Matthew · chapter 2 · verse 10
Matthew 2:10 in Kannada
ಅವರು ಆ ನಕ್ಷತ್ರವನ್ನು ಕಂಡು ಅತ್ಯಧಿಕವಾದ ಆನಂದದಿಂದ ಸಂತೋಷಪಟ್ಟರು.
Avaru aa nakshatravannu kandu atyadhikavaada aanandadinda santoshapattaru.
Matthew 2:10 in English
- King James Version (KJV)
- When they saw the star, they rejoiced with exceeding great joy.
- World English Bible (WEB)
- When they saw the star, they rejoiced with exceedingly great joy.
- American Standard Version (ASV)
- And when they saw the star, they rejoiced with exceeding great joy.
- Bible in Basic English (BBE)
- And when they saw the star they were full of joy.
- Darby Translation (DBY)
- And when they saw the star they rejoiced with exceeding great joy.
- Webster's Bible (WBS)
- When they saw the star, they rejoiced with exceeding great joy.
- Young's Literal Translation (YLT)
- And having seen the star, they rejoiced with exceeding great joy,
Read in context
- 8ಅವರನ್ನು ಬೇತ್ಲೆಹೇಮಿಗೆ ಕಳುಹಿ ಸುವಾಗ--ನೀವು ಹೋಗಿ ಆ ಶಿಶುವಿನ ವಿಷಯದಲ್ಲಿ ಪರಿಷ್ಕಾರವಾಗಿ ಹುಡುಕಿ ಆತನನ್ನು ಕಂಡುಕೊಂಡ ಮೇಲೆ ತಿರಿಗಿ ಬಂದು ನನಗೆ ತಿಳಿಸಿರಿ; ಆಗ ನಾನು ಸಹ ಬಂದು ಆತನನ್ನು ಆರಾಧಿಸುವೆನು ಅಂದನು.
- 9ಅವರು ಅರಸನ ಮಾತನ್ನು ಕೇಳಿ ಹೊರಟಾಗ ಇಗೋ, ಮೂಡಲದಲ್ಲಿ ಅವರು ಕಂಡ ನಕ್ಷತ್ರವು ಶಿಶುವು ಇದ್ದ ಸ್ಥಳದ ಮೇಲೆ ಬಂದು ನಿಲ್ಲುವ ತನಕ ಅವರ ಮುಂದೆ ಹೋಯಿತು.
- 10ಅವರು ಆ ನಕ್ಷತ್ರವನ್ನು ಕಂಡು ಅತ್ಯಧಿಕವಾದ ಆನಂದದಿಂದ ಸಂತೋಷಪಟ್ಟರು.
- 11ಅವರು ಮನೆಯೊಳಕ್ಕೆ ಬಂದಾಗ ಆ ಶಿಶುವನ್ನು ಆತನ ತಾಯಿಯಾದ ಮರಿಯಳೊಂದಿಗೆ ಕಂಡುಕೊಂಡು ಸಾಷ್ಟಾಂಗವೆರಗಿ ಆತನನ್ನು ಆರಾಧಿಸಿದರು; ತರುವಾಯ ತಮ್ಮ ಬೊಕ್ಕಸಗಳನ್ನು ತೆರೆದು ಚಿನ್ನ ಧೂಪ ರಕ್ತಬೋಳಗಳನ್ನು ಆತನಿಗೆ ಕಾಣಿಕೆಯಾಗಿ ಅರ್ಪಿಸಿದರು.
- 12ಆಮೇಲೆ ಅವರು ಹೆರೋದನ ಬಳಿಗೆ ಹಿಂತಿರುಗಬಾರದೆಂದು ಕನಸಿನಲ್ಲಿ ದೇವರಿಂದ ಎಚ್ಚರಿಸಲ್ಪಟ್ಟು ಬೇರೊಂದು ದಾರಿಯಿಂದ ತಮ್ಮ ಸ್ವದೇಶಕ್ಕೆ ಹೊರಟುಹೋದರು.
Cross references
- Psalm 105:3 ಕೀರ್ತನೆಗಳು 105:3ಆತನ ಪರಿಶುದ್ಧ ನಾಮದಲ್ಲಿ ಹೊಗಳಿಕೊಳ್ಳಿರಿ; ಕರ್ತನನ್ನು ಹುಡುಕುವವರ ಹೃದಯವು ಸಂತೋಷಿಸಲಿ.
- Luke 2:10 ಲೂಕನು 2:10ಆದರೆ ದೂತನು ಅವರಿಗೆ--ಹೆದರಬೇಡಿರಿ; ಯಾಕಂದರೆ ಇಗೋ, ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಒಳ್ಳೇಸಮಾಚಾರ ವನ್ನು ನಾನು ನಿಮಗೆ ತಿಳಿಯಪಡಿಸುತ್ತೇನೆ.
- Luke 2:20 ಲೂಕನು 2:20ತಮಗೆ ತಿಳಿಸಲ್ಪಟ್ಟಂತೆ ಕುರುಬರು ತಾವು ಕೇಳಿದ್ದ ಮತ್ತು ನೋಡಿದ್ದ ಎಲ್ಲಾ ವಿಷಯಗಳಿಗಾಗಿ ದೇವರನ್ನು ಮಹಿಮೆಪಡಿಸುತ್ತಾ ಕೊಂಡಾಡುತ್ತಾ ಹಿಂದಿರುಗಿದರು.
- Romans 15:9–13 ರೋಮಾಪುರದವರಿಗೆ 15:9–13ಈ ಕಾರಣದಿಂದ ನಾನು ಅನ್ಯಜನಗಳ ಮಧ್ಯದಲ್ಲಿ ನಿನ್ನನು ಅರಿಕೆ ಮಾಡಿ ನಿನ್ನ ನಾಮವನ್ನು ಸಂಕೀರ್ತಿಸುವೆನು ಎಂದು ಬರೆದಿರುವ ಪ್ರಕಾರ ಅನ್ಯಜನಗಳು ದೇವರ ಕರುಣೆಗಾಗಿ ಆತನನ್ನು ಮಹಿಮೆಪಡಿಸುವರು. ಆತನು ತಿರಿಗಿ--ಅನ್ಯಜನರೇ, ಆತನ ಜನರೊಂದಿಗೆ ಸಂತೋಷಿಸಿರಿ ಎಂದು ಹೇಳುತ್ತಾನೆ. ತಿರಿಗಿ--ಎಲ್ಲಾ ಅನ್ಯಜನರೇ, ಕರ್ತನನ್ನು ಸ್ತುತಿಸಿರಿ; ಎಲ್ಲಾ ಜನರೇ, ಆತನನ್ನು ಕೊಂಡಾಡಿರಿ ಅನ್ನುತ್ತಾನೆ. ತಿರಿಗಿ ಯೆಶಾಯನು--ಇಷಯನ ಅಂಕುರದವನು ಎದ್ದು ಅನ್ಯ ಜನಾಂಗಗಳ ಮೇಲೆ ಆಡಳಿತ ಮಾಡುವನು; ಅನ್ಯ ಜನರು ಆತನಲ್ಲಿ ನಂಬಿಕೆಯಿಡುವರು ಅಂದನು. ನಿರೀಕ್ಷೆಗೆ ಆಧಾರನಾದ ದೇವರು ಪವಿತ್ರಾತ್ಮನ ಬಲದಿಂದ ನೀವು ನಿರೀಕ್ಷೆಯಲ್ಲಿ ಅಭಿವೃದ್ಧಿ ಹೊಂದು ವಂತೆ ನಂಬಿಕೆಯಿಂದುಂಟಾದ ಸಂತೋಷ ಸಮಾಧಾನಗಳಿಂದ ನಿಮ್ಮನ್ನು ತುಂಬಿಸಲಿ.
- Psalm 67:4 ಕೀರ್ತನೆಗಳು 67:4ಜನಾಂಗಗಳು ಸಂತೋಷಪಟ್ಟು ಉತ್ಸಾಹಕ್ಕಾಗಿ ಹಾಡಲಿ; ನೀನು ಜನರನ್ನು ನೀತಿಯಿಂದ ನ್ಯಾಯತೀರಿಸಿ ಜನಾಂಗಗಳನ್ನು ಭೂಮಿಯಲ್ಲಿ ಪರಿಪಾಲಿಸುತ್ತೀ. ಸೆಲಾ.
- Deuteronomy 32:13 ಧರ್ಮೋಪದೇಶಕಾಂಡ 32:13ಅವನು ಹೊಲದ ಆದಾಯವನ್ನು ತಿನ್ನುವ ಹಾಗೆ ಭೂಮಿಯ ಎತ್ತರವಾದ ಸ್ಥಳಗಳಲ್ಲಿ ಅವನನ್ನು ಹೋಗ ಮಾಡಿ ಬಂಡೆಯೊಳಗಿಂದ ಜೇನನ್ನೂ ಬಿಳೀ ಕಲ್ಲಿನ ಬಂಡೆಯೊಳಗಿಂದ ಎಣ್ಣೆಯನ್ನೂ ಅವನಿಗೆ ಕುಡಿಯಲು ಕೊಟ್ಟನು.
- Acts 13:46–48 ಅಪೊಸ್ತಲರ ಕೃತ್ಯಗಳು 13:46–48ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ. ಯಾಕಂ ದರೆ--ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಣೆಗೆ ಕಾರಣವಾಗಿರುವಂತೆ ನಾನು ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ಹೇಳಿದ ಹಾಗೆ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ. ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು ಕರ್ತನ ವಾಕ್ಯವನ್ನು ಮಹಿಮೆ ಪಡಿಸಿದರು. ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು.