಗ ಆತನು ಅವನಿಗೆ--ನನ್ನನ್ನು ಒಳ್ಳೆಯವನೆಂದು ನೀನು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವ ನಲ್ಲ; ಆದರೆ ನೀನು ಜೀವದಲ್ಲಿ ಸೇರಬೇಕೆಂದು ಅಪೇ ಕ್ಷಿಸಿದರೆ(ದೇವರ)ಆಜ್ಞೆಗಳನ್ನು ಕೈಕೊಂಡು ನಡೆದುಕೋ ಅಂದನು.
Aaga aatanu avanige--nannannu olleyavanendu neenu yaake kareyuttee? Devarobbane horatu mattaavanoo olleyava nalla; aadare neenu jeevadalli serabekendu ape kshisidare(devara)aajnyegalannu kaikondu nadeduko andanu.
Matthew 19:17 in English
- King James Version (KJV)
- And he said unto him, Why callest thou me good? [there is] none good but one, [that is], God: but if thou wilt enter into life, keep the commandments.
- World English Bible (WEB)
- He said to him, “Why do you call me good? No one is good but one, that is, God. But if you want to enter into life, keep the commandments.”
- American Standard Version (ASV)
- And he said unto him, Why askest thou me concerning that which is good? One there is who is good: but if thou wouldest enter into life, keep the commandments.
- Bible in Basic English (BBE)
- And he said to him, Why are you questioning me about what is good? One there is who is good: but if you have a desire to go into life, keep the rules of the law.
- Darby Translation (DBY)
- And he said to him, What askest thou me concerning goodness? one is good. But if thou wouldest enter into life, keep the commandments.
- Webster's Bible (WBS)
- And he said to him, Why callest thou me good? [there is] none good but one, [that is] , God: but if thou wilt enter into life, keep the commandments.
- Young's Literal Translation (YLT)
- And he said to him, 'Why me dost thou call good? no one [is] good except One — God; but if thou dost will to enter into the life, keep the commands.'
Read in context
- 15ಮತ್ತು ಆತನು ಅವುಗಳ ಮೇಲೆ ತನ್ನ ಕೈಗಳನ್ನಿಟ್ಟು ಅಲ್ಲಿಂದ ಹೊರಟು ಹೋದನು.
- 16ಆಗ ಇಗೋ, ಒಬ್ಬನು ಬಂದು ಆತನಿಗೆ-- ಒಳ್ಳೇ ಬೋಧಕನೇ, ನಾನು ನಿತ್ಯಜೀವವನ್ನು ಹೊಂದುವದಕ್ಕೆ ಯಾವ ಒಳ್ಳೇ ಕಾರ್ಯವನ್ನು ಮಾಡ ಬೇಕು ಎಂದು ಕೇಳಿದನು.
- 17ಆಗ ಆತನು ಅವನಿಗೆ--ನನ್ನನ್ನು ಒಳ್ಳೆಯವನೆಂದು ನೀನು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವ ನಲ್ಲ; ಆದರೆ ನೀನು ಜೀವದಲ್ಲಿ ಸೇರಬೇಕೆಂದು ಅಪೇ ಕ್ಷಿಸಿದರೆ(ದೇವರ)ಆಜ್ಞೆಗಳನ್ನು ಕೈಕೊಂಡು ನಡೆದುಕೋ ಅಂದನು.
- 18ಅವನು ಆತನಿಗೆ--ಅವು ಯಾವವು ಎಂದು ಕೇಳಿದನು. ಅದಕ್ಕೆ ಯೇಸು--ನೀನು ನರಹತ್ಯ ಮಾಡಬಾರದು, ನೀನು ವ್ಯಭಿಚಾರ ಮಾಡಬಾರದು, ನೀನು ಕದಿಯ ಬಾರದು, ನೀನು ಸುಳ್ಳುಸಾಕ್ಷಿ ಹೇಳ ಬಾರದು.
- 19ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸಬೇಕು; ಮತ್ತು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಮಾಡ ಬೇಕು ಎಂದು ಹೇಳಿದನು.
Cross references
- Leviticus 18:5 ಯಾಜಕಕಾಂಡ 18:5ಆದದರಿಂದ ನೀವು ನನ್ನ ನಿಯಮಗಳನ್ನೂ ನಿರ್ಣಯಗಳನ್ನೂ ಕೈಕೊಳ್ಳಿರಿ. ಒಬ್ಬನು ಅವುಗಳನ್ನು ಮಾಡಿದರೆ ಅವನು ಅವುಗಳಲ್ಲಿ ಜೀವಿಸುವನು; ನಾನೇ ಕರ್ತನು.
