Matthew · chapter 2 · verse 1
Matthew 2:1 in Kannada
ಅರಸನಾದ ಹೆರೋದನ ದಿನಗಳಲ್ಲಿ ಯೂದಾಯದ ಬೇತ್ಲೆಹೇಮಿನಲ್ಲಿ ಯೇಸು ಹುಟ್ಟಿದಾಗ ಇಗೋ, ಮೂಡಲದಿಂದ ಜ್ಞಾನಿಗಳು ಯೆರೂಸಲೇಮಿಗೆ ಬಂದು --
Arasanaada herodana dinagalalli yoodaayada betleheminalli yesu huttidaaga igo, moodaladinda jnyaanigalu yeroosalemige bandu --
Matthew 2:1 in English
- King James Version (KJV)
- Now when Jesus was born in Bethlehem of Judaea in the days of Herod the king, behold, there came wise men from the east to Jerusalem,
- World English Bible (WEB)
- Now when Jesus was born in Bethlehem of Judea in the days of King Herod, behold, wise men from the east came to Jerusalem, saying,
- American Standard Version (ASV)
- Now when Jesus was born in Bethlehem of Judæa in the days of Herod the king, behold, Wise-men from the east came to Jerusalem, saying,
- Bible in Basic English (BBE)
- Now when the birth of Jesus took place in Beth-lehem of Judaea, in the days of Herod the king, there came wise men from the east to Jerusalem,
- Darby Translation (DBY)
- Now Jesus having been born in Bethlehem of Judaea, in the days of Herod the king, behold magi from the east arrived at Jerusalem, saying,
- Webster's Bible (WBS)
- Now, after Jesus was born in Bethlehem of Judea in the days of Herod the king, behold, there came wise men from the east to Jerusalem,
- Young's Literal Translation (YLT)
- And Jesus having been born in Beth-Lehem of Judea, in the days of Herod the king, lo, mages from the east came to Jerusalem,
Read in context
- 1ಅರಸನಾದ ಹೆರೋದನ ದಿನಗಳಲ್ಲಿ ಯೂದಾಯದ ಬೇತ್ಲೆಹೇಮಿನಲ್ಲಿ ಯೇಸು ಹುಟ್ಟಿದಾಗ ಇಗೋ, ಮೂಡಲದಿಂದ ಜ್ಞಾನಿಗಳು ಯೆರೂಸಲೇಮಿಗೆ ಬಂದು --
- 2ಯೆಹೂದ್ಯರ ಅರಸ ನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಯಾಕೆಂದರೆ ನಾವು ಮೂಡಲದಲ್ಲಿ ಆತನ ನಕ್ಷತ್ರವನ್ನು ನೋಡಿ ಆತನನ್ನು ಆರಾಧಿಸುವದಕ್ಕೆ ಬಂದಿದ್ದೇವೆ ಅಂದರು.
- 3ಅರಸನಾದ ಹೆರೋದನು ಇವುಗಳನ್ನು ಕೇಳಿ ಅವನು ಯೆರೂಸ ಲೇಮಿನವರೆಲ್ಲರೊಂದಿಗೆ ಕಳವಳಪಟ್ಟನು.
Cross references
- Micah 5:2 ಮೀಕ 5:2ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಸಾವಿರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳ ಗಿಂದ ನನಗಾಗಿ ಹೊರಡುವನು; ಆತನ ಹೊರಡೋಣ ಗಳು ಪೂರ್ವದಿಂದಲೂ ಅನಾದಿ ದಿವಸಗಳಿಂದಲೂ ಅವೆ.
- John 7:42 ಯೋಹಾನನು 7:42ಆದರೆ ಕ್ರಿಸ್ತನು ದಾವೀದನ ಸಂತಾನದಿಂದಲೂ ದಾವೀದನಿದ್ದ ಬೇತೆಹೇಮೆಂಬ ಊರಿನಿಂದಲೂ ಬರುವನೆಂದು ಬರಹವು ಹೇಳುತ್ತದಲ್ಲವೇ? ಅಂದರು.
