Matthew · chapter 19 · verse 23
Matthew 19:23 in Kannada
ತರುವಾಯ ಯೇಸು ತನ್ನ ಶಿಷ್ಯರಿಗೆ-- ಐಶ್ವರ್ಯ ವಂತನು ಪರಲೋಕ ರಾಜ್ಯದಲ್ಲಿ ಸೇರುವದು ಕಷ್ಟ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
Taruvaaya yesu tanna shishyarige-- aishvarya vantanu paraloka raajyadalli seruvadu kashta endu naanu nimage nijavaagi heluttene.
Matthew 19:23 in English
- King James Version (KJV)
- Then said Jesus unto his disciples, Verily I say unto you, That a rich man shall hardly enter into the kingdom of heaven.
- World English Bible (WEB)
- Jesus said to his disciples, “Most certainly I say to you, a rich man will enter into the Kingdom of Heaven with difficulty.
- American Standard Version (ASV)
- And Jesus said unto his disciples, Verily I say unto you, It is hard for a rich man to enter into the kingdom of heaven.
- Bible in Basic English (BBE)
- And Jesus said to his disciples, Truly I say to you, It is hard for a man with much money to go into the kingdom of heaven.
- Darby Translation (DBY)
- And Jesus said to his disciples, Verily I say unto you, A rich man shall with difficulty enter into the kingdom of the heavens;
- Webster's Bible (WBS)
- Then said Jesus to his disciples, Verily I say to you, that a rich man shall with difficulty enter into the kingdom of heaven.
- Young's Literal Translation (YLT)
- and Jesus said to his disciples, 'Verily I say to you, that hardly shall a rich man enter into the reign of the heavens;
Read in context
- 21ಯೇಸು ಅವನಿಗೆ--ನೀನು ಸಂಪೂರ್ಣನಾಗಲು ಅಪೇಕ್ಷಿಸಿದರೆ ಹೋಗಿ ನಿನಗೆ ಇದ್ದದ್ದನ್ನು ಮಾರಿ ಬಡವರಿಗೆ ಕೊಡು; ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವದು; ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.
- 22ಆದರೆ ಆ ಯೌವನಸ್ಥನು ಆತನು ಹೇಳಿದ್ದನ್ನು ಕೇಳಿ ದುಃಖ ದಿಂದ ಹೊರಟುಹೋದನು. ಯಾಕಂದರೆ ಅವನಿಗೆ ಬಹಳ ಆಸ್ತಿ ಇತ್ತು.
- 23ತರುವಾಯ ಯೇಸು ತನ್ನ ಶಿಷ್ಯರಿಗೆ-- ಐಶ್ವರ್ಯ ವಂತನು ಪರಲೋಕ ರಾಜ್ಯದಲ್ಲಿ ಸೇರುವದು ಕಷ್ಟ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- 24ತಿರಿಗಿ ನಾನು ನಿಮಗೆ ಹೇಳುವದೇನಂದರೆ-- ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಸೂಜಿಯ ಕಣ್ಣಿನೊಳಗೆ ಒಂಟೆಯು ನುಗ್ಗುವದು ಸುಲಭ ಅಂದನು.
- 25ಇದನ್ನು ಕೇಳಿದಾಗ ಆತನ ಶಿಷ್ಯರು ಅತ್ಯಂತ ವಿಸ್ಮಯಗೊಂಡು-- ಹಾಗಾದರೆ ರಕ್ಷಿಸಲ್ಪಡುವವರು ಯಾರು ಎಂದು ಕೇಳಿದರು.
Cross references
- 1 Timothy 6:9–10 1 ತಿಮೊಥೆಯನಿಗೆ 6:9–10ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ. ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ನಂಬಿಕೆಯಿಂದ ತಪ್ಪಿಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಾವೇ ತಿವಿಸಿ ಕೊಳ್ಳುತ್ತಾರೆ.
- Matthew 13:22 ಮತ್ತಾಯನು 13:22ಮುಳ್ಳುಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಸಹ ಇವನೇ; ಇವನು ವಾಕ್ಯವನ್ನು ಕೇಳುತ್ತಾನೆ; ಆದರೆ ಈ ಪ್ರಪಂಚದ ಚಿಂತೆಯೂ ಐಶ್ವರ್ಯದ ಮೋಸವೂ ವಾಕ್ಯವನ್ನು ಅಡಗಿಸುವ ದರಿಂದ ಅವನು ಫಲ ಕೊಡಲಾರನು.
