Matthew · chapter 2 · verse 7
Matthew 2:7 in Kannada
ಆಗ ಹೆರೋದನು ರಹಸ್ಯವಾಗಿ ಆ ಜ್ಞಾನಿಗಳನ್ನು ಕರೆಯಿಸಿ ಆ ನಕ್ಷತ್ರವು ಯಾವ ಕಾಲದಲ್ಲಿ ಕಾಣಿಸಿಕೊಂಡಿತೆಂದು ಅವರನ್ನು ಪರಿಷ್ಕಾರವಾಗಿ ವಿಚಾರಿಸಿಕೊಂಡು
Aaga herodanu rahasyavaagi aa jnyaanigalannu kareyisi aa nakshatravu yaava kaaladalli kaanisikonditendu avarannu parishkaaravaagi vichaarisikondu
Matthew 2:7 in English
- King James Version (KJV)
- Then Herod, when he had privily called the wise men, enquired of them diligently what time the star appeared.
- World English Bible (WEB)
- Then Herod secretly called the wise men, and learned from them exactly what time the star appeared.
- American Standard Version (ASV)
- Then Herod privily called the Wise-men, and learned of them exactly what time the star appeared.
- Bible in Basic English (BBE)
- Then Herod sent for the wise men privately, and put questions to them about what time the star had been seen.
- Darby Translation (DBY)
- Then Herod, having secretly called the magi, inquired of them accurately the time of the star that was appearing;
- Webster's Bible (WBS)
- Then Herod, when he had privately called the wise men, inquired of them diligently what time the star appeared.
- Young's Literal Translation (YLT)
- Then Herod, privately having called the mages, did inquire exactly from them the time of the appearing star,
Read in context
- 5ಅದಕ್ಕೆ ಅವರು ಅವನಿಗೆ--ಯೂದಾಯದ ಬೇತ್ಲೆಹೇಮಿ ನಲ್ಲಿಯೇ; ಯಾಕಂದರೆ ಪ್ರವಾದಿಯಿಂದ ಹೀಗೆ ಬರೆಯಲ್ಪಟ್ಟಿದೆ--
- 6ಯೂದಾಯದ ಸೀಮೆಯಲ್ಲಿನ ಬೇತ್ಲೆಹೇಮೇ, ಯೂದಾಯದ ಮುಖ್ಯ ಪಟ್ಟಣಗಳಲ್ಲಿ ನೀನು ಎಷ್ಟು ಮಾತ್ರವೂ ಸಣ್ಣದಲ್ಲ; ಯಾಕಂದರೆ ನನ್ನ ಜನರಾದ ಇಸ್ರಾಯೇಲ್ಯರನ್ನು ಆಳುವ ಒಬ್ಬ ಅಧಿಪತಿಯು ನಿನ್ನೊಳಗಿಂದ ಬರುವನು ಎಂದು ಹೇಳಿದರು.
- 7ಆಗ ಹೆರೋದನು ರಹಸ್ಯವಾಗಿ ಆ ಜ್ಞಾನಿಗಳನ್ನು ಕರೆಯಿಸಿ ಆ ನಕ್ಷತ್ರವು ಯಾವ ಕಾಲದಲ್ಲಿ ಕಾಣಿಸಿಕೊಂಡಿತೆಂದು ಅವರನ್ನು ಪರಿಷ್ಕಾರವಾಗಿ ವಿಚಾರಿಸಿಕೊಂಡು
- 8ಅವರನ್ನು ಬೇತ್ಲೆಹೇಮಿಗೆ ಕಳುಹಿ ಸುವಾಗ--ನೀವು ಹೋಗಿ ಆ ಶಿಶುವಿನ ವಿಷಯದಲ್ಲಿ ಪರಿಷ್ಕಾರವಾಗಿ ಹುಡುಕಿ ಆತನನ್ನು ಕಂಡುಕೊಂಡ ಮೇಲೆ ತಿರಿಗಿ ಬಂದು ನನಗೆ ತಿಳಿಸಿರಿ; ಆಗ ನಾನು ಸಹ ಬಂದು ಆತನನ್ನು ಆರಾಧಿಸುವೆನು ಅಂದನು.
- 9ಅವರು ಅರಸನ ಮಾತನ್ನು ಕೇಳಿ ಹೊರಟಾಗ ಇಗೋ, ಮೂಡಲದಲ್ಲಿ ಅವರು ಕಂಡ ನಕ್ಷತ್ರವು ಶಿಶುವು ಇದ್ದ ಸ್ಥಳದ ಮೇಲೆ ಬಂದು ನಿಲ್ಲುವ ತನಕ ಅವರ ಮುಂದೆ ಹೋಯಿತು.