- Luke 2:4–7 ಲೂಕನು 2:4–7(ಯೋಸೇಫನು ದಾವೀದನ ಮನೆತನ ದವನೂ ವಂಶದವನೂ ಆಗಿದ್ದದರಿಂದ) ಅವನು ಸಹ ಗಲಿಲಾಯದ ನಜರೇತೆಂಬ ಪಟ್ಟಣದಿಂದ ಯೂದಾ ಯದಲ್ಲಿ ಬೇತ್ಲೆಹೇಮ್ ಎಂದು ಕರೆಯಲ್ಪಟ್ಟ ದಾವೀದನ ಪಟ್ಟಣಕ್ಕೆ ತನಗೆ ನಿಶ್ಚಯಮಾಡಲ್ಪಟ್ಟಿದ್ದ ಮತ್ತು ಪೂರ್ಣ ಗರ್ಭಿಣಿಯಾಗಿದ್ದ ಮರಿಯಳೊಂದಿಗೆ ಖಾನೇಷುಮಾರಿ ಬರೆಸಿಕೊಳ್ಳುವದಕ್ಕಾಗಿ ಹೋದನು. ಹೀಗೆ ಅವರು ಅಲ್ಲಿ ಇದ್ದಾಗ ಆಕೆಗೆ ಹೆರಿಗೆಯ ದಿವಸಗಳು ಪೂರ್ಣವಾದವು. ಆಕೆಯು ತನ್ನ ಚೊಚ್ಚಲು ಮಗನನ್ನು ಹೆತ್ತು ಬಟ್ಟೆಗಳಿಂದ ಸುತ್ತಿ ಛತ್ರದಲ್ಲಿ ಅವರಿಗೆ ಸ್ಥಳವಿಲ್ಲವಾದ್ದರಿಂದ ಆತನನ್ನು ಗೋದ ಲಿಯಲ್ಲಿ ಮಲಗಿಸಿದಳು.
- Luke 2:11 ಲೂಕನು 2:11ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕನು ಹುಟ್ಟಿದ್ದಾನೆ; ಆತನು ಕರ್ತನಾಗಿರುವ ಕ್ರಿಸ್ತನೇ.
- Psalm 72:9–12 ಕೀರ್ತನೆಗಳು 72:9–12ಆತನ ಮುಂದೆ ಅರಣ್ಯ ನಿವಾಸಿಗಳು ಎರಗುವರು; ಆತನ ಶತ್ರುಗಳು ಧೂಳನ್ನು ನೆಕ್ಕುವರು. ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ತರುವರು; ಶೆಬಾ ಮತ್ತು ಸೆಬಾದ ಅರಸರು ದಾನಗಳನ್ನು ಅರ್ಪಿಸುವರು. ಹೌದು, ಎಲ್ಲಾ ಅರಸರು ಆತನ ಮುಂದೆ ಅಡ್ಡ ಬೀಳುವರು; ಎಲ್ಲಾ ಜನಾಂಗಗಳು ಆತನನ್ನು ಸೇವಿಸುವವು. ಆತನಿಗೆ ಮೊರೆ ಇಡುವ ಬಡವರನ್ನೂ ಸಹಾಯ ಕನಿಲ್ಲದ ದೀನನನ್ನೂ ಬಿಡಿಸುವನು.
- Isaiah 11:10 ಯೆಶಾಯ 11:10ಆ ದಿನದಲ್ಲಿ ಹುಡುಕುವ ಅನ್ಯಜನರಿಗೆ ಇಷ ಯನ ಬೇರು ಒಂದು ಗುರುತಾಗಿ ನಿಲ್ಲುವದು; ಅವನ ವಿಶ್ರಾಂತಿ ವೈಭವವುಳ್ಳದ್ದಾಗಿರುವದು.
- Genesis 49:10 ಆದಿಕಾಂಡ 49:10ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
- Isaiah 60:1–22 ಯೆಶಾಯ 60:1–22ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು. ಇಗೋ, ಕತ್ತಲೆ ಭೂಮಿಯನ್ನೂ ಗಾಢಾಂಧಕಾರವು ಜನಗಳನ್ನೂ ಮುಚ್ಚುವದು; ಆದರೆ ನಿನ್ನ ಮೇಲೆ ಕರ್ತನು ಉದಯಿ ಸುವನು; ಆತನ ಮಹಿಮೆಯು ನಿನ್ನ ಮೇಲೆ ಕಾಣ ಬರುವದು. ಅನ್ಯಜನಾಂಗಗಳು ನಿನ್ನ ಪ್ರಕಾಶಕ್ಕೂ ಅರಸರು ನಿನ್ನ ಉದಯದ ಕಾಂತಿಗೂ ಬರುವರು. ಸುತ್ತಲೂ ನಿನ್ನ ಕಣ್ಣುಗಳನ್ನೆತ್ತಿ ನೋಡು, ಅವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಾರೆ; ನಿನ್ನ ಕುಮಾ ರರು ದೂರದಿಂದ ಬರುವರು ನಿನ್ನ ಕುಮಾರ್ತೆಯರು ನಿನ್ನ ಪಕ್ಕೆಯಲ್ಲಿ ಪೋಷಣೆ ಹೊಂದುವರು. ಆಗ ನೀನು ಅದನ್ನು ನೋಡುವಿ, ನೀವು ಗುಂಪು ಗುಂಪಾಗಿ ಹೋಗುವಿರಿ. ನಿನ್ನ ಹೃದಯವು ಹೆದರಿ ವಿಶಾಲವಾಗು ವದು; ಸಮುದ್ರದ (ವ್ಯಾಪಾರದ) ಸಮೃದ್ಧಿಯು ನಿನ್ನ ಕಡೆಗೆ ತಿರುಗಿಕೊಳ್ಳುವದು; ಅನ್ಯಜನಾಂಗದ ಸೇನಾ ಬಲವು ನಿನ್ನ ಬಳಿಗೆ ಬರುವದು. ಒಂಟೆಗಳ ಸಮೂಹವು ನಿನ್ನನ್ನು ಮುಚ್ಚುವದು; ಮಿದ್ಯಾನಿನ, ಏಫದ ವೇಗವುಳ್ಳ ಒಂಟೆಗಳು ಅವೆಲ್ಲಾ ಶೇಬದಿಂದಲೂ ಬರುವವು; ಅವು ಬಂಗಾರವನ್ನೂ ಧೂಪವನ್ನೂ ತರುವವು; ಅವು ಕರ್ತನ ಸ್ತೋತ್ರ ಗಳನ್ನು ಸಾರುವವು. ಕೇದಾರಿನ ಮಂದೆಗಳೆಲ್ಲಾ ನಿನ್ನ ಬಳಿಗೆ ಕೂಡಿಸಲ್ಪಡುವವು; ನೆಬಾಯೋತಿನ ಟಗರು ಗಳು ನಿನ್ನನ್ನು ಸೇವಿಸುವವು; ಅವು ನನ್ನ ಬಲಿಪೀಠದ ಮೇಲೆ ಅಂಗೀಕಾರವಾಗುವವು, ನಾನು ನನ್ನ ಮಹಿ ಮೆಯ ಆಲಯವನ್ನು ಘನಪಡಿಸುವೆನು. ಮೇಘದಂತೆಯೂ ತಮ್ಮ ಗೂಡುಗಳಿಗೆ ಹೋಗುವ ಪಾರಿವಾಳಗಳಂತೆಯೂ ಹಾರುವ ಇವರು ಯಾರು? ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ, ನನಗೋಸ್ಕರ ದೂರದಿಂದ ನಿನ್ನ ಕುಮಾರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಕರ್ತನ ಹೆಸರಿನ ಬಳಿಗೂ ನಿನ್ನನ್ನು ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವದರಲ್ಲಿ ಮುಂದಾಗುತ್ತಿವೆ. ಇದಲ್ಲದೆ ಅನ್ಯರ ಮಕ್ಕಳು ನಿನ್ನ ಗೋಡೆಗಳನ್ನು ಕಟ್ಟುವರು; ಅವರ ಅರಸರು ಸಹ ನಿನಗೆ ಸೇವೆ ಮಾಡುವರು; ನನ್ನ ರೌದ್ರದಲ್ಲಿ ನಿನ್ನನ್ನು ಹೊಡೆದೆನು; ಆದರೆ ನನ್ನ ಕಟಾಕ್ಷದಲ್ಲಿ ನಿನ್ನನ್ನು ಕರುಣಿಸುವೆನು. ಆದದರಿಂದ ನಿನ್ನ ಬಾಗಿಲುಗಳು ಯಾವಾಗಲೂ ತೆರೆದಿರುವವು; ಅನ್ಯಜನಾಂಗಗಳ ಆಸ್ತಿ ನಿನ್ನ ಬಳಿಗೆ ತರಲ್ಪಟ್ಟು, ಅವರ ಅರಸರು ಸಹ ನಡಿಸಲ್ಪಡುವದ ಕ್ಕೋಸ್ಕರವೇ ಹಗಲು ಇಲ್ಲವೆ ರಾತ್ರಿ ಅವು ಮುಚ್ಚಲ್ಪ ಡುವದಿಲ್ಲ. ನಿನ್ನನ್ನು ಸೇವಿಸದ ಜನಾಂಗವೂ ರಾಜ್ಯವೂ ನಾಶವಾಗುವದು; ಹೌದು, ಆ ಜನಾಂಗ ಗಳು ಸಂಪೂರ್ಣವಾಗಿ ಹಾಳಾಗುವವು. ಲೆಬನೋ ನಿನ ವೈಭವವು ಸುರಗಿ, ದಿಂಡುಗ, ಹೊನ್ನೆ ಮರಗಳು ಕೂಡ ನನ್ನ ಪರಿಶುದ್ಧ ಸ್ಥಳವನ್ನು ಶೃಂಗರಿಸುವದಕ್ಕೆ ನಿನ್ನ ಬಳಿಗೆ ಬರುವವು; ನನ್ನ ಪಾದಗಳ ಸ್ಥಳವನ್ನು ನಾನು ಗೌರವವುಳ್ಳದ್ದಾಗಿ ಮಾಡುವೆನು. ಆಗ ನಿನ್ನನ್ನು ಕುಗ್ಗಿಸಿದವರ ಮಕ್ಕಳು ಬೊಗ್ಗಿಕೊಂಡು ನಿನ್ನ ಬಳಿಗೆ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರು ನಿನ್ನ ಅಂಗಾಲುಗಳಿಗೆ ಸರಿಯಾಗಿ ಅಡ್ಡಬಿದ್ದು ನಿನ್ನನ್ನು ಕರ್ತನ ಪಟ್ಟಣವೆಂದು ಇಸ್ರಾಯೇಲಿನ ಪರಿಶುದ್ಧನ ಚೀಯೋ ನೆಂದೂ ಕರೆಯುವರು. ಹಾದುಹೋಗುವವರಿಲ್ಲದೆ ನೀನು ಬಿಡಲ್ಪಟ್ಟವಳೂ ಹಗೆ ಮಾಡಲ್ಪಟ್ಟವಳೂ ಆಗಿ ದ್ದಕ್ಕೆ ಬದಲಾಗಿ ನಿನ್ನನ್ನು ನಿತ್ಯವಾದ ಘನತೆಯೂ ಅನೇಕ ಸಂತತಿಗಳಲ್ಲಿ ಉಲ್ಲಾಸವಾಗಿಯೂ ಮಾಡು ತ್ತೇನೆ. ಅನ್ಯಜನಾಂಗಗಳ ಹಾಲನ್ನು ಹೀರಿಕೊಳ್ಳುವಿ; ಅರಸರ ಮೊಲೆಯನ್ನು ಸಹ ಹೀರಿಕೊಳ್ಳುವಿ; ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋ ಚಕನೂ ಯಾಕೋಬನ ಪರಾಕ್ರಮಿಯೂ ಎಂದು ತಿಳುಕೊಳ್ಳುವಿ. ಹಿತ್ತಾಳೆಗೆ ಬದಲಾಗಿ ಬಂಗಾರವನ್ನು ತರುವೆನು; ಕಬ್ಬಿಣಕ್ಕೆ ಬದಲಾಗಿ ಬೆಳ್ಳಿಯನ್ನೂ ಮರಕ್ಕೆ ಬದಲಾಗಿ ಹಿತ್ತಾಳೆಯನ್ನೂ ಕಲ್ಲುಗಳಿಗೆ ಬದಲಾಗಿ ಕಬ್ಬಿಣವನ್ನೂ ತರುವೆನು, ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿಯೂ ನೀತಿಯನ್ನು ನಿನಗೆ ಅಧಿಕಾರಿ ಯನ್ನಾಗಿಯೂ ಮಾಡುವೆನು. ಬಲಾತ್ಕಾರವೂ ನಿನ್ನ ದೇಶದೊಳಗೆ ಹಾಳಾದದ್ದೂ ನಾಶವೂ ನಿನ್ನ ಮೇರೆ ಗಳಲ್ಲಿ ಕೇಳಲ್ಪಡುವದಿಲ್ಲ; ನಿನ್ನ ಗೋಡೆಗಳಿಗೆ ರಕ್ಷಣೆ ಎಂದೂ ನಿನ್ನ ಬಾಗಿಲುಗಳಿಗೆ ಸ್ತೋತ್ರವೆಂದೂ ಹೆಸರಿ ಡುವಿ. ಇನ್ನು ಮೇಲೆ ಸೂರ್ಯನು ನಿನಗೆ ಹಗಲಿ ನಲ್ಲಿ ಬೆಳಕಾಗಿರುವದಿಲ್ಲ, ಚಂದ್ರನು ಪ್ರಕಾಶಕ್ಕಾಗಿ ನಿನಗೆ ಬೆಳಕು ಕೊಡುವದಿಲ್ಲ; ಆದರೆ ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು. ನಿನ್ನ ದೇವರು ನಿನ್ನ ಪ್ರಭೆಯಾಗಿರುವನು. ನಿನ್ನ ಸೂರ್ಯನು ಅಸ್ತಮಿಸು ವದಿಲ್ಲ, ನಿನ್ನ ಚಂದ್ರನು ಕಾಣದೆ ಹೋಗುವದಿಲ್ಲ; ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು ನಿನ್ನ ದುಃಖದ ದಿನಗಳು ಮುಗಿದುಹೋಗಿರುವವು. ನಿನ್ನ ಜನರೆಲ್ಲರು ನೀತಿವಂತರಾಗಿರುವರು, ದೇಶವನ್ನು ಸದಾ ಕಾಲಕ್ಕೆ ಸ್ವಾಧೀನ ಮಾಡಿಕೊಳ್ಳುವರು; ನಾನು ಮಹಿಮೆ ಹೊಂದುವದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ ನನ್ನ ಕೈ ಸೃಷ್ಟಿಯೂ ದೇಶವನ್ನು ಸದಾ ಅನುಭವಿಸುವರು.ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು. ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು.
- Haggai 2:6–9 ಹಗ್ಗಾಯ 2:6–9ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ, ಇನ್ನು ಒಂದು ಸಾರಿ ಕೊಂಚ ಕಾಲವಾದ ಮೇಲೆ ನಾನು ಆಕಾಶಗಳನ್ನೂ ಭೂಮಿಯನ್ನೂ ಸಮುದ್ರ ವನ್ನೂ ಒಣಗಿದ ನೆಲವನ್ನೂ ಕದಲಿಸುತ್ತೇನೆ. ಎಲ್ಲಾ ಜನಾಂಗಗಳನ್ನು ಅದುರಿಸುತ್ತೇನೆ; ಎಲ್ಲಾ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು ಈ ಆಲಯವನ್ನು ಮಹಿಮೆಯಿಂದ ತುಂಬಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಬೆಳ್ಳಿಯು ನನ್ನದು, ಚಿನ್ನವು ನನ್ನದು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ. ಈ ಆಲಯದ ಮುಂದಿನ ಮಹಿಮೆಯು ಹಿಂದಿನ ಮಹಿಮೆಗಿಂತ ವಿಶೇಷವಾಗಿರುವದು ಎಂದು ಸೈನ್ಯಗಳ ಕರ್ತನು ಹೇಳು ತ್ತಾನೆ; ಈ ಸ್ಥಳದಲ್ಲಿ ಸಮಾಧಾನ ಕೊಡುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Daniel 9:24–25 ದಾನಿಯೇಲನು 9:24–25ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ. ಆದದರಿಂದ ನೀನು ತಿಳಿಯಬೇಕಾದದ್ದು ಏನಂದರೆ --ಯೆರೂಸಲೇಮನ್ನು ತಿರಿಗಿ ಸ್ಥಾಪಿಸಿ ಕಟ್ಟಲು ಆಜ್ಞೆ ಹೊರಡುವದು ಮೊದಲುಗೊಂಡು ಅಭಿಷಿಕ್ತನಾದ (ಮೆಸ್ಸೀಯನ) ಪ್ರಭುವಿನ ವರೆಗೂ ಏಳು ವಾರಗಳು ಕಳೆಯಬೇಕು. ಅದು ಪುನಃ ಸ್ಥಾಪಿಸಲ್ಪಟ್ಟು ಅರವತ್ತೆರಡು ವಾರಗಳು ಇರುವದು. ಅದಕ್ಕೆ ಬೀದಿಯೂ ಗೋಡೆ ಗಳೂ ಕಷ್ಟಕಾಲದಲ್ಲಿ ಕಟ್ಟಲ್ಪಡುವದು.
- Genesis 25:6 ಆದಿಕಾಂಡ 25:6ಅಬ್ರಹಾಮನಿಗೆ ಇದ್ದ ಉಪಪತ್ನಿಗಳ ಮಕ್ಕಳಿಗೆ ಅಬ್ರಹಾಮನು ದಾನಗಳನ್ನು ಕೊಟ್ಟು ತಾನು ಜೀವಿಸುತ್ತಿರುವಾಗಲೇ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವದಿಕ್ಕಿನ ಕಡೆಗೆ ಮೂಡಣ ದೇಶಕ್ಕೆ ಕಳುಹಿಸಿದನು.
- Matthew 2:5 ಮತ್ತಾಯನು 2:5ಅದಕ್ಕೆ ಅವರು ಅವನಿಗೆ--ಯೂದಾಯದ ಬೇತ್ಲೆಹೇಮಿ ನಲ್ಲಿಯೇ; ಯಾಕಂದರೆ ಪ್ರವಾದಿಯಿಂದ ಹೀಗೆ ಬರೆಯಲ್ಪಟ್ಟಿದೆ--
Original words (Greek)
- when · G1161δέ dé
- Jesus · G2424Ἰησοῦς Iēsoûs
- born · G1080γεννάω gennáō
- in · G1722ἐν en
- Bethlehem · G965Βηθλεέμ Bēthleém
- Judaea · G2449Ἰουδαία Ioudaía
- in · G1722ἐν en
- days · G2250ἡμέρα hēméra
- Herod · G2264Ἡρώδης Hērṓdēs
- king · G935βασιλεύς basileús
- behold · G2400ἰδού idoú
- came · G3854παραγίνομαι paragínomai
- men · G3097μάγος mágos
- from · G575ἀπό apó
- east · G395ἀνατολή anatolḗ
- to · G1519εἰς eis
- Jerusalem · G2414Ἱεροσόλυμα Hierosólyma