- James 5:1–4 ಯಾಕೋಬನು 5:1–4ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ ನಿಮ್ಮ ಐಶ್ವರ್ಯವು ನಾಶವಾಗಿದೆ, ನಿಮ್ಮ ಬಟ್ಟೆಗಳಿಗೆ ನುಸಿ ಹಿಡಿದಿದೆ. ನಿಮ್ಮ ಚಿನ್ನ ಬೆಳ್ಳಿಗಳು ತುಕ್ಕು ಹಿಡಿದವೆ; ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ತಿಂದು ಬಿಡುವದು. ಕಡೇ ದಿನಗಳಿಗಾಗಿ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿ ದ್ದೀರಿ. ಇಗೋ, ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿ ದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ; ಕೊಯಿದವರ ಕೂಗು ಸೈನ್ಯಗಳ ಕರ್ತನ ಕಿವಿಗಳಲ್ಲಿ ಬಿದ್ದಿದೆ.
- Mark 10:23 ಮಾರ್ಕನು 10:23ಆಗ ಯೇಸು ಸುತ್ತಲೂ ನೋಡಿ ತನ್ನ ಶಿಷರಿಗೆ --ಐಶ್ವರ್ಯವುಳ್ಳವರು ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ ಅಂದನು.
- Luke 18:24 ಲೂಕನು 18:24ಅವನು ಬಹಳ ವ್ಯಥೆಗೊಂಡದ್ದನ್ನು ಯೇಸು ನೋಡಿ--ಐಶ್ವರ್ಯ ವಂತರು ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ.
- 1 Corinthians 1:26 1 ಕೊರಿಂಥದವರಿಗೆ 1:26ಸಹೋದರರೇ, ದೇವರು ನಿಮ್ಮನ್ನು ಕರೆದಾಗ ಎಂಥವರನ್ನು ಕರೆದನೆಂದು ಆಲೋಚಿಸಿರಿ; ನಿಮ್ಮೊಳಗೆ ಲೌಕಿಕದೃಷ್ಟಿಯಲ್ಲಿ ಜ್ಞಾನಿಗಳೂ ಅನೇಕರಿಲ್ಲ, ಬಲಿಷ್ಠರೂ ಅನೇಕರಿಲ್ಲ, ಕುಲೀನರೂ ಅನೇಕರಿಲ್ಲ.
- Matthew 18:3 ಮತ್ತಾಯನು 18:3ನೀವು ತಿರುಗಿ ಕೊಂಡು ಚಿಕ್ಕ ಮಕ್ಕಳಂತೆ ಆಗದೆಹೋದರೆ ಪರಲೋಕ ರಾಜ್ಯದೊಳಗೆ ಪ್ರವೇಶಿಸುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- Proverbs 30:8–9 ಜ್ಞಾನೋಕ್ತಿಗಳು 30:8–9ವ್ಯರ್ಥತ್ವವನ್ನೂ ಸುಳ್ಳುಗಳನ್ನೂ ನನ್ನಿಂದ ದೂರವಾಗಿ ತೆಗೆದುಹಾಕು. ಬಡತನವಾಗಲಿ ಐಶ್ವರ್ಯವಾಗಲಿ ನನಗೆ ಕೊಡಬೇಡ; ನನಗೆ ತಕ್ಕಷ್ಟು ಆಹಾರವನ್ನು ಭೋಜನ ಮಾಡಿಸು; ಇಲ್ಲವಾದರೆ ನಾನು ಸಂತೃಪ್ತನಾಗಿ ನಿನ್ನನ್ನು ನಿರಾಕರಿಸಿ--ಕರ್ತನು ಯಾರು ಎಂದು ಹೇಳಿಯೇನು? ಇಲ್ಲವೆ ನಾನು ಬಡವನಾಗಿ ಕದ್ದುಕೊಂಡು ದೇವರ ನಾಮವನ್ನು ಅಯೋಗ್ಯವಾಗಿ ಎತ್ತೇನು.
- John 3:3 ಯೋಹಾನನು 3:3ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ತಿರಿಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ನೋಡಲಾರನು ಅಂದನು.
- Proverbs 11:28 ಜ್ಞಾನೋಕ್ತಿಗಳು 11:28ತನ್ನ ಐಶ್ವರ್ಯವನ್ನು ನಂಬಿದವನು ಬಿದ್ದುಹೋಗುವನು; ನೀತಿವಂತರು ಕೊಂಬೆಯ ಹಾಗೆ ಚಿಗುರುವರು.
- Acts 14:22 ಅಪೊಸ್ತಲರ ಕೃತ್ಯಗಳು 14:22ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.
- Matthew 5:20 ಮತ್ತಾಯನು 5:20ನಾನು ನಿಮಗೆ ಹೇಳುವದೇನಂದರೆ-- ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ನಿಮ್ಮ ನೀತಿಯು ಹೆಚ್ಚಿನದಾಗಿರದ ಹೊರತು ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವದಕ್ಕಾಗುವದೇ ಇಲ್ಲ.