Cross references
- Isaiah 7:5–7 ಯೆಶಾಯ 7:5–7ಸಿರಿಯಾದವರೂ ಎಫ್ರಾಯಿಮಿನವರೂ ರೆಮಲ್ಯನ ಮಗನೂ ನಿನಗೆ ವಿರೋಧವಾಗಿ ದುರಾಲೋಚನೆ ಮಾಡಿ, ನಾವು ಯೆಹೂದಕ್ಕೆ ವಿರೋಧವಾಗಿ ಹೋಗಿ ಅದನ್ನು ವ್ಯಥೆಪಡಿಸಿ ಅದರಲ್ಲಿ ನಮಗಾಗಿ ಮಾಡಿ ಕೊಂಡಿರುವ ಒಪ್ಪಂದವನ್ನು ಉಲ್ಲಂಘಿಸಿ ಅದರ ಮಧ್ಯದಲ್ಲಿ ಒಬ್ಬ ಅರಸನನ್ನು ಅಂದರೆ ಟಾಬೇಲನ ಮಗನನ್ನು ನೇಮಿಸಿಕೊಳ್ಳೋಣ ಎಂದು ಹೇಳುವರು ಅದಕ್ಕೆ ಕರ್ತನಾದ ದೇವರು--ಅದು ನಿಲ್ಲುವದಿಲ್ಲ; ಇಲ್ಲವೆ ಅದು ಆಗುವದೇ ಇಲ್ಲ.
- Exodus 1:10 ವಿಮೋಚನಕಾಂಡ 1:10ಬನ್ನಿ, ಅವರು ಹೆಚ್ಚಾಗದ ಹಾಗೆಯೂ ನಮಗೆ ಯುದ್ಧ ಸಂಭವಿಸಿದರೆ ಅವರು ನಮ್ಮ ಶತ್ರುಗಳ ಸಂಗಡ ಕೂಡಿಕೊಂಡು ನಮಗೆ ವಿರೋಧವಾಗಿ ಯುದ್ಧಮಾಡಿ ದೇಶವನ್ನು ಬಿಟ್ಟು ಹೋಗದ ಹಾಗೆಯೂ ಅವ ರೊಂದಿಗೆ ಬುದ್ಧಿವಂತಿಕೆಯಿಂದ ವರ್ತಿಸೋಣ ಎಂದು ಹೇಳಿದನು.
- Psalm 83:3–4 ಕೀರ್ತನೆಗಳು 83:3–4ನಿನ್ನ ಜನರಿಗೆ ವಿರೋಧವಾಗಿ ಉಪಾಯದ ಯುಕ್ತಿಯನ್ನು ಕಲ್ಪಿಸುತ್ತಾರೆ. ನೀನು ಅಡಗಿಸಿಟ್ಟವರಿಗೆ ವಿರೋಧಿಗಳು ಆಲೋಚಿಸಿಕೊಳ್ಳುತ್ತಾರೆ. ಅವರು--ಬನ್ನಿರಿ, ಅವ ರನ್ನು ಜನಾಂಗವಾಗಿರದ ಹಾಗೆ ನಾವು ಅವರನ್ನು ನಿರ್ಮೂಲ ಮಾಡೋಣ; ಇಸ್ರಾಯೇಲಿನ ಹೆಸರು ಇನ್ನು ಜ್ಞಾಪಕಕ್ಕೆ ಬಾರದಿರಲಿ ಅನ್ನುತ್ತಾರೆ.