- Luke 10:26–28 ಲೂಕನು 10:26–28ಆತನು ಅವನಿಗೆ-- ನ್ಯಾಯಪ್ರಮಾಣದಲ್ಲಿ ಏನು ಬರೆದದೆ? ನೀನು ಹೇಗೆ ಓದುತ್ತೀ ಎಂದು ಕೇಳಿದನು. ಅದಕ್ಕೆ ಅವನು ಪ್ರತ್ಯುತ್ತರವಾಗಿ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯ ದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣಮನಸ್ಸಿನಿಂ ದಲೂ ಪ್ರೀತಿಸಬೇಕು; ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಅಂದನು. ಆಗ ಆತನು ಅವನಿಗೆ--ನೀನು ಸರಿಯಾಗಿ ಉತ್ತರ ಕೊಟ್ಟಿದ್ದೀ; ಅದರಂತೆಯೇ ಮಾಡು, ಆಗ ನೀನು ಬದುಕುವಿ ಅಂದನು.
- Galatians 3:11–13 ಗಲಾತ್ಯದವರಿಗೆ 3:11–13ಇದಲ್ಲದೆ ನ್ಯಾಯಪ್ರಮಾಣದಿಂದ ಯಾವನೂ ದೇವರ ಸನ್ನಿಧಿಯಲ್ಲಿ ನೀತಿವಂತ ನಾಗುವದಿಲ್ಲವೆಂಬದು ಸ್ಪಷ್ಟವಾಗಿದೆ. ಯಾಕಂದರೆ-- ನೀತಿವಂತನು ನಂಬಿಕೆಯಿಂದಲೇ ಬದುಕುವನು ಎಂಬದು. ನ್ಯಾಯಪ್ರಮಾಣಕ್ಕೆ ನಂಬಿಕೆಯು ಆಧಾರ ವಲ್ಲ. ಆದರೆ--ಅದರ ಕ್ರಿಯೆಗಳನ್ನು ಮಾಡುವವನೇ ಅವುಗಳ ಮೂಲಕ ಬದುಕುವನು ಎಂಬದೇ. ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.
- Romans 10:5 ರೋಮಾಪುರದವರಿಗೆ 10:5ಇದಲ್ಲದೆ-- ನ್ಯಾಯಪ್ರಮಾಣವು ಹೇಳುವವುಗಳನ್ನು ಮಾಡುವವನು ಅವುಗಳಿಂದಲೇ ಜೀವಿಸುವನು ಎಂದು ಮೋಶೆಯು ಅದರ ನೀತಿಯ ವಿಷಯವಾಗಿ ವಿವರಿಸುತ್ತಾನೆ.
- 1 Samuel 2:2 1 ಸಮುವೇಲನು 2:2ಕರ್ತನ ಹಾಗೆ ಪರಿಶುದ್ಧನಾದವನಿಲ್ಲ; ನಿಶ್ಚಯವಾಗಿ ನಿನ್ನ ಹೊರತು ಮತ್ತೊಬ್ಬನಿಲ್ಲ. ನಮ್ಮ ದೇವರ ಹಾಗೆ ಯಾವ ಬಂಡೆಯೂ ಇಲ್ಲ.
- 1 John 4:16 1 ಯೋಹಾನನು 4:16ನಮ್ಮ ಕಡೆಗಿರುವ ದೇವರ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ, ಅದನ್ನು ನಂಬಿದ್ದೇವೆ. ದೇವರು ಪ್ರೀತಿಯಾಗಿದ್ದಾನೆ; ಪ್ರೀತಿಯಲ್ಲಿ ನೆಲೆ ಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ, ಮತ್ತು ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.
- Ezekiel 20:11–12 ಯೆಹೆಜ್ಕೇಲನು 20:11–12ಯಾವ ಸಂಗತಿಗಳನ್ನು ಮಾಡಿದರೆ ಮನುಷ್ಯನು ಬದುಕುವನೋ? ಆ ನನ್ನ ನಿಯಮಗಳನ್ನು ಅವರಿಗೆ ಕೊಟ್ಟು ನನ್ನ ನ್ಯಾಯಗಳನ್ನು ಅವರಿಗೆ ತಿಳಿಸಿದೆನು. ಇದಲ್ಲದೆ ಅವರನ್ನು ಪರಿಶುದ್ಧ ಮಾಡುವ ಕರ್ತನು ನಾನೇ ಎಂದು ಅವರು ತಿಳಿಯುವ ಹಾಗೆ ನನಗೂ ಅವರಿಗೂ ಗುರುತಾಗಿರುವದಕ್ಕೆ ನನ್ನ ಸಬ್ಬತ್ ದಿನಗಳನ್ನು ನಾನು ಅವರಿಗೆ ಕೊಟ್ಟೆನು.
- Ezekiel 20:21 ಯೆಹೆಜ್ಕೇಲನು 20:21ಆದಾಗ್ಯೂ ಮಕ್ಕಳು ನನಗೆ ವಿರೋಧವಾಗಿ ತಿರುಗಿ ಬಿದ್ದರು; ಯಾವವುಗಳನ್ನು ಮನುಷ್ಯನು ಮಾಡಿದರೆ ಬದುಕುವನೋ ಆ ನನ್ನ ನಿಯಮಗಳಲ್ಲಿ ನಡೆಯಲಿಲ್ಲ ನನ್ನ ನ್ಯಾಯಗಳನ್ನು ಕೈಕೊಂಡುಮಾಡಲಿಲ್ಲ; ನನ್ನ ಸಬ್ಬತ್ತುಗಳನ್ನು ಅಪವಿತ್ರ ಪಡಿಸಿದಾಗ ಅವರ ಮೇಲೆ ನನ್ನ ರೋಷವನ್ನು ಸುರಿದುಬಿಡುವೆನೆಂದೂ ನನ್ನ ಕೋಪ ವನ್ನು ಅರಣ್ಯದಲ್ಲಿ ಅವರ ಮೇಲೆ ತೀರಿಸಿಬಿಡುವೆ ನೆಂದೂ ಹೇಳಿದೆನು.
- Nehemiah 9:29 ನೆಹೆಮೀಯ 9:29ನೀನು ಅವರನ್ನು ನಿನ್ನ ನ್ಯಾಯಪ್ರಮಾಣಕ್ಕೆ ತಿರಿಗಿ ಬರುವ ಹಾಗೆ ಅವರಿಗೆ ವಿರೋಧವಾಗಿ ಸಾಕ್ಷಿ ಹೇಳಿದಿ. ಆದರೆ ಅವರು ಗರ್ವಪಟ್ಟು ನಿನ್ನ ಆಜ್ಞೆಗಳನ್ನು ಕೇಳದೆ ಮನುಷ್ಯರು ಯಾವವುಗಳನ್ನು ಕೈಕೊಳ್ಳುವದರಿಂದ ಬದುಕುವರೋ ಆ ನಿನ್ನ ನ್ಯಾಯಗಳಿಗೆ ವಿರೋಧವಾಗಿ ಪಾಪಮಾಡಿಹೆಗಲುಕೊಡದೆ ಕುತ್ತಿಗೆಯನ್ನು ಕಠಿಣಪಡಿಸಿಕೊಂಡು ಕೇಳದೆಹೋದರು.
- 1 John 4:8–10 1 ಯೋಹಾನನು 4:8–10ಪ್ರೀತಿಯಿಲ್ಲದ ವನು ದೇವರನ್ನು ಬಲ್ಲವನಲ್ಲ; ಯಾಕಂದರೆ ದೇವರು ಪ್ರೀತಿಯಾಗಿದ್ದಾನೆ. ನಾವು ಆತನ ಮೂಲಕ ಜೀವಿಸು ವದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮ ಕಡೆಗೆ ಪ್ರತ್ಯಕ್ಷವಾಗಿದೆ. ನಾವು ದೇವರನ್ನು ಪ್ರೀತಿಸಿ ದ್ದರಲ್ಲಿಯಲ್ಲ, ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತವಾಗಿ ತನ್ನ ಮಗನನ್ನು ಕಳುಹಿಸಿ ಕೊಟ್ಟದ್ದರಲ್ಲಿಯೇ ಆತನ ಪ್ರೀತಿಯು ಇರುತ್ತದೆ.
- James 1:17 ಯಾಕೋಬನು 1:17ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ.
- Psalm 145:7–9 ಕೀರ್ತನೆಗಳು 145:7–9ನಿನ್ನ ಬಹು ಒಳ್ಳೇತನದ ಜ್ಞಾಪಕವನ್ನು ಅವರು ನುಡಿಯುವರು; ನಿನ್ನ ನೀತಿಯ ನಿಮಿತ್ತ ಉತ್ಸಾಹಧ್ವನಿ ಮಾಡುವರು. ಕರ್ತನು ಕೃಪಾಳುವೂ ಅಂತಃಕರಣವೂ ದೀರ್ಘಶಾಂತಿಯೂ ಮಹಾಕರುಣೆಯುಳ್ಳವನೂ ಆಗಿದ್ದಾನೆ. ಕರ್ತನು ಸರ್ವರಿಗೂ ಒಳ್ಳೆಯವನು; ಆತನ ಅಂತಃಕರಣವು ಆತನ ಎಲ್ಲಾ ಕೆಲಸಗಳ ಮೇಲೆ ಅದೆ.