- Psalm 64:4–6 ಕೀರ್ತನೆಗಳು 64:4–6ನಿರ್ದೋಷಿಯ ಕಡೆಗೆ ಗುಪ್ತವಾಗಿ ಫಕ್ಕನೆ ಎಸೆಯುವದಕ್ಕೆ ಅವರು ಭಯ ಪಡುವದಿಲ್ಲ. ಕೆಟ್ಟಕಾರ್ಯದಲ್ಲಿ ಅವರು ತಮ್ಮನ್ನು ತಾವೇ ಪ್ರೋತ್ಸಾಹ ಮಾಡಿಕೊಳ್ಳುತ್ತಾರೆ; ಬಲೆಗಳನ್ನು ಒಡ್ಡು ವದಕ್ಕೆ ಮಾತನಾಡುತ್ತಾ--ನಮ್ಮನ್ನು ನೋಡುವವ ರಾರೆಂದು ಹೇಳುತ್ತಾರೆ. ಅವರು ದ್ರೋಹಗಳನ್ನು ಹುಡುಕುತ್ತಾರೆ; ಎಚ್ಚರಿಕೆಯಿಂದ ಹುಡುಕಿದ್ದನ್ನು ಅವರು ಪೂರೈಸುತ್ತಾರೆ; ಅವರೆಲ್ಲರ ಅಂತರಗವೂ ಹೃದಯವೂ ಅಶೋದ್ಯವಾಗಿವೆ.
- Psalm 55:21 ಕೀರ್ತನೆಗಳು 55:21ಅವನ ಬಾಯಿ ಮಾತುಗಳು ಬೆಣ್ಣೆಗಿಂತ ನುಣುಪಾಗಿವೆ; ಅವನ ಹೃದ ಯವೋ ಕಲಹಮಯವೇ. ಅವನ ಮಾತುಗಳು ಎಣ್ಣೆ ಗಿಂತ ನಯವಾಗಿವೆ; ಆದರೆ ಅವು ಬಿಚ್ಚು ಕತ್ತಿಗಳಾಗಿವೆ.
- 1 Samuel 18:21 1 ಸಮುವೇಲನು 18:21ಅವನಿಗೆ ಉರುಲಾಗಿರುವ ಹಾಗೆಯೂ ಫಿಲಿಷ್ಟಿಯರ ಕೈ ಅವನ ಮೇಲೆ ಬರುವ ಹಾಗೆಯೂ ಇವಳನ್ನು ಅವನಿಗೆ ಕೊಡುವೆನು ಅಂದುಕೊಂಡನು. ಆದದರಿಂದ ಸೌಲನು ದಾವೀದನಿಗೆ--ನೀನು ಎರಡನೆ ಯವಳಿಂದ ಈ ಹೊತ್ತು ಅಳಿಯನಾಗು ಅಂದನು.
- Ezekiel 38:10–11 ಯೆಹೆಜ್ಕೇಲನು 38:10–11ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದೂ ಸಹ ಆಗುವದು, ಅದೇ ಸಮಯದಲ್ಲಿ ನಿನ್ನ ಮನಸ್ಸಿಗೆ ಕೆಲವು ಸಂಗತಿಗಳು ಬರುವವು ನೀನು ಒಂದು ಕೆಟ್ಟಯೋಚನೆಯನ್ನು ಯೋಚಿಸುವಿ, ನೀನು ಪೌಳಿಗೋಡೆಯಿಲ್ಲದ ಹಳ್ಳಿಗಳುಳ್ಳ ದೇಶಕ್ಕೆ ನಾನು ಹೋಗುವೆನು; ಪೌಳಿ ಗೋಡೆಗಳಿಲ್ಲದೆ ಇಲ್ಲವೆ ಬಾಗಲುಗಳು ಅಗುಳಿಗಳು ಇಲ್ಲದೆ ಅದೂ ಅವರು ವಿಶ್ರಾಂತಿಯಿಂದಲೂ ಸುಖ ವಾಗಿ ವಾಸಿಸುತ್ತಿರುವಾಗ ನಾನು ಹೋಗಿ,
- Revelation 12:1–5 ಪ್ರಕಟನೆ 12:1–5ಪರಲೋಕದಲ್ಲಿ ಮಹಾ ಅದ್ಭುತವು ಕಾಣಿಸಿತು; ಅಲ್ಲಿ ಸೂರ್ಯನನ್ನು ಧರಿಸಿ ಕೊಂಡಿದ್ದ ಒಬ್ಬ ಸ್ತ್ರೀಯಿದ್ದಳು; ಆಕೆಯ ಕಾಲುಗಳ ಕೆಳಗೆ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳುಳ್ಳ ಒಂದು ಕಿರೀಟವಿತ್ತು. ಆಕೆಯು ಗರ್ಭಿಣಿಯಾಗಿದ್ದು ಪ್ರಸವವೇದನೆಯಿಂದ ಹೆರುವದಕ್ಕೆ ಸಂಕಟಪಡುತ್ತಾ ಕೂಗುತ್ತಿದ್ದಳು. ಪರಲೋಕದಲ್ಲಿ ಮತ್ತೊಂದು ಅದ್ಭುತವು ಕಾಣಿಸಿತು; ಆಗ ಇಗೋ, ಕೆಂಪಾದ ಮಹಾ ಘಟಸರ್ಪವಿತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು; ಅದರ ತಲೆಗಳ ಮೇಲೆ ಏಳು ಕಿರೀಟಗಳಿದ್ದವು. ಅದರ ಬಾಲವು ಆಕಾಶದಲ್ಲಿರುವ ನಕ್ಷತ್ರಗಳೊಳಗೆ ಮೂರರ ಲ್ಲೊಂದು ಭಾಗವನ್ನು ಎಳೆದು ಭೂಮಿಗೆ ಹಾಕಿತು. ಹೆರುವದಕ್ಕೆ ಸಿದ್ಧವಾಗಿದ್ದ ಆ ಸ್ತ್ರೀಯು ಹೆತ್ತಕೂಡಲೆ ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟ ಸರ್ಪವು ಅವಳ ಮುಂದೆ ನಿಂತುಕೊಂಡಿತ್ತು. ಆಕೆ ಜನಾಂಗಗಳನ್ನೆಲ್ಲಾ ಕಬ್ಬಿಣದ ಕೋಲಿನಿಂದ ಆಳ ಬೇಕಾಗಿದ್ದ ಒಂದು ಗಂಡು ಮಗುವನ್ನು ಹೆತ್ತಳು; ಆ ಕೂಸು ದೇವರ ಬಳಿಗೂ ಆತನ ಸಿಂಹಾಸನದ ಬಳಿಗೂ ಎತ್ತಲ್ಪಟ್ಟಿತು.
- Psalm 10:9–10 ಕೀರ್ತನೆಗಳು 10:9–10ಗವಿಯಲ್ಲಿರುವ ಸಿಂಹದ ಹಾಗೆ ಮರೆಯಲ್ಲಿ ಹೊಂಚು ಹಾಕುತ್ತಾನೆ; ಬಡವನನ್ನು ಹಿಡಿ ಯುವದಕ್ಕೆ ಹೊಂಚು ಹಾಕುತ್ತಾನೆ; ಬಡವನನ್ನು ತನ್ನ ಬಲೆಯಲ್ಲಿ ಎಳೆದು ಹಿಡಿಯುತ್ತಾನೆ. ಅವನು ಕುಗ್ಗಿ ಬೊಗ್ಗುತ್ತಾನೆ; ಆದದರಿಂದ ಗತಿಯಿಲ್ಲದವರು ಅವನ ಬಲದಿಂದ ಬೀಳುತ್ತಾರೆ.
- Matthew 26:3–5 ಮತ್ತಾಯನು 26:3–5ಆಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಜನರ ಹಿರಿಯರೂ ಒಟ್ಟಾಗಿ ಸೇರಿ ಕಾಯಫನೆಂಬ ಮಹಾಯಾಜಕನ ಭವನಕ್ಕೆ ಬಂದು ತಾವು ಕುಯುಕ್ತಿಯಿಂದ ಯೇಸುವನ್ನು ಹಿಡಿದು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು. ಆದರೆ ಅವರು ಜನರಲ್ಲಿ ಗದ್ದಲವಾದೀತು ಹಬ್ಬದಲ್ಲಿ ಬೇಡ ಅಂದರು.
- Revelation 12:15 ಪ್ರಕಟನೆ 12:15ಆ ಸ್ತ್ರೀಯನ್ನು ಪ್ರವಾಹವು ಬಡಕೊಂಡು ಹೋಗ ಬೇಕೆಂದು ಆಕೆಯ ಹಿಂದೆ ಸರ್ಪವು ತನ್ನ ಬಾಯೊಳಗಿಂದ ನೀರನ್ನು ಪ್ರವಾಹದಂತೆ ಬಿಟ್ಟಿತು.
Original words (Greek)
- Then · G5119τότε tóte
- Herod · G2264Ἡρώδης Hērṓdēs
- had · G2564καλέω kaléō
- privily · G2977λάθρα láthra
- called · G2564καλέω kaléō
- men · G3097μάγος mágos
- enquired · G198ἀκριβόω akribóō
- of · G3844παρά pará
- them · G846αὐτός autós
- diligently · G198ἀκριβόω akribóō
- time · G5550χρόνος chrónos
- star · G792ἀστήρ astḗr
- appeared · G5316φαίνω phaínō